< ಸಮುವೇಲನು - ದ್ವಿತೀಯ ಭಾಗ 15 >
1 ೧ ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನು, ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು.
Toen dit alles geregeld was, schafte Absalom zich paard en wagen aan, en vijftig man, die voor hem uit moesten lopen.
2 ೨ ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, “ನೀವು ಯಾವ ಊರಿನರವರು?” ಎಂದು ಕೇಳುವನು. ಅವರು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು” ಎಂದು ಉತ್ತರ ಕೊಡುವರು.
En iedere morgen stond Absalom vroeg aan de kant van de weg naar de poort en sprak iedereen aan, die een klacht had en naar den koning om recht ging. Hij vroeg hen, uit welke plaats ze kwamen, en als ze antwoordden: "Uit die en die stam van Israël komt uw dienaar",
3 ೩ ಆಗ ಅಬ್ಷಾಲೋಮನು, “ನೋಡಿ ನಿಮ್ಮ ಕಾರ್ಯವು ಒಳ್ಳೆಯದೂ, ನ್ಯಾಯವಾದದ್ದೂ ಆಗಿದೆ. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ಅರಸನಿಂದ ಯಾರೂ ನೇಮಕವಾಗಿಲ್ಲ.
dan zeide Absalom tot hen: Ja, uw zaak ziet er goed en billijk uit; maar de koning heeft niemand, die naar u luistert.
4 ೪ ವ್ಯಾಜ್ಯವಾಗಲಿ, ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು” ಎಂದು ಹೇಳುವನು.
Absalom vervolgde: Was er maar iemand, die mij tot rechter in het land aanstelde, zodat iedereen, die een klacht of rechtszaak had, tot mij kon komen; ik zou hem wel recht verschaffen!
5 ೫ ಯಾರಾದರೂ ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವರನ್ನು ಕೂಡಲೆ ಕೈಚಾಚಿ ಅವರನ್ನು ಹಿಡಿದು ಮುದ್ದಿಡುವನು.
En kwam iemand naderbij, om zich voor hem neer te buigen, dan stak hij de hand uit, trok hem naar zich toe, en kuste hem.
6 ೬ ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲರಿಗೂ ಅಬ್ಷಾಲೋಮನು ಹೀಗೆಯೇ ಮಾಡಿ, ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.
Door zo te doen met alle Israëlieten, die om recht kwamen, palmde Absalom heel Israël in.
7 ೭ ನಾಲ್ಕು ವರ್ಷಗಳಾದ ನಂತರ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ.
Toen er zo vier jaar waren verlopen, zeide Absalom eens tot den koning: Ik zou wel graag in Hebron een gelofte gaan inlossen, die ik aan Jahweh gedaan heb.
8 ೮ ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ” ಎಂದು ವಿಜ್ಞಾಪಿಸಿದನು.
Want toen uw dienaar te Gesjoer in Aram verbleef, heb ik de gelofte gedaan, dat ik Jahweh in Hebron zou eren, als Hij mij veilig naar Jerusalem liet terugkeren.
9 ೯ ಆಗ ಅರಸನು, “ಹೋಗಿಬಾ, ನಿನಗೆ ಶುಭವಾಗಲಿ” ಎಂದನು. ಅಬ್ಷಾಲೋಮನು ಹೆಬ್ರೋನಿಗೆ ಹೊರಟು ಹೋದನು.
De koning zeide tot hem: Ga in vrede. Hij vertrok dus en begaf zich naar Hebron,
10 ೧೦ ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’” ಎಂದು ಹೇಳಿಸಿದ್ದನು.
nadat hij door ijlboden aan alle stammen in Israël had laten zeggen: Wanneer ge bazuingeschal hoort, moet ge uitroepen: "Absalom is koning geworden in Hebron!"
11 ೧೧ ಅಬ್ಷಾಲೋಮನು ಯೆರೂಸಲೇಮಿನಿಂದ ಆರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು. ಅವರಿಗೇನೂ ಗೊತ್ತಿರಲಿಲ್ಲ.
Met Absalom gingen tweehonderd man uit Jerusalem mee; het waren genodigden, die te goeder trouw meekwamen, zonder ergens van af te weten.
12 ೧೨ ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.
Bovendien liet Absalom den Giloniet Achitófel, een raadsheer van David, uit zijn woonplaats Gilo bij het opdragen der offers ontbieden. Zo won de samenzwering aan kracht, en sloten steeds meer mensen zich bij Absalom aan.
13 ೧೩ ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿತು.
Toen dan ook een boodschapper aan David kwam berichten, dat heel Israël partij had gekozen voor Absalom,
14 ೧೪ ಅವನು ಯೆರೂಸಲೇಮಿನಲ್ಲಿ ತನ್ನ ಸೇವಕರಿಗೆ, “ಏಳಿರಿ, ಓಡಿಹೋಗೋಣ. ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ. ಅವನು ಆಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು, ನಮಗೆ ದುರ್ಗತಿಯನ್ನು ಉಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸುವನು” ಎಂದು ಹೇಳಿದನು.
gaf David aan heel zijn hof, dat bij hem in Jerusalem was gebleven, het bevel: Vooruit, op de vlucht; er blijft ons geen ander middel over, om aan Absalom te ontkomen. Haast u, om te vertrekken; anders haast hij zich, haalt ons in, laat het onheil op ons los, en sabelt de hele stad neer.
15 ೧೫ ಸೇವಕರು ಅರಸನಿಗೆ, “ನಮ್ಮ ಒಡೆಯನಾದ ಅರಸನಿಗೆ ಸರಿ ತೋರಿದ್ದನ್ನು ಮಾಡಲು ನಾವು ಸಿದ್ಧರಾಗಿದ್ದೇವೆ” ಎಂದು ಉತ್ತರ ಕೊಟ್ಟರು.
En het hof van David zei tot den koning: Zoals onze heer en koning verkiest; wij staan tot uw dienst.
16 ೧೬ ಆಗ ಅರಸನು ತನ್ನ ಅರಮನೆ ಕಾಯುವುದಕ್ಕಾಗಿ ಹತ್ತು ಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.
Zo vertrok de koning, gevolgd door heel zijn huis; alleen tien bijvrouwen liet hij in Jerusalem achter, om het paleis te bewaken.
17 ೧೭ ಅರಸನು ಅವನ ಜೊತೆಯಲ್ಲಿ ಹೊರಟು ಹೋದ ಜನರೆಲ್ಲರೂ ಪಟ್ಟಣದ ಕಡೆಯ ಮನೆಯ ಬಳಿಯಲ್ಲಿ ಸ್ವಲ್ಪ ಹೊತ್ತು ನಿಂತರು.
Maar bij hun vertrek maakten de koning en al het volk, dat hem volgde, halt bij het laatste huis.
18 ೧೮ ದಾವೀದನೂ, ಅವನ ಎಲ್ಲಾ ಸೇವಕರೂ, ಎಲ್ಲಾ ಕೆರೇತ್ಯ ಮತ್ತು ಎಲ್ಲಾ ಪೆಲೇತ್ಯ ಎಂಬ ಕಾವಲು ದಂಡುಗಳೂ, ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಗಿತ್ತೀಯರೂ ಅರಸನ ಮುಂದೆ ಹಾದು ಹೋದರು.
Daar trok hem heel het leger voorbij, met al de Kretenzen en Peletiërs. Ook Ittai met alle Gatieten, wel zes honderd man, die den koning waren gevolgd uit Gat, trokken hem voorbij.
19 ೧೯ ಆಗ ಅರಸನು ಗಿತ್ತೀಯನಾದ ಇತ್ತೈ ಎಂಬುವನಿಗೆ, “ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನಾದ ಅಬ್ಷಾಲೋಮನ ಬಳಿಯಲ್ಲಿ ವಾಸಮಾಡು.
Maar de koning zeide tot Ittai, den Gatiet: Waarom gaat ook gij met ons mee? Keer liever terug en blijft bij den nieuwen koning; want ge zijt een buitenlander, en bovendien uit uw woonplaats verbannen.
20 ೨೦ ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ” ಎಂದು ಹೇಳಿದನು.
Pas zijt ge hier gekomen, en nu zou ik u al met ons mee laten dwalen, terwijl ik zelf niet eens weet, waar ik heen ga? Neen, keer terug, neem uw broeders met u mee, en Jahweh betone u zijn genade en trouw!
21 ೨೧ ಅದಕ್ಕೆ ಇತ್ತೈ, “ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಪ್ರಾಣ ಹೋದರೂ, ಉಳಿದರೂ ನನ್ನ ಒಡೆಯನಾದ ಅರಸನು ಇರುವಲ್ಲೇ ಇರುವೆನು” ಎಂದು ಉತ್ತರಕೊಟ್ಟನು.
Maar Ittai gaf den koning ten antwoord: Zowaar Jahweh leeft, en zowaar mijn heer en koning leeft; op de plaats waar mijn heer en koning is, in dood of leven, daar zal ook uw dienaar zijn.
22 ೨೨ ಆಗ ದಾವೀದನು ಅವನಿಗೆ, “ಒಳ್ಳೆಯದು, ಮುಂದೆ ನಡೆ” ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೇವಕರನ್ನೂ, ಕುಟುಂಬದವರನ್ನೂ ಕರೆದುಕೊಂಡು ಮುಂದೆ ನಡೆದನು.
Toen zeide David tot Ittai: Trek dan voorbij. En Ittai, de Gatiet, trok voorbij met al zijn manschappen en al de kinderen, die bij hem waren.
23 ೨೩ ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಮುತ್ತಲಿನ ಜನರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯ ಮಾರ್ಗವನ್ನು ಹಿಡಿದರು.
De hele bevolking begon luidkeels te wenen, toen heel het leger voorbijtrok. Terwijl dus de koning bij de beek Kedron stond en al het volk langs hem heen trok in de richting van de woestijn,
24 ೨೪ ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದರು. ಎಬ್ಯಾತಾರನೂ ಯಜ್ಞವನ್ನು ಅರ್ಪಿಸುತ್ತಿದ್ದನು.
kwam daar ook Sadok met alle levieten, die de verbondsark van God droegen. Ze zetten de ark van God neer, en Ebjatar droeg offers op, totdat al het volk uit de stad was getrokken.
25 ೨೫ ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು.
Maar de koning sprak tot Sadok: Breng de ark van God naar de stad terug. Als ik genade vind in Jahweh’s ogen, zal Hij mij terug laten keren, en mij de ark laten zien en de plaats waar zij staat;
26 ೨೬ ಒಂದು ವೇಳೆ ಆತನು ‘ನಿನ್ನಲ್ಲಿ ನನಗೆ ಇಷ್ಟವಿಲ್ಲ’ ಎಂದುಕೊಂಡರೆ ಇಗೋ, ನಾನು ಇಲ್ಲಿದ್ದೇನೆ. ಆತನು ತನಗೆ ಸರಿ ಕಂಡಂತೆ ಮಾಡಲಿ” ಎಂದನು.
maar als Hij zegt, dat Hij niets van mij wil weten, welnu, dan moet Hij maar met mij doen, zoals het Hem goeddunkt.
27 ೨೭ ಇದಲ್ಲದೆ ಆತನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನರು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸಮಾಧಾನದಿಂದ ಪಟ್ಟಣಕ್ಕೆ ಹಿಂದಿರುಗು.
En de koning vervolgde tot Sadok, den priester, en Ebjatar: Keert rustig naar de stad terug, en neemt uw beide kinderen mee, Achimáas, uw zoon, en Jehonatan, den zoon van Ebjatar.
28 ೨೮ ನಿಮ್ಮಿಂದ ವರ್ತಮಾನ ಬರುವ ತನಕ ನಾನು ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇರುವೆನು” ಎಂದು ಹೇಳಿದನು.
Ik blijf wachten bij de overgangen naar de woestijn, totdat een boodschap van u mij van de stand van zaken op de hoogte stelt.
29 ೨೯ ಆಗ ಚಾದೋಕನೂ ಮತ್ತು ಎಬ್ಯಾತಾರನೂ ದೇವರ ಮಂಜೂಷವನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗಿ ಅಲ್ಲೇ ವಾಸ ಮಾಡಿದರು.
Daarom brachten Sadok en Ebjatar de ark van God naar Jerusalem terug, en bleven daar.
30 ೩೦ ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು.
Nu besteeg David al wenend de Olijfberg, het gezicht bedekt, en barrevoets; ook heel zijn gevolg had het gezicht bedekt en trok wenend mee.
31 ೩೧ ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.
Maar toen men David meldde, dat ook Achitófel zich onder de samenzweerders bij Absalom bevond, zuchtte hij: Moge Jahweh de raad van Achitófel verijdelen!
32 ೩೨ ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕಿಯನಾದ ಹೂಷೈ ಎಂಬುವವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅರಸನ ಬಳಿಗೆ ಬಂದನು.
En zie, nauwelijks was David op de top gekomen, waar men zich neerbuigt voor God, of daar trad Choesjai, de Arkiet, hem tegemoet met gescheurde klederen en stof op het hoofd.
33 ೩೩ ಅರಸನು ಅವನಿಗೆ, “ನೀನು ನನ್ನ ಸಂಗಡ ಬರುವುದಾದರೆ ನನಗೆ ಹೊರೆಯಾಗಿರುವೆ.
David sprak tot hem: Als ge met mij mee trekt, zijt ge mij slechts tot last;
34 ೩೪ ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ಅರಸನೇ, ‘ನಾನು ನಿನ್ನ ಸೇವಕನು; ಈ ಮೊದಲು ನಿನ್ನ ತಂದೆಯ ಸೇವೆ ಮಾಡಿದಂತೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳುವುದಾದರೆ, ಆಗ ನೀನು ಅಹೀತೋಫೆಲನ ಆಲೋಚನೆಯನ್ನು ನಿರರ್ಥಕಮಾಡುವುದಕ್ಕೆ ನನಗೋಸ್ಕರ ಅನುಕೂಲ ಮಾಡಿಕೊಟ್ಟಂತಾಗುವುದು.
maar als ge naar de stad terugkeert en tot Absalom zegt: "Koning, ik wil uw dienaar zijn; vroeger was ik de dienaar van uw vader, nu wil ik uw dienaar zijn, dan zult ge de raad van Achitófel in mijn voordeel kunnen verijdelen.
35 ೩೫ ಅಲ್ಲಿ ನಿನ್ನ ಸಂಗಡ ಚಾದೋಕ್ ಮತ್ತು ಎಬ್ಯಾತಾರನೂ ಇರುತ್ತಾರಲ್ಲಾ. ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ.
Bovendien zijn daar de priesters Sadok en Ebjatar bij de hand. Deel dus alles, wat ge uit het paleis verneemt, aan de priesters Sadok en Ebjatar mede.
36 ೩೬ ಒಬ್ಬನು ಚಾದೋಕನ ಮಗನಾದ ಅಹೀಮಾಚನು ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು” ಎಂದು ಹೇಳಿ ಅವನನ್ನು ಕಳುಹಿಸಿದನು.
Die hebben hun twee zonen bij zich, Achimáas van Sadok en Jehonatan van Ebjatar; en alles, wat ge verneemt, kunt ge mij door hen laten weten".
37 ೩೭ ಅಬ್ಷಾಲೋಮನು ಯೆರೂಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಯೆರೂಸಲೇಮ್ ಪಟ್ಟಣಕ್ಕೆ ಬಂದನು.
Zo kwam Choesjai, de vriend van David, in de stad, toen Absalom zijn intocht in Jerusalem hield.