< ಅರಸುಗಳು - ದ್ವಿತೀಯ ಭಾಗ 23 >

1 ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇಮಿನ ಮತ್ತು ಯೆಹೂದ ಪ್ರಾಂತ್ಯಗಳಲ್ಲಿರುವ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.
Ale fia la yɔ Yuda kple Yerusalem ƒe dumegãwo ƒo ƒu.
2 ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.
Eyi Yehowa ƒe gbedoxɔ me kple Yuda kple Yerusalem ƒe ameawo, nunɔlawo kple nyagblɔɖilawo, tso ame gblɔetɔwo dzi va se ɖe ame gãtɔwo dzi. Exlẽ Nubabla ƒe Agbalẽ si wofɔ le Yehowa ƒe gbedoxɔ la me nyawo na wo.
3 ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.
Fia la tsi tsitre ɖe sɔti la gbɔ le ameawo ŋkume. Eya kple ameawo ɖe adzɔgbe na Yehowa be yewoadze eyome, alé eƒe sewo, ɖaseɖiɖiwo, kple ɖoɖowo me ɖe asi kple dzi blibo kple luʋɔ blibo, eye yewoawɔ nubabla sia ƒe nya siwo katã woŋlɔ ɖe agbalẽ sia me la dzi; eye dukɔ blibo la bla nu.
4 ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.
Ale Fia la ɖe gbe na nunɔlagã Hilkia kple nunɔla bubuawo kple agbonudzɔlawo be woaɖe nu siwo katã wowɔ na Baal, aƒeli kple dziƒoŋunuwo katã la ɖa le Yehowa ƒe gbedoxɔ me. Etɔ dzo wo le Yerusalem dua godo le Kidron balime eye wòlɔ dzofi la yi Betel.
5 ಇದಲ್ಲದೆ, ಯೆಹೂದ ಪ್ರಾಂತ್ಯದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಸುತ್ತಣ ಪ್ರದೇಶಗಳಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ, ಬಾಳನಿಗೂ, ಸೂರ್ಯ, ಚಂದ್ರ ಹಾಗೂ ನಕ್ಷತ್ರಗಳು ಎನಿಸಿಕೊಳ್ಳುವ ಆಕಾಶಸೈನ್ಯಕ್ಕೂ, ಧೂಪಹಾಕುವುದಕ್ಕಾಗಿ ಯೆಹೂದ ರಾಜರಿಂದ ನೇಮಿಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.
Eɖe trɔ̃nua siwo Yuda fia xoxowo ɖo be woado dzudzɔ ʋeʋĩ le nuxeƒewo le Yuda duwo kple du siwo ƒo xlã Yerusalem la ɖa, ame siwo do dzudzɔ ʋeʋĩ na Baal, ɣe kple ɣleti, ɣletiviwo kple dziƒoŋunuwo.
6 ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.
Eho aƒeli la ɖa le Yehowa ƒe gbedoxɔ la me, tsɔe yi Yerusalem godo yi ɖe Kidron tɔʋu la gbɔ. Etɔ dzoe le afi ma, tui wòzu wɔ eye wòkaka wɔ la ɖe ame gblɔewo ƒe yɔdowo dzi.
7 ಯೆಹೋವನ ಆಲಯದ ಪ್ರಾಕಾರದೊಳಗಿದ್ದ ದೇವದಾಸ, ವೇಶ್ಯವೃತ್ತಿಯವರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ್ ದೇವತೆಗಳಿಗಾಗಿ ಗುಡಾರದ ಬಟ್ಟೆಗಳನ್ನು ನೇಯುತ್ತಿದ್ದರು.
Egbã ŋutsugbolowo ƒe xɔwo ƒu anyi, xɔ siwo nɔ Yehowa ƒe gbedoxɔ me, afi si nyɔnuwo hã nɔna, nɔa kundruwo lɔ̃m na aƒeli.
8 ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಯೆಹೂದ ಪಟ್ಟಣಗಳ ಎಲ್ಲಾ ಯಾಜಕರನ್ನು ಕರೆಯಿಸಿಕೊಂಡು ಅವರು ಧೂಪಹಾಕುತ್ತಿದ್ದ ಪೂಜಾಸ್ಥಳಗಳನ್ನು ನಾಶಮಾಡಿಸಿದನು. ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರಗಳ ದೇವತೆಯ ಪೂಜಾಸ್ಥಳಗಳನ್ನು ಕೆಡವಿ ಹಾಕಿಸಿದನು.
Yosia kplɔ nunɔla siwo katã nɔ Yuda duwo me la gbɔe eye wòna wodo gu nuxeƒewo katã tso Geba yi ɖase ɖe Beerseba afi si nunɔlaawo do dzudzɔ ʋeʋĩ le. Egbã legba siwo nɔ dua ƒe mɔmefia, Yosua ƒe agbo nu. Legba la nɔ agbo la ƒe miame.
9 ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕಿದರೂ, ಅವರಿಗೆ ಯೆರೂಸಲೇಮಿನಲ್ಲಿದ್ದ ಯೆಹೋವನ ಯಜ್ಞವೇದಿಯ ಸಮೀಪಕ್ಕೆ ಹೋಗುವುದಕ್ಕೆ ಅಪ್ಪಣೆಯಿರಲಿಲ್ಲ.
Togbɔ be nunɔla siawo mewɔ subɔsubɔdɔwo le Yehowa ƒe vɔsamlekpui la dzi le Yerusalem o hã la, woɖua abolo maʋamaʋã kple nunɔla bubuawo.
10 ೧೦ ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೆನ್ ಹಿನ್ನೋಮ್ ತಗ್ಗಿನಲ್ಲಿದ್ದ “ತೋಫೆತ್” ಎಂಬ ಯಜ್ಞವೇದಿಯ ಸ್ಥಳವನ್ನು ಹೊಲೆಮಾಡಿದನು.
Le esia megbe la, fia la do gu Tofet si nɔ Ben Hinom ƒe Balime, ale be ame aɖeke magate ŋu atsɔ via ŋutsuvi alo via nyɔnuvi awɔ dzovɔsae na Molek o.
11 ೧೧ ಯೆಹೂದ ರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಟ್ಟುಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಿಲಿನ ಹೊರಗೆ “ಪರ್ವರೀಮ್” ಎಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು.
Eɖe sɔ siwo ŋuti Yuda fiawo kɔ na ɣelegba la ɖa le Yehowa ƒe gbedoxɔ ƒe mɔnu. Wonɔ xɔxɔnu si te ɖe dumegã aɖe si woyɔna be Natan Melek ƒe xɔnu. Ale Yosia tɔ dzo tasiaɖam siwo ŋuti wokɔ na ɣelegba la hã.
12 ೧೨ ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
Fia la mu vɔsamlekpui siwo Yuda fiawo tu ɖe gbadzaƒe si le Ahaz ƒe xɔ la tame le fiasã la me kple vɔsamlekpui siwo Fia Manase tu ɖe gbedoxɔ la ƒe xɔxɔnuwo. Egbã wo kakɛkakɛ eye wòkaka kakɛawo ɖe Kidron bali la me.
13 ೧೩ ಇಸ್ರಾಯೇಲರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್ ದೇವತೆ, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಎದುರಿನಲ್ಲಿಯೂ, ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ್ದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು.
Le esia megbe la, eɖe nuxeƒe siwo nɔ toawo dzi le Yerusalem ƒe ɣedzeƒe kple Gbegblẽto la ƒe dziehe la ɖa. Fia Solomo tu nuxeƒe siawo na Astarɔt, Sidontɔwo ƒe nyɔnumawu vɔ̃ɖi la, na Kemos, Moabtɔwo ƒe mawu vɔ̃ɖi la kple na Milkom, Amonitɔwo ƒe mawu nyɔŋu la.
14 ೧೪ ಕಲ್ಲು ಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಬಿಟ್ಟು ಅವುಗಳಲ್ಲಿದ್ದ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
Yosia gbã legbawo eye wòho aƒeliwo. Ekaka ameƒuwo ɖe teƒe siawo hedo gu teƒeawo.
15 ೧೫ ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು.
Egbã vɔsamlekpui kple nuxeƒe si Yeroboam Gbãtɔ tu ɖe Betel esime wòhe Israel de nu vɔ̃ me. Egbã kpeawo wozu ʋuʋudedi eye wòtɔ dzo aƒeliwo.
16 ೧೬ ಯೋಷೀಯನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡಗಳಲ್ಲಿ ಸಮಾಧಿಗಳನ್ನು ಕಂಡು, ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ ಆ ಯಜ್ಞವೇದಿಯ ಮೇಲೆ ಸುಟ್ಟು ಅವುಗಳನ್ನು ನಾಶಮಾಡಿದನು. ಹೀಗೆ ದೇವರ ಮನುಷ್ಯನೊಬ್ಬನು ಪ್ರಕಟಿಸಿದ ಯೆಹೋವನ ವಾಕ್ಯವು ನೆರವೇರಿತು.
Esi Fia Yosia nɔ ŋku tsam gbe ɖeka la, ekpɔ yɔdo aɖewo ɖaa le to la ŋu. Eɖe gbe na eƒe amewo be woaɖe ƒuawo le yɔdoawo me eye woatɔ dzo wo le vɔsamlekpui si le Betel la dzi, ado gui ale be, nya si Yehowa ƒe nyagblɔɖila gblɔ da ɖi be adzɔ ɖe Yeroboam ƒe vɔsamlekpui dzi la nava eme.
17 ೧೭ ಇದಲ್ಲದೆ, ಅವನು ಒಂದು ಸಮಾಧಿಶಿಲೆಯನ್ನು ಕಂಡು, ಅದು ಏನು? ಎಂದು ವಿಚಾರಿಸಲು ಆ ಊರಿನವರು, “ನೀನು ಈಗ ಬೇತೇಲಿನ ಯಜ್ಞವೇದಿಗೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದ ದೇಶದವನಾದ ದೇವರ ಮನುಷ್ಯನ ಸಮಾಧಿ” ಎಂದು ಉತ್ತರಕೊಟ್ಟರು.
Fia la bia be, “Yɔdokpe kae nye ema le afi ma?” Dua me tɔwo ɖo eŋu nɛ be, “Nyagblɔɖila si tso Yuda va gblɔ nu si nèwɔ fifia da ɖi be adzɔ ɖe vɔsamlekpui sia dzi le Betel la ƒe yɔdoe!”
18 ೧೮ ಆಗ ಯೋಷೀಯನು, “ಬಿಡಿರಿ, ಆ ಮನುಷ್ಯನ ಎಲುಬುಗಳನ್ನು ಯಾರೂ ಮುಟ್ಟಬಾರದು” ಎಂದು ಹೇಳಿದನು. ಆದುದರಿಂದ ಅವರು ಅವನ ಮತ್ತು ಸಮಾರ್ಯದೇಶದ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ.
Ale Fia Yosia gblɔ be, “Migaka asi eŋu o. Migaɖe fu na nyagblɔɖila la ƒe ƒuwo o.” Ale wometɔ dzo eƒe ƒuwo kple nyagblɔɖila si tso Samaria la ƒe ƒuwo o.
19 ೧೯ ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಪೂಜಾಸ್ಥಳಗಳನ್ನು ಗುಡಿಗಳನ್ನು ಕಟ್ಟಿಸಿ, ಯೆಹೋವನ ಕೋಪಕ್ಕೆ ಕಾರಣವಾದಂಥವುಗಳನ್ನು ಯೋಷೀಯನು ತೆಗೆದುಕೊಂಡು, ಬೇತೇಲಿನಲ್ಲಿ ನಾಶಮಾಡಿದ ಹಾಗೆ ಅವೆಲ್ಲವನ್ನು ನಾಶಮಾಡಿದನು.
Yosia gbã nuxeƒe siwo nɔ toawo dzi le Samarianyigba blibo la dzi. Israel fia vovovowoe tu wo eye wodo dɔmedzoe na Yehowa. Ke azɔ la, Yosia gbã wo wozu ʋuʋudedi abe ale si wòwɔ le Betel ene.
20 ೨೦ ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಯ ಮೇಲೆ ವಧಿಸಿ ಆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ಹಿಂದಿರುಗಿ ಹೋದನು.
Ewu trɔ̃subɔlawo ƒe nunɔlawo ɖe woawo ŋutɔ ƒe vɔsamlekpuiwo dzi eye wòtɔ dzo ameƒuawo ɖe vɔsamlekpuiawo dzi hedo gu wo. Azɔ la etrɔ va Yerusalem.
21 ೨೧ ಅನಂತರ ಅರಸನು ಎಲ್ಲಾ ಜನರಿಗೆ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು” ಎಂದು ಆಜ್ಞಾಪಿಸಿದನು.
Fia Yosia gblɔ na eƒe amewo azɔ be woaɖu Ŋutitotoŋkekenyui la ɖe se siwo Yehowa, woƒe Mawu la na woŋlɔ ɖe Nubabla ƒe Agbalẽ la me la nu.
22 ೨೨ ಇಂಥ ಪಸ್ಕಹಬ್ಬವು ಇಸ್ರಾಯೇಲರನ್ನು ಪಾಲಿಸಿದ ನ್ಯಾಯಸ್ಥಾಪಕರ ಕಾಲದಲ್ಲಾಗಲಿ, ಇಸ್ರಾಯೇಲರ ಮತ್ತು ಯೆಹೂದ್ಯರ ಅರಸರ ಕಾಲದಲ್ಲಾಗಲಿ ನಡೆಯಲೇ ಇಲ್ಲ.
Womegaɖu Ŋutitotoŋkekenyui la kpɔ nenema tso Israel ƒe ʋɔnudrɔ̃lawo ŋɔli o eye womegaɖui kpɔ nenema le Israel fiawo kple Yuda fiawo ƒe fiaɖuɣiwo katã me o.
23 ೨೩ ಈ ಪಸ್ಕಹಬ್ಬವು ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಯೆರೂಸಲೇಮಿನಲ್ಲಿ ಯೆಹೋವನಿಗಾಗಿ ಆಚರಿಸಲ್ಪಟ್ಟಿತು.
Woɖu Ŋutitotoŋkekenyui sia na Yehowa le Yerusalem le Fia Yosia ƒe fiaɖuɖu ƒe ƒe wuienyilia me.
24 ೨೪ ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.
Yosia tsi ŋɔliyɔyɔ, adzewɔwɔ kple legbasubɔsubɔ ƒomevi ɖe sia ɖe nu le Yerusalem kple anyigba blibo la dzi. Ewɔ alea elabena edi be yeawɔ se siwo katã woŋlɔ ɖe agbalẽ si Nunɔla Hilkia fɔ le gbedoxɔ la me la dzi pɛpɛpɛ.
25 ೨೫ ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಹಿಂದಿನ ಕಾಲದಲ್ಲೂ ಆ ನಂತರದ ಕಾಲದಲ್ಲೂ ಇರಲಿಲ್ಲ.
Fia bubu aɖeke meganɔ anyi si trɔ ɖe Yehowa gbɔ eye wòwɔ Mose ƒe sewo katã dzi o eye fia siwo kplɔ Yosia ɖo hã dometɔ aɖeke mete ɖe ale si Yosia ɖo to Yehowa la ŋu o.
26 ೨೬ ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.
Ke Yehowa ƒe dziku sesẽ si wòdo ɖe Yuda ŋu le Manase ƒe nu vɔ̃wo ta la dzi meɖe o
27 ೨೭ ಯೆಹೋವನು, “ಇಸ್ರಾಯೇಲರನ್ನು ತೆಗೆದುಹಾಕಿದಂತೆ, ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು, ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮದ ಮಹಿಮೆಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.
elabena Yehowa gblɔ be, “Matsrɔ̃ Yuda abe ale si metsrɔ̃ Israel ene eye maɖe asi le Yerusalem, du si metia kple gbedoxɔ si megblɔ be enye tɔnye la ŋu.”
28 ೨೮ ಯೋಷೀಯನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆಯಲಾಗಿದೆ.
Woŋlɔ Fia Yosia ƒe ŋutinya mamlɛa ɖe Yuda fiawo ƒe ŋutinyagbalẽ me.
29 ೨೯ ಅವನ ಕಾಲದಲ್ಲಿ, ಐಗುಪ್ತದ ಅರಸನಾದ ಫರೋಹ ನೆಕೋ ಎಂಬುವವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ಎದ್ದು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಅಲ್ಲಿ ಅವನಿಂದ ಹತನಾದನು.
Le ŋkeke mawo me la, Egipte fia Farao Neko ho yi Frat tɔsisi la to be yeakpe ɖe Asiria fia ŋu. Fia Yosia ho yi be yeawɔ aʋa kplii, ke Fia Farao Neko wu Fia Yosia esi wòkpɔe le Megido.
30 ೩೦ ಯೋಷೀಯನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ನಂತರ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು.
Fia Yosia ŋumewo kɔ eƒe kukua ɖe tasiaɖam me tso Megido va Yerusalem eye woɖii ɖe yɔdo si eya ŋutɔ tia da ɖi la me. Dukɔa tia Fia Yosia ƒe vi, Yehoahaz si ami nɛ heɖoe fia ɖe fofoa teƒe.
31 ೩೧ ಯೆಹೋವಾಹಾಜನು ಅರಸನಾದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಲಿಬ್ನದವನಾದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.
Yehoahaz xɔ ƒe blaeve-vɔ-etɔ̃ esi wòzu fia; eɖu fia le Yerusalem ɣleti etɔ̃. Dadaa ŋkɔe nye Hamutal, Yeremia ƒe vinyɔnu. Etso Libna.
32 ೩೨ ಯೆಹೋವಾಹಾಜನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
Ewɔ nu vɔ̃ le Yehowa ŋkume abe ale si fofoawo hã wɔ ene.
33 ೩೩ ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ, ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.
Egipte fia, Farao Neko lée de gaxɔ me le Ribla le Hamat ale be magaɖu fia le Yerusalem o. Hekpe ɖe esia ŋu la, ebla fe si ƒe home nye klosalo kilo akpe etɔ̃ alafa ene kple sika kilo blaetɔ̃-vɔ-ene la na Yuda.
34 ೩೪ ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮರಣ ಹೊಂದಿದನು.
Egipte fia la tia Eliakim, Fia Yosia ƒe viŋutsu bubu be wòaɖu fia le Yerusalem eye wòtrɔ ŋkɔ nɛ wòzu Yehoyakim. Ekplɔ Fia Yehoahaz yi Egipte, afi si wòku ɖo.
35 ೩೫ ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿ ಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ವಸೂಲಿಮಾಡಿಕೊಂಡು ಫರೋಹ ನೆಕೋವನಿಗೆ ತಂದೊಪ್ಪಿಸಿದನು.
Fia Yehoyakim ma ga home si Egipte fia bla na dukɔa la na eteviwo, ame sia ame ɖe eƒe ŋutete nu be wòate ŋu akpɔ ga la axe na Egipte fia.
36 ೩೬ ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ರೂಮನ ಪೆದಾಯನ ಮಗಳಾದ ಜೆಬೂದಾ ಎಂಬಾಕೆಯು ಅವನ ತಾಯಿ.
Yehoyakim xɔ ƒe blaeve vɔ atɔ̃ esi wòzu fia; eɖu fia le Yerusalem ƒe wuiɖekɛ. Dadae nye Zebida, Pedaya vinyɔnu. Etso Ruma.
37 ೩೭ ಯೆಹೋಯಾಕೀಮನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
Ewɔ nu vɔ̃ le Yehowa ŋkume, abe ale si fofoawo wɔ ene.

< ಅರಸುಗಳು - ದ್ವಿತೀಯ ಭಾಗ 23 >