< ಸಮುವೇಲನು - ದ್ವಿತೀಯ ಭಾಗ 2 >
1 ೧ ಅನಂತರ ದಾವೀದನು ಯೆಹೋವನನ್ನು, “ನಾನು ಯೆಹೂದ ದೇಶದ ಯಾವುದಾದರು ಒಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಲು ಆತನು ಹೋಗಬಹುದು ಅಂದನು. ಅವನು ತಿರುಗಿ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ ಹೆಬ್ರೋನಿಗೆ ಹೋಗು ಎಂದು ಉತ್ತರ ಸಿಕ್ಕಿತು.
१इसके बाद दाऊद ने यहोवा से पूछा, “क्या मैं यहूदा के किसी नगर में जाऊँ?” यहोवा ने उससे कहा, “हाँ, जा।” दाऊद ने फिर पूछा, “किस नगर में जाऊँ?” उसने कहा, “हेब्रोन में।”
2 ೨ ಆಗ ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಜ್ರೇಲಿನ ಅಹೀನೋವಮಳನ್ನೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳನ್ನೂ ಕರೆದುಕೊಂಡು ಅಲ್ಲಿಗೆ ಹೋದನು.
२तब दाऊद यिज्रेली अहीनोअम, और कर्मेली नाबाल की स्त्री अबीगैल नामक, अपनी दोनों पत्नियों समेत वहाँ गया।
3 ೩ ದಾವೀದನ ಜನರೂ ತಮ್ಮ ತಮ್ಮ ಕುಟುಂಬಗಳನ್ನು ಕರೆದುಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಮಾಡಿದರು.
३दाऊद अपने साथियों को भी एक-एक के घराने समेत वहाँ ले गया; और वे हेब्रोन के गाँवों में रहने लगे।
4 ೪ ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.
४और यहूदी लोग गए, और वहाँ दाऊद का अभिषेक किया कि वह यहूदा के घराने का राजा हो। जब दाऊद को यह समाचार मिला, कि जिन्होंने शाऊल को मिट्टी दी वे गिलाद के याबेश नगर के लोग हैं।
5 ೫ ಆಗ ದಾವೀದನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ನಿಷ್ಠೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿ ಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಆಶೀರ್ವಾದವುಂಟಾಗಲಿ.
५तब दाऊद ने दूतों से गिलाद के याबेश के लोगों के पास यह कहला भेजा, “यहोवा की आशीष तुम पर हो, क्योंकि तुम ने अपने प्रभु शाऊल पर यह कृपा करके उसको मिट्टी दी।
6 ೬ ಯೆಹೋವನ ಒಡಂಬಡಿಕೆಯ ನಂಬಿಕೆ ಮತ್ತು ಸತ್ಯ ನಿಮ್ಮೊಂದಿಗಿರಲಿ. ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.
६इसलिए अब यहोवा तुम से कृपा और सच्चाई का बर्ताव करे; और मैं भी तुम्हारी इस भलाई का बदला तुम को दूँगा, क्योंकि तुम ने यह काम किया है।
7 ೭ ಯೆಹೂದ್ಯರು ನನ್ನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ನಿಮ್ಮ ಅರಸನಾದ ಸೌಲನು ಸತ್ತುಹೋದರೂ ನೀವು ಶೂರರಾಗಿರಿ, ನಿಮ್ಮ ಕೈಗಳು ಜೋಲುಬೀಳದಿರಲಿ” ಎಂದು ಹೇಳಿ ಕಳುಹಿಸಿದನು.
७अब हियाव बाँधो, और पुरुषार्थ करो; क्योंकि तुम्हारा प्रभु शाऊल मर गया, और यहूदा के घराने ने अपने ऊपर राजा होने को मेरा अभिषेक किया है।”
8 ೮ ಸೌಲನ ಸೇನಾಧಿಪತಿಯೂ ನೇರನ ಮಗನೂ ಆದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ಹೊಳೆಯ ಆಚೆಯಲ್ಲಿರುವ ಮಹನಯಿಮಿಗೆ ಕರೆದುಕೊಂಡು ಹೋಗಿ
८परन्तु नेर का पुत्र अब्नेर जो शाऊल का प्रधान सेनापति था, उसने शाऊल के पुत्र ईशबोशेत को संग ले पार जाकर महनैम में पहुँचाया;
9 ೯ ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ, ಎಫ್ರಾಯೀಮ್, ಬೆನ್ಯಾಮೀನ ಜನರಿಗೂ ಬೇರೆ ಎಲ್ಲಾ ಇಸ್ರಾಯೇಲರಿಗೂ ಅರಸನನ್ನಾಗಿ ಮಾಡಿದನು.
९और उसे गिलाद अशूरियों के देश, यिज्रेल, एप्रैम, बिन्यामीन, वरन् समस्त इस्राएल प्रदेश पर राजा नियुक्त किया।
10 ೧೦ ಸೌಲನ ಮಗನಾದ ಈಷ್ಬೋಶೆತನು ನಲ್ವತ್ತು ವರ್ಷದವನಾದಾಗ ಇಸ್ರಾಯೇಲರನ್ನು ಆಳತೊಡಗಿ ಎರಡು ವರ್ಷ ರಾಜ್ಯಭಾರ ಮಾಡಿದನು. ಯೆಹೂದ್ಯರು ಮಾತ್ರ ದಾವೀದನನ್ನು ಹಿಂಬಾಲಿಸಿದರು.
१०शाऊल का पुत्र ईशबोशेत चालीस वर्ष का था जब वह इस्राएल पर राज्य करने लगा, और दो वर्ष तक राज्य करता रहा। परन्तु यहूदा का घराना दाऊद के पक्ष में रहा।
11 ೧೧ ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿದ್ದದ್ದು ಏಳು ವರ್ಷ ಆರು ತಿಂಗಳುಗಳು.
११और दाऊद का हेब्रोन में यहूदा के घराने पर राज्य करने का समय साढ़े सात वर्ष था।
12 ೧೨ ಒಂದು ದಿನ ನೇರನ ಮಗನಾದ ಅಬ್ನೇರನೂ, ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು.
१२नेर का पुत्र अब्नेर, और शाऊल के पुत्र ईशबोशेत के जन, महनैम से गिबोन को आए।
13 ೧೩ ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು.
१३तब सरूयाह का पुत्र योआब, और दाऊद के जन, हेब्रोन से निकलकर उनसे गिबोन के जलकुण्ड के पास मिले; और दोनों दल उस जलकुण्ड के एक-एक ओर बैठ गए।
14 ೧೪ ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದು ನಮ್ಮ ಮುಂದೆ ಸ್ಪರ್ಧಿಸಲಿ” ಎಂದು ಹೇಳಲು ಯೋವಾಬನು, “ಆಗಲಿ” ಅಂದನು.
१४तब अब्नेर ने योआब से कहा, “जवान लोग उठकर हमारे सामने खेलें।” योआब ने कहा, “वे उठें।”
15 ೧೫ ಆಗ ಸೌಲನ ಮಗನಾದ ಈಷ್ಬೋಶೆತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರು, ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಸಮಸಂಖ್ಯೆಯಾಗಿ ಹೊರಟು ಬಂದರು.
१५तब वे उठे, और बिन्यामीन, अर्थात् शाऊल के पुत्र ईशबोशेत के पक्ष के लिये बारह जन गिनकर निकले, और दाऊद के जनों में से भी बारह निकले।
16 ೧೬ ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆಹಿಡಿದು, ಕತ್ತಿಯಿಂದ ಪಕ್ಕೆಯಲ್ಲಿ ತಿವಿದಿದ್ದರಿಂದ ಎಲ್ಲರೂ ಸತ್ತು ಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ಹೆಲ್ಕಾತ್ ಹಸ್ಸೂರಿಂ” ಎಂದು ಹೆಸರಾಯಿತು.
१६और उन्होंने एक दूसरे का सिर पकड़कर अपनी-अपनी तलवार एक दूसरे के पाँजर में भोंक दी; और वे एक ही संग मरे। इससे उस स्थान का नाम हेल्कथस्सूरीम पड़ा, वह गिबोन में है।
17 ೧೭ ಅನಂತರ ಆ ದಿನ ಘೋರ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ಯರೂ ದಾವೀದನ ಸೇವಕರಿಂದ ಸೋಲಿಸಲ್ಪಟ್ಟರು.
१७उस दिन बड़ा घोर युद्ध हुआ; और अब्नेर और इस्राएल के पुरुष दाऊद के जनों से हार गए।
18 ೧೮ ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.
१८वहाँ योआब, अबीशै, और असाहेल नामक सरूयाह के तीनों पुत्र थे। असाहेल जंगली हिरन के समान वेग से दौड़नेवाला था।
19 ೧೯ ಇವನು ಎಡಕ್ಕಾದರೂ ಬಲಕ್ಕಾದರೂ ತಿರುಗದೇ ಅಬ್ನೇರನನ್ನು ಹಿಂದಟ್ಟಿದನು.
१९तब असाहेल अब्नेर का पीछा करने लगा, और उसका पीछा करते हुए न तो दाहिनी ओर मुड़ा न बाईं ओर।
20 ೨೦ ಅಬ್ನೇರನು ಹಿಂತಿರುಗಿ ನೋಡಿ, “ನೀನು ಅಸಾಹೇಲನೋ?” ಎಂದು ಕೇಳಿದ್ದಕ್ಕೆ ಅವನು ಹೌದೆಂದು ಉತ್ತರಕೊಟ್ಟನು.
२०अब्नेर ने पीछे फिरके पूछा, “क्या तू असाहेल है?” उसने कहा, “हाँ मैं वही हूँ।”
21 ೨೧ ಆಗ ಅಬ್ನೇರನು ಅವನಿಗೆ, “ನನ್ನನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ತಿರುಗಿಕೊಂಡು ಯುವಕರಲ್ಲೊಬ್ಬನನ್ನು ಹಿಡಿದು ಸುಲಿದುಕೋ” ಎಂದು ಹೇಳಿದನು. ಆದರೆ ಅಸಾಹೇಲನು ಒಪ್ಪಲಿಲ್ಲ.
२१अब्नेर ने उससे कहा, “चाहे दाहिनी, चाहे बाईं ओर मुड़, किसी जवान को पकड़कर उसका कवच ले ले।” परन्तु असाहेल ने उसका पीछा न छोड़ा।
22 ೨೨ ಅಬ್ನೇರನು ತಿರುಗಿ ಅಸಾಹೇಲನಿಗೆ, “ನನ್ನನ್ನು ಬಿಟ್ಟು ಹೋಗು, ನಾನೇಕೆ ನಿನ್ನನ್ನು ನೆಲಕ್ಕುರುಳಿಸಬೇಕು? ಹಾಗೆ ಮಾಡಿದರೆ ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮುಖ ತೋರಿಸಲಿ” ಅಂದನು.
२२अब्नेर ने असाहेल से फिर कहा, “मेरा पीछा छोड़ दे; मुझ को क्यों तुझे मारकर मिट्टी में मिला देना पड़े? ऐसा करके मैं तेरे भाई योआब को अपना मुख कैसे दिखाऊँगा?”
23 ೨೩ ಅಸಾಹೇಲನು ಬಿಟ್ಟು ಹೋಗುವುದಕ್ಕೆ ಒಪ್ಪದ ಕಾರಣ ಅಬ್ನೇರನು ಬರ್ಜಿಯನ್ನು ಹಿಂದಿನಿಂದ ಅವನ ಹೊಟ್ಟೆಯೊಳಗೆ ತಿವಿದನು. ಬರ್ಜಿಯು ಅವನ ಬೆನ್ನಿನಿಂದ ಹಾಯ್ದು ಹೊರಗೆ ಬಂದಿತು. ಅವನು ಕೂಡಲೇ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತು ಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು.
२३तो भी उसने हट जाने को मना किया; तब अब्नेर ने अपने भाले की पिछाड़ी उसके पेट में ऐसे मारी, कि भाला आर-पार होकर पीछे निकला; और वह वहीं गिरकर मर गया। जितने लोग उस स्थान पर आए जहाँ असाहेल गिरकर मर गया, वहाँ वे सब खड़े रहे।
24 ೨೪ ಆದರೆ ಯೋವಾಬನೂ, ಅಬೀಷೈಯೂ ಅಬ್ನೇರನನ್ನು ಹಿಂದಟ್ಟಿದರು. ಹೀಗೆ ಅವರು “ಅಮ್ಮಾ” ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮಾನವಾಯಿತು. ಆ ಗುಡ್ಡವು ಗಿಬ್ಯೋನಿನ ಅರಣ್ಯ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿರುತ್ತದೆ.
२४परन्तु योआब और अबीशै अब्नेर का पीछा करते रहे; और सूर्य डूबते-डूबते वे अम्माह नामक उस पहाड़ी तक पहुँचे, जो गिबोन के जंगल के मार्ग में गीह के सामने है।
25 ೨೫ ಬೆನ್ಯಾಮೀನ್ಯರು ಒಂದೇ ಗುಂಪಾಗಿ ಕೂಡಿಕೊಂಡು ಅಬ್ನೇರನ ಬಳಿಗೆ ಬಂದು ಗುಡ್ಡದ ಮೇಲೆ ನಿಂತರು.
२५और बिन्यामीनी अब्नेर के पीछे होकर एक दल हो गए, और एक पहाड़ी की चोटी पर खड़े हुए।
26 ೨೬ ಆಗ ಅಬ್ನೇರನು, “ಯೋವಾಬನನ್ನು ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ” ಎಂದನು.
२६तब अब्नेर योआब को पुकारके कहने लगा, “क्या तलवार सदा मारती रहे? क्या तू नहीं जानता कि इसका फल दुःखदाई होगा? तू कब तक अपने लोगों को आज्ञा न देगा, कि अपने भाइयों का पीछा छोड़कर लौटो?”
27 ೨೭ ಅದಕ್ಕೆ ಯೋವಾಬನು, “ದೇವರ ಜೀವದಾಣೆ, ಈಗ ನೀನು ಈ ಮಾತುಗಳನ್ನು ಹೇಳದಿದ್ದರೆ ಜನರು ನಾಳೆ ಬೆಳಗಾಗುವವರೆಗೆ ತಮ್ಮ ಬಂಧುಗಳನ್ನು ಹಿಂದಟ್ಟದೆ ಬಿಡುವುದಿಲ್ಲ” ಎಂದು ಉತ್ತರಕೊಟ್ಟು ಕೂಡಲೇ ತುತ್ತೂರಿಯನ್ನು ಊದಿಸಿದನು.
२७योआब ने कहा, “परमेश्वर के जीवन की शपथ, कि यदि तू न बोला होता, तो निःसन्देह लोग सवेरे ही चले जाते, और अपने-अपने भाई का पीछा न करते।”
28 ೨೮ ಆಗ ಅವರು ಇಸ್ರಾಯೇಲ್ಯರನ್ನು ಹಿಂದಟ್ಟದೆ ಬಿಟ್ಟಿದ್ದರಿಂದ ಯುದ್ಧವು ನಿಂತುಹೋಯಿತು.
२८तब योआब ने नरसिंगा फूँका; और सब लोग ठहर गए, और फिर इस्राएलियों का पीछा न किया, और लड़ाई फिर न की।
29 ೨೯ ಅಬ್ನೇರನೂ ಅವನ ಜನರೂ ಅರಾಬಾ ತಗ್ಗಿನಲ್ಲಿ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಯೊರ್ದನ್ ಹೊಳೆದಾಟಿ, ಬಿಥ್ರೋನ ಕಣಿವೆಯನ್ನು ಹಾದು, ಮಹನಯಿಮಿಗೆ ಸೇರಿದರು.
२९अब्नेर अपने जनों समेत उसी दिन रातों-रात अराबा से होकर गया; और यरदन के पार हो समस्त बित्रोन देश में होकर महनैम में पहुँचा।
30 ೩೦ ಯೋವಾಬನು ಅಬ್ನೇರನನ್ನು ಹಿಂದಟ್ಟದೆ ಬಿಟ್ಟು, ಹಿಂದಿರುಗಿ ಬಂದು, ಜನರನ್ನು ಸೇರಿಸಿ ಲೆಕ್ಕಮಾಡಿದಾಗ ಅವರಲ್ಲಿ ದಾವೀದನ ಹತ್ತೊಂಬತ್ತು ಮಂದಿ ಸೈನಿಕರೂ ಅಸಾಹೇಲನೂ ಇರಲಿಲ್ಲ.
३०योआब अब्नेर का पीछा छोड़कर लौटा; और जब उसने सब लोगों को इकट्ठा किया, तब क्या देखा, कि दाऊद के जनों में से उन्नीस पुरुष और असाहेल भी नहीं हैं।
31 ೩೧ ಆದರೆ ದಾವೀದನ ಸೈನಿಕರು ಅಬ್ನೇರನ ಜನರಾಗಿರುವ ಬೆನ್ಯಾಮೀನ್ಯರಲ್ಲಿ ಮುನ್ನೂರ ಅರವತ್ತು ಮಂದಿಯನ್ನು ಕೊಂದಿದ್ದರು.
३१परन्तु दाऊद के जनों ने बिन्यामीनियों और अब्नेर के जनों को ऐसा मारा कि उनमें से तीन सौ साठ जन मर गए।
32 ೩೨ ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು.
३२और उन्होंने असाहेल को उठाकर उसके पिता के कब्रिस्तान में, जो बैतलहम में था, मिट्टी दी। तब योआब अपने जनों समेत रात भर चलकर पौ फटते-फटते हेब्रोन में पहुँचा।