< ಅರಸುಗಳು - ದ್ವಿತೀಯ ಭಾಗ 3 >

1 ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರ್ಷ ಆಳಿದನು.
Now, Jehoram son of Ahab, began to reign over Israel, in Samaria, in the eighteenth year of Jehoshaphat, king of Judah, —and he reigned twelve years.
2 ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು.
And he did the thing that was wicked in the eyes of Yahweh, only, not like his father, nor like his mother, —but he put away the pillars of Baal which, his father, had made;
3 ಆದರೂ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.
nevertheless, unto the sins of Jeroboam son of Nebat which he caused Israel to commit, he did cleave, —he turned not away therefrom
4 ಅನೇಕ ಕುರಿಹಿಂಡುಗಳನ್ನು ಹೊಂದಿದ್ದ ಮೋವಾಬ್ಯರ ಅರಸನಾದ ಮೇಷನೆಂಬುವನು ಇಸ್ರಾಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.
Now, Mesha king of Moab, was a sheep-master, —and used to render to the king of Israel, the wool of hundred thousand fat sheep, and of a hundred thousand rams.
5 ಆದರೆ ಅಹಾಬನು ಮರಣಹೊಂದಿದ ನಂತರ ಮೋವಾಬ್ಯರ ಅರಸನು ಇಸ್ರಾಯೇಲರ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.
And it came to pass, when Ahab died, that the king of Moab revolted against the king of Israel.
6 ಆದುದರಿಂದ ಅರಸನಾದ ಯೋರಾಮನು ಕೂಡಲೆ ಇಸ್ರಾಯೇಲರನ್ನು ಸೇರಿಸಿಕೊಂಡು ಸಮಾರ್ಯದಿಂದ ಹೊರಟು ಬಂದನು.
So King Jehoram went forth, on that day, out of Samaria, and numbered all Israel.
7 ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, “ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ” ಎಂದು ಉತ್ತರಕೊಟ್ಟನು.
And he departed, and sent unto Jehoshaphat king of Judah, saying—The king of Moab, hath revolted against me, wilt thou go with me against Moab to battle? And he said—I will go up, I am as thou art, my people are as thy people, my horses as thy horses.
8 ಮತ್ತೆ ಯೆಹೋಷಾಫಾಟನು, “ಯಾವ ಮಾರ್ಗವಾಗಿ ಹೋಗಬೇಕು?” ಎಂದು ವಿಚಾರಿಸಿದಾಗ ಯೋರಾಮನು, “ಎದೋಮ್ಯರ ಅರಣ್ಯ ಮಾರ್ಗವಾಗಿ” ಎಂದನು.
And he said—Which way, then, shall we go up? And he said—The way of the wilderness of Edom.
9 ಆಗ ಇಸ್ರಾಯೇಲ್, ಯೆಹೂದ್ಯ, ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತು ಬಳಸು ದಾರಿಯಿಂದ ಏಳು ದಿನಗಳವರೆಗೆ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ, ಅವರು ತಂದ ಪಶುಗಳಿಗೂ ನೀರು ಸಿಕ್ಕದೆ ಹೋಯಿತು.
Then departed the king of Israel, and the king of Judah, and the king of Edom, and went round, a journey of seven days, —and there was no water for the host, nor for the cattle that went with them.
10 ೧೦ ಇಸ್ರಾಯೇಲರ ಅರಸರು, “ಅಯ್ಯೋ, ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ” ಎಂದು ಗೋಳಾಡಿದರು.
Then said the king of Israel—Alas! for Yahweh hath called these three kings, to deliver them into the hand of Moab.
11 ೧೧ ಆದರೆ ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, “ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.
So Jehoshaphat said—Is there not, here, a prophet of Yahweh, that we may enquire of Yahweh, from him? Then answered one of the servants of the king of Israel, and said, Here, is Elisha son of Shaphat, who poured water on the hands of Elijah.
12 ೧೨ ಯೆಹೋಷಾಫಾಟನು, “ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು” ಅಂದನು. ಆಗ ಇಸ್ರಾಯೇಲ್, ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.
Then said Jehoshaphat, The word of Yahweh, is with him. So the king of Israel, and Jehoshaphat, and the king of Edom, went down unto him.
13 ೧೩ ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.
And Elisha said unto the king of Israel—What have I and thou in common? get thee unto the prophets of thy father, and unto the prophets of thy mother. But the king of Israel said to him—Nay! for Yahweh hath called together these three kings, to deliver them into the hand of Moab.
14 ೧೪ ಆಗ ಎಲೀಷನು, “ನಾನು ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿರದಿದ್ದರೆ ನಾನು ನಿನ್ನನ್ನು ನೋಡುತ್ತಿರಲಿಲ್ಲ. ನಿನ್ನನ್ನು ಲಕ್ಷಿಸುತ್ತಲೂ ಇರಲಿಲ್ಲ.
Then said Elisha—By the life of Yahweh of hosts, before whom I stand, were it not that, the countenance of Jehoshaphat king of Judah, I would lift up, I would neither look at thee, nor see thee.
15 ೧೫ ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.
But, now, bring me one that can touch the strings. For it used to be, when the player touched the strings, then would, the hand of Yahweh, be upon him.
16 ೧೬ ಅನಂತರ ಎಲೀಷನು ಇಸ್ರಾಯೇಲರ ಅರಸನಿಗೆ, ಯೆಹೋವನು ಹೀಗೆ ಹೇಳುತ್ತಾನೆ, “ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ.
Then said he, Thus, saith Yahweh, Make, in this torrent-bed, pits, pits!
17 ೧೭ ‘ನೀವು ಗಾಳಿ, ಮಳೆಗಳನ್ನು ಕಾಣದಿದ್ದರೂ, ಅದು ನೀರಿನಿಂದ ತುಂಬುವುದು. ನೀವೂ, ನಿಮ್ಮ ಕುರಿದನಗಳೂ, ನೀರನ್ನು ಕುಡಿಯಬಹುದು’ ಎಂಬುದಾಗಿ ಯೆಹೋವನು ಅನ್ನುತ್ತಾನೆ.
For, thus, saith Yahweh—Ye shall not see wind, and ye shall not see rain, yet, that torrent-bed, shall be filled with water, —And ye shall drink, ye, and your cattle, and your beasts;
18 ೧೮ “ಯೆಹೋವನ ದೃಷ್ಟಿಯಲ್ಲಿ ಈ ಕಾರ್ಯವೂ ಸುಲಭವಾಗಿರುವುದು. ಅದೇ ರೀತಿಯಾಗಿ ಯೆಹೋವನು ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.
And, this being a small thing in the eyes of Yahweh, he will deliver Moab into your hand;
19 ೧೯ ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು, ಎಲ್ಲಾ ಹಣ್ಣಿನ ಮರಗಳನ್ನೂ ಕಡಿದುಹಾಕಿ, ಒರತೆಗಳನ್ನು ಮುಚ್ಚಿಬಿಟ್ಟು, ಹೊಲಗಳಲ್ಲಿ ಕಲ್ಲುಗಳನ್ನು ತುಂಬಿಸಿ ಹಾಳುಮಾಡುವಿರಿ” ಎಂದು ನುಡಿದನು.
And ye shall smite every strong city, and every choice city, and, every goodly tree, shall ye fell, and, all fountains water, shall ye close up, —and, every goodly heritage, shall ye mar with stones.
20 ೨೦ ಮುಂಜಾನೆ ವೇಳೆಯಲ್ಲಿ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಪಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು.
And it came to pass, in the morning, when the offering ascended, that lo! waters, were coming in from the way of Edom, —and the land was filled with the water.
21 ೨೧ ಅರಸರು ತಮಗೆ ವಿರುದ್ಧವಾಗಿ ಯುದ್ಧಕ್ಕೆ ಬಂದಿದ್ದಾರೆಂಬುವುದನ್ನು ಮೋವಾಬ್ಯರು ಕೇಳಿ ಆಯುಧಗಳನ್ನು ಧರಿಸಲು ಶಕ್ತರಾದ ಎಲ್ಲಾ ಯೌವನಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಗಡಿಪ್ರದೇಶಕ್ಕೆ ಬಂದರು.
Now, all Moab, had heard that the kings had come up to fight against them, —so they came together, from all who could gird on a girdle and upwards, and took their stand at the border.
22 ೨೨ ಬೆಳಿಗ್ಗೆ ಎದ್ದು ನೋಡಲಾಗಿ, ಎದುರಿಗೆ ಇದ್ದ ನೀರು ಮೋವಾಬ್ಯರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು.
And, when they rose early in the morning, the sun, shone forth upon the waters, —and so the Moabites beheld over against them, the waters, red as blood.
23 ೨೩ ಇವರು, “ಅದು ರಕ್ತ! ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹಾರರಾಗಿರಬೇಕು. ಮೋವಾಬ್ಯರೇ ಏಳಿರಿ, ಸುಲಿಗೆಗೆ ಹೋಗೋಣ!” ಎಂದು ಕೂಗಿಕೊಂಡು ಇಸ್ರಾಯೇಲರ ಪಾಳೆಯಕ್ಕೆ ಹೋದರು.
They said therefore—Blood, —this! Destroyed! The kings have destroyed each other! Yea they have smitten every man his neighbour, —Now, then, to the spoil, O Moab!
24 ೨೪ ಆದರೆ ಇಸ್ರಾಯೇಲರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ ಅವರು ಮೋವಾಬ್ಯರನ್ನು ಸಂಹರಿಸಿದರು.
And, when they came into the camp of Israel, Israel arose and smote Moab, and they fled from before them, —so they entered thereinto, yea still farther entered Moab;
25 ೨೫ ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.
And, the cities, they pulled down, and, on every goodly heritage, they cast every man his stone, and filled it, and, all fountains of waters, they closed up, and, every goodly tree, they felled, and, though they left the stones thereof in Kir-haraseth, yet the slingers surrounded and smote it.
26 ೨೬ ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು, ಏಳು ನೂರು ಮಂದಿ ಭಟರೊಡನೆ, ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಲು ಪ್ರಯತ್ನಿಸಿದನು. ಆದರೆ ಆಗದೆಹೋಯಿತು.
And, when the king of Moab saw that, the battle, prevailed against him, he took with him seven hundred men that drew swords, to break through against the king of Edom, but they could not.
27 ೨೭ ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.
So he took his firstborn son who was to have reigned in his stead, and offered him up as an ascending-sacrifice upon the wall. And so it came to pass that there was great indignation against Israel. And they brake up from against him, and returned to their own land.

< ಅರಸುಗಳು - ದ್ವಿತೀಯ ಭಾಗ 3 >