< ಕೊರಿಂಥದವರಿಗೆ ಬರೆದ ಎರಡನೆಯ ಪತ್ರಿಕೆ 6 >
1 ೧ ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.
E nós, como trabalhadores conjuntamente [com ele], rogamos que não tenhais recebido a graça de Deus em vão.
2 ೨ “ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ.
Porque ele diz: Em tempo agradável te ouvi, e no dia da salvação te socorri; eis agora o tempo agradável, eis agora o dia da salvação
3 ೩ ನಮ್ಮ ಸೇವೆಯು ಯಾರ ಮುಂದೆಯೂ ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ.
Escândalo nenhum damos em coisa alguma, para que [nosso] trabalho não seja acusado.
4 ೪ ಬದಲಾಗಿ, ಎಲ್ಲಾ ವಿಷಯಗಳಲ್ಲಿ ದೇವರ ಸೇವಕರೆಂದು ನಮ್ಮ ಸೇವೆಯನ್ನು ಸಮ್ಮತ ಮಾಡಿಕೊಂಡು, ನಾವು ಸಂಕಟದಲ್ಲಿಯೂ, ಕೊರತೆಗಳಲ್ಲಿಯೂ, ಇಕ್ಕಟ್ಟುಗಳಲ್ಲಿಯೂ, ಪೆಟ್ಟುಗಳಲ್ಲಿಯೂ,
Mas em tudo nos fizemos agradáveis como trabalhadores de Deus, em muita tolerância, em aflições, em necessidades, em angústias;
5 ೫ ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮುರಿದು ಕೆಲಸ ಮಾಡಿದ್ದೇವೆ. ನಿದ್ದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ; ಈ ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ.
Em açoites, em prisões, em tumultos, em trabalhos, em vigílias, em jejuns;
6 ೬ ಶುದ್ಧಮನಸ್ಸು, ಜ್ಞಾನ, ದೀರ್ಘಶಾಂತಿ, ದಯೆ, ಪವಿತ್ರಾತ್ಮ, ನಿಷ್ಕಪಟವಾದ ಪ್ರೀತಿ,
Em pureza, em conhecimento, em paciência, em bondade, no Espírito Santo, em amor não fingido;
7 ೭ ಸತ್ಯವಾಕ್ಯ, ದೇವರ ಮಹತ್ವ ಇವುಗಳಿಂದ ಕೂಡಿದವರಾಗಿ, ಎಡಬಲಗೈಗಳಲ್ಲಿ ನೀತಿಯೆಂಬ ಆಯುಧಗಳನ್ನು ಧರಿಸಿಕೊಂಡಿದ್ದೇವೆ.
Em palavra da verdade, em poder de Deus, com armas da justiça, à esquerda, e à direita;
8 ೮ ನಾವು ಮಾನ ಮತ್ತು ಅವಮಾನ, ಕೀರ್ತಿ ಮತ್ತು ಅಪಕೀರ್ತಿಗಳಲ್ಲಿಯೂ ಸೇವೆಮಾಡಿದ್ದೇವೆ. ಸತ್ಯವಂತರಾದರೂ ಮೋಸಗಾರರೆನಿಸಿಕೊಂಡಿದ್ದೇವೆ.
Por honra e por desonra; por infâmia e por boa fama; [considerados] como enganadores, e como verdadeiros.
9 ೯ ನಾವು ಪ್ರಸಿದ್ಧರಾಗಿದ್ದರೂ ಅಪರಿಚಿತರೆನ್ನಿಸಿಕೊಂಡು ಸೇವೆ ಮಾಡಿದ್ದೇವೆ. ಸಾಯುವವರಾಗಿ ತೋರಿದರೂ, ಬದುಕಿದ್ದೇವೆ! ನೋಡಿ, ಶಿಕ್ಷೆಗೆ ಗುರಿಯಾದರೂ ಕೊಲ್ಲಲ್ಪಡದವರಾಗಿದ್ದೇವೆ,
Como estranhos, e conhecidos; como morrendo, e eis que estamos vivendo; como castigados e [ainda] não mortos.
10 ೧೦ ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.
Como entristecidos, porém sempre alegres; como pobres, porém enriquecendo a muitos; como nada tendo, e possuindo tudo.
11 ೧೧ ಕೊರಿಂಥದವರೇ, ಬಿಚ್ಚುಮನದಿಂದಲೂ ತೆರೆದ ಹೃದಯದಿಂದಲೂ ನಾವು ನಿಮ್ಮೊಡನೆ ಮಾತನಾಡಿದ್ದೇವೆ.
Para vós, ó coríntios, está aberta nossa boca; [e] nosso coração está ampliado.
12 ೧೨ ನಮ್ಮಲ್ಲಿ ಸಂಕುಚಿತ ಭಾವನೆಯೇನೂ ಇಲ್ಲ. ಇದು ಇರುವುದಾದರೆ ನಿಮ್ಮಲ್ಲೇ.
Nós não temos lhes estreitado, mas vós estais estreitos em nossos sentimentos.
13 ೧೩ ಆದ್ದರಿಂದ ಮಕ್ಕಳಿಗೆ ಹೇಳುವಂತೆ ಹೇಳುತ್ತಿದ್ದೇವೆ; ನಾವು ನಿಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿದಂತೆ, ನೀವು ನಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿರಿ.
E em recompensa disto (falo como a filhos) alargai vós também.
14 ೧೪ ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?
Não vos ajunteis em outro jugo com os descrentes. Porque, que parceria tem a justiça com injustiça? E que parceria tem a luz com as trevas?
15 ೧೫ ಬೆಳಕಿಗೂ, ಕತ್ತಲೆಗೂ ಅನ್ಯೋನ್ಯತೆಯೇನು? ಕ್ರಿಸ್ತನಿಗೂ ಸೈತಾನನಿಗೂ ಒಪ್ಪಂದವೇನು? ವಿಶ್ವಾಸಿಗೂ ಅವಿಶ್ವಾಸಿಗೂ ಪಾಲುಗಾರಿಕೆಯೇನು?
E que acordo há entre Cristo e Belial? Ou que parte tem o crente com o incrédulo?
16 ೧೬ ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.
E que acordo há entre o Templo de Deus e os ídolos? Porque vós sois o templo do Deus vivente, como Deus disse: Neles habitarei, e entre [eles] andarei; e eu serei seu Deus, e eles serão meu povo.
17 ೧೭ ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.
Portanto: saí do meio deles, e vos separai, diz o Senhor; e não toqueis coisa impura, e eu vos aceitarei.
18 ೧೮ ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
E eu vos serei por Pai, e vós sereis para mim filhos e filhas, diz o Senhor Todo Poderoso.