< ಸಮುವೇಲನು - ದ್ವಿತೀಯ ಭಾಗ 20 >
1 ೧ ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.
१शबा नावाचा एक मनुष्य तेथे होता. हा बिक्रीचा मुलगा. बन्यामीन घराण्यातील हा शबा अगदी कुचकामी पण खोडसाळ प्रवृत्तीचा होता. त्याने एकदा रणशिंग फुंकले आणि लोकांस गोळा केले. आणि त्यांना म्हणाला, दावीदाकडे आपला भाग नाही. या इशायच्या मुलात आपला वाटा नाही. इस्राएलींनो, आपापल्या डेऱ्यात परत चला.
2 ೨ ಆಗ ಇಸ್ರಾಯೇಲರೆಲ್ಲರೂ ದಾವೀದನನ್ನು ಬಿಟ್ಟು, ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಯೊರ್ದನ್ ತಗ್ಗಿನಿಂದ ಯೆರೂಸಲೇಮಿನ ವರೆಗೂ ಅವನ ಜೊತೆಯಲ್ಲಿ ಹೋದರು.
२हे ऐकून सर्व इस्राएल लोक दावीदाला सोडून बिक्रीचा मुलगा शबा याच्या मागे गेले. पण यहूदी लोक मात्र यार्देन नदीपासून यरूशलेमपर्यंत राजाच्या पाठीशी राहिले.
3 ೩ ಅರಸನಾದ ದಾವೀದನು ಯೆರೂಸಲೇಮಿಗೆ ಬಂದ ಮೇಲೆ ತಾನು ಅರಮನೆ ಕಾಯುವುದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾಗಿ ಒಂದು ಮನೆಯಲ್ಲಿಟ್ಟು, ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಸಂಗಮಿಸಲಿಲ್ಲ. ಅವರು ಜೀವದಿಂದಿರುವವರೆಗೂ ವಿಧೆವೆಯರಂತಿದ್ದು ಕಾವಲಲ್ಲಿ ಇರಬೇಕಾಯಿತು.
३दावीद यरूशलेम येथील आपल्या घरी परतला. आपल्या दहा दासींना त्याने घराच्या निगराणीसाठी मागे ठेवले होते त्यांना त्याने एका खास घरात ठेवले. आणि त्यांच्यावर पहारा ठेवला. मरेपर्यंत या स्त्रिया तेथेच राहिल्या दावीदाने त्यांच्या उदरनिर्वाहाची सगळी नीट व्यवस्था केली पण पुन्हा त्यांच्याशी संबंध ठेवले नाहीत. त्यामुळे शेवटपर्यंत त्यांची स्थिती विधवेसारखी होती.
4 ೪ ಅನಂತರ ಅರಸನು ಅಮಾಸನಿಗೆ, “ನೀನು ಮೂರು ದಿನಗಳೊಳಗೆ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು” ಎಂದು ಆಜ್ಞಾಪಿಸಿದನು.
४राजा अमासास म्हणाला, यहूदाच्या लोकांस तीन दिवसात येऊन मला भेटायला सांग. त्यावेळी तूही बरोबर राहा.
5 ೫ ಅಮಾಸನು ಹೋಗಿ ಯೆಹೂದ್ಯರನ್ನು ಕೂಡಿಸಿದನು. ಆದರೆ ಅವನು ನೇಮಕವಾದ ಸಮಯಕ್ಕೆ ಬಾರದೆ ತಡಮಾಡಿದ್ದರಿಂದ
५तेव्हा अमासा यहूद्यांना बोलवून आणायला रवाना झाला. पण राजाने सांगितल्यापेक्षा जास्त वेळ त्यास लागला.
6 ೬ ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ಕರೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿಜಡಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು” ಎಂದನು.
६दावीद अबीशयला म्हणाला, अबशालोमापेक्षाही हा बिक्रीचा मुलगा शबा आपल्या दृष्टीने धोकादायक आहे. तेव्हा माझ्या हाताखालच्यांना घेऊन त्याचा पाठलाग कर. तटबंदी असलेल्या नगरात तो जायच्या आधीच त्यास गाठायला हवे. एकदा तो मजबूत बंदोबस्त असलेल्या नगरात शिरला की त्यास पकडणे अवघड जाईल.
7 ೭ ಆಗ ಅವನು ಯೋವಾಬನ ಸೈನಿಕರನ್ನೂ, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳನ್ನೂ ಎಲ್ಲಾ ಶೂರರನ್ನೂ ಕರೆದುಕೊಂಡು ಬಿಕ್ರೀಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕೋಸ್ಕರ ಯೆರೂಸಲೇಮಿನಿಂದ ಹೊರಟರು.
७तेव्हा यवाब, बिक्रीचा मुलगा शबा याच्या पाठलागासाठी यरूशलेमेहून निघाला. त्याने बरोबर आपली माणसे, करेथी, पलेथी तसेच इतर सैनिक घेतले.
8 ೮ ಅವರು ಗಿಬ್ಯೋನಿನಲ್ಲಿದ್ದ ದೊಡ್ಡ ಕಲ್ಲನ್ನು ಸಮೀಪಿಸಿದಾಗ ಅಮಾಸನು ಅವನೆದುರು ಬಂದನು. ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದ ಯೋವಾಬನೂ ಅವನನ್ನು ವಧಿಸುವುದಕ್ಕೆ ಹೋಗುತ್ತಿರುವಾಗ ಅವನ ಸೊಂಟಕ್ಕೆ ಕಟ್ಟಿದ ಕತ್ತಿಯೂ ಒರೆಯಿಂದ ಕೆಳಗೆ ಬಿದ್ದಿತು.
८यवाब आणि त्याचे सैन्य गिबोनजवळच्या मोठ्या पहाडापाशी आले तेव्हा अमासा त्यांना सामोरा आला. यवाबाच्या अंगावर चिलखत होते. त्याने कमरबंद बांधला होता आणि म्यानात तलवार होती. यवाब आमासाच्या दिशेने चालू लागला तेव्हा त्याची तलवार म्यानातून निसटून पडली. यवाबाने ती उचलली आणि हातात धरली.
9 ೯ ಅವನು ಅಮಾಸನನ್ನು, “ಸಹೋದರನೇ ಕ್ಷೇಮವೋ” ಎಂದು ಕೇಳಿ ಮುದ್ದಿಡುವುದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು,
९त्याने अमासास विचारले, तुझे सर्व कुशल आहे ना? आणि अमासाचे चुंबन घेण्यास यवाबाने आपला उजव्या हाताने अमासाची दाढी धरून त्यास पुढे खेचले.
10 ೧೦ ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ,
१०यवाबाच्या डाव्या हातातील तलवारीकडे अमासाचे लक्ष नव्हते. पण तेवढ्यात यवाबाने अमासाच्या पोटात तलवार खुपसली, आणि त्याचा कोथळा बाहेर काढला. यवाबाला पुन्हा वार करावा लागलाच नाही. अमासा गतप्राण झाला. यवाब आणि त्याचा भाऊ अबीशय यांनी बिक्रीचा मुलगा शबा याचा शोध चालूच ठेवला.
11 ೧೧ ಯೋವಾಬನ ಆಳುಗಳಲ್ಲೊಬ್ಬನು ಅಮಾಸನ ಹತ್ತಿರ ನಿಂತು, “ದಾವೀದ ಹಾಗೂ ಯೋವಾಬರ ಕಡೆಯವರು ಯೋವಾಬನನ್ನು ಹಿಂಬಾಲಿಸಲಿ” ಎಂದು ಕೂಗಿದನು
११यवाबाच्या सैन्यातील एक तरुण सैनिक अमासाच्या मृतदेहाजवळ उभा राहिला आणि म्हणाला, “यवाब आणि दावीदाला ज्यांचा पाठिंबा आहे त्यांनी यवाबामागे जावे.”
12 ೧೨ ಮಾರ್ಗದ ಮಧ್ಯದಲ್ಲಿ ರಕ್ತದಲ್ಲಿ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರು ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವುದನ್ನು ಕಂಡ ಆ ಆಳು ಅಮಾಸನ ಶವವನ್ನು ದಾರಿಯಿಂದ ಎಳೆದು, ಹೊಲದಲ್ಲಿ ಹಾಕಿ, ಅದನ್ನು ಬಟ್ಟೆಯಿಂದ ಮುಚ್ಚಿದನು.
१२अमासा रस्त्याच्या मध्याभागी रक्ताच्या थारोळ्यात पडला होता. येणारा जाणारा प्रत्येकजण थांबून हे दृष्य पाहतोय हे त्या तरुण सैनिकाच्या लक्षात आले. तेव्हा त्याने ते प्रेत रस्त्यावरून ढकलत शेतात नेऊन टाकले. त्याच्यावर एक कापड अंथरले.
13 ೧೩ ಶವವನ್ನು ಆಚೆ ಹಾಕಿದ ನಂತರ ಜನರೆಲ್ಲರೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೊಸ್ಕರ ಯೋವಾಬನನ್ನು ಹಿಂಬಾಲಿಸಿದರು.
१३अमासाचा देह तिथून हलवल्यावर लोक ते सरळ ओलांडून यवाबाच्या मागे चालू लागले. मग त्यांनी यवाबाबरोबर बिक्रीचा पुत्र शबा याचा पाठलाग सुरू केला.
14 ೧೪ ಶೆಬನು ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಸಂಚರಿಸುತ್ತಾ ಆಬೇಲ್, ಬೇತ್ಮಾಕಾಕ್ಕೂ ಬಂದನು. ಬೇರಿಯರೆಲ್ಲರೂ ಸೇರಿಕೊಂಡು ಅವನೊಡನೆ ಆ ಊರನ್ನು ಸೇರಿದರು.
१४इस्राएलांच्या सर्व वंशांमधून जाऊन, शबा आबेल व बेथ माका येथे गेला. सर्व बेरीही एकत्र येऊन शबाला मिळाले.
15 ೧೫ ಯೋವಾಬನ ಕಡೆಯವರು ಆಬೇಲ್ ಬೇತ್ಮಾಕಾಕ್ಕೆ ಊರಿಗೆ ಮುತ್ತಿಗೆ ಹಾಕಿ ಅದಕ್ಕೆ ಎದುರಾಗಿ ಊರು ಗೋಡೆಗೆ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ, ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.
१५यवाब आपल्या मनुष्यांसहीत आबेल-बेथ-माका येथे पोचला. त्याच्या सैन्याने नगराला वेढा दिला. तटबंदीभोवती त्यांनी माती कचऱ्याचा ढीग रचला. त्याच्यावरून भिंत पार करणे त्यांना सोयीस्कर ठरले असते. त्याचबरोबर त्यांनी भिंत पाडण्यासाठी भिंतीतील दगड फोडायला सुरुवात केली.
16 ೧೬ ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬಳು ಹೆಂಗಸು ಅವರಿಗೆ, “ಕೇಳಿರಿ, ದಯವಿಟ್ಟು ಕೇಳಿರಿ. ಯೋವಾಬನೊಂದಿಗೆ ನಾನು ಮಾತನಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ” ಎಂದು ಕೂಗಿದಳು.
१६नगरात एक चाणाक्ष स्त्री राहत होती. तिने नगरातून मोठ्याने ओरडून सांगितले, “माझे ऐका. यवाबाला येथे यायला सांगा. मला त्याच्याशी काही बोलायचे आहे.”
17 ೧೭ ಯೋವಾಬನು ಬರಲು ಆ ಸ್ತ್ರೀಯು, “ನೀನು ಯೋವಾಬನೋ?” ಎಂದು ಅವನನ್ನು ಕೇಳಲು ಅವನು “ಹೌದು ನಾನೇ” ಎಂದು ಉತ್ತರ ಕೊಟ್ಟನು. ಆಕೆಯು, “ನಿನ್ನ ದಾಸಿಯ ಮಾತನ್ನು ಕೇಳು” ಅನ್ನಲು ಅವನು, “ಕೇಳುತ್ತೇನೆ” ಎಂದನು.
१७यवाब तिच्याशी बोलायला गेला. तिने त्यास तूच यवाब का, म्हणून विचारले. यवाबाने होकार भरला. तेव्हा ती म्हणाली, माझे ऐक. यवाब म्हणाला, “सांग मी ऐकतोय.”
18 ೧೮ ಆಗ ಆಕೆಯು, “ಪೂರ್ವಕಾಲದಲ್ಲಿ ಜನರು ಆಬೇಲಿನವರ ಆಲೋಚನೆಯನ್ನು ಕೇಳೋಣ ಅಂದುಕೊಂಡು ಅವರ ಆಲೋಚನೆಯ ಮೇರೆಗೆ ತೀರ್ಮಾನವನ್ನು ತೆಗೆದುಕೊಳ್ಳುತ್ತಿದ್ದರು.
१८मग ती स्त्री म्हणाली, “पूर्वी लोक म्हणत, गरज पडली की आबेलमध्ये यावे, म्हणजे मागाल ते मिळते.”
19 ೧೯ ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?” ಎಂದಳು.
१९इस्राएलमधील शांतताप्रिय, विश्वासू लोकांपैकी मी एक आहे. इस्राएलच्या एका महत्वाच्या शहराची तुम्ही नासधूस करत आहात. परमेश्वराच्या मालकीच्या वस्तूची तुम्ही मोडतोड का करता?
20 ೨೦ ಅದಕ್ಕೆ ಯೋವಾಬನು, “ನುಂಗಿಬಿಡುವುದಾಗಲಿ, ಹಾಳುಮಾಡುವುದಾಗಲಿ ನನಗೆ ದೂರವಾಗಿರಲಿ ಅಂಥದ್ದು ಬೇಡವೇ ಬೇಡ.
२०यवाब म्हणाला, “मला कशाचाच नाश करायची इच्छा नाही. तुमच्या नगराची नासधूस मी करू इच्छित नाही.”
21 ೨೧ ಎಫ್ರಾಯೀಮಿನ ಪರ್ವತಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬುವವನು ಅರಸನಾದ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನ್ನನ್ನೇ ಒಪ್ಪಿಸಿರಿ, ನಾನು ಊರನ್ನು ಬಿಟ್ಟು ಹೋಗುತ್ತೇನೆ” ಎಂದು ಹೇಳಿದನು. ಆ ಸ್ತ್ರೀಯು ಯೋವಾಬನಿಗೆ, “ನೋಡು ಈಗಲೇ ಅವನ ತಲೆಯು ಗೋಡೆಯ ಕಿಂಡಿಯಿಂದ ನಿನ್ನ ಕಡೆಗೆ ಒಗೆಯಲ್ಪಡುವುದು” ಎಂದು ಉತ್ತರ ಕೊಟ್ಟು,
२१पण एफ्राईमाच्या डोंगराळ प्रदेशातील बिक्रीचा पुत्र शबा नावाचा एक मनुष्य तुमच्या नगरात आहे. दावीद राजाविरुध्द त्याने बंड केले आहे. त्यास माझ्यापुढे हजर केलेत तर नगराला धक्कालावणार नाही. तेव्हा ती स्त्री यवाबाला म्हणाली, ठीक आहे. त्याचे मुंडके भिंतीवरून तुझ्याकडे टाकण्यात येईल.
22 ೨೨ ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದೊಡನೆ ಈ ಸಂಗತಿಯನ್ನು ತಿಳಿಸಿದಳು. ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿ ಯೋವಾಬನಿದ್ದಲ್ಲಿಗೆ ಎಸೆದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಯೆರೂಸಲೇಮಿನಲ್ಲಿದ್ದ ಅರಸನ ಬಳಿಗೆ ಹೋದನು.
२२मग तिने गावातील लोकांस शहाणपणाने आपले म्हणणे पटवून दिले. तेव्हा लोकांनी बिक्रीचा पुत्र शबा याचे मुंडके धडावेगळे करून ते यवाबाकडे तटबंदी पलीकडे फेकले. यवाबाने रणशिंग फुंकले आणि सैन्याने नगर सोडले. जो तो आपल्या घरी परतला आणि यवाब यरूशलेम येथे राजाकडे आला.
23 ೨೩ ಯೋವಾಬನು ಇಸ್ರಾಯೇಲರ ಮುಖ್ಯ ಸೇನಾಧಿಪತಿ. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.
२३यवाब इस्राएलचा सेनापती होता. यहोयादाचा मुलगा बनाया हा करेथी आणि पलेथी यांचा प्रमुख होता.
24 ೨೪ ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು. ಅಹೀಲೂದನ ಮಗನಾದ ಯೆಹೋಷಾಫಾಟನು ಮುಖ್ಯ ದಾಖಲೆಮಾಡುವ ಲೇಖಕ.
२४अदोराम हा कष्टकरी लोकांचा प्रमुख होता. अहीलुदाचा मुलगा यहोशाफाट हा अखबारनवीस होता.
25 ೨೫ ಶೆವನು ಕಾರ್ಯದರ್ಶಿ, ಚಾದೋಕ್ ಮತ್ತು ಎಬ್ಯಾತಾರರು ಯಾಜಕರು.
२५शबा चिटणीस होता. सादोक आणि अब्याथार हे याजक होते.
26 ೨೬ ಯಾಯೀರಿನವನಾದ ಈರನೂ ದಾವೀದನ ಯಾಜಕನು.
२६आणि याईरी ईरा हा दावीदाचा मुख्य सेवक होता.