< ಅರಸುಗಳು - ದ್ವಿತೀಯ ಭಾಗ 16 >
1 ೧ ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.
In the seventeenth year of Pekah, the son of Remaliah, Ahaz, the son of Jotham, became king of Judah.
2 ೨ ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲರ ಮಾರ್ಗವನ್ನು ಹಿಡಿದನು.
Ahaz was twenty years old when he became king; he was ruling for sixteen years in Jerusalem. He did not do what was right in the eyes of the Lord his God, as David his father did.
3 ೩ ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.
But he went in the ways of the kings of Israel, and even made his son go through the fire, copying the disgusting ways of the nations whom the Lord had sent out of the land before the children of Israel.
4 ೪ ಪೂಜಾಸ್ಥಳಗಳಲ್ಲಿಯೂ, ದಿನ್ನೆಗಳ ಮೇಲೆಯೂ, ಎಲ್ಲಾ ಹಸಿರು ಮರಗಳ ಕೆಳಗಡೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು.
And he made offerings, burning them in the high places and on the hills and under every green tree.
5 ೫ ಇವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ್, ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹ ಎಂಬುವವರು ಒಟ್ಟಿಗೆ ಸೇರಿ ಯೆರೂಸಲೇಮಿಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸುವುದು ಅವರಿಂದ ಆಗಲಿಲ್ಲ.
Then Rezin, king of Aram, and Pekah, son of Remaliah, king of Israel, came up to Jerusalem to make war; and they made an attack on Ahaz, shutting him in, but were not able to overcome him.
6 ೬ ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸತೊಡಗಿದರು. ಅವರು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ.
At that time the king of Edom got Elath back for Edom, and sent the Jews out of Elath; and the Edomites came back to Elath where they are living to this day.
7 ೭ ಆಹಾಜನು ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು” ಎಂದು ಕೇಳಿಕೊಂಡನು.
So Ahaz sent representatives to Tiglath-pileser, king of Assyria, saying, I am your servant and your son; come to my help against the kings of Aram and Israel who have taken up arms against me.
8 ೮ ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.
And Ahaz took the silver and gold which were in the house of the Lord and in the king's store-house, and sent them as an offering to the king of Assyria.
9 ೯ ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.
And the king of Assyria, in answer to his request, went up against Damascus and took it, and took its people away as prisoners to Kir, and put Rezin to death.
10 ೧೦ ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು, ಅದರ ಒಂದು ಪ್ರತಿಮೆಯನ್ನೂ, ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ, ಯಾಜಕನಾದ ಊರೀಯನಿಗೆ ಕಳುಹಿಸಿದನು.
Then King Ahaz went to Damascus for a meeting with Tiglath-pileser, king of Assyria; and there he saw the altar which was at Damascus; and King Ahaz sent to Urijah the priest a copy of the altar, giving the design of it and all the details of its structure.
11 ೧೧ ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಯಜ್ಞವೇದಿಯನ್ನು ಮಾಡಿಸಿಟ್ಟಿದ್ದನು.
And from the copy King Ahaz sent from Damascus, Urijah made an altar and had it ready by the time King Ahaz came back from Damascus.
12 ೧೨ ಅರಸನು ದಮಸ್ಕದಿಂದ ಹಿಂತಿರುಗಿ ಬಂದ ಮೇಲೆ ಆ ಯಜ್ಞವೇದಿಯನ್ನು ಕಂಡು, ಸಮೀಪಕ್ಕೆ ಹೋಗಿ, ಅದರ ಮೇಲೆ ಬಲಿಗಳನ್ನು ಅರ್ಪಿಸಿದನು.
And when the king came from Damascus, he saw the altar; and he went up on it and made an offering on it.
13 ೧೩ ತಾನು ತಂದ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯನೈವೇದ್ಯ ಇವುಗಳನ್ನು ಸಮರ್ಪಿಸಿ ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು.
He made his burned offering and his meal offering and his drink offering there, draining out the blood of his peace-offerings on the altar.
14 ೧೪ ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.
And the brass altar, which was before the Lord, he took from the front of the house, from between his altar and the house of the Lord, and put it on the north side of his altar.
15 ೧೫ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು” ಎಂದು ಹೇಳಿದನು.
And King Ahaz gave orders to Urijah the priest, saying, Make the morning burned offering and the evening meal offering and the king's burned offering and meal offering, with the burned offerings of all the people and their meal offerings and drink offerings, on the great altar, and put on it all the blood of the burned offerings and of the beasts which are offered; but the brass altar will be for my use to get directions from the Lord.
16 ೧೬ ಯಾಜಕನಾದ ಊರೀಯನು ಅರಸನಾದ ಆಹಾಜನು ಹೇಳಿದಂತೆಯೇ ಮಾಡಿದನು.
So Urijah the priest did everything as the king said
17 ೧೭ ಅರಸನಾದ ಆಹಾಜನು ಅಶ್ಶೂರದ ಅರಸನ ನಿಮಿತ್ತವಾಗಿ ಯಜ್ಞವೇದಿಗಳ ಪಟ್ಟಿಗಳನ್ನು ಕತ್ತರಿಸಿದನು, ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು. ಕಡಲೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.
And King Ahaz took off the sides of the wheeled bases, and took down the great water-vessel from off the brass oxen which were under it and put it on a floor of stone.
18 ೧೮ ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲ್ಪಟ್ಟಿದ್ದ ಮಂಟಪವನ್ನು ಹಾಗೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಅಶ್ಶೂರದ ಅರಸನಾದ ಈ ಆಹಾಜನೇ.
the house of the Lord, because of the king of Assyria.
19 ೧೯ ಆಹಾಜನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ್ಯರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
Now the rest of the things which Ahaz did, are they not recorded in the book of the history of the kings of Judah?
20 ೨೦ ಆಹಾಜನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.
And Ahaz went to rest with his fathers, and was put into the earth with his fathers in the town of David; and Hezekiah his son became king in his place.