< ಅರಸುಗಳು - ದ್ವಿತೀಯ ಭಾಗ 21 >

1 ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ.
Manasse yana da shekara goma sha biyu sa’ad da ya zama sarki, ya yi mulki shekara hamsin da biyar a Urushalima. Sunan mahaifiyarsa Hefziba.
2 ಅವನು ಯೆಹೋವನು ಇಸ್ರಾಯೇಲರ ರಾಜ್ಯದಿಂದ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
Ya aikata mugunta a gaban Ubangiji, ya bi munanan al’adun al’umman da Ubangiji ya kora a gaban Isra’ilawa.
3 ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
Ya sāke gina masujadan da mahaifinsa Hezekiya ya rurrushe. Ya kuma gina wa Ba’al bagadai. Ya kafa ginshiƙin Ashera kamar yadda Ahab sarkin Isra’ila ya yi. Ya durƙusa wa dukan rundunan taurari ya yi musu sujada.
4 ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು” ಎಂದು ಯೆಹೋವನು ಯಾವುದನ್ನು ಕುರಿತು ಹೇಳಿದ್ದನೋ, ಆ ಯೆಹೋವನ ಆಲಯದಲ್ಲಿ ಮನಸ್ಸೆಯು ಯಜ್ಞವೇದಿಗಳನ್ನು ಕಟ್ಟಿಸಿದನು.
Ya gina bagadai a haikalin Ubangiji, wurin da Ubangiji ya ce, “A Urushalima ne zan sa Sunana.”
5 ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವ ನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು.
Cikin filaye biyu na haikalin Ubangiji kuwa, ya gina bagadai na dukan rundunan taurari.
6 ಇದಲ್ಲದೆ ಅವನು ತನ್ನ ಸ್ವಂತ ಮಗನನ್ನೇ ಆಹುತಿಕೊಟ್ಟನು. ಕಣಿಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು.
Ya miƙa ɗansa hadaya ta ƙonawa, ya yi sihiri da tsubu, ya tuntuɓi masu duba da masu ruhohi. Ya aikata mugunta ƙwarai a gaban Ubangiji, ya sa Ubangiji ya yi fushi.
7 ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ಯೆಹೋವನ ಆಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಮತ್ತು ಅವನ ಮಗನಾದ ಸೊಲೊಮೋನನಿಗೂ, “ಈ ಆಲಯದಲ್ಲಿಯೂ, ಇಸ್ರಾಯೇಲರ ಸಕಲ ಗೋತ್ರಗಳಲ್ಲಿಯೂ, ನಾನು ಆರಿಸಿಕೊಂಡ ಯೆರೂಸಲೇಮಿನಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು
Ya ɗauki siffar ginshiƙin Asherar da ya yi, ya sa a haikalin da Ubangiji ya ce wa Dawuda da ɗansa Solomon, “A cikin wannan haikali, da kuma cikin Urushalima inda na zaɓa daga kabilan Isra’ila, zan sa Sunana har abada.
8 ಇಸ್ರಾಯೇಲರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಧರ್ಮಶಾಸ್ತ್ರದ ನಿಯಮ ನಿಬಂಧನೆಗಳನ್ನು ಅನುಸರಿಸಿ, ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿಯೂ, ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ, ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲ ಇರುವಂತೆ ಮಾಡುವೆನು, ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿ ಅಲೆದಾಡದೆ ತಮ್ಮ ಪೂರ್ವಿಕರಿಗೆ ಕೊಡಲಾದ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು.
Ba zan ƙara sa Isra’ilawa su fita daga ƙasar da na ba kakanninsu ba, idan dai za su kula su aikata dukan abin da na umarce su, su kuma kiyaye dukan dokokin da na ba wa bawana Musa yă umarce su.”
9 ಆದರೆ ಇಸ್ರಾಯೇಲರು ಆತನ ಮಾತನ್ನು ಕೇಳದೆ ಮನಸ್ಸೆಯಿಂದ ಪ್ರೇರೇಪಿತರಾಗಿ ತಮ್ಮ ಮುಂದೆಯೇ ಯೆಹೋವನಿಂದ ಸಂಹೃತವಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.
Amma mutanen ba su kasa kunne ba. Manasse ya ɓad da su, har suka yi muguntar da ta fi ta al’umman da Ubangiji ya hallaka a gaban Isra’ilawa.
10 ೧೦ ಆಗ ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ,
Ubangiji ya yi magana ta bakin bayinsa annabawa,
11 ೧೧ “ಯೆಹೂದ್ಯರ ಅರಸನಾದ ಮನಸ್ಸೆಯು ಮೊದಲು ಇದ್ದ ಅಮೋರಿಯರ ಕೃತ್ಯಗಳಿಗಿಂತಲೂ ಅಸಹ್ಯವಾದ ಕೃತ್ಯಗಳನ್ನು ನಡಿಸಿದ್ದರಿಂದಲೂ, ವಿಗ್ರಹಗಳನ್ನು ಪೂಜಿಸಲು ಯೆಹೂದ್ಯರನ್ನು ಪ್ರೇರೇಪಿಸಿದ್ದರಿಂದಲೂ,
“Manasse, sarkin Yahuda ya aikata waɗannan ƙazantattun zunubai. Ya aikata mugunta fiye da ta Amoriyawan da suka riga shi, ya kuma sa Yahuda ta bauɗe ta wurin yin zunubi saboda gumakansa.
12 ೧೨ ಇಸ್ರಾಯೇಲಿನ ದೇವರಾದ ಯೆಹೋವನೆಂಬ ನಾನು ಯೆರೂಸಲೇಮಿನವರ ಮೇಲೆಯೂ, ಯೆಹೂದದವರ ಮೇಲೆಯೂ ಕೇಡನ್ನು ಬರಮಾಡುವೆನು. ಅದನ್ನು ಕೇಳುವವರ ಎರಡು ಕಿವಿಗಳು ಬಿರಿದು ಹೋಗುವವು.
Saboda haka ga abin da Ubangiji, Allah na Isra’ila ya ce, zan jawo wa Urushalima da kuma Yahuda masifar da duk kunnen da ya ji, sai ya kusa suma.
13 ೧೩ ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ, ಅಹಾಬನ ಮನೆಯನ್ನೂ ನೆಲಸಮಮಾಡಿದಂತೆ, ಯೆರೂಸಲೇಮನ್ನೂ ಅದರಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿ ಬೋರಲು ಹಾಕುವೆನು.
Zan auna Urushalima da ma’aunin da na yi amfani da shi a kan Samariya, zan kuma yi amfani da magwajin da na yi amfani da shi a kan gidan Ahab. Zan shafe Urushalima yadda mutum yake wanke kwano yă kife.
14 ೧೪ ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಎಲ್ಲಾ ಶತ್ರುಗಳು ಬಂದು ಅವರ ಸ್ವತ್ತನ್ನು ಸುಲಿದು ಸೂರೆಮಾಡುವರು.
Zan rabu da ragowar gādona, in kuma miƙa su ga maƙiyansu. Abokan gābansu za su washe suka kuma kwashi ganima daga gare su,
15 ೧೫ ಅವರು ತಮ್ಮ ಪೂರ್ವಿಕರ ಕಾಲದಲ್ಲಿ ಐಗುಪ್ತದೇಶವನ್ನು ಬಿಟ್ಟುಬಂದರೂ ತಮ್ಮ ಪಾಪಗಳನ್ನು ಬಿಡದೆ ಇಂದಿನವರೆಗೂ ತಮ್ಮ ಪಾಪಗಳಿಂದ ನನ್ನನ್ನು ರೇಗಿಸುತ್ತಾ ಬಂದದ್ದೇ ಇದಕ್ಕೆ ಕಾರಣ” ಎಂದು ಹೇಳಿಸಿದನು.
domin sun aikata mugunta a idanuna, suka kuma tsokane ni tun daga ranar da kakanninsu suka fito daga Masar, har yă zuwa yau.”
16 ೧೬ ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.
Ban da haka ma, Manasse ya zub da jinin marasa laifi har ya cika Urushalima daga wannan ɓangare zuwa wancan, ban da zunubin da ya sa Yahuda ta aikata, ta haka suka yi mugunta a gaban Ubangiji.
17 ೧೭ ಮನಸ್ಸೆಯ ಉಳಿದ ಚರಿತ್ರೆಯೂ ಅವನ ಎಲ್ಲಾ ಕ್ರಿಯೆಗಳೂ, ಅವನು ಮಾಡಿದ ಪಾಪಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Game da sauran ayyukan mulkin Manasse, da duk abin da ya yi, har da zunubin da ya aikata, duk a rubuce suke a cikin littafin tarihin sarakunan Yahuda.
18 ೧೮ ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ನಂತರ ಅವನ ಮಗನಾದ ಆಮೋನನು ಅರಸನಾದನು.
Manasse ya huta tare da kakanninsa, aka kuma binne shi a lambun fadansa, lambun Uzza. Sai Amon ɗansa ya gāje shi.
19 ೧೯ ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು. ಯೊಟ್ಬಾ ಊರಿನವಳೂ ಹಾರೂಚನ ಮಗಳೂ ಆದ ಮೆಷುಲ್ಲೆಮೆತ್ ಎಂಬಾಕೆಯು ಅವನ ತಾಯಿ.
Amon yana da shekara ashirin da biyu sa’ad da ya zama sarki, ya yi mulki shekara biyu a Urushalima. Sunan mahaifiyarsa Meshullemet’yar Haruz; ita mutuniyar Yotba ce.
20 ೨೦ ಅವನು ತನ್ನ ತಂದೆಯಾದ ಮನಸ್ಸೆಯ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
Ya aikata mugunta a gaban Ubangiji, yadda Manasse mahaifinsa ya yi.
21 ೨೧ ತನ್ನ ತಂದೆಯ ಮಾರ್ಗದಲ್ಲಿ ನಡೆದು ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು.
Ya bi duk gurbin mahaifinsa a kome, ya yi sujada ga gumakan da mahaifinsa ya yi wa, ya kuma durƙusa musu.
22 ೨೨ ತನ್ನ ಪೂರ್ವಿಕರ ದೇವರಾದ ಯೆಹೋವನನ್ನೂ ಆರಾಧಿಸದೆ, ಆತನಿಗೆ ಮೆಚ್ಚಿಗೆಯಾಗುವಂತೆ ನಡೆಯುವ ಮಾರ್ಗವನ್ನೂ ಬಿಟ್ಟುಬಿಟ್ಟನು.
Ya rabu da Ubangiji Allah na kakanninsa, bai kuwa yi tafiya a hanyar Ubangiji ba.
23 ೨೩ ಮನಸ್ಸೆಯ ಸೇವಕರು ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಅರಸನ ಅರಮನೆಯಲ್ಲಿಯೇ ಕೊಂದುಹಾಕಿದರು.
Fadawan Amon suka ƙulla maƙarƙashiya suka kashe shi a cikin fadarsa.
24 ೨೪ ಆದರೆ ದೇಶದ ಜನರು ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ, ಆಮೋನನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.
Sai mutanen ƙasar suka kashe duk waɗanda suka ƙulla wa Sarki Amon maƙarƙashiya, sa’an nan suka naɗa ɗansa sarki a maimakonsa.
25 ೨೫ ಆಮೋನನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Game da sauran ayyukan mulkin Amon, da abubuwan da ya aikata, duk a rubuce suke a cikin littafin tarihin sarakunan Yahuda.
26 ೨೬ ಆಮೋನನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗೋಸ್ಕರ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು.
Aka binne shi a kabarinsa a lambun Uzza. Yosiya ɗansa kuma ya gāje shi.

< ಅರಸುಗಳು - ದ್ವಿತೀಯ ಭಾಗ 21 >