< ಸಮುವೇಲನು - ದ್ವಿತೀಯ ಭಾಗ 15 >

1 ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನು, ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು.
І сталося по то́му, і завів собі Авесалом по́воза та коні, та п'ятдесят чоловіка, що бігали перед ним.
2 ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, “ನೀವು ಯಾವ ಊರಿನರವರು?” ಎಂದು ಕೇಳುವನು. ಅವರು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು” ಎಂದು ಉತ್ತರ ಕೊಡುವರು.
І вставав Авесалом рано, та й ставав при дорозі до брами. І, бувало, кожного чоловіка, що мав супере́чку та йшов до царя на суд, то Авесалом кликав його та й питав: „З якого ти міста?“І той говорив: „З одно́го з Ізраїлевих племен твій раб“.
3 ಆಗ ಅಬ್ಷಾಲೋಮನು, “ನೋಡಿ ನಿಮ್ಮ ಕಾರ್ಯವು ಒಳ್ಳೆಯದೂ, ನ್ಯಾಯವಾದದ್ದೂ ಆಗಿದೆ. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ಅರಸನಿಂದ ಯಾರೂ ನೇಮಕವಾಗಿಲ್ಲ.
І говорив до нього Авесалом: „Дивися, слова́ твої добрі та слушні, та в царя нема кому тебе вислухати“.
4 ವ್ಯಾಜ್ಯವಾಗಲಿ, ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು” ಎಂದು ಹೇಳುವನು.
І говорив Авесалом: „Коли б мене настановлено суддею в Краю́, то до мене прихо́див би кожен чоловік, що мав би супере́чку чи судо́ву справу, а я випра́вдував би його“.
5 ಯಾರಾದರೂ ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವರನ್ನು ಕೂಡಲೆ ಕೈಚಾಚಿ ಅವರನ್ನು ಹಿಡಿದು ಮುದ್ದಿಡುವನು.
І, бувало, коли хто підхо́див поклонитися йому, то він простягав свою руку, і хапав його́ та цілував його́.
6 ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲರಿಗೂ ಅಬ್ಷಾಲೋಮನು ಹೀಗೆಯೇ ಮಾಡಿ, ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.
І робив Авесало́м, як ось це, усьому Ізраїлеві, хто прихо́див на суд до царя. І крав Авесалом серця́ Ізраїлевих людей!
7 ನಾಲ್ಕು ವರ್ಷಗಳಾದ ನಂತರ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ.
І сталося в кінці сорока літ, і сказав Авесало́м до царя: „Піду́ я та ви́повню обі́тницю мою, що я обіцяв був Господе́ві в Хевро́ні.
8 ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ” ಎಂದು ವಿಜ್ಞಾಪಿಸಿದನು.
Бо раб твій, коли осів був у Ґешу́рі в Арамі, склав обі́тницю, говорячи: Якщо Господь справді поверне мене до Єрусалиму, то я бу́ду служити Господе́ві“.
9 ಆಗ ಅರಸನು, “ಹೋಗಿಬಾ, ನಿನಗೆ ಶುಭವಾಗಲಿ” ಎಂದನು. ಅಬ್ಷಾಲೋಮನು ಹೆಬ್ರೋನಿಗೆ ಹೊರಟು ಹೋದನು.
І сказав йому цар: „Іди з миром!“І той устав та й пішов до Хеврону.
10 ೧೦ ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’” ಎಂದು ಹೇಳಿಸಿದ್ದನು.
І порозсилав Авесалом виві́дувачів по всіх Ізраїлевих племенах, говорячи: „Коли ви почуєте су́рмлення сурми́, то скажете: Зацарював Авесало́м у Хевроні!“
11 ೧೧ ಅಬ್ಷಾಲೋಮನು ಯೆರೂಸಲೇಮಿನಿಂದ ಆರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು. ಅವರಿಗೇನೂ ಗೊತ್ತಿರಲಿಲ್ಲ.
А з Авесаломом пішли двісті чоловіка з Єрусалиму, що були покликані; а йшли вони в простоті́ своїй, і нічо́го не знали.
12 ೧೨ ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.
І послав Авесалом покликати ґілонянина Ахіто́фела, Давидового дора́дника, з його міста з Ґіло, як він мав прино́сити жертви. І був то сильний бунт, і народ все змножувався з Авесало́мом.
13 ೧೩ ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿತು.
І прийшов вісник до Давида, говорячи: „Серце ізра́їльтян стало за Авесаломом“.
14 ೧೪ ಅವನು ಯೆರೂಸಲೇಮಿನಲ್ಲಿ ತನ್ನ ಸೇವಕರಿಗೆ, “ಏಳಿರಿ, ಓಡಿಹೋಗೋಣ. ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ. ಅವನು ಆಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು, ನಮಗೆ ದುರ್ಗತಿಯನ್ನು ಉಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸುವನು” ಎಂದು ಹೇಳಿದನು.
І сказав Давид до всіх своїх слуг, що були з ним в Єрусалимі: „Уставайте і втікаймо, а то не зможемо втекти перед Авесаломом. Поспішіть відійти, щоб він не поспішив і не догнав нас, і щоб не було нам від нього лиха, і не побив цього міста ві́стрям меча“.
15 ೧೫ ಸೇವಕರು ಅರಸನಿಗೆ, “ನಮ್ಮ ಒಡೆಯನಾದ ಅರಸನಿಗೆ ಸರಿ ತೋರಿದ್ದನ್ನು ಮಾಡಲು ನಾವು ಸಿದ್ಧರಾಗಿದ್ದೇವೆ” ಎಂದು ಉತ್ತರ ಕೊಟ್ಟರು.
І сказали цареві царські́ раби: „Усе, що вибере наш пан цар, то при то́му твої раби!“
16 ೧೬ ಆಗ ಅರಸನು ತನ್ನ ಅರಮನೆ ಕಾಯುವುದಕ್ಕಾಗಿ ಹತ್ತು ಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.
I вийшов цар та ввесь його дім пі́шки, а цар позоставив десять жіно́к наложниць, щоб стерегли дім.
17 ೧೭ ಅರಸನು ಅವನ ಜೊತೆಯಲ್ಲಿ ಹೊರಟು ಹೋದ ಜನರೆಲ್ಲರೂ ಪಟ್ಟಣದ ಕಡೆಯ ಮನೆಯ ಬಳಿಯಲ್ಲಿ ಸ್ವಲ್ಪ ಹೊತ್ತು ನಿಂತರು.
І вийшов цар та ввесь народ пішки, і стали вони в Бет-Гамерхаку.
18 ೧೮ ದಾವೀದನೂ, ಅವನ ಎಲ್ಲಾ ಸೇವಕರೂ, ಎಲ್ಲಾ ಕೆರೇತ್ಯ ಮತ್ತು ಎಲ್ಲಾ ಪೆಲೇತ್ಯ ಎಂಬ ಕಾವಲು ದಂಡುಗಳೂ, ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಗಿತ್ತೀಯರೂ ಅರಸನ ಮುಂದೆ ಹಾದು ಹೋದರು.
А всі його слу́ги йшли перед ним, а також усі керетяни й усі пелетяни та всі ґатяни, — шість сотень чоловіка, що прийшли були пі́шки з Ґату, ішли перед царем.
19 ೧೯ ಆಗ ಅರಸನು ಗಿತ್ತೀಯನಾದ ಇತ್ತೈ ಎಂಬುವನಿಗೆ, “ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನಾದ ಅಬ್ಷಾಲೋಮನ ಬಳಿಯಲ್ಲಿ ವಾಸಮಾಡು.
А цар сказав до ґатянина Ітта́я: „Чого пі́деш і ти з нами? Вернися, і сиди з тим царем, бо ти чужий та й вигна́нець зо свого місця.
20 ೨೦ ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ” ಎಂದು ಹೇಳಿದನು.
Учора прийшов ти, а сьогодні я мав би турбувати тебе йти з нами? А я йду, куди піду́, — куди доведе́ться. Вернися, і забери братів своїх із собою. А Господь учинить тобі милість та правду!“
21 ೨೧ ಅದಕ್ಕೆ ಇತ್ತೈ, “ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಪ್ರಾಣ ಹೋದರೂ, ಉಳಿದರೂ ನನ್ನ ಒಡೆಯನಾದ ಅರಸನು ಇರುವಲ್ಲೇ ಇರುವೆನು” ಎಂದು ಉತ್ತರಕೊಟ್ಟನು.
І відповів Ітта́й до царя та й сказав: „ Як живий Господь і живий мій пан цар, — тільки в то́му місці, в якому бу́де мій пан цар, — чи то на смерть, чи то на життя, — то там буде твій раб!“
22 ೨೨ ಆಗ ದಾವೀದನು ಅವನಿಗೆ, “ಒಳ್ಳೆಯದು, ಮುಂದೆ ನಡೆ” ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೇವಕರನ್ನೂ, ಕುಟುಂಬದವರನ್ನೂ ಕರೆದುಕೊಂಡು ಮುಂದೆ ನಡೆದನು.
І сказав Давид до Іттая: „Іди й перейди!“І перейшов ґатянин Іттай та всі його люди, та всі діти, що були з ним.
23 ೨೩ ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಮುತ್ತಲಿನ ಜನರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯ ಮಾರ್ಗವನ್ನು ಹಿಡಿದರು.
А ввесь той Край плакав ревним голосом, і ввесь народ перехо́див. А цар перехо́див поті́к Кедро́н, і ввесь народ перехо́див доро́гою до пустині.
24 ೨೪ ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದರು. ಎಬ್ಯಾತಾರನೂ ಯಜ್ಞವನ್ನು ಅರ್ಪಿಸುತ್ತಿದ್ದನು.
А ось ішли й Садо́к та всі Левити з ним, що не́сли ковчега Божого заповіту. І вони поставили Божого ковчега, а Евіята́р прино́сив цілопалення, аж поки ввесь наро́д не вийшов із міста.
25 ೨೫ ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು.
І сказав цар до Садока: „Поверни Божого ковчега до міста. Якщо я знайду́ милість у Господніх оча́х, і Він поверне мене, то я побачу Його та ме́шкання Його.
26 ೨೬ ಒಂದು ವೇಳೆ ಆತನು ‘ನಿನ್ನಲ್ಲಿ ನನಗೆ ಇಷ್ಟವಿಲ್ಲ’ ಎಂದುಕೊಂಡರೆ ಇಗೋ, ನಾನು ಇಲ್ಲಿದ್ದೇನೆ. ಆತನು ತನಗೆ ಸರಿ ಕಂಡಂತೆ ಮಾಡಲಿ” ಎಂದನು.
А якщо Він скаже так: Не бажаю тебе, — ось я: нехай зробить мені, як добре в оча́х Його́“.
27 ೨೭ ಇದಲ್ಲದೆ ಆತನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನರು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸಮಾಧಾನದಿಂದ ಪಟ್ಟಣಕ್ಕೆ ಹಿಂದಿರುಗು.
І сказав цар до священика Садо́ка: „Чи ти бачиш це все? Вернися з миром до міста, а син твій Ахіма́ац та син Евіятарів Йоната́н, оби́два ваші сини будуть із вами.
28 ೨೮ ನಿಮ್ಮಿಂದ ವರ್ತಮಾನ ಬರುವ ತನಕ ನಾನು ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇರುವೆನು” ಎಂದು ಹೇಳಿದನು.
Глядіть, я буду проволікати в степа́х цієї пусти́ні, аж поки не при́йде від вас слово, щоб повідо́мити мене“.
29 ೨೯ ಆಗ ಚಾದೋಕನೂ ಮತ್ತು ಎಬ್ಯಾತಾರನೂ ದೇವರ ಮಂಜೂಷವನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗಿ ಅಲ್ಲೇ ವಾಸ ಮಾಡಿದರು.
І повернув Садо́к та Евіятар Божого ковчега до Єрусалиму, та й осілися там.
30 ೩೦ ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು.
А Давид схо́див узбіччям на го́ру Оливну, та все плакав. А голова його була покрита, і він ішов бо́сий. А ввесь народ, що був із ним, усі позакривали го́лову свою, і все йшли та плакали...
31 ೩೧ ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.
А Давидові доне́сли, говорячи: „Ахіто́фел серед зрадників з Авесало́мом“. І Давид сказав: „Господи, учини ж нерозумною Ахітофелову раду!“
32 ೩೨ ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕಿಯನಾದ ಹೂಷೈ ಎಂಬುವವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅರಸನ ಬಳಿಗೆ ಬಂದನು.
І сталося, коли вийшов Давид на верхі́в'я, де вклоняються Богові, аж ось навпроти нього аркеянин Хуша́й у роздертій ту́ніці, а порох на його голові.
33 ೩೩ ಅರಸನು ಅವನಿಗೆ, “ನೀನು ನನ್ನ ಸಂಗಡ ಬರುವುದಾದರೆ ನನಗೆ ಹೊರೆಯಾಗಿರುವೆ.
І сказав йому Давид: „Якщо ти пі́деш зо мною, то будеш мені тягаре́м.
34 ೩೪ ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ಅರಸನೇ, ‘ನಾನು ನಿನ್ನ ಸೇವಕನು; ಈ ಮೊದಲು ನಿನ್ನ ತಂದೆಯ ಸೇವೆ ಮಾಡಿದಂತೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳುವುದಾದರೆ, ಆಗ ನೀನು ಅಹೀತೋಫೆಲನ ಆಲೋಚನೆಯನ್ನು ನಿರರ್ಥಕಮಾಡುವುದಕ್ಕೆ ನನಗೋಸ್ಕರ ಅನುಕೂಲ ಮಾಡಿಕೊಟ್ಟಂತಾಗುವುದು.
А якщо ве́рнешся до міста й скажеш Авесаломові: „Я буду раб твій, о ца́рю! Я був віддавна рабом батька твого, а тепер я твій раб“, то зламаєш мені Ахіто́фелеву раду.
35 ೩೫ ಅಲ್ಲಿ ನಿನ್ನ ಸಂಗಡ ಚಾದೋಕ್ ಮತ್ತು ಎಬ್ಯಾತಾರನೂ ಇರುತ್ತಾರಲ್ಲಾ. ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ.
І чи ж не будуть там із тобою священики Садо́к та Евіята́р? І станеться, — усяку річ, яку ти почуєш із царе́вого дому, розповіси́ священикам Садо́кові та Евіята́рові.
36 ೩೬ ಒಬ್ಬನು ಚಾದೋಕನ ಮಗನಾದ ಅಹೀಮಾಚನು ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು” ಎಂದು ಹೇಳಿ ಅವನನ್ನು ಕಳುಹಿಸಿದನು.
Ось там із ними двоє їхніх синів: Ахіма́ац у Садока та Йонатан у Евіята́ра — і ви пошлете через них до мене кожне слово, яке почуєте“.
37 ೩೭ ಅಬ್ಷಾಲೋಮನು ಯೆರೂಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಯೆರೂಸಲೇಮ್ ಪಟ್ಟಣಕ್ಕೆ ಬಂದನು.
І ввійшов Хуша́й, Давидів друг, до міста. А Авесало́м також увійшов до Єрусалиму.

< ಸಮುವೇಲನು - ದ್ವಿತೀಯ ಭಾಗ 15 >