< ಪೇತ್ರನು ಬರೆದ ಎರಡನೆಯ ಪತ್ರಿಕೆ 1 >
1 ೧ ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,
예수 그리스도의 종과 사도인 시몬 베드로는 우리 하나님과 구주 예수 그리스도의 의를 힘입어 동일하게 보배로운 믿음을 우리와 같이 받은 자들에게 편지하노니
2 ೨ ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ ಪರಿಜ್ಞಾನದಲ್ಲಿ ನಿಮಗೆ ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ.
하나님과 우리 주 예수를 앎으로 은혜와 평강이 너희에게 더욱 많을지어다
3 ೩ ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.
그의 신기한 능력으로 생명과 경건에 속한 모든 것을 우리에게 주셨으니 이는 자기의 영광과 덕으로써 우리를 부르신 자를 앎으로 말미암음이라
4 ೪ ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.
이로써 그 보배롭고 지극히 큰 약속을 우리에게 주사 이 약속으로 말미암아 너희로 정욕을 인하여 세상에서 썩어질 것을 피하여 신의 성품에 참예하는 자가 되게 하려 하셨으니
5 ೫ ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ,
이러므로 너희가 더욱 힘써 너희 믿음에 덕을, 덕에 지식을,
6 ೬ ಜ್ಞಾನಕ್ಕೆ ದಮೆಯನ್ನೂ, ದಮೆಗೆ ತಾಳ್ಮೆಯನ್ನೂ,
지식에 절제를 절제에, 인내를, 인내에 경건을,
7 ೭ ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.
경건에 형제 우애를, 형제 우애에 사랑을 공급하라
8 ೮ ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ, ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ.
이런 것이 너희에게 있어 흡족한즉 너희로 우리 주 예수 그리스도를 알기에 게으르지 않고 열매 없는 자가 되지 않게 하려니와
9 ೯ ಇವುಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.
이런 것이 없는 자는 소경이라 원시치 못하고 그의 옛 죄를 깨끗케 하심을 잊었느니라
10 ೧೦ ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.
그러므로 형제들아! 더욱 힘써 너희 부르심과 택하심을 굳게 하라 너희가 이것을 행한즉 언제든지 실족지 아니하리라
11 ೧೧ ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು. (aiōnios )
이같이 하면 우리 주 곧 구주 예수 그리스도의 영원한 나라에 들어감을 넉넉히 너희에게 주시리라 (aiōnios )
12 ೧೨ ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು.
이러므로 너희가 이것을 알고 이미 있는 진리에 섰으나 내가 항상 너희로 생각하게 하려 하노라
13 ೧೩ ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ.
내가 이 장막에 있을 동안에 너희를 일깨워 생각하게 함이 옳은 줄로 여기노니
14 ೧೪ ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.
이는 우리 주 예수 그리스도께서 내게 지시하신 것같이 나도 이 장막을 벗어날 것이 임박한 줄을 앎이라
15 ೧೫ ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತಿವಹಿಸುವೆನು.
내가 힘써 너희로 하여금 나의 떠난 후에라도 필요할 때는 이런 것을 생각나게 하려 하노라
16 ೧೬ ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.
우리 주 예수 그리스도의 능력과 강림하심을 너희에게 알게 한 것이 공교히 만든 이야기를 좇은 것이 아니요 우리는 그의 크신 위엄을 친히 본 자라
17 ೧೭ ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ.
지극히 큰 영광 중에서 이러한 소리가 그에게 나기를 이는 내 사랑하는 아들이요 내 기뻐하는 자라 하실 때에 저가 하나님 아버지께 존귀와 영광을 받으셨느니라
18 ೧೮ ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ವಾಣಿಯನ್ನು ನಾವು ಕೇಳಿಸಿಕೊಂಡೆವು.
이 소리는 우리가 저와 함께 거룩한 산에 있을 때에 하늘로서 나옴을 들은 것이라
19 ೧೯ ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.
또 우리에게 더 확실한 예언이 있어 어두운 데 비취는 등불과 같으니 날이 새어 샛별이 너희 마음에 떠오르기까지 너희가 이것을 주의하는 것이 가하니라
20 ೨೦ ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ.
먼저 알 것은 경의 모든 예언은 사사로이 풀 것이 아니니
21 ೨೧ ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.
예언은 언제든지 사람의 뜻으로 낸 것이 아니요 오직 성령의 감동하심을 입은 사람들이 하나님께 받아 말한 것임이니라