< ಸಮುವೇಲನು - ದ್ವಿತೀಯ ಭಾಗ 14 >

1 ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವುದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು
Yowab, ɗan Zeruhiya ya gane cewa zuriyar sarki ta koma ga Absalom.
2 ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,
Saboda haka Yowab ya aiki wani zuwa Tekowa, ya sa a zo da wata mace mai hikima. Ya ce mata, “Ki yi kamar kina makoki. Ki sa rigar makoki, kada kuwa ki shafa mai. Ki yi kamar macen da ta yi kwanaki da yawa, tana makokin matattu.
3 ಅರಸನ ಬಳಿಗೆ ಹೋಗಿ ಈ ಮಾತುಗಳನ್ನು ಅವನಿಗೆ ಹೇಳು” ಎಂದು ಆಜ್ಞಾಪಿಸಿ, ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು.
Sa’an nan ki je wurin sarki, ki ce masa haka.” Sai Yowab ya faɗa mata duk abin da za tă faɗa.
4 ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು, “ಅರಸನೇ ರಕ್ಷಿಸು” ಎಂದು ಕೂಗಿದಳು.
Da macen da ta fito daga Tekowa ta je wajen sarki, sai ta rusuna har ƙasa don bangirma, sai ta ce, “Ka taimake ni, ya sarki!”
5 ಅರಸನು, “ನಿನಗೇನಾಯಿತು?” ಎಂದು ಆಕೆಯನ್ನು ಕೇಳಲು ಆಕೆಯು,
Sarki ya ce mata, “Mece ce matsalarki?” Sai ta ce, “Tabbatacce, ni gwauruwa ce; mijina ya mutu.
6 “ನಾನು ವಿಧವೆ, ಗಂಡನು ಸತ್ತು ಹೋಗಿದ್ದಾನೆ. ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿನ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರು ಯಾರೂ ಇರಲಿಲ್ಲವಾದ್ದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.
Baiwarka tana da’ya’ya maza biyu. Suka yi faɗa da juna a fili, kuma ba wanda yake can don yă raba su. Ɗayan ya bugi ɗayan, ya kashe shi.
7 ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು ‘ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ” ಎಂದು ಉತ್ತರ ಕೊಟ್ಟಳು.
To, ga duk iyali sun hau kan baiwarka, suna cewa, ‘Ki ba mu ɗayan da ya kashe ɗan’uwansa mu kashe don ran ɗan’uwansa da ya kashe; sa’an nan za mu hallaka magājin shi ma.’ Za su kashe garwashin wuta mai ci da nake da shi kaɗai, su bar mijina ba suna, ba jika, a duniya.”
8 ಆಗ ಅರಸನು, “ನೀನು ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ” ಎಂದು ಹೇಳಿದನು.
Sarki ya ce wa macen, “Koma gida, zan ba da umarni a madadinki.”
9 ಆ ತೆಕೋವದ ಸ್ತ್ರೀಯು, “ಅರಸನೇ, ಒಡೆಯನೇ ಅಪರಾಧವು ನನ್ನ ಮೇಲೆಯೂ, ನನ್ನ ಕುಟುಂಬದ ಮೇಲೆಯು ಇರಲಿ. ಅರಸನಿಗೂ ಅವನ ಸಿಂಹಾಸನಕ್ಕೂ ದೋಷ ಹತ್ತದಿರಲಿ” ಎಂದಳು.
Amma macen da ta fito daga Tekowa ta ce, “Ranka yă daɗe, sarki! Bari alhakin shari’arka yă kasance a kaina da gidan mahaifina, kai sarki da gidan mulkinka, ba ku da laifi a ciki.”
10 ೧೦ ಅರಸನು ಆಕೆಗೆ, “ಹಾಗೆ ಅಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ, ಅವರು ನಿನ್ನನ್ನು ಮುಟ್ಟದಂತೆ ಮಾಡುತ್ತೇನೆ” ಎಂದನು.
Sai sarki ya ce, “In wani ya yi miki magana, ki kawo shi wurina, ba zai kuwa ƙara damunki ba.”
11 ೧೧ ಆಗ ಆ ಸ್ತ್ರೀಯು, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ನಾಶಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬುದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು” ಎಂದು ಬೇಡಿಕೊಂಡಳು. ಅದಕ್ಕೆ ಅರಸನು, “ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ” ಎಂದು ಹೇಳಿದನು.
Sai ta ce, “To, bari sarki yă rantse da Ubangiji Allahnsa don yă hana mai ramako yin ƙarin hallakawar da aka yi, domin kada a hallaka ɗana.” Sai ya ce, “Muddin Ubangiji yana a raye, babu gashi guda na ɗanki da zai fāɗi ƙasa.”
12 ೧೨ ಆಗ ಸ್ತ್ರೀಯು, “ನನ್ನ ಒಡೆಯನೇ, ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ” ಅನ್ನಲು ಅರಸನು, “ಹೇಳು” ಎಂದನು.
Sai matar ta ce, “Bari baiwarka ta ƙara yin magana sau ɗayan nan wa ranka yă daɗe.” Ya ce, “Ki faɗa.”
13 ೧೩ ಆಕೆಯು, “ಅರಸನು ಈ ತೀರ್ಪು ಕೊಟ್ಟಿದ್ದರಿಂದ ತನ್ನನ್ನು ತಾನೇ ಅಪರಾಧಿ ಎಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟ ಮಗನನ್ನು ಸೇರಿಸಿಕೊಳ್ಳದೆ ಹೋಗುವುದರಿಂದ ದೇವಪ್ರಜೆಗೆ ವಿರೋಧವಾಗಿ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು?
Matar ta ce, “To, don me ka yi wa mutanen Allah irin wannan abu? Sa’ad da sarki ya ce haka, ashe, ba ka hukunta kanka ke nan ba, tun da yake sarki bai yarda ɗansa yă komo gida ba?
14 ೧೪ ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.
Kamar ruwan da ya zuba a ƙasa, wanda ba a iya kwasa, haka dole mu mutu. Amma Allah ba ya ɗaukan rai; a maimako, yakan ƙirƙiro hanyoyi domin mutumin da aka kora kada yă kasance yasasshe daga gare shi.
15 ೧೫ ಅದಿರಲಿ ಜನರು ನಿನ್ನ ಸೇವಕಿಯಾದ ನನ್ನನ್ನು ಹೆದರಿಸಿದ್ದರಿಂದ, ‘ನಾನು ಈ ಸಂಗತಿಯನ್ನು ಅರಸನಿಗೆ ತಿಳಿಸಿದರೆ, ತನ್ನ ಸೇವಕಿಯ ಬಿನ್ನಹವನ್ನು ಲಾಲಿಸಬಹುದು ಎಂದುಕೊಂಡು ನನ್ನ ಒಡೆಯನಾದ ಅರಸನಿಗೆ ಇದನ್ನು ತಿಳಿಸುವುದಕ್ಕೆ ಬಂದೆನು ಎಂದಳು.
“Yanzu ga shi na zo don in faɗa wannan wa ranka yă daɗe sarki, don mutane sun tsorata ni. Baiwarka ta yi tunani ta ce, ‘Zan yi magana wa sarki; wataƙila yă yi abin da baiwarsa ta roƙa.
16 ೧೬ ಅರಸನು ತನ್ನ ಸೇವಕಿಯಾದ ನನ್ನ ಬಿನ್ನಹವನ್ನು ಲಾಲಿಸಿ ನನ್ನನ್ನೂ, ನನ್ನ ಮಗನನ್ನೂ ದೇವರ ಸ್ವತ್ತಿನಿಂದ ತೆಗೆದುಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ ತಪ್ಪಿಸಿ ರಕ್ಷಿಸುವನೆಂದು ನಂಬಿಕೊಂಡಿದ್ದೇನೆ.’
Wataƙila sarki zai yarda yă ceci baiwarsa daga hannun mutumin nan da yake ƙoƙari yă hallaka ni da ɗana daga gādon da Allah ya ba mu.’
17 ೧೭ ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿದ್ದಾನೆ. ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ” ಎಂದಳು.
“Yanzu kuwa baiwarka tana cewa, ‘Bari magana ranka yă daɗe sarki yă ba ni hutu, gama ranka yă daɗe sarki yana kama da mala’ikan Allah cikin rarrabe nagarta da mugunta. Bari Ubangiji Allahnka yă kasance tare da kai.’”
18 ೧೮ ಆಗ ಅರಸನು ಆ ಸ್ತ್ರೀಗೆ, “ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ. ನೀನು ಅದನ್ನು ಮರೆಮಾಚದೆ ತಿಳಿಸಬೇಕು” ಎಂದನು. ಆಗ ಆಕೆಯು, “ಅರಸನ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟಳು.
Sai sarki ya ce wa matar, “Kada ki ɓoye mini kome daga abin da zan tambaye ki.” Matar ta ce, “Bari ranka yă daɗe sarki yă yi tambaya.”
19 ೧೯ ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈವಾಡ ಇದೆಯೇ?” ಎಂದು ಕೇಳಿದನು. ಅದಕ್ಕೆ ಆ ಸ್ತ್ರೀಯು, “ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ, ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ. ನಿನ್ನ ದಾಸಿಯಾದ ನನ್ನನ್ನು ಪ್ರೇರೇಪಿಸಿ, ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿ ಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.
Sarki ya ce, “Anya, babu hannun Yowab a cikin dukan wannan?” Matar ta ce, “Muddin kana a raye, ranka yă daɗe sarki, ba wanda zai juya dama ko hagu daga wani abin da ranka yă daɗe sarki ya faɗa. I, bawanka Yowab ne ya umarce ni in yi wannan, shi ne kuma ya sa kalmomin nan a bakin baiwarka.
20 ೨೦ ಅಬ್ಷಾಲೋಮನು ನಡೆದಿರುವ ಘಟನೆಯಿಂದ ಅರಸನು ಕೋಪಗೊಳ್ಳದೆ ಇರುವಂತೆ ವಿಷಯವನ್ನು ಈ ರೀತಿ ಹೇಳುವಂತೆ ನಿನ್ನ ಸೇವಕನಾದ ಯೋವಾಬನೇ ಇದನ್ನು ಕಲಿಸಿದನು. ಆದರೆ ನನ್ನ ಒಡೆಯನು ದೇವದೂತನಂಥ ಜ್ಞಾನಿ. ಅವನು ಭೂಲೋಕದಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವನು” ಎಂದು ಉತ್ತರಕೊಟ್ಟಳು.
Bawanka Yowab ne ya yi haka don yă daidaita al’amura. Ranka yă daɗe yana da hikima iri ta mala’ikan Allah, ya san dukan kome da yake faruwa a ƙasar.”
21 ೨೧ ಅನಂತರ ಅರಸನು ಯೋವಾಬನಿಗೆ, “ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ, ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರೆದುಕೊಂಡು ಬಾ” ಅಂದನು.
Sarki ya ce wa Yowab, “To, da kyau, zan yi haka. Je ka, ka dawo da saurayin nan Absalom.”
22 ೨೨ ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, “ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು” ಎಂದು ಹೇಳಿದನು.
Yowab ya rusuna har ƙasa don bangirma, ya kuma yi wa sarki kyakkyawar fata. Yowab ya ce, “Yau, bawanka ya sani ya sami tagomashi a gare ka, ranka yă daɗe sarki, gama sarki ya ji roƙon bawansa.”
23 ೨೩ ನಂತರ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.
Sa’an nan Yowab ya tafi Geshur ya dawo da Absalom Urushalima.
24 ೨೪ ಆದರೆ ಅರಸನು, “ಅಬ್ಷಾಲೋಮನು ತನ್ನ ಮನೆಗೆ ಹೋಗಲಿ, ಅವನು ನನ್ನ ಮುಖವನ್ನು ನೋಡಬಾರದು” ಎಂದು ಆಜ್ಞಾಪಿಸಿದ್ದರಿಂದ ಅವನು ತನ್ನ ಮನೆಗೆ ಹೋದನು. ಅರಸನ ಮುಖವನ್ನು ನೋಡಲಿಲ್ಲ.
Amma sarki ya ce, “Yă tafi gidansa; kada yă zo yă gan ni.” Saboda haka Absalom ya tafi gidansa, bai kuwa je ganin sarki ba.
25 ೨೫ ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯ ವರೆಗೂ ಒಂದು ದೋಷವಾದರೂ ಇರಲಿಲ್ಲ.
A cikin dukan Isra’ila babu wanda ake yabon kyansa kamar Absalom. Tun daga kansa har zuwa tafin ƙafansa babu tabo a jikinsa.
26 ೨೬ ಅವನ ತಲೆಯ ಕೂದಲು ಬಹು ಭಾರವಾದ್ದರಿಂದ ಪ್ರತಿ ವರ್ಷದ ಅಂತ್ಯದಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಆಗ ಅವನ ಕೂದಲು ರಾಜರ ತೂಕದ ಪ್ರಕಾರ ಇನ್ನೂರು ರೂಪಾಯಿ ತೂಕವಾಗುತ್ತಿತ್ತು.
A duk sa’ad da ya aske gashin kansa (yakan aske kansa lokaci-lokaci sa’ad da ya yi masa nauyi) yakan auna shi, nauyin gashin kuwa yakan kai wajen shekel ɗari biyu a ma’aunin da ake awo.
27 ೨೭ ಅವನಿಗೆ ಮೂರು ಮಂದಿ ಗಂಡು ಮಕ್ಕಳೂ, ಒಬ್ಬಳು ಮಗಳು ಇದ್ದಳು. ಮಗಳ ಹೆಸರು ತಾಮಾರಳು. ಈಕೆಯು ಬಹು ಸುಂದರಿಯಾಗಿದ್ದಳು.
Aka haifa wa Absalom’ya’ya uku maza da’ya mace guda. Sunanta Tamar, ta kuwa zama kyakkyawan mace ƙwarai.
28 ೨೮ ಅಬ್ಷಾಲೋಮನು ಅರಸನ ಮೋರೆಯನ್ನು ನೋಡದೆ ಎರಡು ವರ್ಷ ಯೆರೂಸಲೇಮಿನಲ್ಲೇ ವಾಸವಾಗಿದ್ದನು.
Absalom ya zauna a Urushalima shekara biyu amma ba tare da ganin fuskar sarki ba.
29 ೨೯ ಒಂದು ದಿನ ಅವನು ಅರಸನ ಬಳಿಗೆ ಕಳುಹಿಸುವುದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಯೋವಾಬನು ಬರಲಿಲ್ಲ. ಎರಡನೆಯ ಸಾರಿ ಕರೇಕಳುಹಿಸಿದರೂ ಅವನು ಬರಲಿಲ್ಲ.
Sai Absalom ya aika a kira masa Yowab don yă aike shi wurin sarki, amma Yowab ya ƙi zuwa. Saboda haka ya sāke aika sau na biyu, amma ya ƙi yă zo.
30 ೩೦ ಆದುದರಿಂದ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿರಿ, ಸಮೀಪದಲ್ಲಿಯೇ ಯೋವಾಬನ ಜವೆಗೋದಿಯ ಹೊಲವುಂಟಲ್ಲಾ, ಹೋಗಿ ಅದಕ್ಕೆ ಬೆಂಕಿ ಹಚ್ಚಿರಿ” ಎಂದು ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.
Sai ya ce wa bayinsa, “Duba, gonar Yowab tana gab da tawa, kuma yana da sha’ir a can. Ku je ku sa mata wuta.” Sai bayin Absalom suka sa wa gonar wuta.
31 ೩೧ ಆಗ ಯೋವಾಬನು ಅಬ್ಷಾಲೋಮನ ಮನೆಗೆ ಹೋಗಿ, “ನಿನ್ನ ಸೇವಕರು ನನ್ನ ಹೊಲಕ್ಕೆ ಬೆಂಕಿ ಹಚ್ಚಿದ್ದೇಕೆ?” ಎಂದು ಅವನನ್ನು ಕೇಳಿದನು.
Sa’an nan Yowab ya tafi gidan Absalom ya ce masa, “Me ya sa bayinka suka sa wa gonata wuta?”
32 ೩೨ ಅದಕ್ಕೆ ಅಬ್ಷಾಲೋಮನು ಅವನಿಗೆ, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ, ಅಲ್ಲೇ ಇದ್ದರೆ ಒಳ್ಳೆಯದಾಗುತ್ತಿತ್ತಲ್ಲವೋ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆನು. ನಾನು ಹೇಗೂ ಅರಸನ ದರ್ಶನ ಮಾಡಬೇಕು. ನಾನು ಅಪರಾಧಿಯಾಗಿದ್ದರೆ ನನ್ನನ್ನು ಕೊಲ್ಲಿಸಲಿ” ಎಂದನು.
Absalom ya ce wa Yowab, “Kai, na aika, ‘Ka zo nan don in aike ka wurin sarki ka tambaya, “Me ya sa na dawo daga Geshur? Ai, ya fi mini a ce ina can har yanzu!”’ Yanzu kuwa, ina so in ga sarki, kuma idan na yi wani laifi, to, yă kashe ni.”
33 ೩೩ ಯೋವಾಬನು ಹೋಗಿ ಇದನ್ನು ಅರಸನಿಗೆ ತಿಳಿಸಿದಾಗ ಅರಸನು ಅಬ್ಷಾಲೋಮನನ್ನು ಕರೇಕಳುಹಿಸಿದನು. ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಅರಸನು ಅವನನ್ನು ಮುದ್ದಿಟ್ಟನು.
Saboda haka Yowab ya tafi wurin sarki ya gaya masa wannan. Sai sarki ya aika aka zo da Absalom, ya kuma rusuna da fuskarsa har ƙasa a gaban sarki. Sarki kuwa ya sumbaci Absalom.

< ಸಮುವೇಲನು - ದ್ವಿತೀಯ ಭಾಗ 14 >