< ಅರಸುಗಳು - ದ್ವಿತೀಯ ಭಾಗ 17 >
1 ೧ ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗನಾದ ಹೋಶೇಯನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂಭತ್ತು ವರ್ಷ ಆಳಿದನು.
Wa Akaz t'ap mache sou douzan depi li t'ap gouvènen peyi Jida lè Oze, pitit Ela, moute wa nan peyi Izrayèl. Li gouvènen nan lavil Samari pandan nevan.
2 ೨ ಹೋಶೇಯನು ತನ್ನ ಪೂರ್ವಿಕರಾದ ಇಸ್ರಾಯೇಲರ ಅರಸರಷ್ಟು ಕೆಟ್ಟವನಾಗಿರಲಿಲ್ಲವಾದರೂ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
Li fè sa ki mal nan je Seyè a, men tansèlman pa tankou lòt wa ki te gouvènen peyi Izrayèl la anvan l' yo.
3 ೩ ಅಶ್ಶೂರದ ಅರಸನಾದ ಶಲ್ಮನೆಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.
Salmanaza, wa peyi Lasiri a, atake Oze. Oze soumèt devan l'. Li peye l' yon lajan chak lanne.
4 ೪ ಕೆಲವು ವರ್ಷಗಳಾದ ನಂತರ ಅರಸನಾದ ಹೋಶೇಯನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದುದರಿಂದಲೂ, ಐಗುಪ್ತದ ಅರಸನಾದ ಸೋ ಎಂಬುವವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.
Men, Salmanaza vin dekouvri Oze t'ap moute konplo sou do l'. Oze te voye mesaje bò kot So, wa peyi Lejip, pou mande l' konkou. Lèfini, li te sispann voye lajan li te gen pou l' peye wa peyi Lasiri a chak lanne. Se konsa Salmanaza fè arete Oze, mete l' nan prizon ak chenn nan pye l'.
5 ೫ ಇದಲ್ಲದೆ, ಅಶ್ಶೂರದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರ್ಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದನು.
Salmanaza anvayi peyi Izrayèl la. Li sènen lavil Samari pandan twazan.
6 ೬ ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.
Oze te gen nevan depi li te wa lè wa Lasiri a pran lavil Samari. Salmanaza fè tout pèp Izrayèl la prizonye, li depòte yo nan peyi Lasiri. Li mete yon pati ladan yo lavil Ala, toupre larivyè Abò nan zòn Gozan, yon pati nan lavil peyi Medi yo.
7 ೭ ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.
Sa te rive konsa paske moun peyi Izrayèl yo te fè peche kont Seyè a, Bondye yo a, ki te fè yo soti kite peyi Lejip, ki te delivre yo anba men farawon an, wa peyi Lejip la. Yo t'ap sèvi lòt bondye.
8 ೮ ಯೆಹೋವನು ತಮ್ಮ ಎದುರಿನಿಂದ ಹೊರಡಿಸಿಬಿಟ್ಟ ಜನಾಂಗಗಳ ಮತ್ತು ಇಸ್ರಾಯೇಲ್ ರಾಜರ ದುರಾಚಾರಗಳನ್ನು ಅನುಸರಿಸಿದರು.
Yo t'ap swiv mès moun lòt nasyon Seyè a te mete deyò nan peyi a pou fè plas pou yo. Yo t'ap mache dapre lòt vye prensip wa Izrayèl yo te ba yo.
9 ೯ ಇಸ್ರಾಯೇಲರು ತಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದ ಗುಪ್ತವಾದ ದುಷ್ಟ ಕೃತ್ಯಗಳನ್ನು ನಡಿಸಿದರು. ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು.
Lèfini, moun peyi Izrayèl yo te fè yon bann bagay yo pa t' dwe fè devan Seyè a. Yo bati tanp pou zidòl nan tout lavil yo, depi nan ti bouk kote ki gen avanpòs pou faksyonnè rive nan gwo lavil ak ranpa yo.
10 ೧೦ ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲು ಕಂಬ, ಅಶೇರ ವಿಗ್ರಹಸ್ತಂಭ ಇವುಗಳನ್ನು ನಿಲ್ಲಿಸಿದರು.
Sou tout mòn, anba tout gwo pyebwa, yo kanpe gwo wòch ak estati pou Achera, zidòl fanm lan.
11 ೧೧ ಅಲ್ಲಿ ಅವರು ಯೆಹೋವನು ತಮ್ಮ ಎದುರಿನಿಂದ ಹೊರಡಿಸಿ ಜಡಿಸಿದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಹಾಕಿ, ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು.
Yo boule lansan sou tout lotèl zidòl yo tankou moun Seyè a te mete deyò nan peyi a te konn fè. Yo fè yon bann bagay derespektan ki lakòz Seyè a te fache anpil.
12 ೧೨ “ನೀವು ಇಂತಹ ಕೃತ್ಯಗಳನ್ನು ಮಾಡಬಾರದು” ಎಂದು ಯೆಹೋವನು ಅವರಿಗೆ ಆಜ್ಞಾಪಿಸಿದ್ದರೂ ಅವರು ಆತನ ಅಜ್ಞೆಯನ್ನು ಮೀರಿ ಅವರು ವಿಗ್ರಹಗಳನ್ನು ಆರಾಧಿಸಿದರು.
Yo adore zidòl, bagay Seyè a te ba yo lòd pa fè.
13 ೧೩ ಯೆಹೋವನು ದರ್ಶಕರೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲರಿಗೆ ಮತ್ತು ಯೆಹೂದ್ಯರಿಗೆ, “ನೀವು, ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಿಕರಿಗೂ, ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೆ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ” ಎಂದು ಖಂಡಿತವಾಗಿ ಹೇಳಿಸಿದನು.
Seyè a te voye mesaje ak pwofèt li yo avèti moun peyi Izrayèl yo ansanm ak moun peyi Jida yo. Li te byen di yo: Manyè kite move chemen n'ap swiv la! Fè sa m' mande nou fè. Kenbe lòd mwen yo jan sa ye nan lalwa mwen te bay zansèt nou yo, lalwa mwen te fè pwofèt yo, sèvitè m' yo, moutre nou an.
14 ೧೪ ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು.
Men, yo pa koute l', yo fè tèt di tankou zansèt yo ki pa t' mete konfyans yo nan Seyè a, Bondye yo a.
15 ೧೫ ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.
Yo derefize kenbe lòd li yo, yo pa respekte kontra li te pase ak zansèt yo. Yo pa okipe avètisman li te ba yo, yo pran sèvi zidòl ki pa vo anyen. Yo menm, yo pèdi valè yo. Yo pran fè tankou lòt nasyon k'ap viv bò kote yo t'ap fè, yo dezobeyi lòd Seyè a ki te di yo pa fè sa.
16 ೧೬ ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು.
Yo lage tout kòmandman Seyè a, Bondye yo a, te ba yo. Yo fè de estati towo an kwiv pou yo sèvi ak yon pòtre Achera, zidòl fanm lan, yo sèvi zetwal nan syèl la ansanm ak Baal.
17 ೧೭ ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿ ಕೊಟ್ಟರು. ಯೆಹೋವನ ದೃಷ್ಟಿಯಲ್ಲಿ ನೀಚಕೃತ್ಯಗಳಾಗಿರುವ ಕಣಿಹೇಳುವುದು, ಮಾಟ ಮಂತ್ರಗಳನ್ನು ಮಾಡುವುದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು, ಯೆಹೋವನಿಗೆ ಕೋಪವನ್ನೆಬ್ಬಿಸಿದರು.
Yo bay pitit fi ak pitit gason yo pou boule pou bondye lòt nasyon yo, y' al dèyè divinò ak chòche. Yo vann tèt yo, yo lage kò yo nan fè sa ki mal nan je Seyè a, pou yo te ka fè l' move jouk li pa kapab ankò.
18 ೧೮ ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.
Se konsa Seyè a fè yon sèl move sou pèp Izrayèl la, li wete yo devan je l'. Pa rete pase branch fanmi Jida a.
19 ೧೯ ಯೆಹೂದ್ಯರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲರ ಪದ್ಧತಿಯನ್ನು ಅನುಸರಿಸಿದರು.
Men, ata moun peyi Jida yo tou pa t' kenbe lòd Seyè a, Bondye yo a. Yo t'ap fè tankou moun peyi Izrayèl yo. Yo t'ap fè tout vye bagay moun peyi Izrayèl yo te ranmase.
20 ೨೦ ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.
Se poutèt sa Seyè a vire do bay dènye moun nan ras Izrayèl la. Li fè yo wont, li lage yo nan men yon bann piyajè, jouk li wete yo devan je l'.
21 ೨೧ ಆತನು ಇಸ್ರಾಯೇಲರ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ ಇಸ್ರಾಯೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು.
Li separe pèp la, li mete moun peyi Izrayèl yo yon bò, moun fanmi David yo yon bò. Moun peyi Izrayèl yo pran Jewoboram, pitit Nebat, yo mete l' wa pou gouvènen yo. Jewoboram lakòz yo kite chimen Seyè a nèt. Li fè yo fè pi gwo peche toujou.
22 ೨೨ ಇಸ್ರಾಯೇಲರು ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದು ಅವನು ಮಾಡಿದ ಪಾಪಗಳನ್ನು ತೊರೆದು ಬಿಡಲಿಲ್ಲ.
Moun peyi Izrayèl yo pran fè tankou Jewoboram, yo donnen ladan l' san rete.
23 ೨೩ ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.
Bout pou bout, Seyè a wete yo nèt devan je l', jan li te voye sèvitè l' yo, pwofèt yo avèti yo a. Se konsa yo depòte moun peyi Izrayèl yo byen lwen nan peyi Lasiri kote yo ye jouk jounen jòdi a.
24 ೨೪ ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.
Wa peyi Lasiri a pran moun lavil Babilòn, moun lavil Kout, moun lavil Ava, moun lavil Ama ak moun lavil Sefavayim, li voye yo al rete nan lavil peyi Samari nan plas moun Izrayèl li te fè depòte yo. Moun yo pran peyi Samari a pou yo, y' al rete nan tout lavil yo.
25 ೨೫ ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲ. ಆದುದರಿಂದ ಆತನು ಸಿಂಹಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದವು.
Moun sa yo pa t' nan sèvi Seyè a. Konsa, lè yo fèk vin tabli nan peyi a, Seyè a voye lyon ki touye kèk ladan yo.
26 ೨೬ ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ, “ನೀನು ಸಮಾರ್ಯ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿದ್ದಾನೆ” ಎಂದು ತಿಳಿಸಿದರು.
Yo voye di wa peyi Lasiri a: Moun ou te voye vin rete lavil peyi Samari yo pa konnen jan pou yo sèvi Bondye peyi a. Se konsa bondye peyi a voye lyon k'ap fini ak yo.
27 ೨೭ ಆಗ ಅಶ್ಶೂರದ ಅರಸನು ಅವರಿಗೆ, “ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅವರಿಗೆ ಕಲಿಸಲಿ” ಎಂದು ಆಜ್ಞಾಪಿಸಿದನು.
Lè sa a, wa peyi Lasiri a bay lòd sa a: Pran yonn nan prèt nou te fè prizonye yo, voye l' tounen al viv laba a pou l' ka moutre moun yo jan pou yo sèvi bondye peyi a.
28 ೨೮ ಅವರು ಸಮಾರ್ಯದಿಂದ ಸೆರೆಯವನಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು ಜನರಿಗೆ ಯೆಹೋವನ ಭಕ್ತಿಯನ್ನು ಬೋಧಿಸಿದನು.
Se konsa yonn nan prèt yo te depòte yo tounen nan peyi Samari, l' al rete lavil Betèl, li moutre yo jan pou yo fè sèvis pou Seyè a.
29 ೨೯ ಆದರೂ ಆ ಜನಾಂಗಗಳವರು ತಮ್ಮ ದೇವತೆಯ ವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳಲ್ಲಿ ಸಮಾರ್ಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪ್ರತಿಷ್ಠಿಸಿ ಪೂಜಿಸುತ್ತಿದ್ದರು.
Men, chak nasyon te fè bondye pa yo nan lavil kote yo te rete a, yo mete yo nan tanp ansyen moun peyi Izrayèl yo te bati pou zidòl yo.
30 ೩೦ ಬಾಬೆಲಿನವರು ಸುಕ್ಕೋತ್ಬೆನೋತ್ ನನ್ನೂ, ಕೂತದವರು ನೇರ್ಗೆಲ್ ನನ್ನೂ ಹಮಾತಿನವರು ಅಷೀಮನನ್ನು ಮಾಡಿದರು.
Moun lavil Babilòn yo te fè pòtre Soukòt Benòt. Moun lavil Kout yo te fè pòtre Negal. Moun lavil Amat yo te fè pòtre Asima.
31 ೩೧ ಅವ್ವಿಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಮಾಡಿ ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ಅದ್ರಮ್ಮೆಲೆಕ್, ಅನಮ್ಮೆಲೆಕ್ ಎಂಬ ತಮ್ಮ ಕುಲ ದೇವತೆಗಳನ್ನಾಗಿ ಪೂಜಿಸುತ್ತಾ ತಮ್ಮ ಮಕ್ಕಳನ್ನು ಬಲಿ ಅಗ್ನಿಪ್ರವೇಶ ಮಾಡಿಸುತ್ತಿದ್ದರು.
Moun lavil Ava yo te fè pòtre Nibaz ak Tatak. Moun lavil Sefavayim yo ofri pitit yo pou boule pou Adramelèk ak Anamelèk, bondye pa yo.
32 ೩೨ ಅವರು ಯೆಹೋವನ ಭಕ್ತರಾಗಿದ್ದರೂ ಮನಸ್ಸಿಗೆ ಬಂದವರನ್ನು ಉನ್ನತ ಪೂಜಾಸ್ಥಳಗಳ ಯಾಜಕರನ್ನಾಗಿ ನೇಮಿಸಿಕೊಂಡು ಅವರ ಮುಖಾಂತರವಾಗಿ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡಿಸುತ್ತಿದ್ದರು.
Kifè yo t'ap sèvi Seyè a, men an menm tan yo chwazi moun nan mitan yo pou sèvi prèt zidòl yo, pou fè sèvis pou yo nan tanp zidòl yo.
33 ೩೩ ಯೆಹೋವನ ಭಕ್ತರಾಗಿದ್ದರೂ ತಾವು ಬಿಟ್ಟು ಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು.
Se konsa yo t'ap adore Seyè a men yo t'ap adore bondye pa yo tou, dapre koutim peyi kote yo te soti.
34 ೩೪ ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಿದ್ದಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ. ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾವಿಧಿಗಳನ್ನು, ಧರ್ಮನಿಯಮಗಳನ್ನು ಅನುಸರಿಸುವುದಿಲ್ಲ.
Jouk jounen jòdi a y'ap fè sa yo te konn fè a. Men, yo pa adore Seyè a, yo pa fè sa li mande nan lalwa ak kòmandman li te bay moun fanmi Jakòb yo swiv. Se Jakòb sa a Bondye sèl Mèt la te bay yon lòt non, li te rele l' Izrayèl.
35 ೩೫ ಯೆಹೋವನು ಇಸ್ರಾಯೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, “ನೀವು ಅನ್ಯದೇವತೆಗಳಿಗೆ ಭಯಪಡಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಆರಾಧಿಸಲೂಬಾರದು, ಯಜ್ಞವನ್ನರ್ಪಿಸಲೂಬಾರದು.
Seyè a te pase yon kontra ak pitit Jakòb yo, li te ba yo lòd sa a: Pa sèvi lòt bondye, pa mete jenou atè devan yo. Pa fè sèvis pou yo, pa ofri ankenn bèt pou touye pou yo.
36 ೩೬ ನಿಮ್ಮನ್ನು ಮಹಾಶಕ್ತಿ, ಭುಜಬಲಪರಾಕ್ರಮ ಇವುಗಳ ಮೂಲಕವಾಗಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನಗೊಬ್ಬನಿಗೇ ಕೈಮುಗಿದು ಯಜ್ಞವರ್ಪಿಸಬೇಕು.
Se mwen menm Seyè a pou nou sèvi, mwen menm Bondye nou an ki te fè nou soti kite peyi Lejip ak gwo kouraj mwen, ak fòs ponyèt mwen. Se mwen menm sèlman pou nou sèvi, pou nou adore. Se pou mwen ase pou nou ofri bèt pou touye.
37 ೩೭ ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು.
Se pou nou toujou kenbe prensip ak regleman, lòd ak kòmandman mwen te ekri ban nou pou nou te ka swiv yo chak jou. Piga nou gen krentif pou bondye lòt nasyon yo.
38 ೩೮ ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆಯದೆ ಇರಬೇಕು. ಅನ್ಯದೇವತೆಗಳನ್ನು ಪೂಜಿಸಬಾರದು.
Piga nou bliye kontra mwen te pase ak nou an. Piga nou gen krentif pou bondye lòt nasyon yo.
39 ೩೯ ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು” ಎಂದು ಹೇಳಿದನು.
Se mwen menm ase, Seyè a, Bondye nou an, pou nou sèvi, m'a delivre nou anba men lènmi nou yo.
40 ೪೦ ಅವರು ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳದೆ ತಮ್ಮ ಹಿಂದಿನ ಪದ್ಧತಿಗಳನ್ನೇ ಅನುಸರಿಸಿದರು.
Men, moun yo pa koute m', yo toujou ap fè sa yo te konn fè anvan an.
41 ೪೧ ಆ ಜನಾಂಗಗಳವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೂ ವಿಗ್ರಹಗಳನ್ನೂ ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.
Konsa moun nasyon sa yo t'ap sèvi Seyè a, men yo te toujou ap sèvi zidòl pa yo tou. Pitit yo ak pitit pitit yo ap fè tankou papa yo jouk jounen jòdi a.