< ಅರಸುಗಳು - ದ್ವಿತೀಯ ಭಾಗ 12 >

1 ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ, ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಇವನ ತಾಯಿ.
Седме године Јујеве поче царовати Јоас, и царова четрдесет година у Јерусалиму. Матери му беше име Сивија из Вирсавеје.
2 ಯಾಜಕನಾದ ಯೆಹೋಯಾದಾವನು ಯೆಹೋವಾಷನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.
И чињаше Јоас што је право пред Господом докле га год учаше свештеник Јодај.
3 ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದುದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
Али висине не бише оборене; народ још приношаше жртве и кађаше на висинама.
4 ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,
И Јоас рече свештеницима: Сав новац посвећени, што се доноси у дом Господњи, новац оних који иду у бој, и новац од уцене свачије, и сав новац што ко доноси од своје воље у дом Господњи.
5 ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು” ಎಂದು ಆಜ್ಞಾಪಿಸಿದನು.
Нека свештеници узимају, сваки од свог познаника, и они нека оправљају што је трошно у дому где се год нађе да треба оправити.
6 ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡಿರಲಿಲ್ಲ.
Али до године двадесет треће царовања Јоасовог свештеници још не оправише шта беше трошно у дому.
7 ಆದುದರಿಂದ ಅರಸನಾದ ಯೆಹೋವಾಷನು ಯೆಹೋಯಾದಾವ, ಮೊದಲಾದ ಯಾಜಕರನ್ನು ಕರೆದು ಅವರಿಗೆ, “ನೀವು ಈ ವರೆಗೂ ದೇವಾಲಯವನ್ನೇಕೆ ದುರಸ್ತಿ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರಿಂದ ಹಣವನ್ನು ವಸೂಲಿಮಾಡಿಕೊಳ್ಳದೆ ನಿಮ್ಮಲಿರುವ ಹಣದಿಂದ ದೇವಾಲಯದ ದುರಸ್ತಿಗಾಗಿ ಕಾರ್ಯವನ್ನು ಮಾಡಿರಿ” ಎಂದು ಹೇಳಿದನು.
Тада цар Јоас дозва Јодаја свештеника и остале свештенике, и рече им: Зашто не оправљате што је трошно у дому? Одселе не узимајте новац од својих познаника, јер треба да вратите да се оправи што је трошно у дому.
8 ಆಗ ಯಾಜಕರು ಅವನಿಗೆ, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ. ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ” ಎಂಬುದಾಗಿ ಮಾತುಕೊಟ್ಟರು.
И свештеници присташе да не узимају новац од народа и да не оправљају (они) што је трошно у дому.
9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತು ಮಾಡಿ, ಅದನ್ನು ಯೆಹೋವನ ಆಲಯದ ಬಾಗಿಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.
Тада свештеник Јодај узе један ковчег, и прореза рупу на заклопцу, и метну га код олтара с десне стране како се улази у дом Господњи; и свештеници који чуваху врата меташе у њ све новце који се доношаху у дом Господњи.
10 ೧೦ ಯೆಹೋವನ ಆಲಯದ ಪೆಟ್ಟಿಗೆಯಲ್ಲಿ ಬೇಕಾದಷ್ಟು ಹಣ ಇದೆಯೆಂದು ಕಂಡು ಬಂದಾಗೆಲ್ಲಾ, ರಾಜಲೇಖಕನೂ, ಮಹಾಯಾಜಕನೂ ಬಂದು ಅದನ್ನು ಎಣಿಸಿ ಚೀಲಗಳಲ್ಲಿ ಕಟ್ಟಿ ಇಡುವರು.
А кад виђаху да има много новаца у ковчегу, тада долажаше писар царев с поглаваром свештеничким, и избројавши свезиваху новце који би се нашли у дому Господњем.
11 ೧೧ ಅವರು ತೂಕಮಾಡಿ ಎಣಿಸಿದ ಹಣವನ್ನು, ಯೆಹೋವನ ಆಲಯದ ಕೆಲಸವನ್ನು ನಡಿಸುವ ಮುಖ್ಯಸ್ಥರಿಗೆ ಒಪ್ಪಿಸುವರು. ಅವರು ಅದನ್ನು ಅಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ, ಮೇಸ್ತ್ರಿ, ಕಲ್ಲುಕುಟಿಕ ಇವರ ಸಂಬಳಕ್ಕಾಗಿಯೂ.
Потом даваху готове новце онима који управљаху послом и стараху се за дом Господњи, а они их издаваху дрводељама и посленицима који оправљаху дом Господњи,
12 ೧೨ ಮರ, ಕೆತ್ತಿದ ಕಲ್ಲುಗಳನ್ನು ಕೊಂಡುಕೊಳ್ಳುವುದಕ್ಕೂ, ಆಲಯವನ್ನು ದುರಸ್ತಿ ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿಯೂ ಉಪಯೋಗಿಸಿದರು.
И зидарима и каменарима, и да се добавља дрво и тесано камење, да се оправи шта беше трошно у дому Господњем, и да се добави све што требаше да се оправи дом.
13 ೧೩ ಯೆಹೋವನ ಆಲಯದೊಳಗೆ ತಂದ ಹಣದಿಂದ ಬೆಳ್ಳಿಯ ಬಟ್ಟಲುಗಳನ್ನು, ಕತ್ತರಿಗಳನ್ನು, ಬೋಗುಣಿಗಳನ್ನು, ತುತ್ತೂರಿಗಳನ್ನೂ, ಬೆಳ್ಳಿ ಬಂಗಾರದ ಪಾತ್ರೆ ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸುತ್ತಿರಲಿಲ್ಲ.
Али новцима који доношаху у дом Господњи не грађаху чаша сребрних за дом Господњи, ни виљушака, ни котлића, ни труба, нити каквих судова златних ни сребрних;
14 ೧೪ ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ದುರಸ್ತಿ ಕಾರ್ಯಮಾಡುವವರ ಸಂಬಳಕ್ಕಾಗಿ ಉಪಯೋಗಿಸುತ್ತಿದ್ದರು.
Него их даваху онима који беху над послом да се оправи за њих дом Господњи.
15 ೧೫ ಕೆಲಸಗಾರರಿಗೆ ಸಂಬಳಕೊಡುವ ಮುಖ್ಯಸ್ಥರು ನಂಬಿಗಸ್ತರಾಗಿದ್ದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳುತ್ತಿರಲಿಲ್ಲ.
И не тражаху рачуна од људи којима предаваху новце да издају посленицима, јер верно рађаху.
16 ೧೬ ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ, ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಪಾಲಿಗೆ ಸೇರುತ್ತಿತ್ತು. ಅದು ಯೆಹೋವನ ಆಲಯಕ್ಕೆ ಸೇರುತ್ತಿರಲಿಲ್ಲ.
Новци за преступ и новци за грехе не доношаху се у дом Господњи; припадаху свештеницима.
17 ೧೭ ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.
Тада изађе Азаило, цар сирски, и удари на Гат и узе га; потом се окрете Азаило да иде на Јерусалим.
18 ೧೮ ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟನೂ, ಯೆಹೋರಾಮನೂ, ಅಹಜ್ಯನೂ, ಯೆಹೂದ ರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಪ್ರತಿಷ್ಠೆಗಾಗಿ ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.
А Јоас, цар Јудин узе све посвећене ствари, што Јосафат и Јорам и Охозија, оци његови цареви Јудини, беху посветили, и све што сам беше посветио, и све злато што се нађе у ризницама дома Господњег и дома царевог, и посла Азаилу цару сирском; и тако отиде од Јерусалима.
19 ೧೯ ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
А остала дела Јоасова и све што је чинио, није ли то записано у дневнику царева Јудиних?
20 ೨೦ ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ “ಸಿಲ್ಲಾ” ಊರಿಗೆ ಇಳಿದು ಹೋಗುವ ಮಾರ್ಗವಾದ “ಮಿಲ್ಲೋ” ಗೃಹದಲ್ಲಿ ಯೆಹೋವಾಷನನ್ನು ಕೊಂದರು.
А слуге његове подигоше се и побунише се, и убише Јоаса у дому Милону, куда се иде у Силу.
21 ೨೧ ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೆರನ ಮಗನಾದ ಯೆಹೋಜಾಬಾದ್ ಎಂಬುವವರು ಅವನ ಮೇಲೆ ಬಿದ್ದು ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.
Јоазахар, син Симеатов и Јозавад син Сомиров, слуге његове, убише га, те умре; и погребоше га код отаца његових у граду Давидовом; а на његово место зацари се Амасија, син његов.

< ಅರಸುಗಳು - ದ್ವಿತೀಯ ಭಾಗ 12 >