< ಸಮುವೇಲನು - ದ್ವಿತೀಯ ಭಾಗ 11 >

1 ರಾಜರೆಲ್ಲರು ಸಾಮಾನ್ಯವಾಗಿ ವಸಂತಕಾಲದ ಪ್ರಾರಂಭದಲ್ಲಿ ಯುದ್ಧಕ್ಕೆ ಹೊರಡುವ ಸಮಯವನ್ನು ಗೊತ್ತುಮಾಡುತ್ತಿದ್ದರು. ದಾವೀದನು ಯೋವಾಬನನ್ನೂ, ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ನಾಶ ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.
וַיְהִי֩ לִתְשׁוּבַ֨ת הַשָּׁנָ֜ה לְעֵ֣ת ׀ צֵ֣את הַמַּלְאֿכִ֗ים וַיִּשְׁלַ֣ח דָּוִ֡ד אֶת־יוֹאָב֩ וְאֶת־עֲבָדָ֨יו עִמּ֜וֹ וְאֶת־כָּל־יִשְׂרָאֵ֗ל וַיַּשְׁחִ֙תוּ֙ אֶת־בְּנֵ֣י עַמּ֔וֹן וַיָּצֻ֖רוּ עַל־רַבָּ֑ה וְדָוִ֖ד יוֹשֵׁ֥ב בִּירוּשָׁלִָֽם׃ ס
2 ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.
וַיְהִ֣י ׀ לְעֵ֣ת הָעֶ֗רֶב וַיָּ֨קָם דָּוִ֜ד מֵעַ֤ל מִשְׁכָּבוֹ֙ וַיִּתְהַלֵּךְ֙ עַל־גַּ֣ג בֵּית־הַמֶּ֔לֶךְ וַיַּ֥רְא אִשָּׁ֛ה רֹחֶ֖צֶת מֵעַ֣ל הַגָּ֑ג וְהָ֣אִשָּׁ֔ה טוֹבַ֥ת מַרְאֶ֖ה מְאֹֽד׃
3 ಕೂಡಲೆ ದಾವೀದನು ಒಬ್ಬನನ್ನು ಕರೆದು, “ಆ ಸ್ತ್ರೀ ಯಾರು?” ಎಂದು ವಿಚಾರಿಸಲು ಅವನು, “ಆಕೆಯು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಆಗಿರುವ ಬತ್ಷೆಬೆ ಅಲ್ಲವೇ?” ಎಂದು ಉತ್ತರ ಕೊಟ್ಟನು.
וַיִּשְׁלַ֣ח דָּוִ֔ד וַיִּדְרֹ֖שׁ לָֽאִשָּׁ֑ה וַיֹּ֗אמֶר הֲלוֹא־זֹאת֙ בַּת־שֶׁ֣בַע בַּת־אֱלִיעָ֔ם אֵ֖שֶׁת אוּרִיָּ֥ה הַחִתִּֽי׃
4 ಆಗ ದಾವೀದನು ಆಗ ತಾನೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ಕರೆದು ತರುವಂತೆ ದೂತರನ್ನು ಕಳುಹಿಸಿದನು. ಆಕೆಯು ಬರಲು ಅವನು ಆಕೆಯನ್ನು ಸಂಗಮಿಸಿದನು. ಅನಂತರ ಆಕೆಯು ತನ್ನ ಮನೆಗೆ ಹೋದಳು.
וַיִּשְׁלַח֩ דָּוִ֨ד מַלְאָכִ֜ים וַיִּקָּחֶ֗הָ וַתָּב֤וֹא אֵלָיו֙ וַיִּשְׁכַּ֣ב עִמָּ֔הּ וְהִ֥יא מִתְקַדֶּ֖שֶׁת מִטֻּמְאָתָ֑הּ וַתָּ֖שָׁב אֶל־בֵּיתָֽהּ׃
5 ಆಕೆಯು ತಾನು ಗರ್ಭಧರಿಸಿದ್ದು ಗೊತ್ತಾದಾಗ ದಾವೀದನಿಗೆ ವರ್ತಮಾನ ಕಳುಹಿಸಿದಳು.
וַתַּ֖הַר הָֽאִשָּׁ֑ה וַתִּשְׁלַח֙ וַתַּגֵּ֣ד לְדָוִ֔ד וַתֹּ֖אמֶר הָרָ֥ה אָנֹֽכִי׃
6 ಆಗ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿ ಕಳುಹಿಸಿದನು. ಅವನು ಊರೀಯನನ್ನು ಕಳುಹಿಸಿದನು.
וַיִּשְׁלַ֤ח דָּוִד֙ אֶל־יוֹאָ֔ב שְׁלַ֣ח אֵלַ֔י אֶת־אֽוּרִיָּ֖ה הַחִתִּ֑י וַיִּשְׁלַ֥ח יוֹאָ֛ב אֶת־אֽוּרִיָּ֖ה אֶל־דָּוִֽד׃
7 ಊರೀಯನು ಬಂದಾಗ ದಾವೀದನು, “ಯೋವಾಬನೂ ಮತ್ತು ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆದಿದೆ?” ಎಂದು ವಿಚಾರಿಸಿದ, ನಂತರ
וַיָּבֹ֥א אוּרִיָּ֖ה אֵלָ֑יו וַיִּשְׁאַ֣ל דָּוִ֗ד לִשְׁל֤וֹם יוֹאָב֙ וְלִשְׁל֣וֹם הָעָ֔ם וְלִשְׁל֖וֹם הַמִּלְחָמָֽה׃
8 ಅವನಿಗೆ, “ಮನೆಗೆ ಹೋಗಿ ಕೈಕಾಲು ತೊಳೆದುಕೋ” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೆ ಅರಸನ ಭೋಜನ ಪದಾರ್ಥಗಳು ಹೋದವು.
וַיֹּ֤אמֶר דָּוִד֙ לְא֣וּרִיָּ֔ה רֵ֥ד לְבֵיתְךָ֖ וּרְחַ֣ץ רַגְלֶ֑יךָ וַיֵּצֵ֤א אֽוּרִיָּה֙ מִבֵּ֣ית הַמֶּ֔לֶךְ וַתֵּצֵ֥א אַחֲרָ֖יו מַשְׂאַ֥ת הַמֶּֽלֶךְ׃
9 ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು.
וַיִּשְׁכַּ֣ב אוּרִיָּ֗ה פֶּ֚תַח בֵּ֣ית הַמֶּ֔לֶךְ אֵ֖ת כָּל־עַבְדֵ֣י אֲדֹנָ֑יו וְלֹ֥א יָרַ֖ד אֶל־בֵּיתֽוֹ׃
10 ೧೦ ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನವು ದಾವೀದನಿಗೆ ತಿಳಿದಾಗ ಅವನು ಊರೀಯನಿಗೆ, “ನೀನು ಪ್ರಯಾಣಮಾಡಿಕೊಂಡು ಬಂದಿಯಲ್ಲಾ, ಯಾಕೆ ಮನೆಗೆ ಹೋಗಲಿಲ್ಲ?” ಅಂದನು.
וַיַּגִּ֤דוּ לְדָוִד֙ לֵאמֹ֔ר לֹֽא־יָרַ֥ד אוּרִיָּ֖ה אֶל־בֵּית֑וֹ וַיֹּ֨אמֶר דָּוִ֜ד אֶל־אוּרִיָּ֗ה הֲל֤וֹא מִדֶּ֙רֶךְ֙ אַתָּ֣ה בָ֔א מַדּ֖וּעַ לֹֽא־יָרַ֥דְתָּ אֶל־בֵּיתֶֽךָ׃
11 ೧೧ ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ” ಎಂದು ಉತ್ತರಕೊಟ್ಟನು.
וַיֹּ֨אמֶר אוּרִיָּ֜ה אֶל־דָּוִ֗ד הָ֠אָרוֹן וְיִשְׂרָאֵ֨ל וִֽיהוּדָ֜ה יֹשְׁבִ֣ים בַּסֻּכּ֗וֹת וַאדֹנִ֨י יוֹאָ֜ב וְעַבְדֵ֤י אֲדֹנִ֨י עַל־פְּנֵ֤י הַשָּׂדֶה֙ חֹנִ֔ים וַאֲנִ֞י אָב֧וֹא אֶל־בֵּיתִ֛י לֶאֱכֹ֥ל וְלִשְׁתּ֖וֹת וְלִשְׁכַּ֣ב עִם־אִשְׁתִּ֑י חַיֶּ֙ךָ֙ וְחֵ֣י נַפְשֶׁ֔ךָ אִֽם־אֶעֱשֶׂ֖ה אֶת־הַדָּבָ֥ר הַזֶּֽה׃
12 ೧೨ ಆಗ ದಾವೀದನು ಅವನಿಗೆ, “ನೀನು ಈ ಹೊತ್ತು ಇಲ್ಲೇ ಇರು. ನಾಳೆ ನಿನ್ನನ್ನು ಕಳುಹಿಸುತ್ತೇನೆ” ಎಂದು ಆಜ್ಞಾಪಿಸಿದನು. ಊರೀಯನು ಆ ದಿನ ಯೆರೂಸಲೇಮಿನಲ್ಲೇ ಇದ್ದನು.
וַיֹּ֨אמֶר דָּוִ֜ד אֶל־אוּרִיָּ֗ה שֵׁ֥ב בָּזֶ֛ה גַּם־הַיּ֖וֹם וּמָחָ֣ר אֲשַׁלְּחֶ֑ךָּ וַיֵּ֨שֶׁב אוּרִיָּ֧ה בִירוּשָׁלִַ֛ם בַּיּ֥וֹם הַה֖וּא וּמִֽמָּחֳרָֽת׃
13 ೧೩ ಮರುದಿನ ದಾವೀದನು ಅವನನ್ನು ಅನ್ನಪಾನಗಳನ್ನೂ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ, ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿಕೊಂಡು ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.
וַיִּקְרָא־ל֣וֹ דָוִ֗ד וַיֹּ֧אכַל לְפָנָ֛יו וַיֵּ֖שְׁתְּ וַֽיְשַׁכְּרֵ֑הוּ וַיֵּצֵ֣א בָעֶ֗רֶב לִשְׁכַּ֤ב בְּמִשְׁכָּבוֹ֙ עִם־עַבְדֵ֣י אֲדֹנָ֔יו וְאֶל־בֵּית֖וֹ לֹ֥א יָרָֽד׃
14 ೧೪ ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟು ಕಳುಹಿಸಿದನು.
וַיְהִ֣י בַבֹּ֔קֶר וַיִּכְתֹּ֥ב דָּוִ֛ד סֵ֖פֶר אֶל־יוֹאָ֑ב וַיִּשְׁלַ֖ח בְּיַ֥ד אוּרִיָּֽה׃
15 ೧೫ ಅದರಲ್ಲಿ, “ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂಭಾಗದಲ್ಲಿ ನಿಲ್ಲಿಸಿ, ನೀವು ಹಿಂದಕ್ಕೆ ಸರಿದುಕೊಳ್ಳಿರಿ” ಎಂಬುದಾಗಿ ಬರೆದಿದ್ದನು.
וַיִּכְתֹּ֥ב בַּסֵּ֖פֶר לֵאמֹ֑ר הָב֣וּ אֶת־אֽוּרִיָּ֗ה אֶל־מוּל֙ פְּנֵ֤י הַמִּלְחָמָה֙ הַֽחֲזָקָ֔ה וְשַׁבְתֶּ֥ם מֵאַחֲרָ֖יו וְנִכָּ֥ה וָמֵֽת׃ ס
16 ೧೬ ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶೂರರಾದ ಶತ್ರುಸೈನಿಕರು ಎಲ್ಲಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿ ನಿಲ್ಲಿಸಿದನು.
וַיְהִ֕י בִּשְׁמ֥וֹר יוֹאָ֖ב אֶל־הָעִ֑יר וַיִּתֵּן֙ אֶת־א֣וּרִיָּ֔ה אֶל־הַמָּקוֹם֙ אֲשֶׁ֣ר יָדַ֔ע כִּ֥י אַנְשֵׁי־חַ֖יִל שָֽׁם׃
17 ೧೭ ಆ ಊರಿನ ಜನರು ಹೊರಗೆ ಬಂದು ಯೋವಾಬನೊಡನೆ ಕಾದಾಡಿದಾಗ ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನೂ ಸಹ ಸತ್ತನು.
וַיֵּ֨צְא֜וּ אַנְשֵׁ֤י הָעִיר֙ וַיִּלָּחֲמ֣וּ אֶת־יוֹאָ֔ב וַיִּפֹּ֥ל מִן־הָעָ֖ם מֵעַבְדֵ֣י דָוִ֑ד וַיָּ֕מָת גַּ֖ם אוּרִיָּ֥ה הַחִתִּֽי׃
18 ೧೮ ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು ಅವನಿಗೆ, “ನೀನು ಹೋಗಿ ದಾವೀದನಿಗೆ ಯುದ್ಧ ವರ್ತಮಾನವನ್ನೆಲ್ಲಾ ತಿಳಿಸು.
וַיִּשְׁלַ֖ח יוֹאָ֑ב וַיַּגֵּ֣ד לְדָוִ֔ד אֶת־כָּל־דִּבְרֵ֖י הַמִּלְחָמָֽה׃
19 ೧೯ ನೀನು ಯುದ್ಧ ಸಮಾಚಾರವನ್ನು ಹೇಳಿ ಮುಗಿಸಿದ ನಂತರ ಅರಸನು ಕೋಪಗೊಂಡು ನಿನ್ನನ್ನು,
וַיְצַ֥ו אֶת־הַמַּלְאָ֖ךְ לֵאמֹ֑ר כְּכַלּוֹתְךָ֗ אֵ֛ת כָּל־דִּבְרֵ֥י הַמִּלְחָמָ֖ה לְדַבֵּ֥ר אֶל־הַמֶּֽלֶךְ׃
20 ೨೦ ‘ನೀವು ಯುದ್ಧ ಮಾಡುವುದಕ್ಕಾಗಿ ಪಟ್ಟಣದ ಸಮೀಪಕ್ಕೆ ಹೋದದ್ದೇಕೆ? ಶತ್ರುಗಳು ಊರಗೋಡೆಯ ಮೇಲಣಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ?
וְהָיָ֗ה אִֽם־תַּעֲלֶה֙ חֲמַ֣ת הַמֶּ֔לֶךְ וְאָמַ֣ר לְךָ֔ מַדּ֛וּעַ נִגַּשְׁתֶּ֥ם אֶל־הָעִ֖יר לְהִלָּחֵ֑ם הֲל֣וֹא יְדַעְתֶּ֔ם אֵ֥ת אֲשֶׁר־יֹר֖וּ מֵעַ֥ל הַחוֹמָֽה׃
21 ೨೧ ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು” ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು.
מִֽי־הִכָּ֞ה אֶת־אֲבִימֶ֣לֶךְ בֶּן־יְרֻבֶּ֗שֶׁת הֲלֽוֹא־אִשָּׁ֡ה הִשְׁלִ֣יכָה עָלָיו֩ פֶּ֨לַח רֶ֜כֶב מֵעַ֤ל הַֽחוֹמָה֙ וַיָּ֣מָת בְּתֵבֵ֔ץ לָ֥מָּה נִגַּשְׁתֶּ֖ם אֶל־הַֽחוֹמָ֑ה וְאָ֣מַרְתָּ֔ גַּ֗ם עַבְדְּךָ֛ אוּרִיָּ֥ה הַחִתִּ֖י מֵֽת׃
22 ೨೨ ಆ ದೂತನು ಹೋಗಿ ಯೋವಾಬನ ಆಜ್ಞೆಯಂತೆ ದಾವೀದನಿಗೆ ತಿಳಿಸಿದ್ದೇನೆಂದರೆ,
וַיֵּ֖לֶךְ הַמַּלְאָ֑ךְ וַיָּבֹא֙ וַיַּגֵּ֣ד לְדָוִ֔ד אֵ֛ת כָּל־אֲשֶׁ֥ר שְׁלָח֖וֹ יוֹאָֽב׃
23 ೨೩ “ಆ ಊರಿನವರು ಮಹಾಸೈನ್ಯಬಲದೊಡನೆ ಯುದ್ಧಮಾಡುವುದಕ್ಕೆ ಬಯಲಿಗೆ ಬಂದರು. ನಾವು ಅವರನ್ನು ಊರ ಬಾಗಿಲಿನವರೆಗೂ ಹಿಂದಟ್ಟಿದೆವು.
וַיֹּ֤אמֶר הַמַּלְאָךְ֙ אֶל־דָּוִ֔ד כִּֽי־גָבְר֤וּ עָלֵ֙ינוּ֙ הָֽאֲנָשִׁ֔ים וַיֵּצְא֥וּ אֵלֵ֖ינוּ הַשָּׂדֶ֑ה וַנִּהְיֶ֥ה עֲלֵיהֶ֖ם עַד־פֶּ֥תַח הַשָּֽׁעַר׃
24 ೨೪ ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದದ್ದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಸತ್ತನು” ಎಂದನು.
ויראו המוראים אֶל־עֲבָדֶ֙ךָ֙ מֵעַ֣ל הַחוֹמָ֔ה וַיָּמ֖וּתוּ מֵעַבְדֵ֣י הַמֶּ֑לֶךְ וְגַ֗ם עַבְדְּךָ֛ אוּרִיָּ֥ה הַחִתִּ֖י מֵֽת׃ ס
25 ೨೫ ಅದಕ್ಕೆ ದಾವೀದನು ದೂತನಿಗೆ, “ನೀನು ಹೋಗು, ಇದಕ್ಕೋಸ್ಕರ ವ್ಯಸನಪಡಬೇಡ. ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ, ನಾಳೆ ಇನ್ನೊಬ್ಬನನ್ನು ನುಂಗುವುದು, ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬುದಾಗಿ ಅರಸನು ಆಜ್ಞಾಪಿಸುತ್ತಾನೆ ಎಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು” ಎಂದನು.
וַיֹּ֨אמֶר דָּוִ֜ד אֶל־הַמַּלְאָ֗ךְ כֹּֽה־תֹאמַ֤ר אֶל־יוֹאָב֙ אַל־יֵרַ֤ע בְּעֵינֶ֙יךָ֙ אֶת־הַדָּבָ֣ר הַזֶּ֔ה כִּֽי־כָזֹ֥ה וְכָזֶ֖ה תֹּאכַ֣ל הֶחָ֑רֶב הַחֲזֵ֨ק מִלְחַמְתְּךָ֧ אֶל־הָעִ֛יר וְהָרְסָ֖הּ וְחַזְּקֵֽהוּ׃
26 ೨೬ ಊರೀಯನ ಮರಣದ ವಾರ್ತೆಯನ್ನು ಅವನ ಹೆಂಡತಿಯು ಕೇಳಿ ಗಂಡನಿಗೋಸ್ಕರ ಗೋಳಾಡಿದಳು.
וַתִּשְׁמַע֙ אֵ֣שֶׁת אֽוּרִיָּ֔ה כִּי־מֵ֖ת אוּרִיָּ֣ה אִישָׁ֑הּ וַתִּסְפֹּ֖ד עַל־בַּעְלָֽהּ׃
27 ೨೭ ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು.
וַיַּעֲבֹ֣ר הָאֵ֗בֶל וַיִּשְׁלַ֨ח דָּוִ֜ד וַיַּאַסְפָ֤הּ אֶל־בֵּיתוֹ֙ וַתְּהִי־ל֣וֹ לְאִשָּׁ֔ה וַתֵּ֥לֶד ל֖וֹ בֵּ֑ן וַיֵּ֧רַע הַדָּבָ֛ר אֲשֶׁר־עָשָׂ֥ה דָוִ֖ד בְּעֵינֵ֥י יְהוָֽה׃ פ

< ಸಮುವೇಲನು - ದ್ವಿತೀಯ ಭಾಗ 11 >