< ಸಮುವೇಲನು - ದ್ವಿತೀಯ ಭಾಗ 19 >
1 ೧ ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು.
Yoabu akaambiwa, “Tazama, mfalme analia na kumwombolea Absalomu.”
2 ೨ ಅರಸನು ಮಗನಿಗೊಸ್ಕರ ಪ್ರಲಾಪಿಸುತ್ತಿದ್ದಾನೆ ಎಂದು ಎಲ್ಲಾ ಜನರಿಗೂ ಗೊತ್ತಾದುದರಿಂದ, ಅವರ ಜಯಘೋಷವು ಗೋಳಾಟವಾಯಿತು.
Hivyo siku ile ushindi uligeuzwa kuwa maombolezo kwa jeshi lote, kwa maana jeshi likasikia ikisemwa siku hiyo, “Mfalme anaomboleza kwa ajili ya mwanaye.”
3 ೩ ಜನರು ಆ ದಿನ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನದಿಂದ ಊರನ್ನು ಪ್ರವೇಶಿಸಿದರು.
Siku ile askari waliingia mjini kwa kunyemelea kimyakimya kama watu waonao haya baada ya kukimbia vitani.
4 ೪ ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, “ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!” ಎಂದು ಬಹಳವಾಗಿ ಗೋಳಾಡಿದನು.
Mfalme akafunika uso wake na kulia kwa sauti, “Mwanangu Absalomu, Absalomu, mwanangu, mwangangu!”
5 ೫ ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ, “ನಿನ್ನನ್ನೂ, ನಿನ್ನ ಗಂಡು ಹೆಣ್ಣು ಮಕ್ಕಳನ್ನೂ, ಹೆಂಡತಿಯರನ್ನೂ, ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೈನಿಕರನ್ನು ಈ ಹೊತ್ತು ಅಪಮಾನಪಡಿಸಿದಿ.
Ndipo Yoabu akaingia ndani kwa mfalme na kumwambia, “Leo umeziaibisha nyuso za askari wako, waliookoa maisha yako leo, maisha ya wanao na binti zako, maisha ya wake zako na maisha ya masuria wako,
6 ೬ ನೀನು ಶತ್ರುಗಳನ್ನು ಪ್ರೀತಿಸುವವನೂ, ಮಿತ್ರರನ್ನು ದ್ವೇಷಿಸುವವನೂ ಆಗಿದ್ದೀ. ನೀನು ನಿನ್ನ ಸೇನಾಧಿಪತಿಗಳನ್ನೂ, ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟೆ. ಇದರಿಂದ ಈ ದಿನ ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೆ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ತಿಳಿಯಬೇಕಷ್ಟೆ.
kwa maana wawapenda wakuchukiao na kuwachukia wakupendao. Kwa kuwa leo umeonesha kwamba maakida na askari si chochote kwako. Natambua sasa kwamba kame Absalomu angesalia na sisi sote tungekufa hilo lingekufurahisha.
7 ೭ ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯೆಯಿಂದ ಮಾತನಾಡಿಸು. ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನ ಕಾಲದಿಂದ ಈ ವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವುದು” ಎಂದು ಹೇಳಿದನು.
Sasa basi, inuka na uende kuongea na askari wako kwa upole, kwani nakuapia kwa Yahwe, ikiwa hutakwenda hakuna mtu hata mmoja atakayesalia nawe usiku huu. Na hii itakuwa vibaya sana kwako kuliko madhara yoyote yaliyowai kukupata tangu ujana wako.”
8 ೮ ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು.
Hivyo mfalme akainuka na kuketi kati ya lango la mji, watu wote wakaambiwa, “Tazama, mfalme ameketi kati ya lango.” Ndipo watu wote wakaja mbele za mfalme. Walakini, Israeli walikimbia kila mtu nyumbani kwake.
9 ೯ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ನಿವಾಸಗಳಿಗೆ ಓಡಿ ಹೋಗಿದ್ದರು. ಇಸ್ರಾಯೇಲರ ಕುಲಗಳ ಎಲ್ಲಾ ಜನರು ತಮ್ಮತಮ್ಮೊಳಗೆ ಜಗಳವಾಡಿ “ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ, ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.
Watu wote wakahojiana wao kwa wao katika jamaa zote za Israeli kusema, “Mfalme alituokoa na mkono wa adui zetu. Alitukomboa na mkono wa Wafilisti lakini sasa ameikimbia nchi mbele ya Absalomu.
10 ೧೦ ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರುಗಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತನಾಡಿಕೊಂಡರು.
Na Absalomu tuliyemtia mafuta juu yetu amekufa vitani. Hivyo kwa nini hatuongei juu ya kumrudisha mfalme tena?”
11 ೧೧ ಇಸ್ರಾಯೇಲರು ಈ ಪ್ರಕಾರ ಮಾತನಾಡಿಕೊಂಡ ವರ್ತಮಾನವು ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರಿಗೆ, “ನೀವು ನನ್ನ ಹೆಸರಿನಲ್ಲಿ ಯೆಹೂದ ಕುಲದ ಹಿರಿಯರಿಗೆ, ‘ಅರಸನಾದ ನನ್ನನ್ನು ತಿರುಗಿ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ತಡಮಾಡುತ್ತಿರುವುದೇಕೆ?
Mfalme Daudi akatuma kwa Sadoki na kwa Abiathari makuhani kusema, “Ongeeni na wazee wa Yuda kusema, Kwa nini ninyi mmekuwa wa mwisho kumrudisha mfalme kwenye kasri lake tena, kwa vile usemi wa Israeli wote unamtaka mfalme arudi katika kasri lake?
12 ೧೨ ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಿ. ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ತಡಮಾಡುತ್ತಿರುವುದು ಒಳ್ಳೆಯದಲ್ಲ’ ಎಂದು ಹೇಳಿರಿ.
Ninyi ni ndugu zangu, mwili na mifupa yangu. Kwa nini basi mmekuwa wa mwisho kumrudisha mfalme?'
13 ೧೩ ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.
Na mwambieni Amasa, 'Je wewe si mwili na mfupa wangu? Mungu anifanyie hivyo na kuzidi pia ikiwa hautakuwa jamadari wa jeshi langu tangu sasa na baadaye mahali pa Yoabu.
14 ೧೪ ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, “ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ” ಎಂದು ಹೇಳಿಕಳುಹಿಸಿದರು.
Naye akaishinda mioyo ya watu wote wa Yuda kama mtu mmoja, hata wakatuma kwa mfalme kusema, “Rudi sasa na watu wako wote.”
15 ೧೫ ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದ ಕುಲದವರು ಅವನನ್ನು ಎದುರುಗೊಳ್ಳುವುದಕ್ಕೂ, ಯೊರ್ದನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು.
Hivyo mfalme akarudi naye akaja Yordani. Na watu wa Yuda wakaja Gilgali kwenda kumlaki mfalme ili kumvusha mfalme juu ya Yordani.
16 ೧೬ ಬೆನ್ಯಾಮೀನ ಕುಲದ ಗೇರನ ಮಗನೂ ಬಹುರೀಮಿನವನೂ ಆದ ಶಿಮ್ಮಿಯು ಅವಸರದಿಂದ ಬಂದು ಅರಸನಾದ ದಾವೀದನನ್ನು ಎದುರುಗೊಳ್ಳುವುದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು.
Shimei mwana wa Gera, Mbenjamini, kutoka Bahurimu, akaharakisha kushuka pamoja na watu wa Yuda ili kumlaki mfalme Daudi.
17 ೧೭ ಅವನ ಜೊತೆಯಲ್ಲಿ ಸಾವಿರ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ, ಇಪ್ಪತ್ತು ಸೇವಕರನ್ನೂ ಕರೆದುಕೊಂಡು ಅರಸನ ಮುಂದೆಯೆ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು
Kulikuwa na watu elfu moja kutoka Benjamini waliokuwa pamoja naye, na Siba mtumishi wa Sauli na wanawe kumi na watano na watumish wake ishirini walikuwa pamoja naye. Wakavuka Yordani mbele za mfalme.
18 ೧೮ ಅರಸನ ಮನೆಯವರನ್ನು ದಾಟಿಸುವುದಕ್ಕೋಸ್ಕರವೂ, ಅವರಿಗೆ ಬೇಕಾದ ಸಹಾಯ ಮಾಡುವುದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ, ಬರುತ್ತಾ ಇದ್ದನು. ಅರಸನು ಯೊರ್ದನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿ ಅವನಿಗೆ,
Wakavuka ili kuivusha familia ya mfalme na kumfanyia lolote aliloona jema. Shimei mwana wa Gera akainama chini mbele za mfalme mara alipoanza kuuvuka Yordani.
19 ೧೯ “ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ.
Shimei akamwambia mfalme, “Bwana wangu asinione mwenye hatia au kuyaweka moyoni ambayo mtumishi wake alifanya kwa ukaidi siku bwana wangu mfalme alipoondoka Yerusalemu. Tafadhari, mfalme na asiyaweke moyoni.
20 ೨೦ ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ” ಎಂದು ಹೇಳಿದನು.
Kwa maana mtumishi wako anatambua kwamba amekosa. Tazama, ndiyo maana nimekuja leo wa kwanza katika nyumba ya Yusufu ili kumlaki bwana wangu mfalme.”
21 ೨೧ ಚೆರೂಯಳ ಮಗನಾದ ಅಬೀಷೈಯು, “ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ” ಎಂದನು.
Lakini Abishai mwana wa Seruya akajibu na kusema, “Je Shimei asife kwa hili kwa vile alivyomlaani mtiwa mafuta wa Yahweh?”
22 ೨೨ ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ, ನೀವು ನನಗೆ ಯಾಕೆ ಶತ್ರುಗಳಾಗಬೇಕು? ಈ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವುದು ಸರಿಯೋ? ನಾನು ಇಸ್ರಾಯೇಲರ ಅರಸನೆಂಬುದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು” ಎಂದು ನುಡಿದನು.
Ndipo Daudi akasema, “Nifanye nini nanyi enyi wana wa Seruya, hata leo mkawa adui zangu? Je mtu yeyote atauawa leo katika Israeli? Kwani sijui kama leo mimi ni mfalme juu ya Israeli?
23 ೨೩ ಅನಂತರ ಅರಸನು ಶಿಮ್ಮಿಗೆ, “ನಿನಗೆ ಮರಣದಂಡನೆ ಆಗುವುದಿಲ್ಲ” ಎಂದು ಪ್ರಮಾಣಮಾಡಿ ಹೇಳಿದನು.
Hivyo mfalme akamwambia Shimei, “Hautakufa.” Mfalme akamwahidi kwa kiapo.
24 ೨೪ ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.
Kisha Mefiboshethi mwana wa Sauli akashuka ili kumlaki mfalme. Hakuwa ameivalisha miguu yake wala kunyoa ndevu zake wala kufua nguo zake tangu siku mfalme alipoondoka hata siku aliporudi kwa amani.
25 ೨೫ ಇವನು ಯೆರೂಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, “ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ?” ಎಂದು ಕೇಳಿದನು.
Na hivyo alipotoka Yerusalemu ili kumlaki mfalme, mfalme akamwambia, “Mefiboshethi Kwa nini haukwenda pamoja nami?”
26 ೨೬ ಅವನು, “ನನ್ನ ಒಡೆಯನೇ, ಅರಸನೇ, ನನ್ನ ಸೇವಕನು ನನ್ನನ್ನು ವಂಚಿಸಿದನು. ಕುಂಟನಾದ ನಾನು ಅವನಿಗೆ ‘ಕತ್ತೆಗೆ ತಡಿಹಾಕು. ನಾನು ಕುಳಿತುಕೊಂಡು ಅರಸನ ಜೊತೆಯಲ್ಲಿ ಹೋಗಬೇಕು’ ಎಂದು ಆಜ್ಞಾಪಿಸಿದೆನು.
Akajibu, “Bwana wangu mfalme mtumishi wangu alinidanganya, kwani nilisema, nitapanda juu ya punda ili niende na mfalme, kwa kuwa mtumishi wako ni mlemavu.'
27 ೨೭ ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ. ತನಗೆ ಸರಿಕಂಡದ್ದನ್ನು ಮಾಡಲಿ.
Mtumishi wangu Siba amenisemea uongo, mtumishi wako, kwa bwana wangu mfalme. Lakini bwana wangu mfalme ni kama malaika wa Mungu. Kwa hiyo fanya lililojema machoni pako.
28 ೨೮ ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.
Kwa maana nyumba yote ya baba yangu walikuwa maiti mbele ya bwana wangu mfalme, lakini ukamweka mtumishi wako miongoni mwao walao mezani pako. Kwa hiyo nililiye haki gani zaidi kwa mfalme?”
29 ೨೯ ಆಗ ಅರಸನು ಅವನಿಗೆ, “ಹೆಚ್ಚು ಮಾತು ಯಾಕೆ? ನೀನೂ ಮತ್ತು ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬುದೇ ನನ್ನ ತೀರ್ಪು” ಎಂದು ಹೇಳಿದನು.
“Kisha mfalme akamwambia, “Kwa nini kueleza yote zaidi? Nimekwisha amua kwamba wewe na Siba mtagawana mashamba.”
30 ೩೦ ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೆ ತೆಗೆದುಕೊಂಡರೂ, ತೆಗೆದುಕೊಳ್ಳಲಿ. ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದನು.
Ndipo Mefiboshethi akamjibu mfalme, “Sawa, acha achukue yote kwa vile bwana wangu mfalme amerudi salama nyumbani kwake.”
31 ೩೧ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವನು ಅರಸನನ್ನು ಸಾಗಕಳುಹಿಸುವುದಕ್ಕಾಗಿ ರೋಗೆಲೀಮಿನಿಂದ ಯೊರ್ದನಿಗೆ ಬಂದಿದ್ದನು.
Kisha Berzilai Mgileadi akashuka kutoka Rogelimu ili avuke Yordani pamoja na mfalme, naye akamsaidia mfalme kuuvuka Yordani.
32 ೩೨ ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.
Basi Berzilai alikuwa mzee sana mwenye umri wa miaka themanini. Alikuwa amemsaidia mfalme kwa mahitaji alipokuwako Mahanaimu kwani alikuwa na mali nyingi.
33 ೩೩ ಅರಸನು ಬರ್ಜಿಲ್ಲೈಗೆ, “ನನ್ನ ಜೊತೆಯಲ್ಲಿ ನದಿಯ ಆಚೆಗೆ ಬಾ, ನಾನು ಯೆರೂಸಲೇಮಿನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಂರಕ್ಷಿಸುತ್ತೇನೆ” ಎಂದನು.
Mfalme akamwambia Berzilai, njoo pamoja nami, nami nitaandaa kwa ajili yako huko Yerusalemu.”
34 ೩೪ ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇಮಿಗೆ ಬರುವುದು ಹೇಗೆ
Berzilai akamjibu mfalme, “Kwani kuna siku ngapi zilizosalia maishani mwangu, hata niende na mfalme huko Yerusalemu?
35 ೩೫ ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವುದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಯಾಕೆ ಹೊರೆಯಾಗಿರಬೇಕು?
Nina umri wa miaka themanini. Je naweza kutofautisha mema na mabaya? Je mtumishi wako anaweza kuonja ninachokula au kunywa? Je naweza kusikia sauti zaidi za wanaume na wanawake waimbao? Kwa nini basi mtumishi wako awe mzigo kwa bwana wangu mfalme?
36 ೩೬ ಹೊಳೆದಾಟಿ ಸ್ವಲ್ಪ ದೂರ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು?
Mtumishi wako angependa tu kuvuka Yordani pamoja na mfalme. Kwa nini mfalme anilipe kwa thawabu kama hiyo?
37 ೩೭ ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ” ಎಂದನು.
Tafadhari mruhusu mtumishi wako arudi nyumbani, ili kwamba nife katika mji wangu katika kaburi la baba na mama yangu. Lakini tazama, huyu hapa mtumishi wako Kimhamu. Haya yeye na avuke na bwana wangu mfalme na umfanyie lolote lipendezalo kwako.”
38 ೩೮ ಅದಕ್ಕೆ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ. ಅವನಿಗೆ ನಿನ್ನ ಇಷ್ಟದಂತೆ ದಯೆತೋರಿಸುವೆನು. ಇನ್ನು ಏನೇನು ಮಾಡಬೇಕೆನ್ನುತ್ತಿಯೋ ಅದೆಲ್ಲವನ್ನೂ ಮಾಡುತ್ತೇನೆ” ಎಂದು ಹೇಳಿದನು.
Mfalme akajibu, “Kimhamu atakwenda pamoja nami, nami nitamtendea kila lionekanalo jema kwako, na lolote unalotamani kutoka kwangu nitakutendea.”
39 ೩೯ ಎಲ್ಲಾ ಜನರೂ ನದಿದಾಟಿದರು. ಅರಸನು ನದಿ ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.
Kisha watu wote wakavuka Yordani, mfalme naye akavuka, kisha mfalme akambusu Berzilai na kumbariki. Kisha Berzilai akarudi nyumbani kwake.
40 ೪೦ ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲಾ ಯೆಹೂದ್ಯರೂ, ಇಸ್ರಾಯೇಲರಲ್ಲಿ ಅರ್ಧ ಜನರೂ ಅರಸನನ್ನು ಕರೆದುಕೊಂಡು ಹೋದರು.
Hivyo mfalme akavuka kuelekea Gilgali, na Kimhamu akavuka pamoja naye. Jeshi la Yuda lote na nusu ya jeshi la Israeli likamleta mfalme.
41 ೪೧ ಆಗ ಇಸ್ರಾಯೇಲರೆಲ್ಲರೂ ಅರಸನ ಮುಂದೆ ಬಂದು ಅವನನ್ನು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೆ ಹೋಗಿ ಅರಸನನ್ನೂ, ಅವನ ಮನೆಯವರನ್ನೂ, ಅವನೊಡನೆ ಇದ್ದ ಜನರನ್ನೂ ಯೊರ್ದನ್ ನದಿ ದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು.
Mara watu wa Israeli wote wakaanza kuja kwa mfalme na kumwambia, “Kwa nini ndugu zetu, watu wa Yuda, wamemwiba na kumleta mfalme na familia yake juu ya Yordani na watu wote wa Daudi pamoja naye?
42 ೪೨ ಅದಕ್ಕೆ ಯೆಹೂದ್ಯರು ಇಸ್ರಾಯೇಲರಿಗೆ, “ಅರಸನು ನಮಗೆ ಸಮೀಪದ ಬಂಧು. ನೀವು ಅದಕ್ಕಾಗಿ ಕೋಪಗೊಳ್ಳುವುದೇಕೆ? ನಾವೇನು ಅರಸನ ಹಣದಿಂದ ಊಟಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ?” ಎಂದು ಉತ್ತರ ಕೊಟ್ಟರು.
Hivyo watu wa Yuda wakawajibu watu wa Israeli, “Ni kwa kuwa mfalme anahusiana nasi kwa karibu zaidi. Kwa nini basi mkasirike juu ya hili? Je sisi tumekula chochote ambacho mfalme amekitoa? Je ametupa zawadi yoyote?
43 ೪೩ ಆಗ ಇಸ್ರಾಯೇಲರು ಯೆಹೂದ್ಯರಿಗೆ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟಲ್ಲಾ, ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ಕಡೆಗಾಣಿಸಿದ್ದೇಕೆ? ನಮ್ಮ ಅರಸನನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ?” ಎಂದರು. ಇಸ್ರಾಯೇಲರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.
Watu wa Israeli wakawajibu watu wa Yuda, Sisi tuna kabila kumi zaidi kwa mfalme hivyo tuna sehemu kubwa zaidi kwa Daudi kuliko ninyi. Kwa nini basi mlitudharau? Je hatukuwa wa kwanza kupendekeza kumrudisha mfalme wetu? Lakini maneno ya watu wa Yuda hata yakawa makali kuliko maneno ya watu wa Israeli.