< ಸಮುವೇಲನು - ದ್ವಿತೀಯ ಭಾಗ 17 >
1 ೧ ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು.
১তাৰ পাছত অহীথোফলে অবচালোমক ক’লে, “মোক আপুনি বাৰ হাজাৰ লোকক বাচি ল’ব দিয়ক আৰু মই আজি ৰাতিয়েই উঠি গৈ দায়ূদৰ পিচত খেদি যাওঁ৷
2 ೨ ಅವನು ದಣಿದವನೂ, ಧೈರ್ಯಗುಂದಿದವನೂ ಆಗಿರುವಾಗಲೇ ಪಕ್ಕನೇ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು. ಅವನ ಜನರೆಲ್ಲರೂ ಓಡಿಹೋಗುವರು.
২যেতিয়া তেওঁ ক্লান্ত আৰু দুৰ্বল হোৱা যেন দেখিম, মই হঠাৎ তেওঁক আক্ৰমণ কৰি ত্ৰাসত পেলাম৷ তাতে তেওঁৰ লগৰ সকলো মানুহ পলাই যাব আৰু মই অকল ৰজাকহে বধ কৰিম৷
3 ೩ ನಾನು ಅರಸನೊಬ್ಬನನ್ನೇ ಕೊಂದು, ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರನ್ನು ನಿನ್ನ ಬಳಿಗೆ ತಿರುಗಿ ಬರಮಾಡುವೆನು. ನಿನ್ನ ದೇಶದಲ್ಲೆಲ್ಲಾ ಸಮಾಧಾನವುಂಟಾಗುವುದು” ಎಂದು ಹೇಳಿದನು.
৩এইদৰে মই সকলো লোকক আপোনাৰ ফাললৈ আনিম যি দৰে এজনী কন্যা তেওঁৰ স্ৱামীৰ ওচৰলৈ আহে৷ তাতে সকলো লোক আপোনাৰ অধীনত শান্তিৰে থাকিব।”
4 ೪ ಈ ಮಾತು ಅಬ್ಷಾಲೋಮನಿಗೂ, ಇಸ್ರಾಯೇಲರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.
৪তেতিয়া অহীথোফলৰ এই কথাত অবচালোম আৰু ইস্ৰায়েলৰ সকলো বৃদ্ধ লোকে সন্তোষ পালে।
5 ೫ ಆಮೇಲೆ ಅಬ್ಷಾಲೋಮನು, “ಅರ್ಕೀಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನು ಕೇಳೋಣ” ಎಂದು ಹೇಳಿದನು.
৫তেতিয়া অবচালোমে ক’লে, “এতিয়া অৰ্কীয়া হূচয়ক মাতা আৰু তেওঁ কি কয় সেই বিষয়ে আমি শুনো।”
6 ೬ ಹೂಷೈಯನು ಅಬ್ಷಾಲೋಮನ ಬಳಿಗೆ ಬಂದಾಗ ಅವನನ್ನು, “ಅಹೀತೋಫೆಲನು ಹೀಗೆ ಹೇಳುತ್ತಿದ್ದಾನೆ, ಇದರಂತೆ ಮಾಡಿದರೆ ಒಳ್ಳೆಯದಾಗುವುದೋ, ಇಲ್ಲವಾದರೆ ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.
৬যেতিয়া হূচয় অবচালোমৰ ওচৰলৈ আহিল, তেতিয়া অবচালোমে তেওঁক অহীথোফলে কোৱা কথাষাৰ বুজাই ক’লে আৰু হূচয়ক সুধিলে বোলে, “অহীথোফলে যি কথা ক’লে আমি সেইদৰে কৰিম নে? যদি কৰিব নালাগে, তেনেহ’লে আপুনিয়েই আমাক পৰামর্শ দিয়ক।”
7 ೭ ಹೂಷೈಯು ಅಬ್ಷಾಲೋಮನಿಗೆ, “ಈ ಸಾರಿ ಅಹೀತೋಫೆಲನು ಹೇಳಿದ ಆಲೋಚನೆ ಒಳ್ಳೆಯದಲ್ಲ.
৭তেতিয়া হূচয়ে অবচালোমক ক’লে, “অহীথোফলে এইবাৰ দিয়া দিহা ভাল নহয়।”
8 ೮ ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ.
৮হূচয়ে আৰু ক’লে, “আপুনি জানে যে আপোনাৰ পিতৃ আৰু তেওঁৰ লোকসকল বীৰ যোদ্ধা আৰু তেওঁলোকৰ খং পোৱালি কাঢ়ি নিয়া হাবিৰ ভালুকৰ দৰে ৷ আপোনাৰ পিতৃ এজন যুদ্ধাৰু; তেওঁ সৈন্যসকলৰ লগত আজি ৰাতি নাথাকিব৷
9 ೯ ಅವನು ಈಗ ಒಂದು ಗುಹೆಯಲ್ಲಾಗಲಿ, ಬೇರೆ ಯಾವುದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಸತ್ತರೆ, ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಅಪಜಯವುಂಟಾಯಿತೆಂದು ಸುದ್ದಿ ಹಬ್ಬಿಸುವರು.
৯চাওঁক, এতিয়া তেওঁ হয়তো কোনো এটা গাতত নাইবা আন কোনো ঠাইত লুকাই আছে৷ তেতিয়া এনে ঘটিব যে, আৰম্ভতে তোমাৰ লোকসকলৰ মাজত কেইজনমান লোক পতিত হ’ব আৰু তেতিয়া সেই বিষয়ে শুনা লোকসকলে ক’ব বোলে, ‘অবচালোমৰ পাছত যাওঁতা লোকসকলৰ মাজত হত্যা হৈছে।’
10 ೧೦ ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.
১০সেই সময়ত যি সকল সাহিয়াল লোক, যি সকলৰ সাহস সিংহৰ নিচিনা, তেওঁলোকো পমি যাব কাৰণ আপোনাৰ পিতৃ যে এজন বীৰ পুৰুষ আৰু তেওঁৰ লগৰ লোকসকলো যে সাহিয়াল, সেই বিষয়ে সকলো ইস্ৰায়েলে জানে।
11 ೧೧ ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.
১১কিন্তু মই এই পৰামৰ্শ দিওঁ যে দানৰে পৰা বেৰ-চেবালৈকে, সাগৰৰ তীৰত থকা বালিৰ নিচিনা অসংখ্যক ইস্ৰায়েলক আপোনাৰ আগত গোট খুউৱা হওঁক আৰু যেন আপুনি নিজেও যুদ্ধলৈ যাওঁক।
12 ೧೨ ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ, ಇಬ್ಬನಿಯು ನೆಲದ ಮೇಲೆ ಹೇಗೊ, ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಮತ್ತು ಅವನ ಜನರೂ ನಮ್ಮ ಕೈಗೆ ಸಿಕ್ಕುವರು. ಒಬ್ಬನೂ ತಪ್ಪಿಸಿಕೊಳ್ಳಲಾರನು.
১২তেতিয়া যি কোনো ঠাইত তেওঁক পোৱা যাব, সেই ঠাইতে আমি তেওঁৰ গুৰিত উপস্থিত হৈ, মাটিত নিয়ৰ পৰাৰ দৰে তেওঁৰ ঢাকি ধৰিল৷ তাতে তেওঁক আৰু তেওঁৰ লগত যোৱা মানুহৰ মাজৰ কোনো এজনকো অৱশিষ্ট নাৰাখিম।
13 ೧೩ ಅವನು ಒಂದು ಪಟ್ಟಣವನ್ನು ಹೊಕ್ಕಿರುವುದಾದರೆ, ಇಸ್ರಾಯೇಲ್ಯರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ. ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿ ಬಿಡೋಣ” ಎಂದನು.
১৩যদি তেওঁ কোনো নগৰত আশ্ৰয় লয়, তেন্তে গোটেই ইস্ৰায়েলে সেই নগৰলৈ জৰী আনিব আৰু আমি সেই নগৰখন বান্ধি, জুৰিলৈকে তাক এনেধৰণে টানি লৈ যাম যে সেই ঠাইত এটি সৰু শিলো নাথাকিব৷”
14 ೧೪ ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.
১৪তেতিয়া অবচালোম আৰু ইস্ৰায়েলৰ লোকসকলে ক’লে, “অহীথোফলৰ পৰামৰ্শতকৈ অৰ্কীয়া হূচয়ৰ দিহাই উত্তম।” কিয়নো অবচালোমৰ ওপৰত অমঙ্গল ঘটাবৰ কাৰণে অহীথোফলৰ উত্তম পৰামৰ্শ ব্যৰ্থ কৰিবলৈ যিহোৱাই সেই বিষয়ে থিৰ কৰিছিল।
15 ೧೫ ತರುವಾಯ ಹೂಷೈಯು ಯಾಜಕನಾದ ಚಾದೋಕ್ ಎಬ್ಯಾತಾರರಿಗೆ, “ಅಹೀತೋಫೆಲನು ಅಬ್ಷಾಲೋಮನಿಗೂ ಮತ್ತು ಇಸ್ರಾಯೇಲರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು, ನಾನು ಹೀಗೆ ಹೇಳಿದ್ದೇನೆ.
১৫তাৰ পাছত হূচয়ে চাদোক আৰু অবিয়াথৰ এই দুজন পুৰোহিতক ক’লে, “অহীথোফলে অবচালোমক আৰু ইস্ৰায়েলৰ বৃদ্ধ লোকসকলক এনে-তেনে পৰামৰ্শ দিছিল কিন্তু মই হ’লে অন্য পৰামৰ্শ দিলোঁ।
16 ೧೬ ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀನು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡ. ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಬೇಕು. ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ’ ಎಂದು ಹೇಳಿಕಳುಹಿಸಿರಿ” ಎಂದನು
১৬এতেকে তোমালোকে বেগাই দায়ূদৰ ওচৰলৈ মানুহ পঠিয়াই তেওঁক কোৱা যে, ‘আপুনি আজি ৰাতি আৰাবাহ’ৰ মৰুপ্ৰান্তৰ পাৰ ঘাটত নাথাকিব কিন্তু কোনো প্ৰকাৰে সেই ঠাই পাৰ হৈ যাব, নহ’লে মহাৰাজ আৰু আপোনাৰ লগৰ সকলো লোক গ্ৰাসিত হ’ব’।”
17 ೧೭ ಯೋನಾತಾನ ಮತ್ತು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಮತ್ತು ಇವರ ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಕ್ಕೆ ಬರಲಿಲ್ಲ.
১৭সেই সময়ত যোনাথন আৰু অহীমাচ অয়িন-ৰোগেলৰ জুৰিত বাস কৰি আছিল; তাতে এগৰাকী দাসীয়ে গৈ গৈ তেওঁলোকক বাতৰিসমূহ দিছিল৷ এইদৰে তেওঁলোকে দায়ুদ ৰজাৰ ওচৰত বাতৰি দিবলৈ যায় যাতে তেওঁলোকক নগৰত সোমোৱা কোনো লোকে দেখা নাপায়।
18 ೧೮ ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಓಡಿಹೋಗಿ ಬಹುರೀಮಿನಲ್ಲಿ ಇದ್ದ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದುಕೊಂಡರು.
১৮কিন্তু এইবাৰ এজন যুৱকে তেওঁলোকক দেখি অবচালোমৰ আগত জনালে৷ তেতিয়া যোনাথন আৰু অহীমাচ দুয়ো শীঘ্ৰে গুচি গৈ, বহূৰীমত থকা এজন মানুহৰ ঘৰত উপস্থিত হ’ল। সেই জন মানুহৰ চোতালত এটা নাদ আছিল আৰু দুয়ো সেই নাদলৈ নামি গ’ল।
19 ೧೯ ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ಗೋದಿಯ ನುಚ್ಚನ್ನು ಹರಡಿದಳು. ಇದರಿಂದ ಅವರು ಅಲ್ಲಿ ಅಡಗಿರುವ ವಿಷಯ ಯಾರಿಗೂ ಗೊತ್ತಾಗಲಿಲ್ಲ.
১৯তেতিয়া সেই মানুহ জনৰ পত্নীয়ে নাদৰ মুখত কাপোৰ এখন পাৰি, তাৰ ওপৰত খৰচিয়া পিঠাগুৰি মেলি দিলে; তাতে যোনাথন আৰু অহীমাচ সেই নাদত থকা বুলি কোনেও নাজানিলে।
20 ೨೦ ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ ಮತ್ತು ಯೋನಾತಾನರು ಎಲ್ಲಿದ್ದಾರೆ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು, “ಅವರು ಹಳ್ಳ ದಾಟಿ ಹೋಗಿಬಿಟ್ಟರು” ಎಂದು ಉತ್ತರ ಕೊಟ್ಟಳು. ಅವರು ಅಹೀಮಾಚ ಮತ್ತು ಯೋನಾತಾನರನ್ನು ಹುಡುಕುವುದಕ್ಕೆ ಹೋಗಿ, ಕಾಣದೆ ಯೆರೂಸಲೇಮಿಗೆ ಹಿಂತಿರುಗಿದರು.
২০পাছত অবচালোমৰ দাসবোৰে সেই ঘৰৰ মহিলা গৰাকীৰ ওচৰলৈ গৈ সুধিলে, “অহীমাচ আৰু যোনাথন ক’ত আছে?” তেতিয়া সেই মহিলা গৰাকীয়ে তেওঁলোকক ক’লে, “তেওঁলোক নদীখন পাৰ হৈ গ’ল৷” তাতে সেই ঠাইত তেওঁলোক দুয়োকে বিচাৰি নাপাই যিৰূচালেমলৈ ঘূৰি আহিল।
21 ೨೧ ಅವರು ಹೋದ ಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋದರು. ಅವರು ದಾವೀದನಿಗೆ, “ಅಹೀತೋಫೆಲನು ನಿನಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ. ಆದುದರಿಂದ ಬೇಗನೆ ಎದ್ದು ನದಿದಾಟಿ ಹೋಗು” ಎಂದು ಹೇಳಿದನು.
২১তেওঁলোক গুচি যোৱাৰ পাছত যোনাথন আৰু অহীমাচ নাদৰ বাহিৰলৈ উঠি আহিল৷ তাৰ পাছত দুয়ো দায়ুদ ৰজাক বাতৰি দিবলৈ গ’ল৷ তেওঁলোকে তেওঁক ক’লে, “আপোনালোক উঠক আৰু বেগাই পানীখিনি পাৰ হৈ যাওঁক কিয়নো অহীথোফলে আপোনালোকৰ বিৰুদ্ধে এনে-তেনে পৰামৰ্শ দিলে।”
22 ೨೨ ಆಗ ದಾವೀದನೂ ಮತ್ತು ಅವನ ಜೊತೆಯಲ್ಲಿದ್ದವರೆಲ್ಲರೂ ಯೊರ್ದನ್ ನದಿಯನ್ನು ದಾಟಿದರು. ಬೆಳಗಾದಾಗ ದಾಟಬೇಕಾದವನು ಒಬ್ಬನೂ ಇರಲಿಲ್ಲ.
২২তেতিয়া দায়ুদ আৰু তেওঁৰ লগৰ সকলোৱে উঠি যৰ্দ্দন পাৰ হ’ল৷ ৰাতিপুৱালৈ যৰ্দ্দন পাৰ নোহোৱাকৈ তেওঁলোকৰ এজনো অৱশিষ্ট নাথাকিল।
23 ೨೩ ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
২৩পাছত যেতিয়া অহীথোফলে নিজৰ পৰামৰ্শৰ দৰে কাম নোহোৱা দেখিলে তেতিয়া তেওঁ নিজৰ গাধ সজাই তাত উঠি গুছি গ’ল। তেওঁ নিজ নগৰত থকা নিজ ঘৰলৈ গৈ, নিজৰ ঘৰৰ বিষয়ে দিহা দি, নিজে নিজৰ ডিঙিত ফাঁচ লগালে৷ তাতে তেওঁৰ এনেদৰে মৃত্যু হয় আৰু নিজ পিতৃৰ মৈদামতে তেওঁক মৈদাম দিয়া হ’ল।
24 ೨೪ ದಾವೀದನು ಮಹನಯಿಮಿಗೆ ಹೋದನು. ಅಬ್ಷಾಲೋಮನು ಮತ್ತು ಇಸ್ರಾಯೇಲರೆಲ್ಲರೂ ಕೂಡಿಕೊಂಡು ಯೊರ್ದನ್ ನದಿಯನ್ನು ದಾಟಿದರು.
২৪তাৰ পাছত দায়ূদে মহনয়িমত আহিল৷ অবচালোমে হ’লে সকলো ইস্ৰায়েল লোকৰ সৈতে যৰ্দ্দন পাৰ হ’ল।
25 ೨೫ ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.
২৫তেতিয়া অবচালোমে যোৱাবৰ সলনি অমাচাক প্ৰধান সেনাপতি পাতিলে। অমাচা ইস্ৰায়েলীয়া যিথ্ৰা নামেৰে এজন মানুহৰ পুত্ৰ আছিল৷ সেই মানুহ জনে যোৱাবৰ মাক চৰূয়াৰ ভনীয়েক নাহচৰ জীয়েক অবীগলত গমণ কৰিছিল।
26 ೨೬ ಇಸ್ರಾಯೇಲ್ಯರೂ ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ಪಾಳೆಯಮಾಡಿಕೊಂಡರು.
২৬তাৰ পাছত ইস্ৰায়েল আৰু অবচালোমে গিলিয়দ দেশত ছাউনি পাতিলে।
27 ೨೭ ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗನಾದ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವರು
২৭যি সময়ত দায়ূদে মহনয়িমত আহিছিল, অম্মোনৰ সন্তানসকলৰ ৰব্বাত থকা নাহচৰ পুত্ৰ চোবীয়ে, লো-দবৰাত থকা অম্মীয়েলৰ পুত্ৰ মাখীৰে আৰু ৰোগেলীমত থকা গিলিয়দীয়া বৰ্জ্জিলয়ে দায়ূদৰ আৰু তেওঁৰ লগৰ লোকসকলৰ কাৰণে
28 ೨೮ ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳೊಂದಿಗೆ, ಊಟಕ್ಕಾಗಿ ಗೋದಿ, ಜವೆಗೋದಿ, ಹಿಟ್ಟು, ಹುರಿಗಾಳು, ಅವರೆಕಾಳು, ಅಲಸಂದಿ, ಬೇಳೆ ಜೇನುತುಪ್ಪ,
২৮শয্যা, চৰিয়া, মাটিৰ পাত্ৰ, ঘেঁহু, যৱ, আটাগুৰি, ভজা শস্য, লেচেৰা মাহ, মচুৰ মাহ, ভজামাহ,
29 ೨೯ ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.
২৯মৌ, মাখন, মেৰৰ জাক আৰু গৰু গাখীৰৰ পনিৰ আনিলে৷ এই লোকসকলে কৈছিল যে, “লোকসকলে মৰুপ্ৰান্তত ক্ষুধাতুৰ, শ্ৰান্ত, আৰু তৃষ্ণাতুৰ হৈছে।”