< ಸಮುವೇಲನು - ದ್ವಿತೀಯ ಭಾಗ 19 >

1 ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು.
Et on fit ce rapport à Joab: Voilà le roi qui pleure et qui s'afflige à cause d'Absalom.
2 ಅರಸನು ಮಗನಿಗೊಸ್ಕರ ಪ್ರಲಾಪಿಸುತ್ತಿದ್ದಾನೆ ಎಂದು ಎಲ್ಲಾ ಜನರಿಗೂ ಗೊತ್ತಾದುದರಿಂದ, ಅವರ ಜಯಘೋಷವು ಗೋಳಾಟವಾಯಿತು.
Ainsi la victoire fut ce jour-là changée en deuil pour tout le peuple, parce que le peuple avait entendu qu'on disait: Le roi est fort affligé à cause de son fils.
3 ಜನರು ಆ ದಿನ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನದಿಂದ ಊರನ್ನು ಪ್ರವೇಶಿಸಿದರು.
Ainsi en ce jour-là le peuple revint dans la ville à la dérobée, comme ferait un peuple honteux d'avoir fui dans la bataille.
4 ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, “ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!” ಎಂದು ಬಹಳವಾಗಿ ಗೋಳಾಡಿದನು.
Or le roi s'était couvert la face, et il criait à haute voix: Mon fils Absalom! Absalom, mon fils! mon fils!
5 ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ, “ನಿನ್ನನ್ನೂ, ನಿನ್ನ ಗಂಡು ಹೆಣ್ಣು ಮಕ್ಕಳನ್ನೂ, ಹೆಂಡತಿಯರನ್ನೂ, ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೈನಿಕರನ್ನು ಈ ಹೊತ್ತು ಅಪಮಾನಪಡಿಸಿದಿ.
Alors Joab entra vers le roi dans la maison, et dit: Tu as aujourd'hui couvert de confusion tous tes serviteurs, qui ont, en ce jour, garanti ta vie, et la vie de tes fils et de tes filles, et la vie de tes femmes, et la vie de tes concubines.
6 ನೀನು ಶತ್ರುಗಳನ್ನು ಪ್ರೀತಿಸುವವನೂ, ಮಿತ್ರರನ್ನು ದ್ವೇಷಿಸುವವನೂ ಆಗಿದ್ದೀ. ನೀನು ನಿನ್ನ ಸೇನಾಧಿಪತಿಗಳನ್ನೂ, ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟೆ. ಇದರಿಂದ ಈ ದಿನ ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೆ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ತಿಳಿಯಬೇಕಷ್ಟೆ.
Tu aimes ceux qui te haïssent, et tu hais ceux qui t'aiment; car tu as aujourd'hui montré que tes capitaines et tes serviteurs ne te sont rien; et je connais en ce jour que si Absalom vivait, et que nous fussions tous morts aujourd'hui, cela serait agréable à tes yeux.
7 ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯೆಯಿಂದ ಮಾತನಾಡಿಸು. ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನ ಕಾಲದಿಂದ ಈ ವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವುದು” ಎಂದು ಹೇಳಿದನು.
Maintenant donc, lève-toi, sors et parle selon le cœur de tes serviteurs; car je te jure par l'Éternel, que si tu ne sors, il ne demeurera pas cette nuit un seul homme avec toi; et ce mal sera pire pour toi que tous ceux qui te sont arrivés depuis ta jeunesse jusqu'à présent.
8 ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು.
Alors le roi se leva et s'assit à la porte; et on le fit savoir à tout le peuple, en disant: Voici, le roi est assis à la porte. Et tout le peuple vint devant le roi. Cependant Israël s'était enfui, chacun dans sa tente.
9 ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ನಿವಾಸಗಳಿಗೆ ಓಡಿ ಹೋಗಿದ್ದರು. ಇಸ್ರಾಯೇಲರ ಕುಲಗಳ ಎಲ್ಲಾ ಜನರು ತಮ್ಮತಮ್ಮೊಳಗೆ ಜಗಳವಾಡಿ “ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ, ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.
Et tout le peuple se disputait dans toutes les tribus d'Israël, disant: Le roi nous a délivrés de la main de nos ennemis, et il nous a garantis de la main des Philistins; et maintenant il s'est enfui du pays à cause d'Absalom.
10 ೧೦ ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರುಗಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತನಾಡಿಕೊಂಡರು.
Or Absalom que nous avions oint pour être roi sur nous, est mort dans la bataille. Maintenant donc, pourquoi ne parlez-vous pas de ramener le roi?
11 ೧೧ ಇಸ್ರಾಯೇಲರು ಈ ಪ್ರಕಾರ ಮಾತನಾಡಿಕೊಂಡ ವರ್ತಮಾನವು ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರಿಗೆ, “ನೀವು ನನ್ನ ಹೆಸರಿನಲ್ಲಿ ಯೆಹೂದ ಕುಲದ ಹಿರಿಯರಿಗೆ, ‘ಅರಸನಾದ ನನ್ನನ್ನು ತಿರುಗಿ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ತಡಮಾಡುತ್ತಿರುವುದೇಕೆ?
Alors le roi David envoya dire aux sacrificateurs Tsadok et Abiathar: Parlez aux anciens de Juda, et dites- leur: Pourquoi seriez-vous les derniers à ramener le roi dans sa maison? (Car les discours que tenait tout Israël étaient parvenus jusqu'au roi dans sa maison. )
12 ೧೨ ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಿ. ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ತಡಮಾಡುತ್ತಿರುವುದು ಒಳ್ಳೆಯದಲ್ಲ’ ಎಂದು ಹೇಳಿರಿ.
Vous êtes mes frères, vous êtes mes os et ma chair; et pourquoi seriez-vous les derniers à ramener le roi?
13 ೧೩ ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.
Dites aussi à Amasa: N'es-tu pas mes os et ma chair? Que Dieu me traite avec la dernière rigueur, si tu ne deviens devant moi, pour toujours, chef de l'armée à la place de Joab!
14 ೧೪ ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, “ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ” ಎಂದು ಹೇಳಿಕಳುಹಿಸಿದರು.
Ainsi il fléchit le cœur de tous les hommes de Juda, comme si ce n'eût été qu'un seul homme; et ils envoyèrent dire au roi: Reviens avec tous tes serviteurs.
15 ೧೫ ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದ ಕುಲದವರು ಅವನನ್ನು ಎದುರುಗೊಳ್ಳುವುದಕ್ಕೂ, ಯೊರ್ದನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು.
Le roi s'en retourna donc et vint jusqu'au Jourdain; et Juda vint à Guilgal pour aller à la rencontre du roi, et pour lui faire repasser le Jourdain.
16 ೧೬ ಬೆನ್ಯಾಮೀನ ಕುಲದ ಗೇರನ ಮಗನೂ ಬಹುರೀಮಿನವನೂ ಆದ ಶಿಮ್ಮಿಯು ಅವಸರದಿಂದ ಬಂದು ಅರಸನಾದ ದಾವೀದನನ್ನು ಎದುರುಗೊಳ್ಳುವುದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು.
Et Shimeï, fils de Guéra, Benjamite, de Bachurim, se hâta de descendre avec les hommes de Juda, à la rencontre du roi David.
17 ೧೭ ಅವನ ಜೊತೆಯಲ್ಲಿ ಸಾವಿರ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ, ಇಪ್ಪತ್ತು ಸೇವಕರನ್ನೂ ಕರೆದುಕೊಂಡು ಅರಸನ ಮುಂದೆಯೆ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು
Et il y avait avec lui mille hommes de Benjamin, ainsi que Tsiba, serviteur de la maison de Saül, et ses quinze fils et ses vingt serviteurs avec lui; et ils passèrent le Jourdain devant le roi.
18 ೧೮ ಅರಸನ ಮನೆಯವರನ್ನು ದಾಟಿಸುವುದಕ್ಕೋಸ್ಕರವೂ, ಅವರಿಗೆ ಬೇಕಾದ ಸಹಾಯ ಮಾಡುವುದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ, ಬರುತ್ತಾ ಇದ್ದನು. ಅರಸನು ಯೊರ್ದನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿ ಅವನಿಗೆ,
Le bateau passa aussi, pour transporter la famille du roi, et pour faire ce qu'il lui plairait. Alors Shimeï, fils de Guéra, se jeta en terre devant le roi, comme il passait le Jourdain;
19 ೧೯ “ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ.
Et il dit au roi: Que mon seigneur ne m'impute point mon iniquité, et ne se souvienne point de ce que ton serviteur fit avec méchanceté, le jour où le roi, mon seigneur, sortait de Jérusalem, et que le roi ne le prenne point à cœur.
20 ೨೦ ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ” ಎಂದು ಹೇಳಿದನು.
Car ton serviteur reconnaît qu'il a péché; et voici, je suis venu aujourd'hui, le premier de toute la maison de Joseph, pour descendre au-devant du roi, mon seigneur.
21 ೨೧ ಚೆರೂಯಳ ಮಗನಾದ ಅಬೀಷೈಯು, “ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ” ಎಂದನು.
Mais Abishaï, fils de Tséruja, répondit et dit: A cause de cela ne fera-t-on pas mourir Shimeï, puisqu'il a maudit l'oint de l'Éternel?
22 ೨೨ ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ, ನೀವು ನನಗೆ ಯಾಕೆ ಶತ್ರುಗಳಾಗಬೇಕು? ಈ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವುದು ಸರಿಯೋ? ನಾನು ಇಸ್ರಾಯೇಲರ ಅರಸನೆಂಬುದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು” ಎಂದು ನುಡಿದನು.
Et David dit: Qu'ai-je à faire avec vous, fils de Tséruja, que vous soyez aujourd'hui mes adversaires? Ferait-on mourir aujourd'hui quelqu'un en Israël? Car ne sais-je pas bien qu'aujourd'hui je deviens roi sur Israël?
23 ೨೩ ಅನಂತರ ಅರಸನು ಶಿಮ್ಮಿಗೆ, “ನಿನಗೆ ಮರಣದಂಡನೆ ಆಗುವುದಿಲ್ಲ” ಎಂದು ಪ್ರಮಾಣಮಾಡಿ ಹೇಳಿದನು.
Et le roi dit à Shimeï: Tu ne mourras point! Et le roi le lui jura.
24 ೨೪ ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.
Méphibosheth, fils de Saül, descendit aussi à la rencontre du roi. Il n'avait point lavé ses pieds, ni fait sa barbe, ni lavé ses habits, depuis que le roi s'en était allé jusqu'au jour qu'il revint en paix.
25 ೨೫ ಇವನು ಯೆರೂಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, “ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ?” ಎಂದು ಕೇಳಿದನು.
Il arriva donc, quand il fut venu à Jérusalem au-devant du roi, que le roi lui dit: Pourquoi n'es-tu point venu avec moi, Méphibosheth?
26 ೨೬ ಅವನು, “ನನ್ನ ಒಡೆಯನೇ, ಅರಸನೇ, ನನ್ನ ಸೇವಕನು ನನ್ನನ್ನು ವಂಚಿಸಿದನು. ಕುಂಟನಾದ ನಾನು ಅವನಿಗೆ ‘ಕತ್ತೆಗೆ ತಡಿಹಾಕು. ನಾನು ಕುಳಿತುಕೊಂಡು ಅರಸನ ಜೊತೆಯಲ್ಲಿ ಹೋಗಬೇಕು’ ಎಂದು ಆಜ್ಞಾಪಿಸಿದೆನು.
Et il répondit: O roi mon seigneur, mon serviteur m'a trompé; car ton serviteur avait dit: Je ferai seller mon âne, et je monterai dessus, et j'irai vers le roi; car ton serviteur est boiteux.
27 ೨೭ ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ. ತನಗೆ ಸರಿಕಂಡದ್ದನ್ನು ಮಾಡಲಿ.
Et il a calomnié ton serviteur auprès du roi, mon seigneur; mais le roi, mon seigneur, est comme un ange de Dieu. Fais donc ce qui te semblera bon.
28 ೨೮ ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.
Car, bien que tous ceux de la maison de mon père aient mérité la mort de la part du roi mon seigneur, cependant tu as mis ton serviteur parmi ceux qui mangeaient à ta table. Et quel droit ai-je encore? Qu'ai-je encore à me plaindre auprès du roi?
29 ೨೯ ಆಗ ಅರಸನು ಅವನಿಗೆ, “ಹೆಚ್ಚು ಮಾತು ಯಾಕೆ? ನೀನೂ ಮತ್ತು ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬುದೇ ನನ್ನ ತೀರ್ಪು” ಎಂದು ಹೇಳಿದನು.
Alors le roi lui dit: Pourquoi toutes ces paroles? Je l'ai dit: Toi et Tsiba, partagez-vous les terres.
30 ೩೦ ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೆ ತೆಗೆದುಕೊಂಡರೂ, ತೆಗೆದುಕೊಳ್ಳಲಿ. ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದನು.
Et Méphibosheth répondit au roi: Qu'il prenne même tout, puisque le roi, mon seigneur, est revenu en paix dans sa maison.
31 ೩೧ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವನು ಅರಸನನ್ನು ಸಾಗಕಳುಹಿಸುವುದಕ್ಕಾಗಿ ರೋಗೆಲೀಮಿನಿಂದ ಯೊರ್ದನಿಗೆ ಬಂದಿದ್ದನು.
Barzillaï, de Galaad, était aussi descendu de Roguélim; et il avait passé le Jourdain avec le roi, pour l'accompagner au delà du Jourdain.
32 ೩೨ ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.
Or Barzillaï était très vieux, âgé de quatre-vingts ans; et il avait entretenu le roi pendant son séjour à Mahanaïm; car c'était un homme fort riche.
33 ೩೩ ಅರಸನು ಬರ್ಜಿಲ್ಲೈಗೆ, “ನನ್ನ ಜೊತೆಯಲ್ಲಿ ನದಿಯ ಆಚೆಗೆ ಬಾ, ನಾನು ಯೆರೂಸಲೇಮಿನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಂರಕ್ಷಿಸುತ್ತೇನೆ” ಎಂದನು.
Et le roi dit à Barzillaï: Passe plus avant avec moi, et je t'entretiendrai chez moi, à Jérusalem.
34 ೩೪ ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇಮಿಗೆ ಬರುವುದು ಹೇಗೆ
Mais Barzillaï répondit au roi: Combien d'années ai-je à vivre, que je monte avec le roi à Jérusalem?
35 ೩೫ ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವುದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಯಾಕೆ ಹೊರೆಯಾಗಿರಬೇಕು?
Je suis aujourd'hui âgé de quatre-vingts ans; pourrais-je discerner ce qui est bon d'avec ce qui est mauvais? Ton serviteur savourerait-il ce qu'il mangerait et boirait? Pourrais-je encore entendre la voix des chanteurs et des chanteuses? Et pourquoi ton serviteur serait-il encore à charge au roi, mon seigneur?
36 ೩೬ ಹೊಳೆದಾಟಿ ಸ್ವಲ್ಪ ದೂರ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು?
Ton serviteur ira un peu au delà du Jourdain avec le roi. Mais pourquoi le roi voudrait-il me donner une telle récompense?
37 ೩೭ ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ” ಎಂದನು.
Je te prie, que ton serviteur s'en retourne, et que je meure dans ma ville, près du tombeau de mon père et de ma mère. Mais voici, ton serviteur Kimham passera avec le roi mon seigneur; fais pour lui ce qui te semblera bon.
38 ೩೮ ಅದಕ್ಕೆ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ. ಅವನಿಗೆ ನಿನ್ನ ಇಷ್ಟದಂತೆ ದಯೆತೋರಿಸುವೆನು. ಇನ್ನು ಏನೇನು ಮಾಡಬೇಕೆನ್ನುತ್ತಿಯೋ ಅದೆಲ್ಲವನ್ನೂ ಮಾಡುತ್ತೇನೆ” ಎಂದು ಹೇಳಿದನು.
Et le roi dit: Que Kimham passe avec moi, et je ferai pour lui tout ce qui te semblera bon; et tout ce que tu souhaiteras de moi, je te l'accorderai.
39 ೩೯ ಎಲ್ಲಾ ಜನರೂ ನದಿದಾಟಿದರು. ಅರಸನು ನದಿ ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.
Tout le peuple passa donc le Jourdain, et le roi aussi passa. Puis le roi baisa Barzillaï et le bénit; et il s'en retourna en sa demeure.
40 ೪೦ ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲಾ ಯೆಹೂದ್ಯರೂ, ಇಸ್ರಾಯೇಲರಲ್ಲಿ ಅರ್ಧ ಜನರೂ ಅರಸನನ್ನು ಕರೆದುಕೊಂಡು ಹೋದರು.
De là le roi passa à Guilgal, et Kimham passa avec lui. Ainsi tout le peuple de Juda, et même la moitié du peuple d'Israël, ramenèrent le roi.
41 ೪೧ ಆಗ ಇಸ್ರಾಯೇಲರೆಲ್ಲರೂ ಅರಸನ ಮುಂದೆ ಬಂದು ಅವನನ್ನು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೆ ಹೋಗಿ ಅರಸನನ್ನೂ, ಅವನ ಮನೆಯವರನ್ನೂ, ಅವನೊಡನೆ ಇದ್ದ ಜನರನ್ನೂ ಯೊರ್ದನ್ ನದಿ ದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು.
Mais voici, tous les hommes d'Israël vinrent vers le roi, et lui dirent: Pourquoi nos frères, les hommes de Juda, t'ont-ils enlevé, et ont-ils fait passer le Jourdain, au roi, à sa famille, à tous les gens de David avec lui?
42 ೪೨ ಅದಕ್ಕೆ ಯೆಹೂದ್ಯರು ಇಸ್ರಾಯೇಲರಿಗೆ, “ಅರಸನು ನಮಗೆ ಸಮೀಪದ ಬಂಧು. ನೀವು ಅದಕ್ಕಾಗಿ ಕೋಪಗೊಳ್ಳುವುದೇಕೆ? ನಾವೇನು ಅರಸನ ಹಣದಿಂದ ಊಟಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ?” ಎಂದು ಉತ್ತರ ಕೊಟ್ಟರು.
Alors tous les hommes de Juda répondirent aux hommes d'Israël: Parce que le roi nous tient de plus près. Et pourquoi vous fâchez-vous de cela? Avons-nous rien mangé de ce qui est du roi? Ou en avons-nous reçu quelque présent?
43 ೪೩ ಆಗ ಇಸ್ರಾಯೇಲರು ಯೆಹೂದ್ಯರಿಗೆ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟಲ್ಲಾ, ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ಕಡೆಗಾಣಿಸಿದ್ದೇಕೆ? ನಮ್ಮ ಅರಸನನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ?” ಎಂದರು. ಇಸ್ರಾಯೇಲರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.
Mais les hommes d'Israël répondirent aux hommes de Juda, et dirent: Nous avons dix parts au roi, et nous sommes pour David plus que vous; pourquoi donc nous avez-vous méprisés? N'avons-nous pas parlé les premiers de ramener notre roi? Mais les hommes de Juda parlèrent plus rudement que les hommes d'Israël.

< ಸಮುವೇಲನು - ದ್ವಿತೀಯ ಭಾಗ 19 >