< ಸಮುವೇಲನು - ದ್ವಿತೀಯ ಭಾಗ 17 >

1 ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು.
Kaj Aĥitofel diris al Abŝalom: Permesu al mi elekti dek du mil virojn, kaj mi leviĝos kaj postkuros Davidon en la nokto.
2 ಅವನು ದಣಿದವನೂ, ಧೈರ್ಯಗುಂದಿದವನೂ ಆಗಿರುವಾಗಲೇ ಪಕ್ಕನೇ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು. ಅವನ ಜನರೆಲ್ಲರೂ ಓಡಿಹೋಗುವರು.
Mi atakos lin, kiam li estos laca kaj liaj manoj estos malfortaj; mi teruros lin tiel, ke forkuros la tuta popolo, kiu estas kun li; tiam mi mortigos la reĝon solan.
3 ನಾನು ಅರಸನೊಬ್ಬನನ್ನೇ ಕೊಂದು, ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರನ್ನು ನಿನ್ನ ಬಳಿಗೆ ತಿರುಗಿ ಬರಮಾಡುವೆನು. ನಿನ್ನ ದೇಶದಲ್ಲೆಲ್ಲಾ ಸಮಾಧಾನವುಂಟಾಗುವುದು” ಎಂದು ಹೇಳಿದನು.
Kaj mi revenigos la tutan popolon al vi; kiam revenos ĉiuj, krom tiu, kiun vi serĉas, tiam al la tuta popolo fariĝos paco.
4 ಈ ಮಾತು ಅಬ್ಷಾಲೋಮನಿಗೂ, ಇಸ್ರಾಯೇಲರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.
Kaj la afero plaĉis al Abŝalom kaj al ĉiuj plejaĝuloj de Izrael.
5 ಆಮೇಲೆ ಅಬ್ಷಾಲೋಮನು, “ಅರ್ಕೀಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನು ಕೇಳೋಣ” ಎಂದು ಹೇಳಿದನು.
Tamen Abŝalom diris: Alvoku ankoraŭ Ĥuŝajon, la Arkanon, por ke ni aŭdu ankaŭ tion, kion li diros.
6 ಹೂಷೈಯನು ಅಬ್ಷಾಲೋಮನ ಬಳಿಗೆ ಬಂದಾಗ ಅವನನ್ನು, “ಅಹೀತೋಫೆಲನು ಹೀಗೆ ಹೇಳುತ್ತಿದ್ದಾನೆ, ಇದರಂತೆ ಮಾಡಿದರೆ ಒಳ್ಳೆಯದಾಗುವುದೋ, ಇಲ್ಲವಾದರೆ ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.
Kiam Ĥuŝaj venis al Abŝalom, Abŝalom diris al li: Jen kion diris Aĥitofel; ĉu ni faru tion, kion li diris? se ne, tiam diru vi.
7 ಹೂಷೈಯು ಅಬ್ಷಾಲೋಮನಿಗೆ, “ಈ ಸಾರಿ ಅಹೀತೋಫೆಲನು ಹೇಳಿದ ಆಲೋಚನೆ ಒಳ್ಳೆಯದಲ್ಲ.
Tiam Ĥuŝaj diris al Abŝalom: Ne bona estas la konsilo, kiun donis Aĥitofel ĉi tiun fojon.
8 ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ.
Kaj Ĥuŝaj diris plue: Vi konas vian patron kaj liajn virojn, ke ili estas fortuloj; krom tio ili estas koleraj, kiel urso, de kiu oni forrabis la infanojn sur la kampo; kaj via patro estas sperta militisto, kaj li ne dormos nokte kun la popolo.
9 ಅವನು ಈಗ ಒಂದು ಗುಹೆಯಲ್ಲಾಗಲಿ, ಬೇರೆ ಯಾವುದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಸತ್ತರೆ, ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಅಪಜಯವುಂಟಾಯಿತೆಂದು ಸುದ್ದಿ ಹಬ್ಬಿಸುವರು.
Jen nun li kaŝiĝas en ia kaverno aŭ en ia alia loko. Se en la komenco iu el la niaj falos, kaj disvastiĝos la famo, ke havis malvenkon la popolo, kiu sekvas Abŝalomon,
10 ೧೦ ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.
tiam eĉ la plej kuraĝa, kiu havas koron, similan al la koro de leono, senkuraĝiĝos; ĉar la tuta Izrael scias, kiel fortaj estas via patro, kaj la militistoj, kiuj estas kun li.
11 ೧೧ ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.
Tial mi konsilas: kolektu al vi la tutan Izraelon, de Dan ĝis Beer-Ŝeba, tian multegon, kiel la sablo apud la maro, kaj vi persone iru meze de ili.
12 ೧೨ ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ, ಇಬ್ಬನಿಯು ನೆಲದ ಮೇಲೆ ಹೇಗೊ, ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಮತ್ತು ಅವನ ಜನರೂ ನಮ್ಮ ಕೈಗೆ ಸಿಕ್ಕುವರು. ಒಬ್ಬನೂ ತಪ್ಪಿಸಿಕೊಳ್ಳಲಾರನು.
Kaj ni atakos lin, en kiu ajn loko li troviĝos, kaj ni surfalos sur lin, kiel falas la roso sur la teron; kaj el li, kun ĉiuj viroj, kiuj estas kun li, ne restos eĉ unu.
13 ೧೩ ಅವನು ಒಂದು ಪಟ್ಟಣವನ್ನು ಹೊಕ್ಕಿರುವುದಾದರೆ, ಇಸ್ರಾಯೇಲ್ಯರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ. ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿ ಬಿಡೋಣ” ಎಂದನು.
Kaj se li enfermiĝos en urbo, tiam la tuta Izrael ĉirkaŭigos tiun urbon per ŝnuroj, kaj trenos ĝin en la riveron, ĝis ne restos tie eĉ ŝtoneto.
14 ೧೪ ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.
Tiam diris Abŝalom kaj ĉiuj Izraelidoj: La konsilo de Ĥuŝaj, la Arkano, estas pli bona, ol la konsilo de Aĥitofel. Sed la Eternulo decidis detrui la bonan konsilon de Aĥitofel, por ke la Eternulo venigu malfeliĉon sur Abŝalomon.
15 ೧೫ ತರುವಾಯ ಹೂಷೈಯು ಯಾಜಕನಾದ ಚಾದೋಕ್ ಎಬ್ಯಾತಾರರಿಗೆ, “ಅಹೀತೋಫೆಲನು ಅಬ್ಷಾಲೋಮನಿಗೂ ಮತ್ತು ಇಸ್ರಾಯೇಲರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು, ನಾನು ಹೀಗೆ ಹೇಳಿದ್ದೇನೆ.
Kaj Ĥuŝaj diris al la pastroj Cadok kaj Ebjatar: Tiel kaj tiel konsilis Aĥitofel al Abŝalom kaj al la plejaĝuloj de Izrael, kaj tiel kaj tiel konsilis mi;
16 ೧೬ ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀನು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡ. ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಬೇಕು. ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ’ ಎಂದು ಹೇಳಿಕಳುಹಿಸಿರಿ” ಎಂದನು
nun sendu rapide, kaj dirigu al David jenon: Ne pasigu ĉi tiun nokton sur la ebenaĵo de la dezerto, sed transiru, por ke ne pereu la reĝo, kaj la tuta popolo, kiu estas kun li.
17 ೧೭ ಯೋನಾತಾನ ಮತ್ತು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಮತ್ತು ಇವರ ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಕ್ಕೆ ಬರಲಿಲ್ಲ.
Jonatan kaj Aĥimaac staris apud En-Rogel; servantino iris kaj sciigis al ili, por ke ili iru kaj sciigu al la reĝo David, ĉar ili ne devis sin montri kaj veni en la urbon.
18 ೧೮ ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಓಡಿಹೋಗಿ ಬಹುರೀಮಿನಲ್ಲಿ ಇದ್ದ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದುಕೊಂಡರು.
Sed ilin ekvidis iu junulo, kaj raportis al Abŝalom; dume ili ambaŭ rapide iris, kaj venis en Baĥurimon en la domon de unu homo, sur kies korto troviĝis puto, kaj ili malsupreniris tien.
19 ೧೯ ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ಗೋದಿಯ ನುಚ್ಚನ್ನು ಹರಡಿದಳು. ಇದರಿಂದ ಅವರು ಅಲ್ಲಿ ಅಡಗಿರುವ ವಿಷಯ ಯಾರಿಗೂ ಗೊತ್ತಾಗಲಿಲ್ಲ.
Kaj lia edzino prenis kaj sternis kovrotukon super la aperturo de la puto kaj ŝutis sur ĝin grion, por ke oni nenion rimarku.
20 ೨೦ ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ ಮತ್ತು ಯೋನಾತಾನರು ಎಲ್ಲಿದ್ದಾರೆ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು, “ಅವರು ಹಳ್ಳ ದಾಟಿ ಹೋಗಿಬಿಟ್ಟರು” ಎಂದು ಉತ್ತರ ಕೊಟ್ಟಳು. ಅವರು ಅಹೀಮಾಚ ಮತ್ತು ಯೋನಾತಾನರನ್ನು ಹುಡುಕುವುದಕ್ಕೆ ಹೋಗಿ, ಕಾಣದೆ ಯೆರೂಸಲೇಮಿಗೆ ಹಿಂತಿರುಗಿದರು.
Kiam la servantoj de Abŝalom venis al la virino en la domon, kaj demandis, kie estas Aĥimaac kaj Jonatan, la virino respondis al ili: Ili iris trans la akvujon. Kaj ili serĉis kaj ne trovis, kaj ili revenis Jerusalemon.
21 ೨೧ ಅವರು ಹೋದ ಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋದರು. ಅವರು ದಾವೀದನಿಗೆ, “ಅಹೀತೋಫೆಲನು ನಿನಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ. ಆದುದರಿಂದ ಬೇಗನೆ ಎದ್ದು ನದಿದಾಟಿ ಹೋಗು” ಎಂದು ಹೇಳಿದನು.
Kiam ili foriris, tiuj eliris el la puto, kaj iris kaj raportis al la reĝo David, kaj diris al David: Leviĝu, kaj transiru rapide la akvon, ĉar tiel kaj tiel konsilis kontraŭ vi Aĥitofel.
22 ೨೨ ಆಗ ದಾವೀದನೂ ಮತ್ತು ಅವನ ಜೊತೆಯಲ್ಲಿದ್ದವರೆಲ್ಲರೂ ಯೊರ್ದನ್ ನದಿಯನ್ನು ದಾಟಿದರು. ಬೆಳಗಾದಾಗ ದಾಟಬೇಕಾದವನು ಒಬ್ಬನೂ ಇರಲಿಲ್ಲ.
Tiam leviĝis David, kaj la tuta popolo, kiu estis kun li, kaj ili transiris Jordanon antaŭ la mateniĝo; kaj restis neniu, kiu ne estus transirinta Jordanon.
23 ೨೩ ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
Kiam Aĥitofel vidis, ke oni ne plenumis lian konsilon, li selis azenon, leviĝis kaj iris al sia domo, en sian urbon, faris ordonojn pri sia domo, kaj sufokis sin kaj mortis; kaj oni enterigis lin en la tombo de lia patro.
24 ೨೪ ದಾವೀದನು ಮಹನಯಿಮಿಗೆ ಹೋದನು. ಅಬ್ಷಾಲೋಮನು ಮತ್ತು ಇಸ್ರಾಯೇಲರೆಲ್ಲರೂ ಕೂಡಿಕೊಂಡು ಯೊರ್ದನ್ ನದಿಯನ್ನು ದಾಟಿದರು.
Dume David venis en Maĥanaimon, kaj Abŝalom transiris Jordanon, li kaj ĉiuj viroj de Izrael kun li.
25 ೨೫ ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.
Kaj Amasan Abŝalom starigis super la militistaro anstataŭ Joab; Amasa estis filo de viro, kies nomo estis Jitra, el Jizreel, kaj kiu envenis al Abigail, filino de Naĥaŝ, fratino de Ceruja, patrino de Joab.
26 ೨೬ ಇಸ್ರಾಯೇಲ್ಯರೂ ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ಪಾಳೆಯಮಾಡಿಕೊಂಡರು.
Kaj Izrael kaj Abŝalom stariĝis tendare en la lando Gilead.
27 ೨೭ ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗನಾದ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವರು
Kiam David venis en Maĥanaimon, tiam Ŝobi, filo de Naĥaŝ, el Raba de la Amonidoj, kaj Maĥir, filo de Amiel, el Lo-Debar, kaj Barzilaj, la Gileadano, el Roglim,
28 ೨೮ ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳೊಂದಿಗೆ, ಊಟಕ್ಕಾಗಿ ಗೋದಿ, ಜವೆಗೋದಿ, ಹಿಟ್ಟು, ಹುರಿಗಾಳು, ಅವರೆಕಾಳು, ಅಲಸಂದಿ, ಬೇಳೆ ಜೇನುತುಪ್ಪ,
alportis litojn kaj tapiŝojn kaj argilajn vazojn, kaj tritikon kaj hordeon kaj farunon kaj rostitajn grajnojn, kaj fabojn kaj lentojn, ankaŭ rostitajn,
29 ೨೯ ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.
kaj mielon kaj buteron kaj ŝafojn kaj fromaĝojn; ili alportis al David, kaj al la popolo, kiu estis kun li, por manĝi; ĉar ili diris: La popolo estas malsata kaj laca kaj soifa en la dezerto.

< ಸಮುವೇಲನು - ದ್ವಿತೀಯ ಭಾಗ 17 >