< ಅರಸುಗಳು - ದ್ವಿತೀಯ ಭಾಗ 25 >
1 ೧ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.
Alò nan nevyèm ane règn li an, nan dizyèm jou ak nan dezyèm mwa a, Nebucadnetsar, wa Babylone nan te vini. Li menm avèk tout lame li te fè kan kont Jérusalem, e li te bati yon miray syèj ki te antoure li.
2 ೨ ಅವನು ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
Konsa, vil la te anba syèj jis rive nan onzyèm ane a Wa Sédécias la.
3 ೩ ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೇ ಹೋಯಿತು.
Nan nevyèm jou ak nan katriyèm mwa a, grangou te tèlman rèd nan vil la ke pa t gen manje pou pèp peyi a.
4 ೪ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.
Konsa, yo te kase vil la antre e tout mesye lagè yo te sove ale nan nwit lan pa pòtay antre de mi yo akote jaden a wa a, malgre Kaldeyen yo te antoure tout vil la. Konsa, yo te sòti pa chemen dezè a.
5 ೫ ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬಯಲಿನಲ್ಲಿ ಅವನನ್ನು ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿ ಹೋಗಿದ್ದರು.
Men lame Kaldeyen yo te kouri dèyè wa a. Yo te rive pran li nan plèn Jéricho a, e tout lame li a te gaye kite li.
6 ೬ ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.
Yo te kaptire wa a e yo te mennen li kote wa Babylone nan Ribla e yo te pase jijman sou li.
7 ೭ ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.
Yo te touye fis a Sédécias yo devan zye li, yo te pete zye a Sédécias, yo te mare l avèk chenn an bwonz yo, e yo te mennen li Babylone.
8 ೮ ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವವನು ಯೆರೂಸಲೇಮಿಗೆ ಬಂದನು.
Alò, nan setyèm jou ak nan senkyèm mwa a, ki se te diznevyèm ane Nebucadnetsar, wa Babylone nan, Nebuzaradan, kapitèn gad yo, yon sèvitè a wa Babylone nan, te rive Jérusalem.
9 ೯ ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.
Li te brile lakay SENYÈ a, lakay wa a ak tout kay Jérusalem yo. Menm tout gwo kay yo, li te brile yo avèk dife.
10 ೧೦ ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯರ ಸೈನ್ಯದವರು ಯೆರೂಸಲೇಮಿನ ಸುತ್ತುಗೋಡೆಗಳನ್ನು ಕೆಡವಿದರು.
Epi tout lame Kaldeyen yo ki te avèk kapitèn gad la te kraze, chire, tout mi ki te antoure Jérusalem yo.
11 ೧೧ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.
Epi tout rès nan moun ki te kite lavil yo, sila ki te dezète al jwenn wa Babylone nan e tout rès pèp la ki te rete, Nébuzaraden, kapitèn gad la, te pote yo ale an egzil.
12 ೧೨ ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.
Men kapitèn gad la te kite kèk moun pami pi malere yo pou sèvi kòm ouvriye nan chan rezen yo ak pou raboure tè a.
13 ೧೩ ಕಸ್ದೀಯರು ಯೆಹೋವನ ಆಲಯದಲ್ಲಿದ್ದ ತಾಮ್ರದ ಕಂಬಗಳನ್ನು, ಪೀಠಗಳನ್ನೂ, ಕಡಲಿನ ಆಕಾರದ ಪಾತ್ರೆಯನ್ನೂ ಒಡೆದು ಅವುಗಳ ತಾಮ್ರವನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.
Alò, pilye an bwonz ki te lakay SENYÈ yo ak baz avèk lanmè an bwonz ki te lakay SENYÈ a, Kaldeyen yo te kase yo an mòso e te pote bwonz lan Babylone.
14 ೧೪ ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ತೆಗೆದುಕೊಂಡು ಹೋದರು.
Yo te retire po yo, pèl yo, etennwa yo, kiyè yo ak tout veso an bwonz ki te konn sèvi nan sèvis tanp lan.
15 ೧೫ ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಕೆ, ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.
Kòmandan gad la, anplis, te pran tout plato pou resevwa sann yo, avèk basen yo, sila ki te an lò fen ak sila ki te an ajan fen yo.
16 ೧೬ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಡಲೆನಿಸಿಕೊಂಡ ಪಾತ್ರೆಯು, ಪೀಠಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರವನ್ನು ಬಳಸಲಾಗಿತ್ತು.
De pilye yo, yon sèl lanmè a ak baz ke Salomon te fè pou lakay SENYÈ a, bwonz nan veso sila yo te depase kapasite pou peze.
17 ೧೭ ಪ್ರತಿಯೊಂದು ಕಂಬವು ಹದಿನೆಂಟು ಮೊಳ ಎತ್ತರವಿತ್ತು. ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಂಬೆ ಹಣ್ಣುಗಳೂ ಇದ್ದವು.
Wotè a yon pilye te di-zuit koude e yon tèt an bwonz te sou li. Wotè a tèt an bwonz lan te twa koude, avèk yon griyaj ak grenad ki te antoure li an bwonz. Epi dezyèm pilye a te tankou sila yo avèk yon sistèm griyaj.
18 ೧೮ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು,
Alò, kapitèn gad la te pran Seraja, wo prèt la, avèk Sophonie, dezyèm prèt la, avèk twa ofisye a tanp lan.
19 ೧೯ ಸೈನ್ಯ ಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುತ್ತಿದ್ದ ಕಂಚುಕಿ, ಪಟ್ಟಣದಲ್ಲಿ ಉಳಿದಿದ್ದ ಅರಸನಿಗೆ ಆಪ್ತರಾಗಿದ್ದ ಐದು ಮಂದಿ ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ಮಂದಿ ಜನರೂ ಇದ್ದರು.
Depi nan vil la, li te pran yon ofisye ki te chèf mesye lagè yo ak senk nan konseye a wa yo ki te twouve nan vil la; epi grefye a kapitèn lame ki te responsab anrejistre moun nan peyi a; epi swasant moun nan pèp peyi a te twouve nan vil la.
20 ೨೦ ನಂತರ ನೆಬೂಜರದಾನನು, ಇವರನ್ನೆಲ್ಲಾ ಹಿಡಿದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು,
Nebuzaradan, kapitèn gad la, te pran yo pou te mennen yo kote wa Babylone nan Ribla.
21 ೨೧ ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.
Alò, wa Babylone nan te frape yo e te mete yo a lanmò nan Ribla nan peyi Hamath. Konsa, Juda te mennen an egzil soti nan peyi li.
22 ೨೨ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ, ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬುವನನ್ನು ಅಧಿಪತಿಯನ್ನಾಗಿ ನೇಮಿಸಿದನು.
Alò, moun ki te rete nan peyi Juda yo, ke Nebucadnetsar, wa Babylone nan, te kite, li te chwazi Guedalia, fis a Achikam nan, fis a Schaphan an sou yo.
23 ೨೩ ತಪ್ಪಿಸಿಕೊಂಡು ಉಳಿದಿದ್ದ ಯೆಹೂದ ಸೇನಾಧಿಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇಮಿಸಲ್ಪಟ್ಟಿದ್ದಾನೆಂಬ ವರ್ತಮಾನವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅವರು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನಾದ, ತನ್ಹುಮೆತನ ಮಗನಾದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.
Lè tout kapitèn yo avèk sòlda pa yo te tande ke wa Babylone nan te chwazi Guedalia kòm gouvènè, yo te vin kote Guedalia nan Mitspa; pa non, Ismaël fis a Nethania a, avèk Jochanan, fis a Karéach la, Seraja, fis a Thanhumeth la, Netofayit la, avèk Jaazania, fis a Maakatyen an, yo menm avèk mesye pa yo.
24 ೨೪ ಗೆದಲ್ಯನು ಇವರಿಗೂ ಇವರ ಜನರಿಗೂ, “ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ, ಬಾಬೆಲಿನ ಅರಸನಿಗೆ ವಿಧೇಯರಾಗಿದ್ದು ಸೇವೆಮಾಡಿಕೊಂಡು ಇಲ್ಲಿಯೇ ವಾಸಮಾಡಿರಿ. ಆಗ ನಿಮಗೆ ಒಳಿತಾಗುವಾಗುವುದು” ಎಂದು ಹೇಳಿದನು.
Guedalia te sèmante a yo avèk mesye pa yo a, e te di yo: “Pa pè vin sèvitè a Kaldeyen yo. Viv nan peyi a, sèvi wa Babylone nan e sa va ale byen pou nou.”
25 ೨೫ ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು.
Men li te vin rive nan setyèm mwa a, ke Ismaël, fis a Nethania yo, fis a Élischama yo nan fanmi wayal la, te rive avèk dis òm pou te frape Guedalia e li te mouri ansanm avèk Jwif ak Kaldeyen ki te avèk li nan Mitspa yo.
26 ೨೬ ಆಗ ಎಲ್ಲಾ ಚಿಕ್ಕವರೂ, ದೊಡ್ಡವರೂ, ಸೇನಾಧಿಪತಿಗಳೂ ಕಸ್ದೀಯರಿಗೆ ಹೆದರಿ ಐಗುಪ್ತಕ್ಕೆ ಓಡಿಹೋದರು.
Alò, tout pèp la, ni gran ni piti, avèk kapitèn a fòs soulèvman yo te leve ale an Égypte; paske yo te pè Kaldeyen yo.
27 ೨೭ ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನು ಸೆರೆಯಾಗಿದ್ದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಕಟಾಕ್ಷಿಸಿ ಅವನನ್ನು ಸೆರೆಮನೆಯಿಂದ ಬಿಡಿಸಿ, ಅವನನ್ನು ಅಭಿವೃದ್ಧಿಗೆ ತಂದನು.
Alò, li te vin rive nan trant-setyèm ane an egzil a Jojakin, wa Juda a, nan douzyèm mwa a, nan venn-setyèm jou nan mwa a, ke Évil-Merodac, wa Babylone nan, nan lane ke li te vin wa a, li te lage Jojakin, wa Juda a, soti nan prizon.
28 ೨೮ ಅಲ್ಲದೆ ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
Konsa, li te pale avèk dousè anvè li e li te leve twòn li an piwo pase lòt wa ki te avèk li Babylone yo.
29 ೨೯ ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.
Jojakin te chanje rad prizonye li yo, e li te vin pran repa l nan prezans a wa a pandan tout rès jou lavi li.
30 ೩೦ ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಅರಸನಿಂದಲೇ ಅವನಿಗೆ ಕೊಡಲಾಗುತ್ತಿತ್ತು.
Epi pou bous li, yon bous nòmal te bay a li menm pa wa a, yon pòsyon pou chak jou pandan tout jou lavi li.