< ಸಮುವೇಲನು - ದ್ವಿತೀಯ ಭಾಗ 13 >
1 ೧ ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಸುಂದರಿಯಾದ ಒಬ್ಬಳು ತಂಗಿಯಿದ್ದಳು. ದಾವೀದನ ಮಗ ಅಮ್ನೋನನು ಆಕೆಯನ್ನು ಮೋಹಿಸಿದನು.
Un notikās pēc tam, Absalomam, Dāvida dēlam, bija skaista māsa, Tamāra vārdā, un Amnons, Dāvida dēls, to iemīlēja.
2 ೨ ಅವನು ಆಕೆಯ ಮೇಲಿನ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ತಾಮಾರಳು ಕನ್ಯೆಯಾಗಿದ್ದರಿಂದ ಆಕೆಗೆ ಏನು ಮಾಡಲು ಸಾಧ್ಯವಿಲ್ಲವೆಂದು ಅಮ್ನೋನನು ತಿಳಿದನು.
Un Amnons gauži nobēdājās savas māsas Tamāras dēļ, un viņa bija jumprava, tā ka Amnonam rādījās grūta lieta, viņai ko darīt.
3 ೩ ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು.
Bet Amnonam bija draugs, ar vārdu Jonadabs, Šimejus, Dāvida brāļa, dēls, un Jonadabs bija ļoti gudrs vīrs.
4 ೪ ಬಹು ಯುಕ್ತಿವಂತನಾದ ಇವನು ಒಂದು ದಿನ ಅಮ್ನೋನನನ್ನು, “ರಾಜಪುತ್ರನೇ ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವುದೇಕೆ? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಲು ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹ ಉಂಟಾಗಿದೆ” ಎಂದು ಉತ್ತರ ಕೊಟ್ಟನು.
Tas uz viņu sacīja: kāpēc tu tāds izdilis, tu ķēniņa dēls, un jo dienas jo vairāk? Vai to man negribi sacīt? Tad Amnons uz viņu sacīja: es mīlu Tamāru, sava brāļa Absaloma māsu.
5 ೫ ಆಗ ಯೋನಾದಾಬನು ಅವನಿಗೆ, “ನೀನು ಅಸ್ವಸ್ಥನಾದವನಂತೆ ಹಾಸಿಗೆಯ ಮೇಲೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ನೋಡುವುದಕ್ಕೆ ಬಂದಾಗ ಅವನಿಗೆ, ‘ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವುದಕ್ಕೆ ಕಳುಹಿಸು. ಆಕೆ ನನ್ನೆದುರಿನಲ್ಲಿಯೆ ಸಿದ್ಧಮಾಡಿ, ತನ್ನ ಕೈಯಿಂದಲೇ ಊಟಮಾಡಿಸಲಿ’ ಎಂದು ಹೇಳು” ಎಂದನು.
Un Jonadabs uz to sacīja: gulies savā gultā un izliecies slims. Kad nu tavs tēvs nāk, tevi apraudzīt, tad saki uz to, lai jel mana māsa, Tamāra, nāk un man dod maizes ēst un taisa priekš manām acīm ēdienu, ka es to redzu un ēdu no viņas rokas.
6 ೬ ಅಮ್ನೋನನು ಅಸ್ವಸ್ಥನಾದವನಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, “ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನ್ನ ಬಳಿಗೆ ಕಳುಹಿಸು. ಆಕೆ ನನಗೋಸ್ಕರ ನನ್ನ ಕಣ್ಣ ಮುಂದೆಯೇ ಆಹಾರವನ್ನು ಸಿದ್ಧಮಾಡಿಕೊಡುವುದಾದರೆ ಊಟಮಾಡುವೆನು” ಎಂದು ಹೇಳಿದನು.
Tad Amnons gūlās un izlikās slims. Kad nu ķēniņš nāca, viņu apraudzīt, tad Amnons sacīja uz ķēniņu: lai jel mana māsa Tamāra nāk, un sataisa kādus divus raušus priekš manām acīm, ka es ēdu no viņas rokas.
7 ೭ ಆಗ ದಾವೀದನು ಅರಮನೆಗೆ ಆಳುಗಳನ್ನು ಕಳುಹಿಸಿ ಆಕೆಗೆ, “ನೀನು ನಿನ್ನ ಅಣ್ಣನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಆಹಾರವನ್ನು ಸಿದ್ಧಮಾಡು” ಎಂದು ಹೇಳಿದನು.
Tad Dāvids sūtīja namā pie Tamāras un sacīja: ej jel Amnona, sava brāļa, namā un taisi viņam ēdienu.
8 ೮ ಕೂಡಲೆ ಆಕೆಯು ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು. ಅವನು ಮಲಗಿದ್ದನು. ಆಕೆಯು ಹೋಗಿ ಹಿಟ್ಟು ತೆಗೆದುಕೊಂಡು ನಾದಿ, ಅವನ ಕಣ್ಣ ಮುಂದೆಯೇ ರೊಟ್ಟಿಗಳನ್ನು ಮಾಡಿದಳು.
Un Tamāra nogāja Amnona, sava brāļa namā, un viņš gulēja gultā. Un tā ņēma mīklu un mīcīja un taisīja raušus priekš viņa acīm un cepa tos raušus.
9 ೯ ಅನಂತರ ಆಕೆಯು ಅವುಗಳನ್ನು ಪಾತ್ರೆಯಿಂದ ತೆಗೆದು, ಅವನ ಮುಂದೆ ಇಟ್ಟಳು. ಅವನು ಊಟಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು.
Un viņa ņēma pannu un no tās izlika viņa priekšā, bet viņš liedzās ēst. Tad Amnons sacīja: lai visi no manis iziet ārā. Tad visi izgāja ārā no viņa.
10 ೧೦ ಎಲ್ಲರೂ ಹೋದ ಮೇಲೆ ಅವನು ತಾಮಾರಳಿಗೆ, “ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ; ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ” ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಆಹಾರವನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮುಂದಿಟ್ಟಳು.
Tad Amnons sacīja uz Tamāru: nes man to ēdienu istabā, ka es ēdu no tavas rokas. Tad Tamāra ņēma tos raušus, ko bija taisījusi, un nesa tos savam brālim Amnonam istabā.
11 ೧೧ ಕೂಡಲೆ ಅವನು ಆಕೆಯನ್ನು ಹಿಡಿದು “ನನ್ನ ತಂಗಿಯೇ ಬಂದು ನನ್ನ ಸಂಗಡ ಮಲಗಿಕೋ” ಎಂದನು.
Kad tā tos nu viņam pienesa, ka ēstu, tad viņš to sagrāba un uz to sacīja: nāc šurp, guli pie manis, mana māsa.
12 ೧೨ ಆಕೆಯು; “ಅಣ್ಣನೇ, ಬೇಡ, ನನ್ನನ್ನು ಅಪಮಾನಪಡಿಸಬೇಡ, ಇಸ್ರಾಯೇಲರಲ್ಲಿ ಇಂಥ ನೀಚಕಾರ್ಯವು ನಡೆಯಬಾರದು. ಇಂಥ ಅವಮಾನಕರವಾದ ಕೆಲಸವನ್ನು ಮಾಡಬೇಡ.
Bet viņa uz to sacīja: nē, mans brāli, nepiesmej mani, jo tā tas nepieklājās iekš Israēla, - nedari tādu trakumu.
13 ೧೩ ಈ ಅಪಮಾನವನ್ನು ನಾನು ಮರೆಮಾಡುವುದಾದರೂ ಹೇಗೆ? ನಿನಗಂತೂ ಇಸ್ರಾಯೇಲರಲ್ಲಿ ನೀಚನೆಂಬ ಹೆಸರು ತಪ್ಪದು. ಆದುದರಿಂದ ದಯವಿಟ್ಟು ಅರಸನ ಸಂಗಡ ಮಾತನಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು” ಎಂದಳು.
Jo kur es paliktu ar savu kaunu? Un tu būtu kā ģeķis iekš Israēla. Bet runā jel ar ķēniņu, jo viņš mani tev neliegs.
14 ೧೪ ಆದರೆ ಅವನು ಆಕೆಗಿಂತಲೂ ಬಲಶಾಲಿಯಾಗಿದ್ದರಿಂದ ಆಕೆಯ ಮಾತನ್ನು ಕೇಳದೆ ಬಲಾತ್ಕಾರದಿಂದ ಆಕೆಯನ್ನು ಕೆಡಿಸಿದನು.
Bet tas viņas balsij negribēja klausīt, bet stiprāks būdams nekā viņa to piesmēja un piegulēja.
15 ೧೫ ಇದಾದ ಮೇಲೆ ಅವನಿಗೆ ಆಕೆಯ ಮೇಲೆ ದ್ವೇಷಹುಟ್ಟಿತು. ಅವಳ ಬಗ್ಗೆ ಇದ್ದ ಪ್ರೀತಿಗಿಂತ ಆಕೆಯ ಮೇಲಿನ ದ್ವೇಷವೇ ಹೆಚ್ಚಾಯಿತು.
Pēc Amnons viņu nīdēdams ienīdēja; un tas naids, ar ko viņš to ienīdēja, bija lielāks nekā tā mīlestība, ar ko viņš to bija mīlējis. Un Amnons uz to sacīja: celies un ej projām.
16 ೧೬ ಅಮ್ನೋನನು ಆಕೆಗೆ, “ಎದ್ದು ಹೋಗು” ಎಂದು ಹೇಳಿದಾಗ ಆಕೆಯು, “ಹಾಗೆ ಮಾಡಬೇಡ, ನನ್ನನ್ನು ಹೊರಡಿಸಿಬಿಡುವುದು ನೀನು ಮಾಡಿದ ಮೊದಲನೆಯ ಅನ್ಯಾಯಕ್ಕಿಂತ ಹೆಚ್ಚಿನ ಅನ್ಯಾಯವಾಗಿದೆ” ಅಂದಳು.
Tad viņa uz to sacīja: ne tā! Šis ļaunums būtu lielāks nekā tas pirmais, ko tu man darījis, ka tu mani izdzen. Bet viņš tai negribēja klausīt.
17 ೧೭ ಆದರೆ ಅವನು ಆಕೆಯ ಮಾತನ್ನು ಕೇಳದೆ, ಯಾವಾಗಲೂ ತನ್ನೊಂದಿಗೆ ಇರುತ್ತಿದ್ದ ಆಳನ್ನು ಕರೆದು ಅವನಿಗೆ, “ಇವಳನ್ನು ಹೊರಗೆ ತಳ್ಳಿ ಕದವನ್ನು ಮುಚ್ಚು” ಎಂದು ಆಜ್ಞಾಪಿಸಿದನು.
Un viņš sauca savu puisi, kas viņam kalpoja, un sacīja: izraidi jel šo no manis ārā un aizslēdz durvis aiz viņas.
18 ೧೮ ಆಕೆಯು ನಾನಾ ವರ್ಣವುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಇದೇ ತರಹದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು. ಆತನ ಸೇವಕರು ಆಕೆಯನ್ನು ಹೊರಗೆ ಕಳುಹಿಸಿ ಕದವನ್ನು ಮುಚ್ಚಿದನು.
Un viņai bija svārki ar piedurknēm, jo ar tādiem uzvalkiem ķēniņa meitas ģērbās, kas bija jumpravas. Un kad viņa sulainis to bija izraidījis un durvis aiz viņas aizslēdzis,
19 ೧೯ ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.
Tad Tamāra meta pelnus uz savu galvu un saplēsa tos svārkus ar piedurknēm, kas tai bija mugurā, un lika savu roku uz savu galvu un gāja apkārt brēkdama.
20 ೨೦ ಆಕೆಯ ಸಹೋದರನಾದ ಅಬ್ಷಾಲೋಮನು ಆಕೆಯನ್ನು ಕಂಡು, “ನಿನ್ನ ಅಣ್ಣನಾದ ಅಮ್ನೋನನು ನಿನ್ನನ್ನು ಸಂಗಮಿಸಿದನೋ? ತಂಗಿ, ಈಗ ಸುಮ್ಮನಿರು. ಅವನು ನಿನ್ನ ಅಣ್ಣನಲ್ಲವೋ? ಈ ಸಂಗತಿಯನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡ” ಎಂದು ಹೇಳಿದನು. ತಾಮಾರಳು ಒಂಟಿಯಾಗಿ ತನ್ನ ಅಣ್ಣನಾದ ಅಬ್ಷಾಲೋಮನ ಮನೆಯಲ್ಲೇ ವಾಸಮಾಡಿದಳು.
Un viņas brālis Absaloms uz to sacīja: vai tavs brālis Amnons pie tevis bija? Nu tad, mana māsa, cieti klusu, viņš ir tavs brālis, neņem šo lietu tā pie sirds. Tā Tamāra palika atstāta sava brāļa Absaloma namā.
21 ೨೧ ಅರಸನಾದ ದಾವೀದನು ಈ ಸಂಗತಿಯನ್ನು ಕೇಳಿ ಬಹಳವಾಗಿ ಕೋಪಗೊಂಡನು.
Un kad ķēniņš Dāvids visu šo dzirdēja, tad viņš ļoti apskaitās. Bet Absaloms nerunāja ar Amnonu nedz ļaunu nedz labu.
22 ೨೨ ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೆಯ ಮಾತುಗಳನ್ನಾಗಲಿ ಕೆಟ್ಟ ಮಾತುಗಳನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.
Jo Absaloms ienīdēja Amnonu par to, ka šis bija piesmējis Tamāru, viņa māsu.
23 ೨೩ ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು.
Un pēc kādiem diviem gadiem Absalomam bija avju cirpšana BaālAcorā pie Efraīma. Un Absaloms aicināja visus ķēniņa bērnus.
24 ೨೪ ಅವನು ಅರಸನ ಬಳಿಗೆ ಹೋಗಿ ಅವನನ್ನು, “ಸ್ವಾಮೀ, ನಿನ್ನ ಸೇವಕನು ಕುರಿಗಳ ಉಣ್ಣೆ ಕತ್ತರಿಸುವವರನ್ನು ಕರೆಸಿದ್ದಾನೆ. ಅರಸನು ತನ್ನ ಸೇವಕರೊಡನೆ ಅವನ ಬಳಿಗೆ ಬರಲಿ” ಎಂದು ಬೇಡಿಕೊಂಡನು.
Un Absaloms nāca pie ķēniņa un sacīja: redzi jel, nu tavam kalpam ir avju cirpšana, kaut ķēniņš ar saviem kalpiem nāktu pie sava kalpa.
25 ೨೫ ಅರಸನು ಅವನಿಗೆ, “ಮಗನೇ ಬೇಡ ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು” ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಹೋಗಲಿಲ್ಲ. ಅವನನ್ನು ಆಶೀರ್ವದಿಸಿದನು ಅಷ್ಟೇ.
Bet ķēniņš sacīja uz Absalomu: nē, mans dēls, visi mēs neiesim, ka tevi neapgrūtinājam. Un viņš gan to lūdza, bet tas negribēja iet, bet viņu svētīja.
26 ೨೬ ಆಗ ಅಬ್ಷಾಲೋಮನು, “ನೀನು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ಕಳುಹಿಸು” ಅಂದನು. ಅದಕ್ಕೆ ಅರಸನು, “ಅವನೇಕೆ ನಿನ್ನ ಸಂಗಡ ಬರಬೇಕು?” ಎಂದು ಕೇಳಿದನು.
Tad Absaloms sacīja: ja tu negribi, tad lai jel mans brālis Amnons mums nāk līdz. Bet ķēniņš uz to sacīja: kāpēc lai tas iet līdz?
27 ೨೭ ಆದರೆ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನು ಕಳುಹಿಸಿದನು.
Un kad Absaloms viņu vēl vairāk lūdza, tad viņš Amnonu tam laida līdz ar visiem ķēniņa bērniem.
28 ೨೮ ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.
Un Absaloms pavēlēja saviem puišiem un sacīja: raugāt jel, kad Amnona sirds būs priecīga no vīna, un es uz jums sacīšu: kaujiet Amnonu, - tad nokaujiet viņu, nebīstaties, jo es jums to esmu pavēlējis; turaties stipri un esat droši vīri!
29 ೨೯ ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.
Un Absaloma puiši darīja Amnonam, kā Absaloms bija pavēlējis. Tad visi ķēniņa bērni cēlās un metās ikkatrs uz savu zirgēzeli un bēga.
30 ೩೦ ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ರಾಜಪುತ್ರರೆಲ್ಲರನ್ನು ಕೊಂದು ಹಾಕಿದನು ಒಬ್ಬನನ್ನೂ ಉಳಿಸಲಿಲ್ಲ” ಎಂಬ ಸುದ್ದಿ ಮುಟ್ಟಿತು.
Un tiem vēl ceļā esot, vēsts nāca pie Dāvida, un tur sacīja: Absaloms nokāvis visus ķēniņa bērnus, ka neviens no tiem nav atlicis.
31 ೩೧ ಆಗ ಅರಸನು ಎದ್ದು ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅವನ ಹತ್ತಿರ ನಿಂತರು.
Tad ķēniņš cēlās un saplēsa savas drēbes un metās pie zemes, un visi viņa kalpi stāvēja ar saplēstām drēbēm.
32 ೩೨ ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜಪುತ್ರರೆಲ್ಲರನ್ನೂ ಕೊಂದು ಹಾಕಿದ್ದಾರೆಂದು ನನ್ನ ಒಡೆಯನು ನೆನಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಾಗಿನಿಂದ ಹೀಗಾಗುವುದೆಂದು ಅಬ್ಷಾಲೋಮನ ಮುಖದಿಂದಲೇ ತೋರುತ್ತಿತ್ತು.
Un Jonadabs, Šimejus, Dāvida brāļa, dēls atbildēja un sacīja: nedomā, mans kungs, ka visi jaunekļi, ķēniņa dēli, ir nokauti, bet Amnons vien ir miris. Jo Absaloms to ir apņēmies no tās dienas, kad tas bija piesmējis viņa māsu Tamāru.
33 ೩೩ ಆದುದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸನು ಲಕ್ಷ್ಯಕೊಡದಿರಲಿ. ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ” ಎಂದು ಹೇಳಿ ಸಂತೈಸಿದನು.
Un lai nu mans kungs, tas ķēniņš, šo lietu tā neņem pie sirds, domādams, visus ķēniņa bērnus esam mirušus, jo Amnons vien ir miris. Un Absaloms bēga.
34 ೩೪ ಅಬ್ಷಾಲೋಮನು ತಪ್ಪಿಸಿಕೊಂಡು ಓಡಿಹೋದನು. ಅಷ್ಟರಲ್ಲಿ ದಾರಿನೋಡುತ್ತಿದ್ದ ಕಾವಲುಗಾರನು, ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದು ಬರುವುದನ್ನು ಕಂಡನು.
Un vaktnieks pacēla savas acis un skatījās, un redzi, daudz ļaudis nāca pa ceļu aiz viņa gar kalnu.
35 ೩೫ ಯೋನಾದಾಬನು ಅರಸನಿಗೆ, “ಇಗೋ ರಾಜಕುಮಾರರು ಬರುತ್ತಿದ್ದಾರೆ. ನಿನ್ನ ಸೇವಕನ ಮಾತಿನಂತೆಯೆ ಆಯಿತಲ್ಲವೋ?” ಎಂದು ಹೇಳಿ ಮುಗಿಸುವಷ್ಟರಲ್ಲಿ,
Un Jonadabs sacīja uz ķēniņu: redzi, ķēniņa bērni nāk, tā kā tavs kalps sacījis, tā ir.
36 ೩೬ ರಾಜಕುಮಾರರು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಸೇವಕರೂ ಬಹಳವಾಗಿ ಗೋಳಾಡಿದರು.
Un kad viņš bija beidzis runāt, redzi, tad tie ķēniņa dēli nāca un pacēla savu balsi un raudāja. Ir ķēniņš un visi viņa kalpi raudāja varen lielas raudas.
37 ೩೭ ದಾವೀದನು ತನ್ನ ಮಗನಿಗೋಸ್ಕರ ಪ್ರತಿದಿನವೂ ದುಃಖಪಡುತ್ತಿದ್ದನು.
Un Absaloms bēga un gāja pie Talmaja, Amijuda dēla, Gešuras ķēniņa. Bet (Dāvids) žēlojās pēc sava dēla mūžam.
38 ೩೮ ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ ತಲ್ಮೈಯ ಬಳಿಯಲ್ಲಿ ಮೂರು ವರ್ಷ ಇದ್ದನು.
Un Absaloms bēga un gāja uz Gešuru, tur viņš sabija trīs gadus.
39 ೩೯ ಅರಸನಾದ ದಾವೀದನು ಅಮ್ನೋನನ ಮರಣದ ವಿಷಯವಾಗಿ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ನೋಡುವುದಕ್ಕಾಗಿ ಬಹಳ ಆಸೆಪಟ್ಟನು.
Un tas ķēniņu Dāvidu noturēja iziet pret Absalomu, jo viņš jau bija iepriecināts par Amnonu, ka tas miris.