< ಅರಸುಗಳು - ದ್ವಿತೀಯ ಭಾಗ 15 >
1 ೧ ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ಅರಸನಾದನು.
१इस्राएल के राजा यारोबाम के राज्य के सताईसवें वर्ष में यहूदा के राजा अमस्याह का पुत्र अजर्याह राजा हुआ।
2 ೨ ಅಜರ್ಯನು ಪಟ್ಟಕ್ಕೆ ಬಂದಾಗ ಅವನು ಹದಿನಾರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆ ಇವನ ತಾಯಿ.
२जब वह राज्य करने लगा, तब सोलह वर्ष का था, और यरूशलेम में बावन वर्ष राज्य करता रहा। उसकी माता का नाम यकोल्याह था, जो यरूशलेम की थी।
3 ೩ ಅಜರ್ಯನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
३जैसे उसका पिता अमस्याह किया करता था जो यहोवा की दृष्टि में ठीक था, वैसे ही वह भी करता था।
4 ೪ ಆದರೆ, ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ತೆಗೆಯಲ್ಪಡಲಿಲ್ಲವಾದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
४तो भी ऊँचे स्थान गिराए न गए; प्रजा के लोग उस समय भी उन पर बलि चढ़ाते, और धूप जलाते रहे।
5 ೫ ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
५यहोवा ने उस राजा को ऐसा मारा, कि वह मरने के दिन तक कोढ़ी रहा, और अलग एक घर में रहता था। योताम नामक राजपुत्र उसके घराने के काम पर अधिकारी होकर देश के लोगों का न्याय करता था।
6 ೬ ಅಜರ್ಯನ ಉಳಿದ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲದ ವೃತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
६अजर्याह के और सब काम जो उसने किए, वह क्या यहूदा के राजाओं के इतिहास की पुस्तक में नहीं लिखे हैं?
7 ೭ ಅಜರ್ಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ರಾಜಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೋತಾಮನು ಅರಸನಾದನು.
७अन्त में अजर्याह मरकर अपने पुरखाओं के संग जा मिला और उसको दाऊदपुर में उसके पुरखाओं के बीच मिट्टी दी गई, और उसका पुत्र योताम उसके स्थान पर राज्य करने लगा।
8 ೮ ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಆರು ತಿಂಗಳು ಆಳಿದನು.
८यहूदा के राजा अजर्याह के राज्य के अड़तीसवें वर्ष में यारोबाम का पुत्र जकर्याह इस्राएल पर सामरिया में राज्य करने लगा, और छः महीने राज्य किया।
9 ೯ ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
९उसने अपने पुरखाओं के समान वह किया, जो यहोवा की दृष्टि में बुरा है, अर्थात् नबात के पुत्र यारोबाम जिसने इस्राएल से पाप कराया था, उसके पापों के अनुसार वह करता रहा, और उनसे वह अलग न हुआ।
10 ೧೦ ಯಾಬೇಷನ ಮಗನಾದ ಶಲ್ಲೂಮನು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಪ್ರಜೆಗಳ ಮುಂದೆಯೇ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.
१०और याबेश के पुत्र शल्लूम ने उससे राजद्रोह की गोष्ठी करके उसको प्रजा के सामने मारा, और उसको घात करके उसके स्थान पर राजा हुआ।
11 ೧೧ ಜೆಕರ್ಯನ ಉಳಿದ ಚರಿತ್ರೆಯು ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
११जकर्याह के और काम इस्राएल के राजाओं के इतिहास की पुस्तक में लिखे हैं।
12 ೧೨ “ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂಬುದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು.
१२अतः यहोवा का वह वचन पूरा हुआ, जो उसने येहू से कहा था, “तेरे परपोते के पुत्र तक तेरी सन्तान इस्राएल की गद्दी पर बैठती जाएगी।” और वैसा ही हुआ।
13 ೧೩ ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.
१३यहूदा के राजा उज्जियाह के राज्य के उनतालीसवें वर्ष में याबेश का पुत्र शल्लूम राज्य करने लगा, और महीने भर सामरिया में राज्य करता रहा।
14 ೧೪ ಗಾದಿಯ ಮಗನಾದ ಮೆನಹೇಮನೆಂಬುವನು ತಿರ್ಚದಿಂದ ಸಮಾರ್ಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದು, ಅವನಿಗೆ ಬದಲಾಗಿ ತಾನು ಅರಸನಾದನು.
१४क्योंकि गादी के पुत्र मनहेम ने, तिर्सा से सामरिया को जाकर याबेश के पुत्र शल्लूम को वहीं मारा, और उसे घात करके उसके स्थान पर राजा हुआ।
15 ೧೫ ಶಲ್ಲೂಮನ ಉಳಿದ ಚರಿತ್ರೆಯೂ ಮತ್ತು ಅವನ ಒಳಸಂಚಿನ ವಿವರವೂ ಇಸ್ರಾಯೇಲ್ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.
१५शल्लूम के अन्य काम और उसने राजद्रोह की जो गोष्ठी की, यह सब इस्राएल के राजाओं के इतिहास की पुस्तक में लिखा है।
16 ೧೬ ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ, ಆದುದರಿಂದ ಅವನು ಆ ಊರನ್ನು ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಯನ್ನು ಸೀಳಿಹಾಕಿಸಿದನು.
१६तब मनहेम ने तिर्सा से जाकर, सब निवासियों और आस-पास के देश समेत तिप्सह को इस कारण मार लिया, कि तिप्सहियों ने उसके लिये फाटक न खोले थे, इस कारण उसने उन्हें मार दिया, और उसमें जितनी गर्भवती स्त्रियाँ थीं, उन सभी को चीर डाला।
17 ೧೭ ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರ್ಷ ಆಳಿದನು.
१७यहूदा के राजा अजर्याह के राज्य के उनतालीसवें वर्ष में गादी का पुत्र मनहेम इस्राएल पर राज्य करने लगा, और दस वर्ष सामरिया में राज्य करता रहा।
18 ೧೮ ಇವನು ಜೀವದಿಂದ ಇರುವವರೆಗೂ ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
१८उसने वह किया, जो यहोवा की दृष्टि में बुरा था, अर्थात् नबात के पुत्र यारोबाम जिसने इस्राएल से पाप कराया था, उसके पापों के अनुसार वह करता रहा, और उनसे वह जीवन भर अलग न हुआ।
19 ೧೯ ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.
१९अश्शूर के राजा पूल ने देश पर चढ़ाई की, और मनहेम ने उसको हजार किक्कार चाँदी इस इच्छा से दी, कि वह उसका सहायक होकर राज्य को उसके हाथ में स्थिर रखे।
20 ೨೦ ಮೆನಹೇಮನು ಅಶ್ಶೂರದ ಅರಸನಿಗೆ ಆ ಹಣವನ್ನು ಕೊಡುವುದಕ್ಕಾಗಿ ಇಸ್ರಾಯೇಲರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ರೂಪಾಯಿಗಳನ್ನು ವಸೂಲಿಮಾಡಿಕೊಂಡನು. ಆ ಹಣವು ಸಿಕ್ಕಿದ ನಂತರ ಅಶ್ಶೂರದ ಅರಸನು ಅಲ್ಲಿ ನಿಲ್ಲದೆ ಹಿಂತಿರುಗಿ ಹೋದನು.
२०यह चाँदी अश्शूर के राजा को देने के लिये मनहेम ने बड़े-बड़े धनवान इस्राएलियों से ले ली, एक-एक पुरुष को पचास-पचास शेकेल चाँदी देनी पड़ी; तब अश्शूर का राजा देश को छोड़कर लौट गया।
21 ೨೧ ಮೆನಹೇಮನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
२१मनहेम के और काम जो उसने किए, वे सब क्या इस्राएल के राजाओं के इतिहास की पुस्तक में नहीं लिखे हैं?
22 ೨೨ ಮೆನಹೇಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಮಗನಾದ ಪೆಕಹ್ಯನು ಇಸ್ರಾಯೇಲರ ಅರಸನಾದನು.
२२अन्त में मनहेम मरकर अपने पुरखाओं के संग जा मिला और उसका पुत्र पकहयाह उसके स्थान पर राज्य करने लगा।
23 ೨೩ ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳಿದನು.
२३यहूदा के राजा अजर्याह के राज्य के पचासवें वर्ष में मनहेम का पुत्र पकहयाह सामरिया में इस्राएल पर राज्य करने लगा, और दो वर्ष तक राज्य करता रहा।
24 ೨೪ ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
२४उसने वह किया जो यहोवा की दृष्टि में बुरा था, अर्थात् नबात के पुत्र यारोबाम जिसने इस्राएल से पाप कराया था, उसके पापों के अनुसार वह करता रहा, और उनसे वह अलग न हुआ।
25 ೨೫ ಇವನ ಸರದಾರನೂ, ರೆಮಲ್ಯನ ಮಗನೂ ಆಗಿದ್ದ ಪೆಕಹನು, ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.
२५उसके सरदार रमल्याह के पुत्र पेकह ने उसके विरुद्ध राजद्रोह की गोष्ठी करके, सामरिया के राजभवन के गुम्मट में उसको और उसके संग अर्गोब और अर्ये को मारा; और पेकह के संग पचास गिलादी पुरुष थे, और वह उसका घात करके उसके स्थान पर राजा बन गया।
26 ೨೬ ಪೆಕಹ್ಯನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
२६पकहयाह के और सब काम जो उसने किए, वह इस्राएल के राजाओं के इतिहास की पुस्तक में लिखे हैं।
27 ೨೭ ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತು ವರ್ಷ ಆಳಿದನು.
२७यहूदा के राजा अजर्याह के राज्य के बावनवें वर्ष में रमल्याह का पुत्र पेकह सामरिया में इस्राएल पर राज्य करने लगा, और बीस वर्ष तक राज्य करता रहा।
28 ೨೮ ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
२८उसने वह किया, जो यहोवा की दृष्टि में बुरा था, अर्थात् नबात के पुत्र यारोबाम, जिसने इस्राएल से पाप कराया था, उसके पापों के अनुसार वह करता रहा, और उनसे वह अलग न हुआ।
29 ೨೯ ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.
२९इस्राएल के राजा पेकह के दिनों में अश्शूर के राजा तिग्लत्पिलेसेर ने आकर इय्योन, आबेल्वेत्माका, यानोह, केदेश और हासोर नामक नगरों को और गिलाद और गलील, वरन् नप्ताली के पूरे देश को भी ले लिया, और उनके लोगों को बन्दी बनाकर अश्शूर को ले गया।
30 ೩೦ ಆಗ ಏಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.
३०उज्जियाह के पुत्र योताम के बीसवें वर्ष में एला के पुत्र होशे ने रमल्याह के पुत्र पेकह के विरुद्ध राजद्रोह की गोष्ठी करके उसे मारा, और उसे घात करके उसके स्थान पर राजा बन गया।
31 ೩೧ ಪೆಕಹನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
३१पेकह के और सब काम जो उसने किए वह इस्राएल के राजाओं के इतिहास की पुस्तक में लिखे हैं।
32 ೩೨ ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಉಜ್ಜೀಯನ ಮಗನಾದ ಯೋತಾಮನು ಆಳತೊಡಗಿದನು.
३२रमल्याह के पुत्र इस्राएल के राजा पेकह के राज्य के दूसरे वर्ष में यहूदा के राजा उज्जियाह का पुत्र योताम राजा हुआ।
33 ೩೩ ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷಾ ಇವನ ತಾಯಿ.
३३जब वह राज्य करने लगा, तब पच्चीस वर्ष का था, और यरूशलेम में सोलह वर्ष तक राज्य करता रहा। और उसकी माता का नाम यरूशा था जो सादोक की बेटी थी।
34 ೩೪ ಇವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.
३४उसने वह किया जो यहोवा की दृष्टि में ठीक था, अर्थात् जैसा उसके पिता उज्जियाह ने किया था, ठीक वैसा ही उसने भी किया।
35 ೩೫ ಆದರೆ ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಸಮರ್ಪಿಸುತ್ತಿದ್ದರು. ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.
३५तो भी ऊँचे स्थान गिराए न गए, प्रजा के लोग उन पर उस समय भी बलि चढ़ाते और धूप जलाते रहे। यहोवा के भवन के ऊँचे फाटक को इसी ने बनाया था।
36 ೩೬ ಯೋತಾಮನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
३६योताम के और सब काम जो उसने किए, वे क्या यहूदा के राजाओं के इतिहास की पुस्तक में नहीं लिखे हैं?
37 ೩೭ ಯೆಹೋವನು ಆ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನನ್ನೂ, ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದ್ಯರಿಗೆ ವಿರೋಧವಾಗಿ ಕಳುಹಿಸತೊಡಗಿದನು.
३७उन दिनों में यहोवा अराम के राजा रसीन को, और रमल्याह के पुत्र पेकह को, यहूदा के विरुद्ध भेजने लगा।
38 ೩೮ ಯೋತಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಅವನ ಪೂರ್ವಿಕರ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.
३८अन्त में योताम मरकर अपने पुरखाओं के संग जा मिला और अपने मूलपुरुष दाऊद के नगर में अपने पुरखाओं के बीच उसको मिट्टी दी गई, और उसका पुत्र आहाज उसके स्थान पर राज्य करने लगा।