< ಅರಸುಗಳು - ದ್ವಿತೀಯ ಭಾಗ 13 >
1 ೧ ಯೆಹೂದದ ಅರಸನೂ, ಅಹಜ್ಯನ ಮಗನೂ ಆದ ಯೆಹೋವಾಷನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನೇಳು ವರ್ಷ ಆಳ್ವಿಕೆ ಮಾಡಿದನು.
Con của Giê-hu là Giô-a-cha lên ngôi làm vua Ít-ra-ên vào năm thứ hai mươi ba đời Giô-ách, con A-cha-xia, vua Giu-đa. Giô-a-cha làm vua được mười bảy năm tại Sa-ma-ri.
2 ೨ ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
Vua làm điều ác trước mặt Chúa Hằng Hữu, theo đường tội lỗi của Giê-rô-bô-am, con Nê-bát, lôi kéo Ít-ra-ên phạm tội. Vua không hề từ bỏ tội lỗi mình.
3 ೩ ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.
Vì thế, Chúa Hằng Hữu rất giận Ít-ra-ên. Ngài để cho Ha-xa-ên, vua A-ram và Bên Ha-đát, con Ha-xa-ên liên tục đánh phá Ít-ra-ên.
4 ೪ ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಲಾಲಿಸಿದನು. ಅಲ್ಲದೆ ಅವರು ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟರುವುದನ್ನು ನೋಡಿ,
Nhưng đến khi Giô-a-cha cầu cứu Chúa Hằng Hữu, Ngài nhậm lời vua, vì Ngài thấy cảnh vua A-ram áp bức Ít-ra-ên.
5 ೫ ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.
Chúa Hằng Hữu đã dấy lên một người giải thoát Ít-ra-ên khỏi quyền lực A-ram, và họ lại được sống an hòa như xưa.
6 ೬ ಆದರೂ ಇಸ್ರಾಯೇಲರು ತಮ್ಮನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವು ಇದ್ದೇ ಇತ್ತು.
Nhưng rồi, họ lại tiếp tục phạm tội, không từ bỏ đường lối của Giê-rô-bô-am, người đã lôi kéo Ít-ra-ên phạm tội. Họ vẫn thờ cúng thần A-sê-ra tại Sa-ma-ri.
7 ೭ ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.
Lúc ấy, quân của Giô-a-cha chỉ còn có 50 kỵ binh, 10 chiến xa, và 10.000 bộ binh, vì phần lớn đã bị vua A-ram tiêu diệt như cám trong sân đập lúa.
8 ೮ ಯೆಹೋವಾಹಾಜನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Các việc khác của Giô-a-cha và thế lực vua đều được chép trong Sách Lịch Sử Các Vua Ít-ra-ên.
9 ೯ ಯೆಹೋವಾಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋವಾಷನು ಅರಸನಾದನು.
Giô-a-cha an giấc với tổ tiên, được chôn tại Sa-ma-ri. Con vua là Giô-ách lên kế vị.
10 ೧೦ ಯೆಹೂದದ ಅರಸನಾದ ಯೋವಾಷನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗನಾದ ಯೆಹೋವಾಷನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನಾರು ವರ್ಷ ಆಳಿದನು.
Con của Giô-a-cha là Giô-ách lên ngôi làm vua Ít-ra-ên vào năm thứ ba mươi bảy đời Giô-ách vua Giu-đa, và cai trị mười sáu năm tại Sa-ma-ri.
11 ೧೧ ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
Vua làm điều ác trước mặt Chúa Hằng Hữu, không từ bỏ tội của Giê-rô-bô-am, con Nê-bát, lôi kéo Ít-ra-ên phạm tội, nhưng cứ một mực theo đường lối ấy.
12 ೧೨ ಯೋವಾಷನ ಉಳಿದ ಚರಿತ್ರೆಯೂ, ಅವನ ಶೂರ ಕೃತ್ಯಗಳೂ, ಇವನು ಯೆಹೂದ್ಯರ ಅರಸನಾದ ಅಮಚ್ಯನು ಎಂಬವನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Các việc khác của Giô-ách, cùng các trận chiến với A-ma-xia, vua Giu-đa, đều được chép trong Sách Lịch Sử Các Vua Ít-ra-ên.
13 ೧೩ ಯೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನದಲ್ಲಿ ಸಮಾಧಿಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು.
Giô-ách an giấc với tổ tiên, được chôn tại Sa-ma-ri cùng với các vua Ít-ra-ên khác. Con Giô-ách là Giê-rô-bô-am II, lên ngôi kế vị.
14 ೧೪ ಆ ಕಾಲದಲ್ಲಿ ಎಲೀಷನು ಮರಣಕರವಾದ ರೋಗಕ್ಕೆ ಗುರಿಯಾದನು. ಇಸ್ರಾಯೇಲರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥರಥಾಶ್ವಬಲಗಳಾಗಿದ್ದವನೇ” ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು.
Ê-li-sê mắc bệnh nặng và qua đời. Trước khi Ê-li-sê qua đời, Giô-ách, vua Ít-ra-ên có đến thăm. Nhìn vị tiên tri, vua khóc lóc thở than: “Cha ơi! Cha! Xe và kỵ binh của Ít-ra-ên!”
15 ೧೫ ಆಗ ಎಲೀಷನು ಇಸ್ರಾಯೇಲರ ಅರಸನಿಗೆ, “ಬಿಲ್ಲನ್ನೂ, ಬಾಣಗಳನ್ನೂ ತರಿಸು” ಎಂದು ಹೇಳಿದನು. ಅವನು ತೆಗೆದುಕೊಂಡನು.
Ê-li-sê bảo Giô-ách: “Lấy cung và tên.” Giô-ách vâng lời.
16 ೧೬ ಆಗ ಎಲೀಷನು ಇಸ್ರಾಯೇಲರ ಅರಸನಿಗೆ, “ಬಿಲ್ಲನ್ನು ಹಿಡಿದುಕೋ” ಎಂದು ಆಜ್ಞಾಪಿಸಿದನು. ಅವನು ಹಿಡಿದುಕೊಳ್ಳಲು ತನ್ನ ಕೈಯನ್ನು ಅವನ ಕೈಮೇಲಿಟ್ಟನು.
Tiên tri tiếp: “Mở cửa sổ phía đông.” Vua làm theo. Tiên tri bảo vua giương cung. Giô-ách giương cung. Tiên tri đặt tay mình trên tay vua.
17 ೧೭ ಎಲೀಷನು, “ಮೂಡಣ ದಿಕ್ಕಿಗಿರುವ ಕಿಟಕಿಯನ್ನು ತೆರೆ” ಎಂದನು. ಅವನು ತೆರೆದನು. ಅನಂತರ ಎಲೀಷನು, “ಬಾಣವನ್ನು ಎಸೆ” ಎಂದು ಆಜ್ಞಾಪಿಸಿದನು. ಅವನು ಎಸೆಯಲು ಎಲೀಷನು, “ಇದು ಜಯಪ್ರದವಾದ ಯೆಹೋವನ ಬಾಣ; ಅರಾಮ್ಯರನ್ನು ಜಯಿಸುವ ಬಾಣ. ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವಿ” ಎಂದು ಹೇಳಿದನು.
Ê-li-sê ra lệnh: “Bắn.” Giô-ách bắn tên đi. Tiên tri nói: “Đó là mũi tên của Chúa Hằng Hữu, tức mũi tên sẽ chiến thắng quân A-ram. Vì vua sẽ đánh tan lực lượng A-ram tại A-phéc.”
18 ೧೮ ಇದಲ್ಲದೆ ಎಲೀಷನು ಇಸ್ರಾಯೇಲರ ಅರಸನಿಗೆ, “ಬಾಣಗಳನ್ನು ತೆಗೆದುಕೋ” ಎಂದು ಆಜ್ಞಾಪಿಸಿದಾಗ ಅವನು ಅವುಗಳನ್ನು ತೆಗೆದುಕೊಳ್ಳಲು ಎಲೀಷನು ಅರಸನಿಗೆ, “ಇವುಗಳಿಂದ ನೆಲವನ್ನು ಹೊಡಿ” ಎಂದನು. ಅವನು ಮೂರು ಸಾರಿ ಹೊಡೆದು ಸುಮ್ಮನೆ ನಿಂತನು.
Tiên tri lại bảo: “Cầm cây tên đập xuống đất.” Vua lấy cây tên đập xuống đất ba lần.
19 ೧೯ ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, “ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ” ಎಂದು ಹೇಳಿದನು.
Người của Đức Chúa Trời nổi giận, nói: “Đáng lẽ vua phải đập năm sáu lần, như thế vua mới đánh quân A-ram tiêu tan được. Nhưng thế này vua chỉ thắng họ ba trận thôi.”
20 ೨೦ ಎಲೀಷನು ಮರಣ ಹೊಂದಲು, ಅವನ ಶವವನ್ನು ಅವರು ಸಮಾಧಿಮಾಡಿದರು. ಮೋವಾಬ್ಯರು ಪ್ರತಿ ವರ್ಷದ ಪ್ರಾರಂಭದಲ್ಲಿ ಸುಲಿಗೆ ಮಾಡುವುದಕ್ಕೋಸ್ಕರ ಗುಂಪು ಗುಂಪಾಗಿ ಬರುತ್ತಿದ್ದರು.
Ê-li-sê qua đời và được an táng. Trong thời ấy, quân cướp Mô-áp thường đến cướp phá vào mùa xuân.
21 ೨೧ ಒಂದು ದಿನ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಸತ್ತ ಮನುಷ್ಯನ ದೇಹವು ಎಲೀಷನ ಎಲುಬುಗಳಿಗೆ ತಗಲಿದ ಕೂಡಲೆ ಅವನು ಜೀವ ಬಂದು ಎದ್ದು ನಿಂತನು.
Một hôm, người ta đang đi chôn một người chết, thấy quân cướp đến, họ vội quẳng xác vào mồ Ê-li-sê. Xác vừa đụng xương Ê-li-sê, liền vùng sống lại và đứng lên.
22 ೨೨ ಆದರೆ ಅರಾಮ್ಯರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಾಯೇಲರನ್ನು ಪೀಡಿಸುತ್ತಿದ್ದನು.
Suốt thời gian Giô-a-cha cai trị, Vua Ha-xa-ên, nước A-ram, áp bức người Ít-ra-ên.
23 ೨೩ ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.
Nhưng Chúa Hằng Hữu vẫn làm ơn cho họ. Vì lòng thương xót và vì giao ước Ngài đã kết với Áp-ra-ham, Y-sác, và Gia-cốp, Ngài vẫn không từ bỏ họ và không để họ bị tiêu diệt.
24 ೨೪ ಅರಾಮ್ಯರ ಅರಸನಾದ ಹಜಾಯೇಲನು ಮರಣಹೊಂದಲು ಅವನಿಗೆ ಬದಲಾಗಿ ಅವನ ಮಗನಾದ ಬೆನ್ಹದದನು ಅರಸನಾದನು.
Khi Vua Ha-xa-ên, nước A-ram chết, Bên Ha-đát, con Ha-xa-ên lên kế vị.
25 ೨೫ ಯೆಹೋವಾಹಾಜನ ಮಗನಾದ ಯೆಹೋವಾಷನು ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ ಇಸ್ರಾಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ತೆಗೆದುಕೊಂಡನು.
Giô-ách đem quân đánh Bên Ha-đát, con trai Ha-xa-ên, thắng ba trận lớn, chiếm lại các thành Bên Ha-đát đã chiếm của Ít-ra-ên dưới triều Vua Giô-a-cha cha mình.