< ಸಮುವೇಲನು - ದ್ವಿತೀಯ ಭಾಗ 18 >
1 ೧ ತರುವಾಯ ಅರಸನಾದ ದಾವೀದನು ತನ್ನ ಬಳಿಯಲ್ಲಿ ಇದ್ದ ಸೈನಿಕರನ್ನು ಎಣಿಸಿ, ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಮತ್ತು ಶತಾಧಿಪತಿಗಳನ್ನು ನೇಮಿಸಿದನು.
দাউদ তাঁর সঙ্গে থাকা লোকজনকে একত্র করে তাদের উপর সহস্র-সেনাপতি ও শত-সেনাপতিদের নিযুক্ত করে দিলেন।
2 ೨ ಅವನು ಸೈನ್ಯವನ್ನು ಮೂರು ಭಾಗ ಮಾಡಿ, ಒಂದು ಭಾಗವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನು ನಿಮ್ಮೊಂದಿಗೆ ಬರುತ್ತೇನೆ” ಎಂದು ಹೇಳಿದನು.
দাউদ তাঁর সৈন্যদলকে তিন ভাগে বিভক্ত করে এক ভাগ যোয়াবের, অন্য এক ভাগ যোয়াবের ভাই সরূয়ার ছেলে অবীশয়ের, ও তৃতীয় ভাগটি গাতীয় ইত্তয়ের কর্তৃত্বাধীনে রেখে, তাদের যুদ্ধে পাঠিয়ে দিলেন। রাজামশাই তাঁর সৈন্যদের বললেন, “আমি নিজেও অবশ্য তোমাদের সঙ্গে কুচকাওয়াজ করে যাব।”
3 ೩ ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು.
কিন্তু লোকেরা বলল, “আপনাকে যেতে হবে না; আমাদের যদি পালাতেও হয়, তারা আমাদের নিয়ে মাথা ঘামাবে না। এমন কী আমাদের মধ্যে অর্ধেক লোকও যদি মারা যায়, তবু তারা মাথা ঘামাবে না; কিন্তু আপনার দাম আমাদের মতো 10,000 লোকের সমান। ভালো হয়, যদি আপনি নগরে থেকেই আমাদের সাহায্য করে যান।”
4 ೪ ಅರಸನು ಅವರಿಗೆ, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.
রাজামশাই উত্তর দিলেন, “তোমাদের যা ভালো মনে হয়, আমি তাই করব।” অতএব রাজামশাই সিংহদুয়ারের কাছে দাঁড়িয়েছিলেন, আর তাঁর সব লোকজন এক-একশো ও এক এক হাজার জনের দলে বিভক্ত হয়ে কুচকাওয়াজ করে এগিয়ে গেল।
5 ೫ ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, “ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ” ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.
রাজামশাই যোয়াব, অবীশয় ও ইত্তয়কে আদেশ দিলেন, “আমার খাতিরে সেই যুবক অবশালোমের প্রতি সদয় আচরণ কোরো।” আর সব সৈন্যসামন্ত শুনেছিল রাজামশাই অবশালোমের বিষয়ে সেনাপতিদের এক একজনকে কী আদেশ দিলেন।
6 ೬ ಅನಂತರ ಸೈನಿಕರು ಇಸ್ರಾಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಾಯೀಮಿನ ಕಾಡಿನಲ್ಲಿ ಯುದ್ಧವಾಯಿತು.
দাউদের সৈন্যদল ইস্রায়েলীদের সঙ্গে যুদ্ধ করার জন্য কুচকাওয়াজ করে নগর ছেড়ে বেরিয়েছিল, এবং ইফ্রয়িমের অরণ্যে যুদ্ধ হল।
7 ೭ ಇಸ್ರಾಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಸೋಲಿಸಲ್ಪಟ್ಟರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.
ইস্রায়েলের সৈন্যদল সেখানে দাউদের লোকদের হাতে সম্পূর্ণরূপে পরাজিত হল, এবং সেদিন প্রচুর লোকজন মারা গেল—সংখ্যায় তা হবে 20,000।
8 ೮ ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.
সমস্ত গ্রাম্য এলাকায় যুদ্ধ ছড়িয়ে পড়েছিল, ও সেদিন যত না লোক তরোয়ালের আঘাতে মারা গেল, তার চেয়েও বেশি লোক মারা গেল অরণ্যের গ্রাসে।
9 ೯ ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತೈಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು.
এদিকে অবশালোম দাউদের লোকজনের সামনে পড়ে গেল। সে খচ্চরের পিঠে চেপে যাচ্ছিল, ও খচ্চরটি যখন বেশ বড়সড় একটি ওক গাছের ঘন ডালপালার তলা দিয়ে যাচ্ছিল, অবশালোমের মাথার চুল গাছে আটকে গেল। সে শূন্যে ঝুলে গেল, অথচ যে খচ্চরটির পিঠে চেপে সে যাচ্ছিল, সেটি এগিয়ে গেল।
10 ೧೦ ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ, “ಅಗೋ, ಆ ದೇವದಾರು ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆನು” ಎಂದು ಹೇಳಿದನು.
যা ঘটেছিল, লোকদের মধ্যে একজন যখন তা দেখেছিল, সে যোয়াবকে বলল, “আমি এইমাত্র দেখলাম যে অবশালোম একটি ওক গাছে ঝুলছে।”
11 ೧೧ ಯೋವಾಬನು ಅವನಿಗೆ, “ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ತಲಾಂತು ಬೆಳ್ಳಿಯನ್ನು, ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು” ಎಂದನು.
যোয়াবকে যে একথা বলল তাকে তিনি বললেন, “তাই নাকি! তুমি তাকে দেখেছ? সেখানেই তুমি কেন তাকে যন্ত্রণা করে মাটিতে পেড়ে ফেলোনি? তবে তো আমি তোমাকে দশ শেকল রুপো ও একজন যোদ্ধার কোমরবন্ধ দিতে পারতাম।”
12 ೧೨ ಅದಕ್ಕೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ ನಾನು ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಗೂ ಮತ್ತು ಇತ್ತೈಗೂ, ‘ಜಾಗರೂಕತೆಯಿಂದಿರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದ್ದಾನಲ್ಲವೇ?
কিন্তু সেই লোকটি উত্তর দিয়েছিল, “আমার হাতে যদি হাজার শেকল রুপোও ওজন করে ধরিয়ে দেওয়া হয়, তবু আমি রাজপুত্রের গায়ে হাত দেব না। আমরা শুনেছি মহারাজ আপনাকে, অবীশয়কে ও ইত্তয়কে আদেশ দিয়েছিলেন, ‘আমার খাতিরে যুবক অবশালোমকে রক্ষা কোরো।’
13 ೧೩ ನಾನು ಅವನ ಪ್ರಾಣಕ್ಕೆ ಅಪಾಯವನ್ನುಂಟುಮಾಡಿದರೆ ಅದು ಅರಸನಿಗೆ ತಿಳಿಯದೆ ಇರುವುದಿಲ್ಲ. ಆಗ ನೀನೂ ನನ್ನನ್ನು ಕೈಬಿಟ್ಟು ದೂರ ನಿಲ್ಲುವಿ” ಎಂದು ಉತ್ತರ ಕೊಟ್ಟನು.
আর আমি যদি আমার প্রাণের ঝুঁকিও নিয়ে ফেলি—মহারাজের কাছে কিছুই লুকিয়ে রাখা যায় না—আপনিই তখন আমার সঙ্গে দূরত্ব বাড়িয়ে ফেলবেন।”
14 ೧೪ ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ
যোয়াব বললেন, “আমি তোমার জন্য এভাবে অপেক্ষা করতে পারব না।” অতএব তিনি হাতে তিনটি বর্শা নিয়ে সেগুলি অবশালোমের বুকে গেঁথে দিলেন, অথচ অবশালোম তখনও ওক গাছে ঝুলেও বেঁচেছিলেন।
15 ೧೫ ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದು ಹಾಕಿದರು.
যোয়াবের অস্ত্র-বহনকারীদের মধ্যে দশজন অবশালোমকে ঘিরে রেখে তাকে আঘাত করে হত্যা করল।
16 ೧೬ ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ತುತ್ತೂರಿಯನ್ನು ಊದಿಸಲು ಸೈನ್ಯದವರೆಲ್ಲಾ ಇಸ್ರಾಯೇಲ್ಯರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು.
পরে যোয়াব শিঙা বাজিয়েছিলেন, ও সৈন্যদল ইস্রায়েলের পিছু ধাওয়া করা বন্ধ করে দিয়েছিল, কারণ যোয়াব তাদের থামিয়ে দিলেন।
17 ೧೭ ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
তারা অবশালোমকে নিয়ে অরণ্যে অবস্থিত এক বড়ো গর্তে ফেলে দিয়েছিল ও তার উপর পাথরের বড়ো এক স্তূপ সাজিয়ে দিয়েছিল। এদিকে, সমস্ত ইস্রায়েলী তাদের বাসায় পালিয়ে গেল।
18 ೧೮ ಅಬ್ಷಾಲೋಮನು ಜೀವದಿಂದ ಇದ್ದಾಗ ತನ್ನ ಹೆಸರನ್ನುಳಿಸಲು ಮಗನಿಲ್ಲದೆ ಇದ್ದುದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಇಂದಿನ ವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭ ಎಂದು ಕರೆಯಲಾಗುತ್ತಿದೆ.
বেঁচে থাকার সময় অবশালোম একটি স্তম্ভ বানিয়ে সেটি নিজের এক স্মৃতিসৌধরূপে রাজার উপত্যকায় স্থাপন করল, কারণ সে ভেবেছিল, “আমার নামের স্মৃতি রক্ষা করার জন্য আমার তো কোনও ছেলে নেই।” সে নিজের নামে স্তম্ভটির নামকরণ করল, এবং আজও পর্যন্ত সেটি অবশালোমের নামেই পরিচিত হয়ে আছে।
19 ೧೯ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭ ವರ್ತಮಾನವನ್ನು ತಿಳಿಸುವೆನು” ಎಂದನು.
এদিকে সাদোকের ছেলে অহীমাস বললেন, “আমি দৌড়ে গিয়ে মহারাজের কাছে এই খবরটি নিয়ে যাব যে মহারাজের শত্রুদের হাত থেকে তাঁকে উদ্ধার করার দ্বারা সদাপ্রভু তাঁকে সমর্থন জানিয়েছেন।”
20 ೨೦ ಯೋವಾಬನು ಅವನಿಗೆ, “ಈ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ. ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ, ಈ ಹೊತ್ತು ಅರಸನ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದಲ್ಲ” ಎಂದು ಹೇಳಿದನು.
“আজ তুমি এ খবরটি নিয়ে যাবে না,” যোয়াব তাঁকে বললেন। “অন্য কোনও এক সময় তুমি এ খবরটি নিয়ে যেয়ো, কিন্তু আজ এরকমটি করতে যেয়ো না, কারণ রাজার ছেলে মারা গিয়েছেন।”
21 ೨೧ ಯೋವಾಬನು ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು” ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟುಹೋದನು.
পরে যোয়াব একজন কূশীয়কে বললেন, “যাও, তুমি যা যা দেখেছ, মহারাজকে গিয়ে তা বলো।” কূশীয় লোকটি যোয়াবকে প্রণাম করে দৌড়ে চলে গেল।
22 ೨೨ ಚಾದೋಕನ ಮಗನಾದ ಅಹೀಮಾಚನು ಪುನಃ ಯೋವಾಬನಿಗೆ, “ಆಗಿದ್ದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡು” ಎಂದು ಬೇಡಿಕೊಂಡನು. ಅದಕ್ಕೆ ಅವನು, “ಮಗನೇ ಯಾಕೆ ಹೋಗಬೇಕೆನ್ನುತ್ತೀ? ಅದಕ್ಕಾಗಿ ನಿನಗೆ ಬಹುಮಾನ ಸಿಕ್ಕುವುದಿಲ್ಲವಲ್ಲಾ” ಎಂದನು.
সাদোকের ছেলে অহীমাস আরেকবার যোয়াবকে বললেন, “যা হয় হোক, আমাকে সেই কূশীয়র পিছন পিছন দৌড়ে যেতে দিন।” কিন্তু যোয়াব উত্তর দিলেন, “বাছা, তুমি কেন যেতে চাইছ? তোমার কাছে এমন কোনও খবর নেই যা দিয়ে তুমি পুরস্কার পাবে।”
23 ೨೩ ಆಗ ಅಹೀಮಾಚನು ಪುನಃ “ಚಿಂತೆಯಿಲ್ಲ ನನ್ನನ್ನು ಕಳುಹಿಸು” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು “ಹೋಗು” ಎಂದು ಹೇಳಿದನು. ಆಗ ಅಹೀಮಾಚನು ಯೊರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು.
তিনি বললেন, “যা হয় হোক, আমি দৌড়ে যেতে চাই।” অগত্যা যোয়াব বললেন, “দৌড়াও!” তখন অহীমাস সমভূমির পথ ধরে দৌড়ে গিয়ে কূশীয়কে পিছনে ফেলে দিলেন।
24 ೨೪ ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರರು ಗೋಪುರದ ಮಾಳಿಗೆಯನ್ನು ಹತ್ತಿ ಪ್ರಾಕಾರದ ಗೋಡೆಯ ಬಳಿಯಲ್ಲಿ ನಿಂತು ನೋಡಲು ಒಬ್ಬಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡರು.
দাউদ যখন ভিতরের ও বাইরের দরজার মাঝামাঝিতে বসেছিলেন, পাহারাদার তখন দেয়াল বেয়ে দরজার ছাদে উঠে গেল। বাইরে তাকিয়ে সে দেখেছিল, একজন লোক একা দৌড়ে আসছে।
25 ೨೫ ಅವನು ಕೂಡಲೆ ದಾವೀದನಿಗೆ ತಿಳಿಸಲು ದಾವೀದನು, “ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು” ಎಂದನು. ಆ ಮನುಷ್ಯನು ಬರಬರುತ್ತಾ ಸಮೀಪವಾದನು.
পাহারাদার রাজামশাইকে ডেকে সে খবর জানিয়েছিল। রাজামশাই বললেন, “সে যদি একা আছে তবে নিশ্চয় ভালো খবরই আনছে।” লোকটি দৌড়াতে দৌড়াতে খুব কাছাকাছি এসে পড়েছিল।
26 ೨೬ ಅಷ್ಟರಲ್ಲಿ ಕಾವಲುಗಾರರು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, “ಇಗೋ, ಇನ್ನೊಬ್ಬನು ಒಬ್ಬಂಟಿಗನಾಗಿ ಬರುತ್ತಿದ್ದಾನೆ” ಎಂದು ಅರಸನಿಗೆ ತಿಳಿಸಿದನು. ಆಗ ಅರಸನು, “ಹಾಗಾದರೆ ಅವನೂ ಸಮಾಚಾರ ತರುವವನು” ಎಂದು ಹೇಳಿದನು.
পরে পাহারাদার আরও একজনকে দৌড়ে আসতে দেখেছিল, আর সে উপর থেকে দারোয়ানকে ডেকে বলল, “দেখো, আরও একজন লোক একা দৌড়ে আসছে!” রাজামশাই বললেন, “সেও নিশ্চয় ভালো খবর নিয়ে আসছে।”
27 ೨೭ ಆಗ ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಶುಭವರ್ತಮಾನ ತರುವವನು” ಎಂದನು.
পাহারাদার বলল, “আমার মনে হচ্ছে যে প্রথমজন সাদোকের ছেলে অহীমাসের মতো দৌড়াচ্ছেন।” “সে একজন ভালো লোক,” রাজামশাই বললেন। “সে ভালো খবর নিয়ে আসছে।”
28 ೨೮ ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ” ಎಂದು ಹೇಳಿ ಸಾಷ್ಟಾಂಗನಮಸ್ಕಾರ ಮಾಡಿ, “ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ” ಎಂದನು.
অহীমাস জোর গলায় রাজামশাইকে ডেকে বললেন, “সব ঠিক আছে!” তিনি মাটিতে উবুড় হয়ে রাজাকে প্রণাম করে বললেন, “আপনার ঈশ্বর সদাপ্রভুর প্রশংসা হোক! আমার প্রভু মহারাজের বিরুদ্ধে যারা হাত তুলেছিল, তিনি তাদের ত্যাগ করেছেন।”
29 ೨೯ ಆಗ ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತವಾಗಿದ್ದಾನೋ” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು, ಆದರೆ ಸಂಗತಿ ಏನೆಂಬುದು ನನಗೆ ಗೊತ್ತಾಗಲಿಲ್ಲ” ಎಂದು ಉತ್ತರಕೊಟ್ಟನು.
রাজামশাই জিজ্ঞাসা করলেন, “সেই যুবক অবশালোম কি সুরক্ষিত আছে?” অহীমাস উত্তর দিলেন, “ঠিক যখন যোয়াব মহারাজের দাসকে ও আপনার দাস—আমাকে পাঠাতে যাচ্ছিলেন, তখন খুব গোলমাল হচ্ছিল, তবে আমি জানি না ঠিক কী হল।”
30 ೩೦ ಆಗ ಅರಸನು ಅವನಿಗೆ, “ನೀನು ಇತ್ತ ನಿಲ್ಲು” ಎಂದು ಆಜ್ಞಾಪಿಸಿದನು. ಅವನು ನಿಂತನು.
রাজামশাই বললেন, “এক পাশে সরে গিয়ে একটু অপেক্ষা করো।” অতএব তিনি পাশে সরে গিয়ে সেখানে দাঁড়িয়ে গেলেন।
31 ೩೧ ಅಷ್ಟರಲ್ಲಿ ಕೂಷ್ಯನು ಬಂದು, “ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ. ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ” ಎಂದನು.
পরে সেই কূশীয় লোকটি সেখানে পৌঁছে বলল, “হে আমার প্রভু মহারাজ, সুখবর শুনুন! যারা মহারাজের বিরুদ্ধে দাঁড়িয়েছিল, তাদের হাত থেকে তাঁকে উদ্ধার করার দ্বারা সদাপ্রভু তাঁকে সমর্থন জানিয়েছেন।”
32 ೩೨ ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಲು ಅವನು, “ನನ್ನ ಒಡೆಯನಾದ ಅರಸನ ಶತ್ರುಗಳಿಗೂ, ಅವನಿಗೆ ಕೇಡು ಮಾಡುವುದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯೌವನಸ್ಥನಿಗಾದ ಗತಿಯೇ ಆಗಲಿ” ಎಂದು ಉತ್ತರ ಕೊಟ್ಟನು.
রাজামশাই সেই কূশীয়কে জিজ্ঞাসা করলেন, “সেই যুবক অবশালোম সুরক্ষিত আছে?” কূশীয় লোকটি উত্তর দিয়েছিল, “আমার প্রভু মহারাজের শত্রুদের ও যারা যারা আপনার বিরুদ্ধে উঠেছিল, তাদের সকলের দশা যেন সেই যুবকের মতোই হয়।”
33 ೩೩ ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.
রাজামশাই কেঁপে উঠেছিলেন। তিনি সদর-দরজার উপরের ঘরে গিয়ে কেঁদেছিলেন। যেতে যেতে তিনি বললেন: “বাছা অবশালোম! আমার ছেলে, আমার ছেলে অবশালোম! তোমার পরিবর্তে শুধু আমি যদি মরতে পারতাম—হে অবশালোম, আমার ছেলে, আমার ছেলে!”