< ಅರಸುಗಳು - ದ್ವಿತೀಯ ಭಾಗ 13 >

1 ಯೆಹೂದದ ಅರಸನೂ, ಅಹಜ್ಯನ ಮಗನೂ ಆದ ಯೆಹೋವಾಷನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನೇಳು ವರ್ಷ ಆಳ್ವಿಕೆ ಮಾಡಿದನು.
در سال بیست و سوم یوآش بن اخزیا، پادشاه یهودا، یهواخاز بن ییهو، براسرائیل در سامره پادشاه شده، هفده سال سلطنت نمود.۱
2 ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
و آنچه در نظر خداوند ناپسندبود به عمل آورد، و در‌پی گناهان یربعام بن نباطکه اسرائیل را مرتکب گناه ساخته بود، سلوک نموده، از آن اجتناب نکرد.۲
3 ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.
پس غضب خداوندبر اسرائیل افروخته شده، ایشان را به‌دست حزائیل، پادشاه ارام و به‌دست بنهدد، پسرحزائیل، همه روزها تسلیم نمود.۳
4 ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಲಾಲಿಸಿದನು. ಅಲ್ಲದೆ ಅವರು ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟರುವುದನ್ನು ನೋಡಿ,
و یهواخاز نزدخداوند تضرع نمود و خداوند او را اجابت فرمودزیرا که تنگی اسرائیل را دید که چگونه پادشاه ارام، ایشان را به تنگ می‌آورد.۴
5 ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.
و خداوندنجات‌دهنده‌ای به اسرائیل داد که ایشان از زیردست ارامیان بیرون آمدند و بنی‌اسرائیل مثل ایام سابق در خیمه های خود ساکن شدند.۵
6 ಆದರೂ ಇಸ್ರಾಯೇಲರು ತಮ್ಮನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವು ಇದ್ದೇ ಇತ್ತು.
اما ازگناهان خانه یربعام که اسرائیل را مرتکب گناه ساخته بود، اجتناب ننموده، در آن سلوک کردند، و اشیره نیز در سامره ماند.۶
7 ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.
و برای یهواخاز، ازقوم به جز پنجاه سوار و ده ارابه و ده هزار پیاده وانگذاشت زیرا که پادشاه ارام ایشان را تلف ساخته، و ایشان را پایمال کرده، مثل غبارگردانیده بود.۷
8 ಯೆಹೋವಾಹಾಜನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
و بقیه وقایع یهواخاز و هر‌چه کردو تهور او، آیا در کتاب تواریخ ایام پادشاهان اسرائیل مکتوب نیست؟۸
9 ಯೆಹೋವಾಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋವಾಷನು ಅರಸನಾದನು.
پس یهواخاز با پدران خود خوابید و او را در سامره دفن کردند وپسرش، یوآش، در جایش سلطنت نمود.۹
10 ೧೦ ಯೆಹೂದದ ಅರಸನಾದ ಯೋವಾಷನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗನಾದ ಯೆಹೋವಾಷನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನಾರು ವರ್ಷ ಆಳಿದನು.
و در سال سی و هفتم یوآش، پادشاه یهودا، یهوآش بن یهواخاز بر اسرائیل در سامره پادشاه شد و شانزده سال سلطنت نمود.۱۰
11 ೧೧ ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
وآنچه در نظر خداوند ناپسند بود، به عمل آورد واز تمامی گناهان یربعام بن نباط که اسرائیل رامرتکب گناه ساخته بود اجتناب نکرده، در آنهاسلوک می‌نمود.۱۱
12 ೧೨ ಯೋವಾಷನ ಉಳಿದ ಚರಿತ್ರೆಯೂ, ಅವನ ಶೂರ ಕೃತ್ಯಗಳೂ, ಇವನು ಯೆಹೂದ್ಯರ ಅರಸನಾದ ಅಮಚ್ಯನು ಎಂಬವನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
و بقیه وقایع یوآش و هر‌چه کرد و تهور او که چگونه با امصیا، پادشاه یهوداجنگ کرد، آیا در کتاب تواریخ ایام پادشاهان اسرائیل مکتوب نیست؟۱۲
13 ೧೩ ಯೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನದಲ್ಲಿ ಸಮಾಧಿಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು.
و یوآش با پدران خود خوابید و یربعام بر کرسی وی نشست ویوآش با پادشاهان اسرائیل در سامره دفن شد.۱۳
14 ೧೪ ಆ ಕಾಲದಲ್ಲಿ ಎಲೀಷನು ಮರಣಕರವಾದ ರೋಗಕ್ಕೆ ಗುರಿಯಾದನು. ಇಸ್ರಾಯೇಲರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥರಥಾಶ್ವಬಲಗಳಾಗಿದ್ದವನೇ” ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು.
و الیشع به بیماری‌ای که از آن مرد، مریض شد و یوآش، پادشاه اسرائیل، نزد وی فرود شده، بر او بگریست و گفت: «ای پدر من! ای پدر من! ای ارابه اسرائیل و سوارانش!»۱۴
15 ೧೫ ಆಗ ಎಲೀಷನು ಇಸ್ರಾಯೇಲರ ಅರಸನಿಗೆ, “ಬಿಲ್ಲನ್ನೂ, ಬಾಣಗಳನ್ನೂ ತರಿಸು” ಎಂದು ಹೇಳಿದನು. ಅವನು ತೆಗೆದುಕೊಂಡನು.
و الیشع وی راگفت: «کمان و تیرها را بگیر.» و برای خود کمان وتیرها گرفت.۱۵
16 ೧೬ ಆಗ ಎಲೀಷನು ಇಸ್ರಾಯೇಲರ ಅರಸನಿಗೆ, “ಬಿಲ್ಲನ್ನು ಹಿಡಿದುಕೋ” ಎಂದು ಆಜ್ಞಾಪಿಸಿದನು. ಅವನು ಹಿಡಿದುಕೊಳ್ಳಲು ತನ್ನ ಕೈಯನ್ನು ಅವನ ಕೈಮೇಲಿಟ್ಟನು.
و به پادشاه اسرائیل گفت: «کمان را به‌دست خود بگیر.» پس آن را به‌دست خودگرفت و الیشع دست خود را بر دست پادشاه نهاد.۱۶
17 ೧೭ ಎಲೀಷನು, “ಮೂಡಣ ದಿಕ್ಕಿಗಿರುವ ಕಿಟಕಿಯನ್ನು ತೆರೆ” ಎಂದನು. ಅವನು ತೆರೆದನು. ಅನಂತರ ಎಲೀಷನು, “ಬಾಣವನ್ನು ಎಸೆ” ಎಂದು ಆಜ್ಞಾಪಿಸಿದನು. ಅವನು ಎಸೆಯಲು ಎಲೀಷನು, “ಇದು ಜಯಪ್ರದವಾದ ಯೆಹೋವನ ಬಾಣ; ಅರಾಮ್ಯರನ್ನು ಜಯಿಸುವ ಬಾಣ. ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವಿ” ಎಂದು ಹೇಳಿದನು.
و گفت: «پنجره را به سوی مشرق باز کن.» پس آن را باز کرد و الیشع گفت: «بینداز.» پس انداخت.۱۷
18 ೧೮ ಇದಲ್ಲದೆ ಎಲೀಷನು ಇಸ್ರಾಯೇಲರ ಅರಸನಿಗೆ, “ಬಾಣಗಳನ್ನು ತೆಗೆದುಕೋ” ಎಂದು ಆಜ್ಞಾಪಿಸಿದಾಗ ಅವನು ಅವುಗಳನ್ನು ತೆಗೆದುಕೊಳ್ಳಲು ಎಲೀಷನು ಅರಸನಿಗೆ, “ಇವುಗಳಿಂದ ನೆಲವನ್ನು ಹೊಡಿ” ಎಂದನು. ಅವನು ಮೂರು ಸಾರಿ ಹೊಡೆದು ಸುಮ್ಮನೆ ನಿಂತನು.
و گفت: «تیرها را بگیر.» پس گرفت و به پادشاه اسرائیل گفت: «زمین را بزن.» پس سه مرتبه آن را زده، باز ایستاد.۱۸
19 ೧೯ ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, “ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ” ಎಂದು ಹೇಳಿದನು.
و مرد خدابه او خشم نموده، گفت: «می‌بایست پنج شش مرتبه زده باشی آنگاه ارامیان را شکست می‌دادی تا تلف می‌شدند، اما حال ارامیان را فقط سه مرتبه شکست خواهی داد.»۱۹
20 ೨೦ ಎಲೀಷನು ಮರಣ ಹೊಂದಲು, ಅವನ ಶವವನ್ನು ಅವರು ಸಮಾಧಿಮಾಡಿದರು. ಮೋವಾಬ್ಯರು ಪ್ರತಿ ವರ್ಷದ ಪ್ರಾರಂಭದಲ್ಲಿ ಸುಲಿಗೆ ಮಾಡುವುದಕ್ಕೋಸ್ಕರ ಗುಂಪು ಗುಂಪಾಗಿ ಬರುತ್ತಿದ್ದರು.
و الیشع وفات کرد و او را دفن نمودند و دروقت تحویل سال لشکرهای موآب به زمین درآمدند.۲۰
21 ೨೧ ಒಂದು ದಿನ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಸತ್ತ ಮನುಷ್ಯನ ದೇಹವು ಎಲೀಷನ ಎಲುಬುಗಳಿಗೆ ತಗಲಿದ ಕೂಡಲೆ ಅವನು ಜೀವ ಬಂದು ಎದ್ದು ನಿಂತನು.
و واقع شد که چون مردی را دفن می‌کردند، آن لشکر را دیدند و آن مرده را در قبرالیشع انداختند، و چون آن میت به استخوانهای الیشع برخورد، زنده گشت و به پایهای خودایستاد.۲۱
22 ೨೨ ಆದರೆ ಅರಾಮ್ಯರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಾಯೇಲರನ್ನು ಪೀಡಿಸುತ್ತಿದ್ದನು.
و حزائیل، پادشاه ارام، اسرائیل را درتمامی ایام یهواخاز به تنگ آورد.۲۲
23 ೨೩ ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.
اماخداوند بر ایشان رافت و ترحم نموده، به‌خاطرعهد خود که با ابراهیم و اسحاق و یعقوب بسته بود به ایشان التفات کرد و نخواست ایشان راهلاک سازد، و ایشان را از حضور خود هنوز دورنینداخت.۲۳
24 ೨೪ ಅರಾಮ್ಯರ ಅರಸನಾದ ಹಜಾಯೇಲನು ಮರಣಹೊಂದಲು ಅವನಿಗೆ ಬದಲಾಗಿ ಅವನ ಮಗನಾದ ಬೆನ್ಹದದನು ಅರಸನಾದನು.
پس حزائیل، پادشاه ارام مرد و پسرش، بنهدد به‌جایش پادشاه شد.۲۴
25 ೨೫ ಯೆಹೋವಾಹಾಜನ ಮಗನಾದ ಯೆಹೋವಾಷನು ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ ಇಸ್ರಾಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ತೆಗೆದುಕೊಂಡನು.
و یهوآش بن یهواخاز، شهرهایی را که حزائیل از دست پدرش، یهواخاز به جنگ گرفته بود، از دست بنهدد بن حزائیل باز پس گرفت، و یهوآش سه مرتبه او را شکست داده، شهرهای اسرائیل رااسترداد نمود.۲۵

< ಅರಸುಗಳು - ದ್ವಿತೀಯ ಭಾಗ 13 >