< ಕೊರಿಂಥದವರಿಗೆ ಬರೆದ ಎರಡನೆಯ ಪತ್ರಿಕೆ 13 >
1 ೧ ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.
這是我第三次要到你們那裏去。「憑兩三個人的口作見證,句句都要定準。」
2 ೨ ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ: ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ.
我從前說過,如今不在你們那裏又說,正如我第二次見你們的時候所說的一樣,就是對那犯了罪的和其餘的人說:「我若再來,必不寬容。」
3 ೩ ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.
你們既然尋求基督在我裏面說話的憑據,我必不寬容。因為,基督在你們身上不是軟弱的,在你們裏面是有大能的。
4 ೪ ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ.
他因軟弱被釘在十字架上,卻因上帝的大能仍然活着。我們也是這樣同他軟弱,但因上帝向你們所顯的大能,也必與他同活。
5 ೫ ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.
你們總要自己省察有信心沒有,也要自己試驗。豈不知你們若不是可棄絕的,就有耶穌基督在你們心裏嗎?
6 ೬ ನಾವಂತೂ ಆಯೋಗ್ಯರಲ್ಲವೆಂದು ನಿಮಗೆ ಗೊತ್ತಾಗುವುದೆಂಬುದಾಗಿ ನನಗೆ ಭರವಸೆವುಂಟು.
我卻盼望你們曉得,我們不是可棄絕的人。
7 ೭ ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷೆಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷೆಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ.
我們求上帝,叫你們一件惡事都不做;這不是要顯明我們是蒙悅納的,是要你們行事端正,任憑人看我們是被棄絕的吧!
8 ೮ ಸತ್ಯಕ್ಕೆ ವಿರೋಧವಾಗಿ ನಾವೇನೂ ಮಾಡಲಾರೆವು, ಸತ್ಯಾಭಿವೃದ್ದಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ.
我們凡事不能敵擋真理,只能扶助真理。
9 ೯ ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.
即便我們軟弱,你們剛強,我們也歡喜;並且我們所求的,就是你們作完全人。
10 ೧೦ ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ.
所以,我不在你們那裏的時候,把這話寫給你們,好叫我見你們的時候,不用照主所給我的權柄嚴厲地待你們。這權柄原是為造就人,並不是為敗壞人。
11 ೧೧ ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.
還有末了的話:願弟兄們都喜樂。要作完全人;要受安慰;要同心合意;要彼此和睦。如此,仁愛和平的上帝必常與你們同在。
12 ೧೨ ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
你們親嘴問安,彼此務要聖潔。
13 ೧೩ ದೇವಜನರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.
眾聖徒都問你們安。
14 ೧೪ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, ದೇವರ ಪ್ರೀತಿಯೂ, ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.
願主耶穌基督的恩惠、上帝的慈愛、聖靈的感動常與你們眾人同在!