< ಸಮುವೇಲನು - ದ್ವಿತೀಯ ಭಾಗ 10 >

1 ಇದಾದ ನಂತರ ಅಮ್ಮೋನಿಯರ ಅರಸನು ಸತ್ತನು. ಅವನ ನಂತರ ಅವನ ಮಗನಾದ ಹಾನೂನನು ಅರಸನಾದನು.
وَكَانَ بَعْدَ ذَلِكَ أَنَّ مَلِكَ بَنِي عَمُّونَ مَاتَ، وَمَلَكَ حَانُونُ ٱبْنُهُ عِوَضًا عَنْهُ.١
2 ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ, ನಾನು ಅವನ ಮಗ ಹಾನೂನನಿಗೂ ದಯೆತೋರಿಸುವೆನು” ಎಂದುಕೊಂಡು, ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ತನ್ನ ಪ್ರತಿನಿಧಿಗಳನ್ನು ಕಳುಹಿಸಿದನು. ದಾವೀದನ ಪ್ರತಿನಿಧಿಗಳು ಅಮ್ಮೋನಿಯರ ದೇಶಕ್ಕೆ ಬಂದರು.
فَقَالَ دَاوُدُ: «أَصْنَعُ مَعْرُوفًا مَعَ حَانُونَ بْنِ نَاحَاشَ كَمَا صَنَعَ أَبُوهُ مَعِي مَعْرُوفًا». فَأَرْسَلَ دَاوُدُ بِيَدِ عَبِيدِهِ يُعَزِّيهِ عَنْ أَبِيهِ. فَجَاءَ عَبِيدُ دَاوُدَ إِلَى أَرْضِ بَنِي عَمُّونَ.٢
3 ಅಮ್ಮೋನಿಯರ ರಾಜ ಪ್ರತಿನಿಧಿಗಳು ತಮ್ಮ ಒಡೆಯನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನು ಎಂದು ನೀನು ತಿಳಿದುಕೊಂಡಿರಬಹುದೋ? ಅವರು ಪಟ್ಟಣವನ್ನು ಸಂಚರಿಸಿ ನೋಡಿ, ಸ್ವಾಧಿನಮಾಡಿಕೊಳ್ಳಬೇಕೆಂದು ತನ್ನ ಪ್ರತಿನಿಧಿಗಳನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
فَقَالَ رُؤَسَاءُ بَنِي عَمُّونَ لِحَانُونَ سَيِّدِهِمْ: «هَلْ يُكْرِمُ دَاوُدُ أَبَاكَ فِي عَيْنَيْكَ حَتَّى أَرْسَلَ إِلَيْكَ مُعَزِّينَ؟ أَلَيْسَ لِأَجْلِ فَحْصِ ٱلْمَدِينَةِ وَتَجَسُّسِهَا وَقَلْبِهَا، أَرْسَلَ دَاوُدُ عَبِيدَهُ إِلَيْكَ؟»٣
4 ಇದರಿಂದ ಹಾನೂನನು ದಾವೀದನ ಪ್ರತಿನಿಧಿಗಳನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಸೊಂಟದಿಂದ ಕೆಳಗೆ ಅವರ ನಗ್ನತೆಯು ಕಾಣುವಂತೆ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.
فَأَخَذَ حَانُونُ عَبِيدَ دَاوُدَ وَحَلَقَ أَنْصَافَ لِحَاهُمْ، وَقَصَّ ثِيَابَهُمْ مِنَ ٱلْوَسَطِ إِلَى أَسْتَاهِهِمْ، ثُمَّ أَطْلَقَهُمْ.٤
5 ಅವರು ಈ ವರ್ತಮಾನವನ್ನು ದಾವೀದನಿಗೆ ಹೇಳಿ ಕಳುಹಿಸಿದಾಗ ಅವನು ಬಹಳವಾಗಿ ಅಪಮಾನ ಹೊಂದಿದ ಅವರಿಗೆ “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋ ಪಟ್ಟಣದಲ್ಲಿದ್ದು ಅನಂತರ ಹಿಂತಿರುಗಿ ಬನ್ನಿರಿ” ಎಂದು ತನ್ನ ಸೇವಕರ ಮೂಲಕ ಹೇಳಿಕಳುಹಿಸಿದ.
وَلَمَّا أَخْبَرُوا دَاوُدَ أَرْسَلَ لِلِقَائِهِمْ، لِأَنَّ ٱلرِّجَالَ كَانُوا خَجِلِينَ جِدًّا. وَقَالَ ٱلْمَلِكُ: «أَقِيمُوا فِي أَرِيحَا حَتَّى تَنْبُتَ لِحَاكُمْ ثُمَّ ٱرْجِعُوا».٥
6 ತಾವು ದಾವೀದನ ಕೋಪಕ್ಕೂ, ಅಸಮಾಧಾನಕ್ಕೂ ಗುರಿಯಾಗಿದ್ದೇವೆ ಎಂದು ತಿಳಿದು ಅಮ್ಮೋನಿಯರು ಬೇತ್ ರೆಹೋಬ್ ಮತ್ತು ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಕಾಲಾಳುಗಳನ್ನೂ, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಮತ್ತು ಟೋಬ್ ದೇಶದಿಂದ ಹನ್ನೆರಡು ಸಾವಿರ ದಂಡಾಳುಗಳನ್ನೂ ಹಣಕೊಟ್ಟು ತರಿಸಿದನು
وَلَمَّا رَأَى بَنُو عَمُّونَ أَنَّهُمْ قَدْ أَنْتَنُوا عِنْدَ دَاوُدَ، أَرْسَلَ بَنُو عَمُّونَ وَٱسْتَأْجَرُوا أَرَامَ بَيْتِ رَحُوبَ وَأَرَامَ صُوبَا، عِشْرِينَ أَلْفَ رَاجِلٍ، وَمِنْ مَلِكِ مَعْكَةَ أَلْفَ رَجُلٍ، وَرِجَالَ طُوبَ ٱثْنَيْ عَشَرَ أَلْفَ رَجُلٍ.٦
7 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು.
فَلَمَّا سَمِعَ دَاوُدُ أَرْسَلَ يُوآبَ وَكُلَّ جَيْشِ ٱلْجَبَابِرَةِ.٧
8 ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹರಚಿಸಿದರು. ಚೋಬ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮತ್ತು ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.
وَخَرَجَ بَنُو عَمُّونَ وَٱصْطَفُّوا لِلْحَرْبِ عْنْدَ مَدْخَلِ ٱلْبَابِ، وَكَانَ أَرَامُ صُوبَا وَرَحُوبُ وَرِجَالُ طُوبَ وَمَعْكَةَ وَحْدَهُمْ فِي ٱلْحَقْلِ.٨
9 ಯೋವಾಬನು ತನ್ನ ಮುಂದೆಯೂ, ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.
فَلَمَّا رَأَى يُوآبُ أَنَّ مُقَدَّمَةَ ٱلْحَرْبِ كَانَتْ نَحْوَهُ مِنْ قُدَّامٍ وَمِنْ وَرَاءٍ، ٱخْتَارَ مِنْ جَمِيعِ مُنْتَخَبِي إِسْرَائِيلَ وَصَفَّهُمْ لِلِقَاءِ أَرَامَ٩
10 ೧೦ ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟನು.
وَسَلَّمَ بَقِيَّةَ ٱلشَّعْبِ لِيَدِ أَخِيهِ أَبِيشَايَ، فَصَفَّهُمْ لِلِقَاءِ بَنِي عَمُّونَ.١٠
11 ೧೧ ಯೋವಾಬನು ಅವನಿಗೆ, “ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ. ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.
وَقَالَ: «إِنْ قَوِيَ أَرَامُ عَلَيَّ تَكُونُ لِي مُنْجِدًا، وَإِنْ قَوِيَ عَلَيْكَ بَنُو عَمُّونَ أَذْهَبُ لِنَجْدَتِكَ.١١
12 ೧೨ ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ಮತ್ತು ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಶೌರ್ಯವನ್ನು, ಪೌರುಷವನ್ನು ತೋರಿಸೋಣ. ಯೆಹೋವನು ತನ್ನ ಚಿತ್ತದಂತೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.
تَجَلَّدْ وَلْنَتَشَدَّدْ مِنْ أَجْلِ شَعْبِنَا وَمِنْ أَجْلِ مُدُنِ إِلَهِنَا، وَٱلرَّبُّ يَفْعَلُ مَا يَحْسُنُ فِي عَيْنَيْهِ».١٢
13 ೧೩ ಯೋವಾಬನು ಅವನ ಜನರು ಅರಾಮ್ಯರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.
فَتَقَدَّمَ يُوآبُ وَٱلشَّعْبُ ٱلَّذِينَ مَعَهُ لِمُحَارَبَةِ أَرَامَ فَهَرَبُوا مِنْ أَمَامِهِ.١٣
14 ೧೪ ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ, ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಅಮ್ಮೋನಿಯರೊಡನೆ ಯುದ್ಧ ಮಾಡುವುದನ್ನು ಬಿಟ್ಟು ಯೆರೂಸಲೇಮಿಗೆ ಹೋದನು.
وَلَمَّا رَأَى بَنُو عَمُّونَ أَنَّهُ قَدْ هَرَبَ أَرَامُ، هَرَبُوا مِنْ أَمَامِ أَبِيشَايَ وَدَخَلُوا ٱلْمَدِينَةَ. فَرَجَعَ يُوآبُ عَنْ بَنِي عَمُّونَ وَأَتَى إِلَى أُورُشَلِيمَ.١٤
15 ೧೫ ಅರಾಮ್ಯರಿಗೆ ತಮ್ಮ ಸೈನ್ಯವು ಇಸ್ರಾಯೇಲ್ಯರಿಂದ ಅಪಜಯಹೊಂದಿತೆಂದು ಗೊತ್ತಾದಾಗ ಅವರೆಲ್ಲರೂ ಒಟ್ಟಾಗಿ ಕೂಡಿಬಂದರು.
وَلَمَّا رَأَى أَرَامُ أَنَّهُمْ قَدِ ٱنْكَسَرُوا أَمَامَ إِسْرَائِيلَ، ٱجْتَمَعُوا مَعًا.١٥
16 ೧೬ ಹದದೆಜೆರನು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಬರಲು ಹೇಳಿ ಕಳುಹಿಸಿದನು. ಅವರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು.
وَأَرْسَلَ هَدَرُ عَزَرَ فَأَبْرَزَ أَرَامَ ٱلَّذِي فِي عَبْرِ ٱلنَّهْرِ، فَأَتَوْا إِلَى حِيلَامَ وَأَمَامَهُمْ شُوبَكُ رَئِيسُ جَيْشِ هَدَرِ عَزَرَ.١٦
17 ೧೭ ಈ ಸುದ್ದಿಯು ದಾವೀದನಿಗೆ ತಲುಪಿದಾಗ ಅವನು ಇಸ್ರಾಯೇಲರೆಲ್ಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ವ್ಯೂಹರಚಿಸಿ ದಾವೀದನೊಡನೆ ಯುದ್ಧಕ್ಕೆ ನಿಂತಾಗ,
وَلَمَّا أُخْبِرَ دَاوُدُ، جَمَعَ كُلَّ إِسْرَائِيلَ وَعَبَرَ ٱلْأُرْدُنَّ وَجَاءَ إِلَى حِيلَامَ، فَٱصْطَفَّ أَرَامُ لِلِقَاءِ دَاوُدَ وَحَارَبُوهُ.١٧
18 ೧೮ ಅರಾಮ್ಯರು ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುನೂರು ರಥ ಸಾರಥಿಗಳನ್ನು ನಾಶ ಮಾಡಿ, ನಲ್ವತ್ತು ಸಾವಿರ ಮಂದಿ ರಾಹುತರನ್ನು ಹತ್ಯೆಮಾಡಿದನು. ಸೇನಾಧಿಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.
وَهَرَبَ أَرَامُ مِنْ أَمَامِ إِسْرَائِيلَ، وَقَتَلَ دَاوُدُ مِنْ أَرَامَ سَبْعَ مِئَةِ مَرْكَبَةٍ وَأَرْبَعِينَ أَلْفَ فَارِسٍ، وَضَرَبَ شُوبَكَ رَئِيسَ جَيْشِهِ فَمَاتَ هُنَاكَ.١٨
19 ೧೯ ಹದದೆಜೆರನಿಗೆ ದಾಸರಾಗಿದ್ದ ಅರಸರೆಲ್ಲರೂ ಇಸ್ರಾಯೇಲ್ಯರಿಂದ ತಾವು ಸೋತುಹೋದೆವೆಂದು ತಿಳಿದು, ಅವರೊಡನೆ ಒಪ್ಪಂದ ಮಾಡಿಕೊಂಡು, ಅವರಿಗೆ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಧೈರ್ಯದಿಂದ ಮುಂದೆ ಬರಲಿಲ್ಲ.
وَلَمَّا رَأَى جَمِيعُ ٱلْمُلُوكِ، عَبِيدُ هَدَرِ عَزَرَ أَنَّهُمُ ٱنْكَسَرُوا أَمَامَ إِسْرَائِيلَ، صَالَحُوا إِسْرَائِيلَ وَٱسْتُعْبِدُوا لَهُمْ، وَخَافَ أَرَامُ أَنْ يُنْجِدُوا بَنِي عَمُّونَ بَعْدُ.١٩

< ಸಮುವೇಲನು - ದ್ವಿತೀಯ ಭಾಗ 10 >