< ಅರಸುಗಳು - ದ್ವಿತೀಯ ಭಾಗ 22 >
1 ೧ ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆಯು ಅವನ ತಾಯಿ.
Octo annorum erat Josias cum regnare cœpisset: triginta et uno anno regnavit in Jerusalem: nomen matris ejus Idida filia Hadaia de Besecath.
2 ೨ ಅರಸನಾದ ಯೋಷೀಯನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಜನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
Fecitque quod placitum erat coram Domino, et ambulavit per omnes vias David patris sui: non declinavit ad dexteram, sive ad sinistram.
3 ೩ ಅರಸನಾದ ಯೋಷೀಯನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಚಲ್ಯನ ಮಗನೂ, ಮೆಷುಲ್ಲಾಮನ ಮೊಮ್ಮಗನೂ, ಯೆಹೋವನ ಆಲಯದ ಲೇಖಕನೂ ಆದ ಶಾಫಾನನನ್ನು ಕರೆದು ಅವನಿಗೆ,
Anno autem octavodecimo regis Josiæ, misit rex Saphan filium Aslia filii Messulam scribam templi Domini, dicens ei:
4 ೪ “ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ, ಅವನಿಗೆ ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಬೇಕು,
Vade ad Helciam sacerdotem magnum, ut confletur pecunia quæ illata est in templum Domini, quam collegerunt janitores templi a populo:
5 ೫ ಅದಲ್ಲದೆ ಆಲಯದ ಕೆಲಸಮಾಡಿಸುವ ಮುಖ್ಯಸ್ಥರಿಗೆ ಅದನ್ನು ಒಪ್ಪಿಸು ಎಂದು ಹೇಳಬೇಕು, ಮುಖ್ಯಸ್ಥರು ಅದನ್ನು ಯೆಹೋವನ ಆಲಯದ ದುರಸ್ತಿ ಕೆಲಸಕ್ಕೆ ಉಪಯೋಗಿಸಲಿ,
deturque fabris per præpositos domus Domini, qui et distribuant eam his qui operantur in templo Domini, ad instauranda sartatecta templi:
6 ೬ ಬಡಗಿ, ಶಿಲ್ಪಿ, ಮೇಸ್ತ್ರಿ ಮೊದಲಾದವರ ಸಂಬಳಕ್ಕಾಗಿಯೂ, ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಅದನ್ನು ಉಪಯೋಗಿಸಿಕೊಳ್ಳಲಿ,
tignariis videlicet et cæmentariis, et iis qui interrupta componunt: et ut emantur ligna, et lapides de lapicidinis, ad instaurandum templum Domini.
7 ೭ ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು” ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು.
Verumtamen non supputetur eis argentum quod accipiunt, sed in potestate habeant, et in fide.
8 ೮ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ, ಅದನ್ನು ಅವನ ಕೈಯಲ್ಲಿ ಕೊಟ್ಟನು. ಶಾಫಾನನು ಅದನ್ನು ಓದಿದನು.
Dixit autem Helcias pontifex ad Saphan scribam: Librum legis reperi in domo Domini. Deditque Helcias volumen Saphan, qui et legit illud.
9 ೯ ಅನಂತರ ಲೇಖಕನಾದ ಶಾಫಾನನು ಹಿಂತಿರುಗಿ ಅರಸನ ಬಳಿಗೆ ಹೋಗಿ, “ನಿನ್ನ ಸೇವಕರು ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮುಖ್ಯಸ್ಥರಿಗೆ ಒಪ್ಪಿಸಿದರು.
Venit quoque Saphan scriba ad regem, et renuntiavit ei quod præceperat, et ait: Conflaverunt servi tui pecuniam quæ reperta est in domo Domini, et dederunt ut distribueretur fabris a præfectis operum templi Domini.
10 ೧೦ ಇದಲ್ಲದೆ, ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು.
Narravit quoque Saphan scriba regi, dicens: Librum dedit mihi Helcias sacerdos. Quem cum legisset Saphan coram rege,
11 ೧೧ ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು.
et audisset rex verba libri legis Domini, scidit vestimenta sua.
12 ೧೨ ಅರಸನು ಯಾಜಕನಾದ ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಸಹಾಯಕನಾದ ಅಸಾಯ ಎಂಬುವವರಿಗೆ,
Et præcepit Helciæ sacerdoti, et Ahicam filio Saphan, et Achobor filio Micha, et Saphan scribæ, et Asaiæ servo regis, dicens:
13 ೧೩ “ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.
Ite et consulite Dominum super me, et super populo, et super omni Juda, de verbis voluminis istius, quod inventum est: magna enim ira Domini succensa est contra nos, quia non audierunt patres nostri verba libri hujus, ut facerent omne quod scriptum est nobis.
14 ೧೪ ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ, ಎಂಬುವವರು “ಹುಲ್ದ” ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ, ತಿಕ್ವನ ಮಗನೂ, ಯಾಜಕವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಪತಿ. ಈಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸಿಸುತ್ತಿದ್ದಳು.
Ierunt itaque Helcias sacerdos, et Ahicam, et Achobor, et Sapham, et Asaia, ad Holdam prophetidem, uxorem Sellum filii Thecuæ filii Araas custodis vestium, quæ habitabat in Jerusalem in Secunda: locutique sunt ad eam.
15 ೧೫ ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ತಿಳಿಸಿರಿ.
Et illa respondit eis: Hæc dicit Dominus Deus Israël: Dicite viro qui misit vos ad me:
16 ೧೬ ಯೆಹೋವನು, ‘ಈ ದೇಶದ ಮೇಲೆಯೂ ಮತ್ತು ಜನರ ಮೇಲೆಯೂ ಯೆಹೂದದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಆಪತ್ತುಗಳನ್ನು ಬರಮಾಡುವನು.
Hæc dicit Dominus: Ecce ego adducam mala super locum istum, et super habitatores ejus, omnia verba legis quæ legit rex Juda:
17 ೧೭ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ.
quia dereliquerunt me, et sacrificaverunt diis alienis, irritantes me in cunctis operibus manuum suarum: et succendetur indignatio mea in loco hoc, et non extinguetur.
18 ೧೮ ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಇಸ್ರಾಯೇಲರ ದೇವರಾದ ಯೆಹೋವನ ಮಾತೇನೆಂದರೆ,
Regi autem Juda, qui misit vos ut consuleretis Dominum, sic dicetis: Hæc dicit Dominus Deus Israël: Pro eo quod audisti verba voluminis,
19 ೧೯ ‘ನಾನು ಈ ದೇಶವನ್ನೂ, ನಿವಾಸಿಗಳನ್ನೂ, ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುವುದನ್ನು ನೀನು ಕೇಳಿದಾಗ, ದುಃಖಪಟ್ಟು ಯೆಹೋವನಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು’
et perterritum est cor tuum, et humiliatus es coram Domino, auditis sermonibus contra locum istum et habitatores ejus, quod videlicet fierent in stuporem et in maledictum: et scidisti vestimenta tua, et flevisti coram me, et ego audivi, ait Dominus:
20 ೨೦ ಆದುದರಿಂದ, ‘ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು’ ಎಂದು ಹೇಳಿದ್ದನ್ನು ತಿಳಿಸಿರಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.
idcirco colligam te ad patres tuos, et colligeris ad sepulchrum tuum in pace, ut non videant oculi tui omnia mala quæ inducturus sum super locum istum.