< ಪೇತ್ರನು ಬರೆದ ಎರಡನೆಯ ಪತ್ರಿಕೆ 3 >

1 ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ.
Yanzu, ina rubata maku, kaunatattu, wannan wasika ta biyu domin in tunashe ku, in kuma zuga tunaninku na gaskiya,
2 ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.
don ku tuna da kalmomin da annabawa tsarkaka suka fada a da, kuma da umurnin Ubangijinmu da mai ceto da aka bayar ta wurin manzaninku.
3 ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,
Ku san wannan da farko, cewa masu ba'a za su zo a kwanakin karshe. Za su yi ba'a kuma su ci gaba bisa ga sha'awowinsu.
4 “ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?” ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು.
Za su ce, “Ina alkawarin dawowarsa? Tun lokacin da kakaninmu suka mutu, dukkan abubuwa sun kasance yadda suke, tun farkon halitta.”
5 ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ.
Da gangan suka manta cewa sama da kasa sun kasance daga ruwa, kuma ta wurin ruwa, da dadewa ta wurin umarnin Allah,
6 ಆ ನೀರಿನಿಂದಲೇ ಅಂದಿನ ಲೋಕವು ಜಲಪ್ರಳಯದಲ್ಲಿ ನಾಶವಾಯಿತು.
kuma cewa ta wurin wadannan abubuwa duniyar wancan zamani ta halaka, da ambaliyar ruwan tsufana.
7 ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.
Amma sama da kasa na yanzu, an tanada su domin wuta ta wurin wannan umarnin. An tanada su domin ranar shari'a da halakar marassa ibada.
8 ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.
Kada ku manta da wanan, kaunatattu, cewa rana daya a gun Allah kamar shekaru dubu ne, kuma shekaru dubu kamar rana daya suke.
9 ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.
Ubangiji baya jinkiri game da alkawaransa kamar yadda wadansu ke ganin jinkiri. Maimakon haka, yana hakuri da ku. Ba ya so ko dayanku ya hallaka, amma kowanenku ya kai ga tuba.
10 ೧೦ ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
Duk da haka, ranar Ubangiji za ta zo kamar barawo. Sammai za su shude da kara mai karfi. Wuta zata kone komai da komai, kuma duniya da dukkan ayyukan da ke cikinta zasu bayyanu.
11 ೧೧ ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.
Da shike dukkan wadanan abubuwa za a hallaka su haka, wadanne irin mutane yakamata ku zama? Ya kamata kuyi rayuwar tsarki da ta ibada.
12 ೧೨ ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.
Ku zauna cikin bege da kuma hanzarta zuwan ranar Allah. A ranan nan, za a hallaka sammai da wuta, kuma dukkan komai da komai zai narke cikin zafi mai tsanani.
13 ೧೩ ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.
Amma bisa ga alkawarinsa, muna jiran sabuwar sama da sabuwar duniya, inda adalci zai kasance.
14 ೧೪ ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.
Saboda haka, kaunatattu, tun da kuna da begen wadannan abubuwa, ku yi iyakacin kokarinku a same ku marassa tabo da marasa aibu a gabansa, cikin salama.
15 ೧೫ ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.
Kuma, ku dauki hakurin Ubangiji domin ceto ne, kamar yadda kaunataccen danuwanmu Bulus ya rubuta maku bisa ga hikima da aka ba shi.
16 ೧೬ ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.
Bulus yayi magana akan wadanan abubuwa cikin dukkan wasikunsa, a ciki akwai abubuwa da suke da wuyar ganewa. Jahilai da mutane marassa natsuwa sukan juya ma'anarsu, kamar yadda suke yi wa sauran nassoshi, don hallakar kansu.
17 ೧೭ ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.
Saboda haka, kaunatattu, tun da kun san wadannan abubuwa, ku kula da kanku kada a badda ku ta wurin rudun mutanen da ba su bin doka, har ku rasa amincinku.
18 ೧೮ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್. (aiōn g165)
Amma ku yi girma a cikin alheri da sanin Ubangijinmu da mai ceto Yesu Almasihu. Bari daukaka ta tabbata a gare shi yanzu da har abada. Amin. (aiōn g165)

< ಪೇತ್ರನು ಬರೆದ ಎರಡನೆಯ ಪತ್ರಿಕೆ 3 >

The Great Flood
The Great Flood