< ಸಮುವೇಲನು - ದ್ವಿತೀಯ ಭಾಗ 21 >
1 ೧ ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.
Về đời Ða-vít, có một ách cơ cẩn trong ba năm liên tiếp. Ða-vít cầu vấn Ðức Giê-hô-va; Ngài đáp cùng người rằng: Sự nầy xảy đến vì cớ Sau-lơ và nhà đổ huyết của người, bởi vì người có giết dân Ga-ba-ôn.
2 ೨ ಗಿಬ್ಯೋನ್ಯರು ಇಸ್ರಾಯೇಲ್ಯರ ಕುಲಕ್ಕೆ ಸೇರಿದವರಲ್ಲ. ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನು ನಿರ್ನಾಮಗೊಳಿಸಬೇಕೆಂದಿದ್ದನು.
Vua bèn truyền gọi dân Ga-ba-ôn, và nói chuyện với họ. Người Ga-ba-ôn chẳng thuộc về dân sự Y-sơ-ra-ên, nhưng họ là kẻ sống sót của dân A-mô-rít; dân Y-sơ-ra-ên có thề hứa tha thứ họ. Dầu vậy, Sau-lơ vì lòng sốt sắng về dân Y-sơ-ra-ên và Giu-đa, đã tìm cách trừ diệt họ.
3 ೩ ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಮಾಡಿದರೆ ನೀವು ಯೆಹೋವನ ಸ್ವತ್ತನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.
Ấy vậy, Ða-vít hỏi dân Ga-ba-ôn rằng: Ta phải làm sao cho các ngươi, lấy vật gì mà chuộc tội, hầu cho các ngươi chúc phước cho cơ nghiệp của Ðức Giê-hô-va?
4 ೪ ಅದಕ್ಕೆ ಅವರು, “ಸೌಲನ ಸಂತಾನದವರಿಗೂ ನಮಗೂ ಇರುವ ವ್ಯಾಜ್ಯವು ಬೆಳ್ಳಿ ಬಂಗಾರದಿಂದ ಮುಗಿಯಲಾರದು. ಇಸ್ರಾಯೇಲ್ಯರನ್ನು ಕೊಲ್ಲುವ ಅಧಿಕಾರವು ನಮಗಿಲ್ಲ” ಎಂದು ಉತ್ತರ ಕೊಟ್ಟರು. ಆಗ ಅರಸನು ಅವರಿಗೆ, “ಏನು ಮಾಡಬೇಕು ಹೇಳಿರಿ ಮಾಡುತ್ತೇನೆ” ಅಂದನು.
Dân Ga-ba-ôn tâu cùng vua rằng: Chúng tôi đối cùng Sau-lơ và nhà người chẳng đòi bạc hay vàng, chúng tôi cũng chẳng có phép giết người nào trong Y-sơ-ra-ên. Ða-vít tiếp: Vậy các ngươi muốn ta làm gì cho các ngươi?
5 ೫ ಆಗ ಅವರು, “ನಮ್ಮನ್ನು ಇಸ್ರಾಯೇಲರ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ, ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು.
Họ đáp cùng vua rằng: Người ấy có diệt trừ chúng tôi; người có toan mưu làm cho chúng tôi biết mất khỏi cả địa phận Y-sơ-ra-ên.
6 ೬ ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.
Thế thì, hãy phó cho chúng tôi bảy người trong những con trai người; chúng tôi sẽ treo chúng nó trước mặt Ðức Giê-hô-va ở Ghi-bê-a, thành của Sau-lơ là người được Ðức Giê-hô-va chọn. Vua đáp: Ta sẽ phó chúng nó cho.
7 ೭ ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.
Ða-vít dong thứ Mê-phi-bô-sết, con trai của Giô-na-than, cháu của Sau-lơ, vì cớ lời thề Ða-vít và Giô-na-than, con trai của Sau-lơ, đã lập với nhau trước một Ðức Giê-hô-va.
8 ೮ ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ ಮತ್ತು ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರಿಯೇಲನಿಗೆ ಸೌಲನ ಮಗಳಾದ ಮೀಕಲಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ಕರೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದರು.
Nhưng vua bắt Át-mô-ni và Mê-phi-bô-sết, hai con trai của Rít-ba, con gái của Ai-gia, đã sanh cho Sau-lơ, và năm con trai của Mi-canh, con gái Sau-lơ đã sanh cho Át-ri-ên, con trai của Bát-xi-lai ở Mê-hô-la,
9 ೯ ಅವರು ಇವರನ್ನು ಕೊಂದು, ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕ ಕಾಲದಲ್ಲಿ ಸತ್ತುಹೋದರು. ಇವರನ್ನು ಕೊಂದಾಗ ಜವೆಗೋದಿಯ ಸುಗ್ಗಿ ಆರಂಭವಾಗಿತ್ತು
mà giao cho dân Ga-ba-ôn; chúng treo họ lên trên núi tại trước mặt Ðức Giê-hô-va. Bảy người ấy đều bị chết chung với nhau, người ta giết họ nhằm mấy ngày đầu mùa gặt lúa mạch.
10 ೧೦ ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು, ಅದನ್ನು ಬಂಡೆಯ ಮೇಲೆ ಹಾಸಿ, ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕುಳಿತುಕೊಂಡು, ಹಗಲಿನಲ್ಲಿ ಆಕಾಶದ ಪಕ್ಷಿಗಳೂ, ರಾತ್ರಿಯಲ್ಲಿ ಕಾಡು ಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.
Rít-ba, con gái Ai-gia, bèn lấy một cái bao trải trên hòn đá dùng làm giường mình. Rồi từ đầu mùa gặt cho đến khi có mưa từ trên trời sa xuống trên thây chúng nó, ban ngày nàng cản không cho chim trời đậu ở trên thây, và ban đêm cản không cho thú đồng đến gần.
11 ೧೧ ಅಯ್ಯಾಹನ ಮಗಳೂ, ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವು ದಾವೀದನಿಗೆ ಗೊತ್ತಾಯಿತು.
Có người học lại cho Ða-vít sự Rít-ba, con gái Ai-gia, hầu của Sau-lơ đã làm.
12 ೧೨ ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೋಸ್ಕರ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ನೇತುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.
Vua bèn đi đến dân sự Gia-be trong xứ Ga-la-át, lấy hài cốt của Sau-lơ và của Giô-na-than, con trai Sau-lơ, mà dân ấy lấy trộm khỏi Bết-san, là nơi dân Phi-li-tin treo họ lên trong ngày chúng nó đánh bại Sau-lơ tại Ghinh-bô-a.
13 ೧೩ ದಾವೀದನು ಯಾಬೇಷಿನಲ್ಲಿದ್ದ ಸೌಲ ಮತ್ತು ಯೋನಾತಾನರ ಎಲುಬುಗಳನ್ನು ಗಿಬ್ಯೋನಿನಲ್ಲಿ ಹತರಾದವರ ಎಲುಬುಗಳನ್ನೂ ತೆಗೆದುಕೊಂಡರು.
Vậy, từ Gia-be, vua đem lại hài cốt của Sau-lơ và của Giô-na-than, con trai người, người ta cũng lấy hài cốt của những người đã bị treo,
14 ೧೪ ಅವರು ಅ ಎಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು.
chôn nó với hài cốt của Sau-lơ và Giô-na-than, con trai người, trong mộ của Kích cha của Sau-lơ, ở Xê-la, tại địa phận Bên-gia-min. Người ta làm mọi điều y như vua đã dặn biểu. Về sau Ðức Chúa Trời mới đoái thương đến xứ.
15 ೧೫ ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಪುನಃ ಯುದ್ಧವಾಯಿತು. ದಾವೀದನು ತನ್ನ ಸೇವಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು.
Dân Y-sơ-ra-ên lại còn tranh chiến khác với dân Phi-li-tin. Ða-vít và các tôi tớ người kéo xuống, giáp chiến với dân Phi-li-tin. Ða-vít biết trong người mình mỏi mệt lắm.
16 ೧೬ ಆಗ ರೆಫಾಯರಲ್ಲೊಬ್ಬನಾದ ಇಷ್ಬಿಬೆನೋಬ್ ಎಂಬುವನು ದಾವೀದನನ್ನು ಕೊಲ್ಲುಬೇಕೆಂದಿದ್ದನು. ಅವನ ತಾಮ್ರದ ಬರ್ಜಿಯು ಮುನ್ನೂರು ಶೆಕಲ್ (ಬೆಳ್ಳಿನಾಣ್ಯ) ತೂಕದ್ದು. ಅವನು ಸೊಂಟಕ್ಕೆ ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.
Bấy giờ, Ít-bi-Bê-nốp, con cháu của Ra-pha có một cây lao nặng ba trăm siếc-lơ đồng và đeo gươm mới, toan đánh giết Ða-vít.
17 ೧೭ ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು.
Nhưng A-bi-sai, con trai Xê-ru-gia, đến tiếp cứu vua, đánh người Phi-li-tin ấy, và giết đi. Từ đó các thủ hạ của Ða-vít nài xin người rằng: Vua chớ ra trận cùng chúng tôi nữa, e ngọn đuốc Y-sơ-ra-ên phải tắt chăng.
18 ೧೮ ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬುವನು ರೆಫಾಯನಾದ ಸೆಫ ಎಂಬುವನನ್ನು ಕೊಂದನು.
Sau sự đó, lại có một trận khác cùng dân Phi-li-tin tại Góp. Ở đó, Si-bê-cai, người Hu-sa, giết Sáp, là con cháu của Ra-pha.
19 ೧೯ ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೇತ್ಲೆಹೇಮಿನವನಾದ ಯಾರೇಯೋರೆಗೀಮ್ ಎಂಬುವವನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.
Tại Góp lại còn có một trận với dân Phi-li-tin nữa. Eân-cha-nan, con trai Gia-a-rê-Ô-rê-ghim, ở Bết-lê-hem, đánh giết Gô-li-át ở Gát; người có một cây lao, cán như ống trục của thợ dệt.
20 ೨೦ ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು ಅವನು ರೆಫಾಯನಿಗೆ ಹುಟ್ಟಿದವನಾಗಿದ್ದನು.
Cũng xảy ra một trận tại Gát, là nơi có một người cao lớn thuộc về dòng Ra-pha; người có sáu ngọn nơi hai bàn tay và sáu ngọn nơi hai bàn chơn, cộng là hai mươi bốn ngón.
21 ೨೧ ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮಿಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು.
Người nầy sỉ nhục Y-sơ-ra-ên; nhưng Giô-na-than, con trai Si-mê-a, cháu Ða-vít, giết hắn đi.
22 ೨೨ ಗತ್ ಊರಿನವರಾದ ಈ ನಾಲ್ಕು ಮಂದಿ ರೆಫಾಯರೂ ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.
Bốn người Phi-li-tin nầy đã sanh tại Gát, về dòng dõi Ra-pha, đều bị giết bởi tay Ða-vít và bởi tay các đầy tớ người.