< ಅರಸುಗಳು - ದ್ವಿತೀಯ ಭಾಗ 5 >
1 ೧ ಅರಾಮ್ಯರ ಅರಸನಿಗೆ ನಾಮಾನನೆಂಬ ಒಬ್ಬ ಸೇನಾಧಿಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದ್ದದರಿಂದ ಅರಸನು ಇವನನ್ನು ಮಹಾ ಪುರುಷನೆಂದೂ ಸನ್ಮಾನಯೋಗ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.
Naamã, general do exército do rei da Síria, era grande homem diante de seu senhor, e em alta estima, porque por meio dele o SENHOR havia dado salvamento à Síria. Era este homem valente em extremo, mas leproso.
2 ೨ ಅರಾಮ್ಯರು ಒಂದು ಸಾರಿ ಸುಲಿಗೆ ಮಾಡುವುದಕ್ಕೋಸ್ಕರ ಇಸ್ರಾಯೇಲರ ಪ್ರಾಂತ್ಯಕ್ಕೆ ಹೋಗಿ ಬರುವಾಗ ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದಿದ್ದರು. ಆಕೆಯು ನಾಮಾನನ ಹೆಂಡತಿಗೆ ಸೇವಕಿಯಾದಳು.
E da Síria haviam saído tropas, e haviam levado cativa da terra de Israel uma menina; a qual servindo à mulher de Naamã,
3 ೩ ಆಕೆಯು ಒಂದು ದಿನ ತನ್ನ ಯಜಮಾನಿಯ ಬಳಿ, “ನಮ್ಮ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅವನು ನನ್ನ ಯಜಮಾನನನ್ನು ಕುಷ್ಠರೋಗದಿಂದ ವಾಸಿಮಾಡುತ್ತಿದ್ದನು” ಎಂದು ಹೇಳಿದಳು.
disse à sua senhora: Se meu senhor rogasse ao profeta que está em Samaria, ele o sararia de sua lepra.
4 ೪ ನಾಮಾನನು ಅರಸನ ಸನ್ನಿಧಿಗೆ ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತಿಳಿಸಿದನು.
E Naamã, vindo a seu senhor, declarou-o a ele, dizendo: Assim e assim disse uma menina que é da terra de Israel.
5 ೫ ಅರಾಮ್ಯರ ಅರಸನು ಅವನಿಗೆ, “ನೀನು ಅಲ್ಲಿಗೆ ಹೋಗಿ ಬಾ. ನಾನು ನಿನ್ನ ಕೈಯಲ್ಲಿ ಇಸ್ರಾಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ” ಎಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, (ಮೂವತ್ತು ಸಾವಿರ) ಆರು ಸಾವಿರ ತೊಲೆ ಬಂಗಾರ, ಹತ್ತು ಜೊತೆ ಬಟ್ಟೆಗಳು ಇವುಗಳನ್ನು ತೆಗೆದುಕೊಂಡು ಸಮಾರ್ಯಕ್ಕೆ ಹೋಗಿ,
E disse-lhe o rei da Síria: Anda, vai, e eu enviarei cartas ao rei de Israel. Partiu, pois, ele, levando consigo dez talentos de prata, e seis mil peças de ouro, e dez mudas de roupas.
6 ೬ ಪತ್ರವನ್ನು ಇಸ್ರಾಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, “ನನ್ನ ಸೇವಕನಾದ ನಾಮಾನನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ, ನೀನು ಅವನ ಕುಷ್ಠರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೋ” ಎಂಬುದಾಗಿ ಬರೆದಿತ್ತು.
Tomou também cartas para o rei de Israel, que diziam assim: Logo em chegando a ti estas cartas, sabe por elas que eu envio a ti meu servo Naamã, para que o sares de sua lepra.
7 ೭ ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು.
E logo que o rei de Israel leu as cartas, rasgou suas roupas, e disse: Sou eu Deus, que mate e dê vida, para que este envie a mim a que sare um homem de sua lepra? Considerai agora, e vede como busca ocasião contra mim.
8 ೮ ಇಸ್ರಾಯೇಲರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ, “ನೀನು, ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು, ಇಸ್ರಾಯೇಲರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬುದು ಅವನಿಗೆ ಗೊತ್ತಾಗಲಿ” ಎಂದು ಹೇಳಿ ಕಳುಹಿಸಿದನು.
E quando Eliseu, homem de Deus ouviu que o rei de Israel havia rasgado suas roupas, enviou a dizer ao rei: Por que rasgaste tuas vestes? Venha agora a mim, e saberá que há profeta em Israel.
9 ೯ ನಾಮಾನನು ರಥಾಶ್ವಗಳೊಡನೆ ಎಲೀಷನ ಮನೆಗೆ ಹೋಗಿ ಬಾಗಿಲಿನ ಮುಂದೆ ನಿಂತನು.
E veio Naamã com seus cavalos e com seu carro, e parou-se às portas da casa de Eliseu.
10 ೧೦ ಎಲೀಷನು ಅವನಿಗೆ, “ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ” ಎಂದು ಹೇಳಿ ಕಳುಹಿಸಿದನು.
Então Eliseu lhe enviou um mensageiro, dizendo: Vai, e lava-te sete vezes no Jordão, e tua carne se te restaurará, e serás limpo.
11 ೧೧ ನಾಮಾನನು ಇದನ್ನು ಕೇಳಿ ಕೋಪಗೊಂಡು, “ಇದೇನು? ಅವನು ಹೊರಗೆ ಬಂದು ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ನನ್ನ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.
E Naamã se foi irritado, dizendo: Eis que eu dizia para mim: Sairá ele logo, e estando em pé invocará o nome do SENHOR seu Deus, e levantará sua mão, e tocará o lugar, e sarará a lepra.
12 ೧೨ ದಮಸ್ಕದ ಅಬಾನಾ ಮತ್ತು ಪರ್ಪರ್ ಎಂಬ ನದಿಗಳು ಇಸ್ರಾಯೇಲರ ಎಲ್ಲಾ ನದಿ ಹೊಳೆಹಳ್ಳಗಳಿಗಿಂತ ಉತ್ತಮವಾಗಿವೆಯಲ್ಲವೋ? ಸ್ನಾನದಿಂದ ಶುದ್ಧನಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಲ್ಲವೇ?” ಎಂದು ಹೇಳಿ, ಬಲು ಸಿಟ್ಟಿನಿಂದ ಹೊರಟುಹೋದನು.
Abana e Farpar, rios de Damasco, não são melhores que todas as águas de Israel? Se me lavar neles, não serei também limpo? E voltou-se, e foi-se irritado.
13 ೧೩ ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ, “ಸ್ವಾಮೀ, ಪ್ರವಾದಿಯು ಒಂದು ಕಠಿಣವಾದ ಕೆಲಸ ಹೇಳಿದ್ದರೆ, ಅದನ್ನು ನೀವು ಮಾಡುತ್ತಿದ್ದಿರಲ್ಲವೇ? ಹಾಗಾದರೆ ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು” ಎಂದು ಹೇಳಿದರು.
Mas seus criados se chegaram a ele, e falaram-lhe, dizendo: Pai meu, se o profeta te mandasse alguma grande coisa, não a farias? Quanto mais, dizendo-te: Lava-te, e serás limpo?
14 ೧೪ ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.
Ele então desceu, e mergulhou sete vezes no Jordão, conforme a palavra do homem de Deus; e sua carne se restaurou como a carne de um menino, e foi limpo.
15 ೧೫ ಅನಂತರ, ನಾಮಾನನು ತನ್ನ ಪರಿವಾರದವರೊಡನೆ, ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ, ಅವನ ಮುಂದೆ ನಿಂತು, “ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವುದೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು. ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು” ಎಂದು ಹೇಳಿದನು.
E voltou ao homem de Deus, ele e toda sua companhia, e pôs-se diante dele, e disse: Eis que agora conheço que não há Deus em toda a terra, a não ser em Israel. Rogo-te que recebas algum presente do teu servo.
16 ೧೬ ಅದಕ್ಕೆ ಎಲೀಷನು, “ನಾನು ಸೇವೆಮಾಡುತ್ತಿರುವ ನನ್ನ ದೇವರು ನಿಜವಾಗಿಯೂ ಜೀವಿಸುವ ದೇವರಾದದರಿಂದ ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ಕಾಣಿಕೆಯನ್ನು ತೆಗೆದುಕೊಳ್ಳಲೇ ಇಲ್ಲ.
Mas ele disse: Vive o SENHOR, diante do qual estou, que não o tomarei. E insistindo-lhe que tomasse, ele não quis.
17 ೧೭ ಆಗ ನಾಮಾನನು ಎಲೀಷನಿಗೆ, “ನೀನು ನನ್ನ ಕಾಣಿಕೆಯನ್ನು ಸ್ವೀಕರಿಸದಿದ್ದರೆ, ನಿನ್ನ ಸೇವಕನಾದ ನನಗೆ ಎರಡು ಹೇಸರಗತ್ತೆಯ ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಯೆಹೋವನೊಬ್ಬನಿಗೇ ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸಬೇಕೆಂದಿದ್ದೇನೆ.
Então Naamã disse: Rogo-te, pois, não se dará a teu servo uma carga de um par de mulas desta terra? Porque de agora em diante teu servo não sacrificará holocausto nem sacrifício a outros deuses, a não ser ao SENHOR.
18 ೧೮ ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷಮಿಸಲಿ, ನನ್ನ ಒಡೆಯನು ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಮಾತ್ರ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು” ಎಂದನು.
Em isto perdoe o SENHOR a teu servo: que quando meu senhor entrar no templo de Rimom, e para adorar nele se apoiar sobre minha mão, se eu também me inclinar no templo de Rimom, se no templo de Rimom me inclino, o SENHOR perdoe nisto a teu servo.
19 ೧೯ ಎಲೀಷನು ಅವನಿಗೆ, “ಸಮಾಧಾನದಿಂದ ಹೋಗು” ಎಂದು ಉತ್ತರ ಕೊಟ್ಟನು. ಅವನು ಹೊರಟುಹೋದನು.
E ele lhe disse: Vai em paz. Partiu-se, pois, dele, e caminhou como o espaço de uma milha.
20 ೨೦ ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.
Então Geazi, criado de Eliseu o homem de Deus, disse entre si: Eis que meu senhor poupou a este sírio Naamã, não tomando de sua mão as coisas que havia trazido. Vive o SENHOR, que correrei eu atrás dele, e tomarei dele alguma coisa.
21 ೨೧ ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು ಕಂಡು ರಥದಿಂದ ಇಳಿದು ಅವನನ್ನು ಎದುರುಗೊಂಡು, “ಎಲ್ಲಾ ಕ್ಷೇಮವೋ?” ಎಂದು ಕೇಳಿದನು.
E Geazi seguiu Naamã; e quando Naamã lhe viu que vinha correndo atrás dele, desceu do carro para receber-lhe, e disse: Vai bem?
22 ೨೨ ಅದಕ್ಕೆ ಗೇಹಜಿಯು, “ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಳಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗೋಸ್ಕರ ಬೇಗನೇ ಒಂದು ತಲಾಂತು ಬೆಳ್ಳಿಯನ್ನೂ, ಎರಡು ಜೋಡಿ ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂದು ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು” ಎಂದು ಉತ್ತರ ಕೊಟ್ಟನು.
E ele disse: Bem. Meu senhor me envia a dizer: Eis que vieram a mim nesta hora do monte de Efraim dois rapazes dos filhos dos profetas: rogo-te que lhes dês um talento de prata, e duas mudas de roupas.
23 ೨೩ ನಾಮಾನನು, “ಎರಡು ತಲಾಂತನ್ನಾದರೂ ತೆಗೆದುಕೊಳ್ಳಬಾರದೆ?” ಎಂದು ಅವನನ್ನು ಒತ್ತಾಯಪಡಿಸಿ ಎರಡು ಚೀಲಗಳಲ್ಲಿ ಬೆಳ್ಳಿ ನಾಣ್ಯಗಳನ್ನು ತುಂಬಿಸಿ, ಆ ಚೀಲಗಳಲ್ಲಿ ಎರಡು ಜೋಡಿ ಬಟ್ಟೆಗಳನ್ನೂ ಇಟ್ಟು ಇಬ್ಬರು ಸೇವಕರ ಮೇಲೆ ಹೊರಿಸಿ ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಅವನ ಮುಂದೆ ನಡೆದರು.
E Naamã disse: Rogo-te que tomes dois talentos. E ele lhe constrangeu, e atou dois talentos de prata em dois sacos, e duas mudas de roupas, e o pôs às costas a dois de seus criados, que o levassem diante dele.
24 ೨೪ ಗೇಹಜಿಯು ಗುಡ್ಡವನ್ನು ಮುಟ್ಟಿದಾಗ, ಎರಡು ಚೀಲ ಬೆಳ್ಳಿಯನ್ನು ತೆಗೆದುಕೊಂಡು ಮನೆಯಲ್ಲಿ ಅಡಗಿಸಿಟ್ಟು, ಆಳುಗಳನ್ನು ಕಳುಹಿಸಿಬಿಟ್ಟನು, ಅವರು ಹೊರಟು ಹೋದರು.
E chegado que houve a um lugar secreto, ele o tomou da mão deles, e guardou-o em casa: logo mandou aos homens que se fossem.
25 ೨೫ ನಂತರ ಗೇಹಜಿಯು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿರುವೆ?” ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ” ಎಂದು ಉತ್ತರಕೊಟ್ಟನು.
E ele entrou, e pôs-se diante de seu senhor. E Eliseu lhe disse: De onde vens, Geazi? E ele disse: Teu servo não foi a nenhuma parte.
26 ೨೬ ಆಗ ಎಲೀಷನು ಗೇಹಜಿಗೆ, “ಒಬ್ಬನು ರಥದಿಂದ ಇಳಿದು ಬಂದು, ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಲಿಲ್ಲವೆಂದು ತಿಳಿದಿರುವೆಯಾ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷಿತೋಟಗಳು, ಕುರಿದನಗಳು, ದಾಸದಾಸಿಯರು, ಜನರೂ ಇವುಗಳನ್ನು ಸಂಪಾದಿಸುವುದಕ್ಕೆ ಇದು ಸಮಯವೋ?
O então lhe disse: Não foi também meu coração, quando o homem voltou de seu carro a receber-te? É tempo de tomar prata, e de tomar roupas, olivais, vinhas, ovelhas, bois, servos e servas?
27 ೨೭ ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು” ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು.
A lepra de Naamã se apegará a ti e à tua semente para sempre. E saiu de diante dele leproso, branco como a neve.