< ಅರಸುಗಳು - ದ್ವಿತೀಯ ಭಾಗ 9 >
1 ೧ ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.”
१तब एलीशा भविष्यद्वक्ता ने भविष्यद्वक्ताओं के दल में से एक को बुलाकर उससे कहा, “कमर बाँध, और हाथ में तेल की यह कुप्पी लेकर गिलाद के रामोत को जा।
2 ೨ ಆ ಊರನ್ನು ತಲುಪಿದ ನಂತರ ನಿಂಷಿಯ ಮೊಮ್ಮಗನೂ, ಯೆಹೋಷಾಫಾಟನ ಮಗನೂ ಆದ ಯೇಹುವು ಎಲ್ಲಿರುತ್ತಾನೆಂದು ವಿಚಾರಿಸಿ, ಅವನು ಸಿಕ್ಕಿದಾಗ ಅವನನ್ನು ಅವರ ಜೊತೆಗಾರರ ಗುಂಪಿನಿಂದ ಒಳಗಿನ ಕೋಣೆಗೆ ಕರೆದುಕೊಂಡು ಹೋಗು.
२और वहाँ पहुँचकर येहू को जो यहोशापात का पुत्र और निमशी का पोता है, ढूँढ़ लेना; तब भीतर जा, उसको खड़ा कराकर उसके भाइयों से अलग एक भीतर कोठरी में ले जाना।
3 ೩ ತರುವಾಯ ಕುಪ್ಪಿಯಲ್ಲಿರುವ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, “ಯೆಹೋವನು ಹೀಗೆ ಅನ್ನುತ್ತಾನೆ, ‘ನಾನು ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ’ ಎಂಬುದಾಗಿ ಹೇಳಿದ ಕೂಡಲೆ ಬಾಗಿಲು ತೆರೆದು ಓಡಿಹೋಗು” ಎಂದು ಆಜ್ಞಾಪಿಸಿದನು.
३तब तेल की यह कुप्पी लेकर तेल को उसके सिर पर यह कहकर डालना, ‘यहोवा यह कहता है, कि मैं इस्राएल का राजा होने के लिये तेरा अभिषेक कर देता हूँ।’ तब द्वार खोलकर भागना, विलम्ब न करना।”
4 ೪ ಆಗ ಯೌವನಸ್ಥನಾದ ಪ್ರವಾದಿಯು ಎಲೀಷನ ಅಪ್ಪಣೆಯಂತೆ ರಾಮೋತ್ ಗಿಲ್ಯಾದಿಗೆ ಹೋದನು.
४अतः वह जवान भविष्यद्वक्ता गिलाद के रामोत को गया।
5 ೫ ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆ ಸೇರಿರುವುದನ್ನು ಕಂಡು ಅವನು ಅವರನ್ನು ಸಮೀಪಿಸಿ, “ನಾಯಕನೇ ನಿನಗೊಂದು ಮಾತು ಹೇಳುವುದಿದೆ” ಎಂದನು. ಯೇಹುವು ಅವನಿಗೆ, “ನಮ್ಮಲ್ಲಿ ಯಾರಿಗೆ?” ಎಂದು ಕೇಳಲು ಅವನು, “ಸೇನಾಧಿಪತಿಯಾದ ನಿನಗೆ” ಎಂದು ಉತ್ತರಕೊಟ್ಟನು.
५वहाँ पहुँचकर उसने क्या देखा, कि सेनापति बैठे हुए हैं; तब उसने कहा, “हे सेनापति, मुझे तुझ से कुछ कहना है।” येहू ने पूछा, “हम सभी में किस से?” उसने कहा, “हे सेनापति, तुझी से!”
6 ೬ ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಅವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳು, ಆತನು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಿದ್ದೇನೆ.
६तब वह उठकर घर में गया; और उसने यह कहकर उसके सिर पर तेल डाला, “इस्राएल का परमेश्वर यहोवा यह कहता है, मैं अपनी प्रजा इस्राएल पर राजा होने के लिये तेरा अभिषेक कर देता हूँ।
7 ೭ ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು.
७तो तू अपने स्वामी अहाब के घराने को मार डालना, जिससे मुझे अपने दास भविष्यद्वक्ताओं के वरन् अपने सब दासों के खून का जो ईजेबेल ने बहाया, बदला मिले।
8 ೮ ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮನಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ತೆಗೆದುಹಾಕುವೆನು.
८क्योंकि अहाब का समस्त घराना नाश हो जाएगा, और मैं अहाब के वंश के हर एक लड़के को और इस्राएल में के क्या बन्दी, क्या स्वाधीन, हर एक का नाश कर डालूँगा।
9 ೯ ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿಯು ಅಹಾಬನ ಮನೆಗೂ ಆಗುವುದು.
९और मैं अहाब का घराना नबात के पुत्र यारोबाम का सा, और अहिय्याह के पुत्र बाशा का सा कर दूँगा।
10 ೧೦ ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ. ನಾಯಿಗಳು ಅವಳ ಹೆಣವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು’” ಎನ್ನುತ್ತಾನೆ ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು.
१०और ईजेबेल को यिज्रेल की भूमि में कुत्ते खाएँगे, और उसको मिट्टी देनेवाला कोई न होगा।” तब वह द्वार खोलकर भाग गया।
11 ೧೧ ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು.
११तब येहू अपने स्वामी के कर्मचारियों के पास निकल आया, और एक ने उससे पूछा, “क्या कुशल है, वह बावला क्यों तेरे पास आया था?” उसने उनसे कहा, “तुम को मालूम होगा कि वह कौन है और उससे क्या बातचीत हुई।”
12 ೧೨ ಆದರೆ ಅವರು, “ಅದು ಸುಳ್ಳು, ಅವನು ಹೇಳಿದ್ದನ್ನು ತಿಳಿಸು” ಎಂದು ಅವನನ್ನು ಒತ್ತಾಯಪಡಿಸಿದ್ದರಿಂದ ಯೇಹುವು, “ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನು ಹೇಳಿದ ಎಲ್ಲ ಮಾತುಗಳನ್ನು ಹೇಳಿದನು.”
१२उन्होंने कहा, “झूठ है, हमें बता दे।” उसने कहा, “उसने मुझसे कहा तो बहुत, परन्तु मतलब यह है ‘यहोवा यह कहता है कि मैं इस्राएल का राजा होने के लिये तेरा अभिषेक कर देता हूँ।’”
13 ೧೩ ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು.
१३तब उन्होंने झट अपना-अपना वस्त्र उतार कर उसके नीचे सीढ़ी ही पर बिछाया, और नरसिंगे फूँककर कहने लगे, “येहू राजा है।”
14 ೧೪ ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ವಿರುದ್ಧವಾಗಿ ಒಳಸಂಚುಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರ ಸಹಿತವಾಗಿ ಹೋಗಿ ಅದಕ್ಕೆ ಕಾವಲುದಂಡುಗಳನ್ನು ಇರಿಸಿದನು.
१४यह येहू जो निमशी का पोता और यहोशापात का पुत्र था, उसने योराम से राजद्रोह की युक्ति की। (योराम तो सारे इस्राएल समेत अराम के राजा हजाएल के कारण गिलाद के रामोत की रक्षा कर रहा था;
15 ೧೫ ಅರಸನಾದ ಯೋರಾಮನು, ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಗಾಯ ಹೊಂದಿದ್ದರಿಂದ, ಅದನ್ನು ವಾಸಿಮಾಡಿಕೊಳ್ಳುವುದಕ್ಕಾಗಿ ಹಿಂದಿರುಗಿ ಇಜ್ರೇಲ ಪಟ್ಟಣಕ್ಕೆ ಬಂದಿದ್ದನು. ಯೇಹುವು ತನ್ನ ಜೊತೆಗಾರರಿಗೆ, “ನೀವು ನನ್ನವರಾಗಿದ್ದರೆ ಈ ಸುದ್ದಿಯು ಇಜ್ರೇಲನ್ನು ಮುಟ್ಟದಂತೆ ಒಬ್ಬನನ್ನೂ ಈ ಪಟ್ಟಣದಿಂದ ಹೊರಗೆ ಹೋಗದಂತೆ ನೋಡಿಕೊಳ್ಳಿ” ಎಂದು ಹೇಳಿದನು.
१५परन्तु राजा योराम आप अपने घाव का जो अराम के राजा हजाएल से युद्ध करने के समय उसको अरामियों से लगे थे, उनका इलाज कराने के लिये यिज्रेल को लौट गया था।) तब येहू ने कहा, “यदि तुम्हारा ऐसा मन हो, तो इस नगर में से कोई निकलकर यिज्रेल में सुनाने को न जाने पाए।”
16 ೧೬ ಅನಂತರ ಯೇಹುವು ರಥದಲ್ಲಿ ಕುಳಿತು ಇಜ್ರೇಲಿಗೆ ಹೋಗುವುದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನು ಅವನನ್ನು ನೋಡುವುದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದನು.
१६तब येहू रथ पर चढ़कर, यिज्रेल को चला जहाँ योराम पड़ा हुआ था; और यहूदा का राजा अहज्याह योराम के देखने को वहाँ आया था।
17 ೧೭ ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರರು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಬರುವುದು ಕಾಣಿಸುತ್ತದೆ” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ, “ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಿದ್ದಾರೊ? ಎಂದು ಕೇಳುವುದಕ್ಕಾಗಿ ಕಳುಹಿಸು” ಎಂಬುದಾಗಿ ಆಜ್ಞಾಪಿಸಿದನು.
१७यिज्रेल के गुम्मट पर, जो पहरुआ खड़ा था, उसने येहू के संग आते हुए दल को देखकर कहा, “मुझे एक दल दिखता है;” योराम ने कहा, “एक सवार को बुलाकर उन लोगों से मिलने को भेज और वह उनसे पूछे, ‘क्या कुशल है?’”
18 ೧೮ ರಾಹುತನು ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕು ನೀನು ನನ್ನ ಹಿಂದೆ ಬಾ” ಎಂದು ಹೇಳಿದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ” ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು.
१८तब एक सवार उससे मिलने को गया, और उससे कहा, “राजा पूछता है, ‘क्या कुशल है?’” येहू ने कहा, “कुशल से तेरा क्या काम? हटकर मेरे पीछे चल।” तब पहरुए ने कहा, “वह दूत उनके पास पहुँचा तो था, परन्तु लौटकर नहीं आया।”
19 ೧೯ ಅವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕಾಗಿದೆ ನೀನು ನನ್ನ ಹಿಂದೆ ಬಾ” ಎಂದನು.
१९तब उसने दूसरा सवार भेजा, और उसने उनके पास पहुँचकर कहा, “राजा पूछता है, ‘क्या कुशल है?’” येहू ने कहा, “कुशल से तेरा क्या काम? हटकर मेरे पीछे चल।”
20 ೨೦ ಕಾವಲುಗಾರನು ತಿರುಗಿ ಅರಸನಿಗೆ, “ಎರಡನೆಯವನೂ ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚು ಹಿಡಿದವನಂತೆ ಓಡಿಸುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವೇ ಇರಬೇಕು” ಎಂದು ಹೇಳಿದನು.
२०तब पहरुए ने कहा, “वह भी उनके पास पहुँचा तो था, परन्तु लौटकर नहीं आया। हाँकना निमशी के पोते येहू का सा है; वह तो पागलों के समान हाँकता है।”
21 ೨೧ ಯೋರಾಮನು ರಥವನ್ನು ಸಿದ್ಧಮಾಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಸಿದ್ಧಮಾಡಿದರು. ಆಗ ಇಸ್ರಾಯೇಲರ ಅರಸನಾದ ಯೋರಾಮನು ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು ಯೇಹುವನ್ನು ಎದುರುಗೊಳ್ಳುವುಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
२१योराम ने कहा, “मेरा रथ जुतवा।” जब उसका रथ जुत गया, तब इस्राएल का राजा योराम और यहूदा का राजा अहज्याह, दोनों अपने-अपने रथ पर चढ़कर निकल गए, और येहू से मिलने को बाहर जाकर यिज्रेल नाबोत की भूमि में उससे भेंट की।
22 ೨೨ ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.
२२येहू को देखते ही योराम ने पूछा, “हे येहू क्या कुशल है,” येहू ने उत्तर दिया, “जब तक तेरी माता ईजेबेल छिनालपन और टोना करती रहे, तब तक कुशल कहाँ?”
23 ೨೩ ಕೂಡಲೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ, “ಅಹಜ್ಯನೇ, ಇದು ಒಳಸಂಚು” ಎಂದು ಹೇಳಿ ಓಡಿಹೋದನು.
२३तब योराम रास फेर के, और अहज्याह से यह कहकर भागा, “हे अहज्याह विश्वासघात है, भाग चल।”
24 ೨೪ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು. ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿ ರಥದಲ್ಲಿ ಬಿದ್ದನು.
२४तब येहू ने धनुष को कान तक खींचकर योराम के कंधों के बीच ऐसा तीर मारा, कि वह उसका हृदय फोड़कर निकल गया, और वह अपने रथ में झुककर गिर पड़ा।
25 ೨೫ ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಬಿಸಾಡು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ, ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ, ಯೆಹೋವನು ಈ ಪ್ರವಾದನೆಯನ್ನು ಅವನ ವಿರುದ್ಧ ಹೇಳಿದ್ದನು:
२५तब येहू ने बिदकर नामक अपने एक सरदार से कहा, “उसे उठाकर यिज्रेली नाबोत की भूमि में फेंक दे; स्मरण तो कर, कि जब मैं और तू, हम दोनों एक संग सवार होकर उसके पिता अहाब के पीछे-पीछे चल रहे थे तब यहोवा ने उससे यह भारी वचन कहलवाया था,
26 ೨೬ ಯೆಹೋವನು ಅಹಾಬನಿಗೆ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ, ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಬಿಸಾಡು” ಎಂದು ಹೇಳಿದನು.
२६‘यहोवा की यह वाणी है, कि नाबोत और उसके पुत्रों का जो खून हुआ, उसे मैंने देखा है, और यहोवा की यह वाणी है, कि मैं उसी भूमि में तुझे बदला दूँगा।’ तो अब यहोवा के उस वचन के अनुसार इसे उठाकर उसी भूमि में फेंक दे।”
27 ೨೭ ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.
२७यह देखकर यहूदा का राजा अहज्याह बारी के भवन के मार्ग से भाग चला। और येहू ने उसका पीछा करके कहा, “उसे भी रथ ही पर मारो;” तो वह भी यिबलाम के पास की गूर की चढ़ाई पर मारा गया, और मगिद्दो तक भागकर मर गया।
28 ೨೮ ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಯೆರೂಸಲೇಮಿನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
२८तब उसके कर्मचारियों ने उसे रथ पर यरूशलेम को पहुँचाकर दाऊदपुर में उसके पुरखाओं के बीच मिट्टी दी।
29 ೨೯ ಅಹಜ್ಯನು ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಯೆಹೂದ್ಯರಿಗೆ ಅರಸನಾಗಿದ್ದನು.
२९अहज्याह तो अहाब के पुत्र योराम के राज्य के ग्यारहवें वर्ष में यहूदा पर राज्य करने लगा था।
30 ೩೦ ಅನಂತರ ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತನ್ನ ತಲೆಯನ್ನು ನಯವಾಗಿ ಬಾಚಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ಕಿಟಕಿಯಿಂದ ಇಣುಕಿ ನೋಡಿದಳು.
३०जब येहू यिज्रेल को आया, तब ईजेबेल यह सुन अपनी आँखों में सुरमा लगा, अपना सिर संवारकर, खिड़की में से झाँकने लगी।
31 ೩೧ ಅನಂತರ ಅರಮನೆಯ ಬಾಗಿಲಿನಿಂದ ಪ್ರವೇಶಮಾಡಿದ ಯೇಹುವನ್ನು ಕಂಡು ಅವನಿಗೆ, “ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವೋ? ಕ್ಷೇಮವೋ?” ಎಂದು ಕೇಳಿದಳು.
३१जब येहू फाटक में होकर आ रहा था तब उसने कहा, “हे अपने स्वामी के घात करनेवाले जिम्री, क्या कुशल है?”
32 ೩೨ ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರಿದ್ದಾರೆ?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು, ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.
३२तब उसने खिड़की की ओर मुँह उठाकर पूछा, “मेरी ओर कौन है? कौन?” इस पर दो तीन खोजों ने उसकी ओर झाँका।
33 ೩೩ ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ” ಎಂದು ಆಜ್ಞಾಪಿಸಲು ಅವರು ಆಕೆಯನ್ನು ಕೆಳಗೆ ದೊಬ್ಬಿಬಿಟ್ಟರು. ಆಕೆಯ ರಕ್ತವು ಗೋಡೆಗಳಿಗೂ, ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿದು ಹಾಕಿದನು.
३३तब उसने कहा, “उसे नीचे गिरा दो।” अतः उन्होंने उसको नीचे गिरा दिया, और उसके लहू के कुछ छींटे दीवार पर और कुछ घोड़ों पर पड़े, और उन्होंने उसको पाँव से लताड़ दिया।
34 ೩೪ ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ” ಎಂದು ಆಜ್ಞಾಪಿಸಿದನು.
३४तब वह भीतर जाकर खाने-पीने लगा; और कहा, “जाओ उस श्रापित स्त्री को देख लो, और उसे मिट्टी दो; वह तो राजा की बेटी है।”
35 ೩೫ ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳ ಹೊರತಾಗಿ ಬೇರೇನೂ ಸಿಕ್ಕಲಿಲ್ಲ.
३५जब वे उसे मिट्टी देने गए, तब उसकी खोपड़ी पाँवों और हथेलियों को छोड़कर उसका और कुछ न पाया।
36 ೩೬ ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ, “ಯೆಹೋವನು, ತನ್ನ ದಾಸನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು, ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು.
३६अतः उन्होंने लौटकर उससे कह दिया; तब उसने कहा, “यह यहोवा का वह वचन है, जो उसने अपने दास तिशबी एलिय्याह से कहलवाया था, कि ईजेबेल का माँस यिज्रेल की भूमि में कुत्ते खाएँगे।
37 ೩೭ ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು” ಎಂದನು.
३७और ईजेबेल का शव यिज्रेल की भूमि पर खाद के समान पड़ा रहेगा, यहाँ तक कि कोई न कहेगा, ‘यह ईजेबेल है।’”