< ಅರಸುಗಳು - ದ್ವಿತೀಯ ಭಾಗ 4 >
1 ೧ ಒಂದು ದಿನ ಪ್ರವಾದಿ ಮಂಡಳಿಯಲ್ಲಿನ ಒಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ, “ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು. ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನು ಎಂಬುದು ನಿನಗೆ ಗೊತ್ತಿದೆಯಲ್ಲಾ. ಸಾಲಕೊಟ್ಟವನು, ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ಕರೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ” ಎಂದು ಮೊರೆಯಿಟ್ಟಳು.
А една от жените на пророческите ученици извика към Елисея и каза: Слугата ти мъж ми умря; и ти знаеш, че слугата ти се боеше от Господа; а заимодавецът дойде да вземе за себе си двата ми сина за роби.
2 ೨ ಎಲೀಷನು ಆಕೆಗೆ, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.” ಅದಕ್ಕೆ ಆಕೆಯು, “ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ” ಎಂದು ಉತ್ತರ ಕೊಟ್ಟಳು.
И Елисей й каза: Що да ти сторя? Кажи ми що имаш в къщи? А тя рече: Слугинята ти няма нищо в къщи, освен един съд с дървено масло.
3 ೩ ಆಗ ಎಲೀಷನು ಆಕೆಗೆ, “ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ.
И рече: Иди, вземи на заем вън, от всичките си съседи, съдове празни съдове, вземи не малко.
4 ೪ ಅನಂತರ, ನೀನು, ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಎಣ್ಣೆಯನ್ನು ಪಾತ್ರೆಗಳಲ್ಲಿ ಹೊಯ್ದು ತುಂಬಿದವುಗಳನ್ನೆಲ್ಲಾ ಒಂದು ಕಡೆಯಿಡು” ಎಂದು ಹೇಳಿದನು.
Сетне влез и затвори вратата зад себе си и зад синовете си, и наливай от маслото във всички тия съдове, и пълните туряй на страна.
5 ೫ ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು, ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.
И тъй, та си отиве от него та затвори вратата зад себе си и зад синовете си; и те донасяха съдовете при нея, а тя наливаше.
6 ೬ ಪಾತ್ರೆಗಳೆಲ್ಲಾ ತುಂಬಿದಾಗ ಆಕೆಯು ಮಗನಿಗೆ, “ಇನ್ನೊಂದು ಪಾತ್ರೆಯನ್ನು ತಂದಿಡು” ಎನ್ನಲು ಅವನು, “ಪಾತ್ರೆಗಳೆಲ್ಲ ಮುಗಿದು ಹೋದವು” ಎಂದು ಉತ್ತರಕೊಟ್ಟನು. ಕೂಡಲೇ ಎಣ್ಣೆ ಉಕ್ಕುವುದು ನಿಂತುಹೋಯಿತು.
И като се напълниха съдовете, рече на един от синовете си: Донеси ми още един съд. А той й рече: Няма друг съд. И маслото престана.
7 ೭ ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ” ಎಂದನು.
Тогава тя дойде та извести на Божия човек. И той рече: Иди, продай маслото та плати дълга си, и живей с останалото, ти и синовете ти.
8 ೮ ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.
И един ден Елисей замина в Сунам, гдето имаше една богата жена; и тя го задържа да яде хляб. И колкото пъти заминаваше свръщаше там, за да яде хляб.
9 ೯ ಆ ಸ್ತ್ರೀಯು ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಲ್ಲಿ ಹೋಗುತ್ತಾ ಬರುತ್ತಾ ಇರುವ ಆ ಮನುಷ್ಯನು ಪರಿಶುದ್ಧನೂ, ದೇವರ ಮನುಷ್ಯನೂ ಆಗಿರುತ್ತಾನೆ ಎಂದು ನನಗೆ ಗೊತ್ತಾಯಿತು.
Сетне жената рече на мъжа си: Ето сеха, познавам че този, който постоянно наминава у нас, е свет Божий човек.
10 ೧೦ ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸಿ ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ. ಅವನು ಇಲ್ಲಿ ಬಂದಾಗಲೆಲ್ಲಾ ಅದರಲ್ಲಿ ಹೋಗಿ ಉಳಿದುಕೊಳ್ಳಲಿ” ಎಂದು ಹೇಳಿದಳು.
Да направим, моля една малка стаичка на стената, и да турим в нея за него легло и маса и стол и светилник, за да свръща там, когато дохожда при нас.
11 ೧೧ ಒಂದು ದಿನ ಎಲೀಷನು ಅಲ್ಲಿಗೆ ಬಂದು ಆ ಕೋಣೆಯೊಳಗೆ ಪ್ರವೇಶಿಸಿ ದಣಿವಾರಿಸಿಕೊಂಡನು.
И един ден, като дойде там и свърна в стаичката та лежеше в нея,
12 ೧೨ ಅನಂತರ, “ಆ ಶೂನೇಮ್ಯಳನ್ನು ಕರೆಯಿರಿ” ಎಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು, ಆಕೆಯು ಬಂದು ಅವನ ಮುಂದೆ ನಿಂತಳು.
рече на слугата си Гиезия: Повикай тая сунамка. И повика я, и тя застана пред него.
13 ೧೩ ಆಗ ಎಲೀಷನು ಗೇಹಜಿಗೆ “ನೀನು ಆಕೆಗೆ ಹೇಳು, ‘ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರ ಮಾಡಿರುವೆ ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನಗೋಸ್ಕರ ಅರಸನ ಬಳಿ ಅಥವಾ ಸೇನಾಧಿಪತಿಯ ಬಳಿಯಾಗಲಿ ಮಾತನಾಡಬೇಕೋ’ ಎಂದು ಕೇಳಲು” ಆಕೆಯು, “ನಾನು ಸ್ವಕುಲದವರ ಮಧ್ಯದಲ್ಲಿ ವಾಸವಾಗಿದ್ದೇನೆ” ಎಂದು ಉತ್ತರಕೊಟ್ಟಳು.
И рече Гиезия: Кажи й сега: Етой, ти си положила всички тия грижи за нас; що да се говори за тебе на царя или на военачалника. А тя отговори: Аз живея между своите люде.
14 ೧೪ ಆ ಮೇಲೆ ಎಲೀಷನು ಗೇಹಜಿಗೆ, “ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು” ಎಂದು ಕೇಳಲು ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ” ಎಂದನು.
Тогава рече: Що, прочее, да сторим за нея? А гиезиий отговори: Наистина тя няма син, а мъжът й е стар.
15 ೧೫ ಇದನ್ನು ಕೇಳಿ ಎಲೀಷನು, “ಆ ಸ್ತ್ರೀಯನ್ನು ಕರೆ” ಎಂದು ಆಜ್ಞಾಪಿಸಿದನು. ಅವನು ಹೋಗಿ ಕರೆಯಲು, ಆಕೆಯು ಬಂದು ಬಾಗಿಲಿನ ಹತ್ತಿರ ನಿಂತಳು.
И рече: Повикай я. И когато я повика, тя застана при вратата.
16 ೧೬ ಎಲೀಷನು ಆಕೆಗೆ, “ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ” ಎಂದು ಹೇಳಿದನು. ಅದಕ್ಕೆ ಆಕೆಯು, “ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ” ಎಂದು ನುಡಿದಳು.
И Елисей й рече: Не, господарю мой, Божий човече, не лъжи слугинята си.
17 ೧೭ ಆದರೆ ಆ ಸ್ತ್ರೀಯು ಗರ್ಭಿಣಿಯಾಗಿ ಎಲೀಷನು ಹೇಳಿದಂತೆ, ಮುಂದಿನ ವರ್ಷ ಅದೇ ಕಾಲದಲ್ಲಿ, ಒಬ್ಬ ಮಗನನ್ನು ಹೆತ್ತಳು.
Но жената зачна и роди син на другата година по същото време, както й рече Елисей.
18 ೧೮ ಹುಡುಗನು ದೊಡ್ಡವನಾದ ಮೇಲೆ ಒಂದು ದಿನ, ಹೊಲದಲ್ಲಿ ಬೆಳೆ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು.
И когато порасна детето, излезе един ден към баща си при жетварите.
19 ೧೯ ಅಲ್ಲಿದ್ದಾಗ ಅವನು ಪಕ್ಕನೆ, “ಅಪ್ಪಾ, ನನ್ನ ತಲೆ, ನನ್ನ ತಲೆ” ಎಂದು ಕೂಗಲು, ತಂದೆಯು ಒಬ್ಬ ಸೇವಕನನ್ನು ಕರೆದು ಅವನಿಗೆ, “ಇವನನ್ನು ತಾಯಿಯ ಹತ್ತಿರ ಕರೆದುಕೊಂಡು ಹೋಗು” ಎಂದು ಆಜ್ಞಾಪಿಸಿದನು.
И рече на баща си: Главата ми! главата ми! А той рече на един от момците: Занеси го при майка му.
20 ೨೦ ಸೇವಕನು ಹುಡುಗನನ್ನು ಅವನ ತಾಯಿಗೆ ತಂದು ಒಪ್ಪಿಸಿದನು. ಹುಡುಗನು ಮಧ್ಯಾಹ್ನದವರೆಗೂ ತಾಯಿಯ ತೊಡೆಯ ಮೇಲೆಯೇ ಇದ್ದು ಅನಂತರ ಸತ್ತನು.
И като го взе занесе го при маяка му; и детето седна на коленете й до пладне, и тогава умря.
21 ೨೧ ಕೂಡಲೆ ಆಕೆಯು ಅವನನ್ನು ದೇವರ ಮನುಷ್ಯನ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮಂಚದ ಮೇಲೆ ಮಗನನ್ನು ಮಲಗಿಸಿ ಬಾಗಿಲು ಮುಚ್ಚಿದಳು.
И тя се качи та го положи на леглото на Божия човек, и като зетвори вратата след него, излезе.
22 ೨೨ ಗಂಡನನ್ನು ಕರೆಯಿಸಿ ಅವನಿಗೆ, “ದಯವಿಟ್ಟು, ನನಗೋಸ್ಕರ ಒಬ್ಬ ಸೇವಕನನ್ನೂ, ಒಂದು ಕತ್ತೆಯನ್ನೂ ಕಳುಹಿಸು. ನಾನು ಬೇಗನೆ ದೇವರ ಮನುಷ್ಯನ ಬಳಿಗೆ ಹೋಗಿಬರುತ್ತೇನೆ” ಎಂದು ಹೇಳಿದಳು.
Тогава повика мъжа си и рече: Изпрати ми, моля, един от момците и една от ослиците, за да тичам при Божия човек и да се върна.
23 ೨೩ ಅದಕ್ಕೆ ಅವನು, “ಇದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ. ಈ ಹೊತ್ತು ಯಾಕೆ ಹೋಗುತ್ತೀ?” ಎಂದನು. ಅದಕ್ಕೆ ಆಕೆಯು, “ಎಲ್ಲವು ಸರಿಯೇ” ಎಂದು ಹೇಳಿದಳು.
А той рече: Защо да отидеш днес при него? не е нито нов месец, нито събота. А тя рече: Бъди спокоен.
24 ೨೪ ನಂತರ ಆಕೆಯು ಕತ್ತೆಗೆ ತಡಿ ಹಾಕಿಸಿ, ಅದರ ಮೇಲೆ ಕುಳಿತುಕೊಂಡು ಸೇವಕನಿಗೆ, “ಬೇಗ ಓಡಿಸು, ನಾನು ಅಪ್ಪಣೆಕೊಡುವವರೆಗೆ ನಿಲ್ಲಿಸಬೇಡ” ಎಂದು ಆಜ್ಞಾಪಿಸಿದಳು.
Тогава оседла ослицата, и рече на слугата си: Карай и бързай; не забравяй карането заради мене освен ако ти заповядвам.
25 ೨೫ ಹೀಗೆ ಆಕೆಯು ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ದೇವರ ಮನುಷ್ಯನು ಆಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ, “ಅಗೋ, ಅಲ್ಲಿ ಶೂನೇಮ್ಯಳು ಬರುತ್ತಿದ್ದಾಳೆ”
И тъй, стана та отиде при Божия човек на планината Кармил. А Божият човек, като я видя от далеч, рече на слугата си Гиезия: Ето там сунамката!
26 ೨೬ ನೀನು, ದಯವಿಟ್ಟು ಓಡಿಹೋಗಿ ಆಕೆಯನ್ನು ಎದುರುಗೊಂಡು, “ನಿನಗೂ, ನಿನ್ನ ಗಂಡನಿಗೂ, ಮಗನಿಗೂ ಕ್ಷೇಮವೋ?” ಎಂದು ವಿಚಾರಿಸು ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆಯು ಆ ಸೇವಕನಿಗೆ, “ಕ್ಷೇಮ” ಎಂದು ಉತ್ತರ ಕೊಟ್ಟು,
Сега, прочее, тичай да я посрещнеш и кажи й: Добре ли си? добре ли е мъжът ти? Дабре ли е детето? А тя отговори: Добре.
27 ೨೭ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂರ ಮಾಡುವುದಕ್ಕಾಗಿ ಹತ್ತಿರ ಬರಲು, ದೇವರ ಮನುಷ್ಯನು ಅವನಿಗೆ, “ಬಿಡು, ಆಕೆಯ ಮನಸ್ಸಿನಲ್ಲಿ ಬಹು ದುಃಖವಿರುವ ಹಾಗೆ ತೋರುತ್ತದೆ. ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸದೆ, ಮರೆಮಾಡಿದ್ದಾನೆ” ಎಂದು ಹೇಳಿದನು.
А когато дойде при Божия човек на планината, хвана се за нозете му; а Гиезий се приближи, за да я оттласне. Но Божият човек рече: Остави я, защото душата й е преогорчена в нея: А Господ е скрил причината от мене, и не ми я е явил.
28 ೨೮ ಆಕೆಯು ದೇವರ ಮನುಷ್ಯನಿಗೆ, “ನನಗೆ ಮಗನು ಬೇಕೆಂದು ಸ್ವಾಮಿಯಾದ ನಿನ್ನನ್ನು ನಾನು ಬೇಡಿಕೊಂಡೆನೇ? ‘ವಂಚಿಸಬಾರದೆಂದು’ ಮೊರೆಯಿಟ್ಟೆನಲ್ಲವೇ?” ಎಂದಳು.
А тя рече: Искала ли съм син от господаря си? Не рекох ли: Не ме лъжи?
29 ೨೯ ಆಗ ಎಲೀಷನು ಗೇಹಜಿಗೆ, “ನೀನು ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮುಖದ ಮೇಲಿಡು, ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ, ಯಾರ ಅವರ ವಂದನೆಯನ್ನು ಸ್ವೀಕರಿಸಬೇಡ” ಎಂದು ಹೇಳಿ ಕಳುಹಿಸಿದನು.
Тогава Елисей рече на Гиезия: Препаши кръста си, вземи тоягата ми в ръка, та иди; ако срещнеш човек, да го не поздравиш, а ако те поздрави някой, да ме не отговаряш; и положи тоягата ми върху лицето на детето.
30 ೩೦ ಆದರೂ ಹುಡುಗನ ತಾಯಿ, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದ್ದರಿಂದ ಎಲೀಷನು ಆಕೆಯ ಜೊತೆಯಲ್ಲಿ ಹೊರಟನು.
А майката на детето рече: Заклевам се в живота на Господа и в живота на душата ти, няма да те оставя. И така, той стана та отиде подир нея.
31 ೩೧ ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಹುಡುಗನು ಮಾತನಾಡಲಿಲ್ಲ, ಎಚ್ಚರಗೊಳ್ಳಲೂ ಇಲ್ಲ. ಆದುದರಿಂದ ಅವನು ಹಿಂದಿರುಗಿ ಹೋಗಿ ಎಲೀಷನನ್ನು ಎದುರುಗೊಂಡು ಅವನಿಗೆ, “ಹುಡುಗನು ಎಚ್ಚರವಾಗಲಿಲ್ಲ” ಎಂದನು.
А Гиезия мина пред тях и положи тоягата върху лицето на детето; но нямаше ни глас, нито слушане. Затова се върна да го посрещне и му извести казвайко: Детето не се събуди.
32 ೩೨ ಎಲೀಷನು ಆ ಮನೆಯನ್ನು ತಲುಪಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಮಲಗಿಸಿರುವುದನ್ನು ಕಂಡನು.
И когато влезе Елисей в къщата, ето детето умряло, положено на леглото му.
33 ೩೩ ಎಲೀಷನು ಒಳಗೆ ಹೋಗಿ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಯೆಹೋವನನ್ನು ಪ್ರಾರ್ಥಿಸಿದನು.
Влезе, прочее, та затвори вратата зат тях двамата, и помоли се Господу.
34 ೩೪ ಅನಂತರ ಹುಡುಗನ ಮೇಲೆ ಬೋರಲುಬಿದ್ದು ತನ್ನ ಬಾಯಿ, ಕಣ್ಣು, ಕೈಗಳನ್ನು ಅವನ ಬಾಯಿ, ಕಣ್ಣು, ಕೈಗಳಿಗೆ ಮುಟ್ಟಿಸಿದ್ದರಿಂದ ಹುಡುಗನ ದೇಹವು ಬೆಚ್ಚಗಾಯಿತು.
Тогава се качи та легна върху детето, и като тури устата си върху неговите уста, и рацете си върху неговите ръце простря се върху него; и стопли се тялото на детето.
35 ೩೫ ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರುಗಿ ಅವನ ಮೇಲೆ ಬೋರಲು ಬೀಳಲು ಹುಡುಗನು ಏಳು ಸಾರಿ ಸೀನಿ ಕಣ್ದೆರೆದನು.
После се оттегли та ходеше насам натам из къщата, тогава пак се качи та се простря върху него; и детето кихна седем пъти, и детето отвори очите си.
36 ೩೬ ಆಗ ಎಲೀಷನು ಗೇಹಜಿಗೆ, “ಶೂನೇಮ್ಯಳನ್ನು ಕರೆ” ಎಂದು ಆಜ್ಞಾಪಿಸಲು ಅವನು ಆಕೆಯನ್ನು ಕರೆದನು. ಆಕೆಯು ಬಂದಾಗ, ಎಲೀಷನು ಆಕೆಗೆ, “ನಿನ್ನ ಮಗನನ್ನು ತೆಗೆದುಕೋ” ಎಂದು ಹೇಳಿದನು.
И Елисай извика Гиезия и рече: Повикай тая сунамка. И повика я; и когато влезе при него, рече й: Вземи сина си.
37 ೩೭ ಆಕೆಯು ಹತ್ತಿರ ಬಂದು, ಅವನ ಪಾದಗಳಿಗೆ ಬಿದ್ದು ಸಾಷ್ಟಾಂಗನಮಸ್ಕಾರ ಮಾಡಿ, ಮಗನನ್ನು ಕರೆದುಕೊಂಡು ಹೋದಳು.
И тя влезе, падна на нозете му та се поклони до земята, и дигна сина си те излезе.
38 ೩೮ ಎಲೀಷನು ತಿರುಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು” ಎಂದು ಆಜ್ಞಾಪಿಸಿದನು.
Пак дойде Елисей в Галгал, когато имаше глад в земята; и като седяха пред него пророческите ученици, та го слушаха, рече на слугата си: Тури големия котел та свари вариво за пророческите ученици.
39 ೩೯ ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕೀತೆಂದು ಕಾಡಿಗೆ ಹೋಗಿ ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು ಅದನ್ನು ಕಿತ್ತು ಉಡಿಯಲ್ಲಿ ತುಂಬಿಕೊಂಡು, ಅದರ ಕಾಯಿಗಳನ್ನು ಕಿತ್ತುಕೊಂಡು ಬಂದು ತುಂಡು ತುಂಡು ಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ.
Затова, един излезе на полето за да набере зеленище, и като намери диво растение, набра от него диви тиквички, та напълни дрехата си, и се върна и ги наряза в котела с варивото, понеже не знаеха, че са отровни.
40 ೪೦ ಜನರಿಗೆ ಅದನ್ನೇ ಊಟಕ್ಕೆ ಬಡಿಸಿದರು. ಅವರು ಅದನ್ನು ಬಾಯೊಳಗೆ ಹಾಕಿದ ಕೂಡಲೆ ತಿನ್ನಲಾರದೆ, “ದೇವರ ಮನುಷ್ಯನೇ ಪಾತ್ರೆಯಲ್ಲಿ ವಿಷ” ಎಂದು ಕೂಗಿದರು. ಅದನ್ನು ತಿನ್ನಲಾರದೆ ಹೋದರು.
После сипаха на човеците да ядат; а като ядоха от варивото извикаха, казвайки: Божий човече, смърт има в котела! И не можаха да ядат от него.
41 ೪೧ ಆಗ ಎಲೀಷನು, “ಹಿಟ್ಟನ್ನು ತಂದು ಕೊಡಿರಿ” ಎಂದು ಹೇಳಿದನು. ಅವರು ತಂದಾಗ, ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು. ಜನರು ಇದನ್ನು ಊಟಮಾಡಲಿ” ಎಂದನು. ಕೂಡಲೇ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು.
А той рече: Тогава донесете брашно. И като го хвърли в котела рече: Сипи на людете да ядат. И нямаше нищо отровно в котела.
42 ೪೨ ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ” ಎಂದು ಹೇಳಿದನು.
В това време един човек от Ваалселиса дойде та донесе на Божия човек хляб от първите плодове, двадесет ечемичени хляба и пресни класове жито небелени. И рече: Дай на людете да ядат.
43 ೪೩ ಅದಕ್ಕೆ ಅವನು, “ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ” ಎಂದನು. ಎಲೀಷನು ಅವನಿಗೆ, “ಇರಲಿ, ಕೊಡು. ಅವರು ಊಟಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರೆಂದು ಯೆಹೋವನು ಎನ್ನುತ್ತಾನೆ” ಎಂದು ಹೇಳಿದನು.
И слугата му рече: Що! да сложа ли това пред стотина човека? А той каза: Дай на людете да ядат, защото така казва Господ: Ще се нахранят и ще остане излишък.
44 ೪೪ ಸೇವಕರು ಬಡಿಸಲು, ಯೆಹೋವನ ಮಾತಿನಂತೆ ಜನರು ಊಟಮಾಡಿ, ತೃಪ್ತರಾಗಿ, ಇನ್ನೂ ಉಳಿಸಿಕೊಂಡರು.
Тогава той сложи пред тях, та се нахраниха, и остана излишък, според Господното слово.