< ಅರಸುಗಳು - ದ್ವಿತೀಯ ಭಾಗ 8 >
1 ೧ ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಯೆಹೋವನು ಈ ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು” ಎಂದು ಹೇಳಿದನು.
১যি গৰাকী মহিলাৰ পুতেকক ইলীচাই জীয়াই তুলিছিল, এদিন তেওঁ সেই মহিলাক ক’লে, “তুমি তোমাৰ পৰিয়ালেৰে সৈতে আন যি ঠাইতে পাৰা সেই ঠাইলৈকে গৈ কিছুকাল থাকা, কিয়নো যিহোৱাই এই দেশত আকাল পঠাই দিব আৰু সেয়ে সাত বছৰ ধৰি থাকিব।”
2 ೨ ಆಕೆಯು ದೇವರ ಮನುಷ್ಯನ ಅಪ್ಪಣೆಯಂತೆ ತನ್ನ ಮನೆಯವರೊಡನೆ ಸ್ವದೇಶವನ್ನು ಬಿಟ್ಟು ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರ್ಷ ವಾಸವಾಗಿದ್ದಳು.
২মহিলাগৰাকীয়ে ঈশ্বৰৰ লোকৰ কথা অনুসাৰেই কার্য কৰিলে। তাই নিজৰ পৰিয়ালেৰে সৈতে গৈ সাত বছৰ পলেষ্টীয়াসকলৰ দেশত বাস কৰিলে।
3 ೩ ಏಳು ವರ್ಷಗಳಾದ ನಂತರ ಆಕೆಯು ಫಿಲಿಷ್ಟಿಯರ ದೇಶದಿಂದ ಸ್ವದೇಶಕ್ಕೆ ಬಂದು, ಪರಾಧೀನವಾಗಿದ್ದ ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಹೋದಳು.
৩সাত বছৰৰ শেষত মহিলাগৰাকী পলেষ্টীয়াসকলৰ দেশৰ পৰা উভটি আহি নিজৰ ঘৰ আৰু মাটি ঘূৰাই পোৱাৰ কাৰণে ৰজাৰ ওচৰত নিবেদন কৰিবলৈ গ’ল।
4 ೪ ಆ ಸಮಯದಲ್ಲಿ ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಯೊಂದಿಗೆ ಮಾತನಾಡುತ್ತಾ, “ಎಲೀಷನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನನಗೆ ವಿವರಿಸು” ಎಂದು ಆಜ್ಞಾಪಿಸಿದ್ದನು.
৪ৰজাই সেই সময়ত ঈশ্বৰৰ লোকৰ দাস গেহজীৰ লগত কথা পাতি আছিল। তেওঁ গেহজীক সুধি আছিল, “ইলীচাই যি যি মহৎ কামবোৰ কৰিছে, সেই সকলোকে মোক কোৱাছোন।”
5 ೫ ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ಅರಸನಿಗೆ ವಿವರಿಸುತ್ತಿರುವಾಗಲೇ ಜೀವದಾನಹೊಂದಿದ ಹುಡುಗನ ತಾಯಿಯು ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಬಂದಳು. ಕೂಡಲೇ ಗೇಹಜಿಯು, “ನನ್ನ ಒಡೆಯನೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆಯು ಇವನ ತಾಯಿ” ಎಂದು ಹೇಳಿದನು.
৫গেহজীয়ে যেতিয়া ৰজাক ইলীচাই কেনেকৈ মৃত শিশুটিক জীয়াই তুলিছিল, এই কথা কৈ আছিল, ঠিক সেই সময়তেই যি মহিলাৰ পুতেকক ইলীচাই জীয়াই তুলিছিল, সেই মহিলাগৰাকী ৰজাৰ ওচৰত নিজৰ ঘৰ আৰু মাটি ঘূৰাই পাবৰ কাৰণে নিবেদন কৰিবলৈ আহিল। গেহজীয়ে তেতিয়া ক’লে, “হে মোৰ প্ৰভু মহাৰাজ, এৱেঁই সেই মহিলা আৰু এই জনেই তাইৰ ল’ৰা যাক ইলীচাই পুনৰ জীৱন দিলে।”
6 ೬ ಅರಸನು ಈ ವಿಷಯವಾಗಿ ಆ ಸ್ತ್ರೀಯನ್ನು ವಿಚಾರಿಸಲು ಆಕೆಯು ಅದರಂತೆಯೇ ಎಲೀಷನಿಂದಾದ ದೇವರ ಮಹಿಮೆಯ ವಿಷಯವನ್ನು ವಿವರವಾಗಿ ತಿಳಿಸಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಈಕೆಯ ಹೊಲಮನೆಗಳನ್ನೂ, ಈಕೆಯು ದೇಶವನ್ನು ಬಿಟ್ಟ ದಿನದಿಂದ ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಅವಳಿಗೆ ಕೊಡಿಸು” ಎಂದು ಆಜ್ಞಾಪಿಸಿ, ಅವನನ್ನು ಆಕೆಯ ಜೊತೆಯಲ್ಲಿ ಕಳುಹಿಸಿದನು.
৬ৰজাই তেতিয়া মহিলাগৰাকীক তাইৰ ল’ৰাটিৰ বিষয়ে সুধিলত, তাই তেওঁৰ আগত সকলো কথা ক’লে। তাতে ৰজাই মহিলাগৰাকীৰ কাৰণে এজন কৰ্মচাৰীক আদেশ দি ক’লে, “তাইৰ যি যি আছিল সকলোবোৰ ঘূৰাই দিয়া আৰু তাই দেশ এৰি যোৱাৰে পৰা এতিয়ালৈকে তাইৰ মাটিত যি যি শস্য উৎপন্ন হৈছিল, সেইবোৰো উভটাই দিয়া।”
7 ೭ ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. “ದೇವರ ಮನುಷ್ಯನು ಬಂದಿದ್ದಾನೆ” ಎಂಬ ವರ್ತಮಾನವನ್ನು ಅರಸನು ಕೇಳಿ,
৭তাৰ পাছত ইলীচা দম্মেচকলৈ আহিল; সেই সময়ত অৰামৰ ৰজা বিন-হদদ অসুস্থ আছিল। কোনোৱে ৰজাক ক’লে, “ঈশ্বৰৰ লোক এই ঠাইলৈ আহিছে।”
8 ೮ ಅರಸನು ಹಜಾಯೇಲನಿಗೆ, “ನೀನು ಕಾಣಿಕೆಯನ್ನು ತೆಗೆದುಕೊಂಡು ದೇವರ ಮನುಷ್ಯನ ಬಳಿಗೆ ಹೋಗಿ ನನಗೆ ವಾಸಿಯಾಗುವುದೋ? ಇಲ್ಲವೋ ಎಂಬುದನ್ನು ಅವನ ಮುಖಾಂತರವಾಗಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸು” ಎಂದು ಆಜ್ಞಾಪಿಸಿದನು.
৮ৰজাই তেতিয়া হজায়েলক ক’লে, “তুমি হাতত এটি উপহাৰ লৈ ঈশ্বৰৰ লোকৰ সাক্ষাৎ হ’বলৈ যোৱা আৰু তেওঁৰ যোগেদি যিহোৱাৰ পৰা জানি লোৱা যে, ‘মই এই অসুখৰ পৰা সুস্থ হৈ উঠিম নে নাই’?”
9 ೯ ಹಜಾಯೇಲನು ದಮಸ್ಕದ ಶ್ರೇಷ್ಠ ವಸ್ತುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ಹದದನು ತನಗೆ ಸ್ವಸ್ಥವಾಗುವದೋ, ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿನ್ನ ಬಳಿ ಕಳುಹಿಸಿದ್ದಾನೆ” ಎಂದು ಹೇಳಿದನು.
৯হজায়েলে তেতিয়া উপহাৰ হিচাবে দম্মেচকৰ সকলো উত্তম উত্তম বস্তুৰে চল্লিশটা উটৰ পিঠিত বোজাই কৰি ইলীচাৰ সৈতে সাক্ষাৎ হ’বলৈ গ’ল; তেওঁ আহি ইলীচাৰ সন্মুখত থিয় হৈ ক’লে, “আপোনাৰ পুত্র অৰামৰ ৰজা বিন-হদদে এই কথা সুধিবলৈ মোক আপোনাৰ ওচৰলৈ পঠাইছে, ‘মই এই অসুখৰ পৰা সুস্থ হ’ম নে’?”
10 ೧೦ ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ಹೇಗೂ ನಿನಗೆ ವಾಸಿಯಾಗುವುದು” ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ, ಅವನು ಸತ್ತೇ ಹೋಗುವನೆಂದು ಯೆಹೋವನು ನನಗೆ ತಿಳಿಸಿದ್ದಾನೆ ಎಂದು ಹೇಳಿದನು.
১০তেতিয়া ইলীচাই তেওঁক ক’লে, “তুমি গৈ ৰজা বিন-হদদক কোৱা যে ‘আপুনি অৱশ্যেই সুস্থ হৈ যাব;’ কিন্তু যিহোৱাই মোৰ ওচৰত প্রকাশ কৰিলে যে, তেওঁ নিশ্চয় মৰিব।”
11 ೧೧ ಸ್ಥಿರ ದೃಷ್ಟಿಯಿಂದ ಹಜಾಯೇಲನನ್ನು ದಿಟ್ಟಿಸಿ ನೋಡಿ ಅಳತೊಡಗಿದನು.
১১ইয়াকে কৈ হজায়েলে লাজ নোপোৱা পর্যন্ত ইলীচাই তেওঁৰ ফালে একে-থৰে চাই থাকিল আৰু পাছত ঈশ্বৰৰ লোকে কান্দিবলৈ আৰম্ভ কৰিলে।
12 ೧೨ ಹಜಾಯೇಲನು ಅವನನ್ನು, “ನನ್ನ ಒಡೆಯಾ, ಯಾಕೆ ಅಳುತ್ತಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಾಯೇಲರಿಗೆ ಎಷ್ಟು ಕೇಡು ಮಾಡುವಿ ಎಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸುವಿ. ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವಿ. ಮಕ್ಕಳನ್ನು ಬಂಡೆಗೆ ಅಪ್ಪಳಿಸುವಿ. ಗರ್ಭಿಣಿಯರ ಹೊಟ್ಟೆಯನ್ನು ಸೀಳುವಿ” ಎಂದು ಉತ್ತರಕೊಟ್ಟನು.
১২হজায়েলে সুধিলে, “হে মোৰ প্ৰভু, আপুনি কিয় কান্দিছে?” তেওঁ উত্তৰ দিলে, “কাৰণ, তুমি ইস্ৰায়েলৰ লোকসকললৈ কি ক্ষতি কৰিবা, তাক মই জানো। তুমি তেওঁলোকৰ দুৰ্গবোৰ জুই দি পুৰিবা, তৰোৱালেৰে তেওঁলোকৰ যুবকসকলক বধ কৰিবা, তেওঁলোকৰ শিশুসকলক মাটিত আচাৰি মাৰিবা আৰু তেওঁলোকৰ গৰ্ভৱতী মহিলাবোৰৰ পেট ফালিবা।”
13 ೧೩ ಹಜಾಯೇಲನು ಎಲೀಷನಿಗೆ, “ನಿನ್ನ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೇ; ನನ್ನಿಂದ ಇಂಥಾ ಕ್ರೂರ ಕಾರ್ಯವಾಗುವುದು ಹೇಗೆ?” ಎಂದು ಕೇಳಲು ಅವನು, “ನೀನು ಅರಾಮ್ಯರ ಅರಸನಾಗುವಿಯೆಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದನು.
১৩তেতিয়া হজায়েলে ক’লে, “কেৱল এটা কুকুৰৰ তুল্য আপোনাৰ এই দাসনো কোন যে, এই ভয়ানক কৰ্ম কৰিব?” ইলীচাই ক’লে, “তুমি যে অৰামৰ ৰজা হ’বা, এই কথা যিহোৱাই মোক প্রকাশ কৰিলে।”
14 ೧೪ ಹಜಾಯೇಲನು ಎಲೀಷನನ್ನು ಬಿಟ್ಟು ತನ್ನ ಯಜಮಾನನ ಬಳಿಗೆ ಹೋದಾಗ ಅವನು ಇವನನ್ನು, “ಎಲೀಷನು ಏನು ಹೇಳಿದನು?” ಎಂದು ಕೇಳಿದನು. ಅದಕ್ಕೆ ಇವನು, “ನಿನಗೆ ಹೇಗೂ ಸ್ವಸ್ಥವಾಗುವುದು ಎಂದು ಹೇಳಿದನು” ಎಂಬುದಾಗಿ ಉತ್ತರಕೊಟ್ಟನು.
১৪তাৰ পাছত হজায়েল ইলীচাৰ ওচৰৰ পৰা নিজৰ প্ৰভুৰ ওচৰলৈ ঘূৰি গ’ল। তেতিয়া ৰজা বিন-হদদে তেওঁক সুধিলে, “ইলীচাই তোমাক কি ক’লে?” তেওঁ উত্তৰ দিলে, “তেওঁ মোক ক’লে যে আপুনি অৱশ্যেই সুস্থ হ’ব।”
15 ೧೫ ಮರುದಿನ ಬೆಳಿಗ್ಗೆ ಇವನು ಕಂಬಳಿಯನ್ನು ತೆಗೆದುಕೊಂಡು ನೀರಿನಲ್ಲಿ ತೋಯಿಸಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.
১৫কিন্তু ঠিক পাছ দিনাই হজায়েলে এখন কম্বল পানীত জুবুৰিয়াই লৈ শ্বাসৰুদ্ধ হোৱাকৈ ৰজা বিন-হদদৰ মুখৰ ওপৰত মেলি ধৰিলে আৰু তাতে ৰজাৰ মৃত্যু হ’ল। তাৰ পাছত হজায়েল বিন-হদদৰ পদত ৰজা হ’ল।
16 ೧೬ ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಯೆಹೂದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.
১৬যিহোচাফটৰ পুত্র যিহোৰাম যিহূদাৰ ৰজা আছিল। ইস্রায়েলৰ ৰজা আহাবৰ পুত্ৰ যোৰামৰ ৰাজত্ব কালৰ পঞ্চম বছৰত যিহোৰামে যিহূদাত ৰাজত্ব কৰিবলৈ আৰম্ভ কৰে।
17 ೧೭ ಇವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.
১৭তেওঁ যেতিয়া ৰাজত্ব আৰম্ভ কৰিছিল, তেতিয়া তেওঁৰ বয়স আছিল বত্ৰিশ বছৰ আৰু তেওঁ আঠ বছৰ ধৰি যিৰূচালেমত ৰাজত্ব কৰিছিল।
18 ೧೮ ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
১৮যিহোৰাম ইস্রায়েলৰ ৰজাসকলৰ পথত চলিছিল আৰু তেওঁ আহাবৰ জীয়েকক বিবাহ কৰাৰ কাৰণে আহাবৰ বংশৰ লোকসকলে কৰাৰ দৰেই তেওঁ কু-আচৰণ কৰিছিল। যিহোৱাৰ দৃষ্টিত যি বেয়া তেওঁ তাকে কৰিছিল।
19 ೧೯ ಆದರೂ, ಯೆಹೋವನು ಯೆಹೂದ ರಾಜ್ಯವನ್ನು ನಾಶಮಾಡಲಿಲ್ಲ. ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ ಎಂಬುದಾಗಿ ತನ್ನ ಸೇವಕನಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ಸ್ಮರಿಸಿ ಅದನ್ನು ಉಳಿಸಿದನು.
১৯তথাপিও যিহোৱাই নিজৰ দাস দায়ুদৰ কথা মনত ৰাখি যিহূদা বিনষ্ট কৰিবলৈ ইচ্ছা নকৰিলে; কাৰণ তেওঁ দায়ুদক তেওঁৰ বংশধৰ দিব বুলি প্রতিজ্ঞা কৰিছিল।
20 ೨೦ ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧವಾಗಿ ತಿರುಗಿಬಿದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇಮಿಸಿಕೊಂಡರು.
২০যিহোৰামৰ ৰাজত্বৰ সময়ত ইদোমীয়াসকলে যিহূদাৰ বশ্যতা অস্বীকাৰ কৰি বিদ্রোহ কৰিলে আৰু তেওঁলোকৰ নিজৰ কাৰণে এজন ৰজা পাতি ল’লে।
21 ೨೧ ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಯೊರ್ದನ್ ನದಿಯನ್ನು ದಾಟಿ ಚಾಯೀರಿಮಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲಿ ಎದ್ದು ಅವರನ್ನು ಅವರ ರಥಬಲದ ಅಧಿಪತಿಗಳನ್ನು ಸೋಲಿಸಿ ಪಾರಾದನು. ಅವನ ಸೈನ್ಯದವರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
২১তেতিয়া যিহোৰামে তেওঁৰ সকলো সেনাপতিৰ সৈতে ৰথবোৰ লৈ চায়ীৰলৈ গ’ল। ইদোমীয়াসকলে তেওঁক আৰু ৰথবোৰৰ সেনাপতিসকলক ঘেৰাও কৰিলে; কিন্তু তেওঁ ৰাতিয়েই উঠি তেওঁক আৰু ৰথবোৰৰ সেনাপতিসকলক বেৰি ৰখা ঘেৰাও ভাঙি ইদোমীয়াসকলক আক্রমণ কৰি ওলাই আহিল আৰু তেওঁৰ সৈন্যসকল পলাই গৈ নিজৰ ঘৰলৈ ঘূৰি গ’ল।
22 ೨೨ ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿ ಬಿದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರು ಸ್ವತಂತ್ರರಾದರು.
২২ইদোম আজিও যিহূদাৰ বিৰুদ্ধে বিদ্রোহী হৈ আছে। সেই একে সময়তে লিব্নায়ো বিদ্ৰোহ কৰিছিল।
23 ೨೩ ಯೆಹೋರಾಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ, ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.
২৩যিহোৰামৰ অন্যান্য সকলো কার্যৰ বিৱৰণ জানো ‘যিহূদাৰ ৰজাসকলৰ ইতিহাস’ নামৰ পুস্তকখনত লিখা নাই?
24 ೨೪ ಯೆಹೋರಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಅಹಜ್ಯನು ಅರಸನಾದನು.
২৪পাছত যিহোৰামৰ মৃত্যু হোৱাত তেওঁ পূর্বপুৰুষসকলৰ ওচৰলৈ গ’ল আৰু তেওঁক দায়ুদৰ নগৰত পূর্বপুৰুষসকলৰ লগত মৈদাম দিয়া হ’ল। তাৰ পাছত তেওঁৰ পুত্ৰ অহজিয়া তেওঁৰ পদত ৰজা হ’ল।
25 ೨೫ ಅಹಾಬನ ಮಗನೂ, ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.
২৫ইস্ৰায়েলৰ ৰজা আহাবৰ পুত্ৰ যোৰামৰ ৰাজত্ব কালৰ দ্বাদশ বছৰত যিহোৰামৰ পুত্ৰ অহজিয়াই যিহূদাত ৰাজত্ব কৰিবলৈ ধৰিলে।
26 ೨೬ ಅಹಜ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಇಸ್ರಾಯೇಲರ ಅರಸನಾದ ಒಮ್ರಿಯ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.
২৬অহজিয়াই যেতিয়া ৰাজত্ব আৰম্ভ কৰিছিল, তেতিয়া তেওঁৰ বয়স আছিল বাইশ বছৰ আৰু তেওঁ এবছৰ কাল যিৰূচালেমত ৰাজত্ব কৰিছিল। তেওঁৰ মাকৰ নাম আছিল অথলিয়া; তেওঁ ইস্ৰায়েলৰ ৰজা অম্ৰীৰ নাতিনীয়েক।
27 ೨೭ ಅಹಜ್ಯನಿಗೆ ಅಹಾಬನ ಕುಟುಂಬದವರೊಂದಿಗೆ ಸಂಬಂಧವಿದ್ದುದ್ದರಿಂದ ಅವನು ಅವರ ಮಾರ್ಗದಲ್ಲೆ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
২৭অহজিয়াই আহাবৰ বংশৰ লোকসকলৰ পথত চলিলে আৰু তেওঁলোকৰ দৰেই কার্য কৰি যিহোৱাৰ দৃষ্টিত কু-আচৰণ কৰিলে; কিয়নো অহজিয়া আহাবৰ বংশৰ জোঁৱায়েক আছিল।
28 ೨೮ ಇದಲ್ಲದೆ ಅಹಜ್ಯನು ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.
২৮পাছত অৰামৰ ৰজা হজায়েলৰ বিৰুদ্ধে যুদ্ধ কৰিবৰ কাৰণে ৰজা অহজিয়াই আহাবৰ পুত্ৰ ৰজা যোৰামৰ সৈতে ৰামোৎ-গিলিয়দলৈ গ’ল; তেতিয়া অৰামীয়াসকলে যোৰামক আঘাত কৰিলে।
29 ೨೯ ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಲು ಅವನಿಗೆ ರಾಮದಲ್ಲಿ ಆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕಾಗಿ ಇಜ್ರೇಲಿಗೆ ಬಂದನು. ಹಜಾಯೇಲನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗ ಅಹಜ್ಯನು ಅಹಾಬನ ಮಗನಾದ ಯೋರಾಮನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.
২৯অৰামৰ ৰজা হজায়েলৰ সৈতে ৰামাত যুদ্ধ কৰাৰ সময়ত অৰামীয়াসকলে কৰা সেই আঘাতৰ পৰা সুস্থ হ’বৰ কাৰণে ৰজা যোৰাম যিজ্ৰিয়েললৈ ঘূৰি গ’ল। যিহোৰামৰ পুত্র যিহূদাৰ ৰজা অহজিয়াই আহাবৰ পুত্ৰ যোৰামে আঘাত পাই অসুস্থ হোৱা বাবে তেওঁক চাবলৈ যিজ্রিয়েললৈ নামি গ’ল।