< ಸಮುವೇಲನು - ದ್ವಿತೀಯ ಭಾಗ 22 >
1 ೧ ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಜಯ ಗೀತೆಯನ್ನು ರಚಿಸಿ ಹೀಗೆ ಹಾಡಿದನು:
Dawid wypowiedział PANU słowa tej pieśni w dniu, gdy PAN go wybawił z rąk wszystkich jego wrogów i z ręki Saula;
2 ೨ ಯೆಹೋವನು ನನ್ನ ಬಂಡೆಯೂ, ನನ್ನ ಕೋಟೆಯೂ ನನ್ನ ವಿಮೋಚಕನೂ ಆಗಿದ್ದಾನೆ.
Powiedział: PAN jest moją skałą, moją twierdzą i moim wybawicielem.
3 ೩ ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ, ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ, ನನ್ನ ದುರ್ಗವೂ, ನನ್ನ ಶರಣನೂ, ಹಿಂಸೆಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ.
Bóg moją opoką, której będę ufał, moją tarczą i rogiem mojego zbawienia, moją wieżą i moją ucieczką, moim zbawicielem; wybawiasz mnie od przemocy.
4 ೪ ಯೆಹೋವನು ಸ್ತೋತ್ರಕ್ಕೆ ಅರ್ಹನು. ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.
Wzywałem PANA, [który jest] godny chwały, a będę wybawiony od moich wrogów.
5 ೫ ಮರಣ ಪ್ರವಾಹದ ಅಲ್ಲಕಲ್ಲೋಲಗಳು ನನ್ನನ್ನು ಸುತ್ತಿಕೊಂಡವು. ನಾಶಪ್ರವಾಹವು ನನ್ನನ್ನು ನಡುಗಿಸಿತು.
Ogarnęły mnie bowiem boleści śmierci i zatrwożyły mnie potoki bezbożnych.
6 ೬ ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು, ಮರಣಕರವಾದ ಉರುಲುಗಳು ನನ್ನನ್ನು ಸುತ್ತಿಕೊಂಡವು. (Sheol )
Boleści piekła mnie oplotły, pochwyciły mnie sidła śmierci. (Sheol )
7 ೭ ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಸ್ವರವನ್ನು ಕೇಳಿದನು. ನನ್ನ ಪ್ರಾರ್ಥನೆ ಆತನ ಸನ್ನಿಧಿಗೆ ಕೇಳಿಸಿತು.
W moim utrapieniu wzywałem PANA i wołałem do mojego Boga. Ze swojej świątyni usłyszał mój głos, a moje wołanie [dotarło] do jego uszu.
8 ೮ ಆಗ ಆತನ ಕೋಪದಿಂದ ಭೂಮಿಯು ಕಂಪಿಸಿತು. ಆಕಾಶದ ಆಧಾರಗಳು ನಡುಗಿ ಕದಲಿದವು.
Wtedy ziemia poruszyła się i zadrżała, a posady nieba zatrzęsły się i zachwiały od jego gniewu.
9 ೯ ಆತನ ಮೂಗಿನಿಂದ ಹೊಗೆಯು ಬಂದಿತು. ಆತನ ಬಾಯಿಂದ ಅಗ್ನಿಜ್ವಾಲೆಯು ಹೊರಟು ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.
Z jego nozdrzy unosił się dym, z jego ust [buchnął] ogień trawiący, węgle zapaliły się od niego.
10 ೧೦ ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು. ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು.
Nachylił niebiosa i zstąpił, a ciemność [była] pod jego stopami.
11 ೧೧ ಕೆರೂಬಿವಾಹನನಾಗಿ ಹಾರಿದನು. ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಪ್ರತ್ಯಕ್ಷನಾದನು.
Dosiadł cherubina i latał, i ukazał się na skrzydłach wiatru.
12 ೧೨ ಕತ್ತಲನ್ನೂ, ಜಲಮಯವಾಗಿರುವ ನೀಲಮೇಘಗಳನ್ನೂ, ತನ್ನ ಸುತ್ತಲೂ ಗುಡಾರದಂತೆ ಕವಿಸಿಕೊಂಡನು.
Z ciemności uczynił wokół siebie namiot, z ciemnych wód i z gęstych obłoków nieba.
13 ೧೩ ಆತನ ಸಾನ್ನಿಧ್ಯ ಪ್ರಕಾಶದಿಂದ ಉರಿಗೆಂಡಗಳು ಹೊರಟವು.
Od jego blasku rozpaliły się węgle ogniste.
14 ೧೪ ಯೆಹೋವನು ಆಕಾಶದಿಂದ ಗುಡುಗಿದನು. ಪರಾತ್ಪರನಾದ ದೇವರು ಧ್ವನಿಗೊಟ್ಟನು.
Zagrzmiał PAN z nieba, Najwyższy wydał swój głos.
15 ೧೫ ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದುರಿಸಿಬಿಟ್ಟನು. ಸಿಡಿಲಿನಿಂದ ಅವುಗಳನ್ನು ಕಳವಳಗೊಳಿಸಿದನು.
Wypuścił strzały i rozproszył ich; błyskawicę – i ich rozgromił.
16 ೧೬ ಆಗ ಯೆಹೋವನ ಗದರಿಕೆಯಿಂದಲೂ ಆತನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ಥಿವಾರವು ತೋರಿಬಂದವು.
I ukazały się głębiny morza, i odsłoniły się fundamenty świata od upomnienia PANA, od podmuchu tchnienia jego nozdrzy.
17 ೧೭ ಆತನು ಮೇಲಣಲೋಕದಿಂದ ಕೈಚಾಚಿ ನನ್ನನ್ನು ಹಿಡಿದು! ಮಹಾಜಲರಾಶಿಯೊಳಗಿಂದ ನನ್ನನ್ನು ಎಳೆದನು.
Posłał z wysoka, chwycił mnie, wyciągnął z wielkich wód.
18 ೧೮ ನನಗಿಂತ ಬಲಿಷ್ಠರೂ, ಪುಷ್ಠರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.
Ocalił mnie od mojego potężnego wroga i od tych, którzy mnie nienawidzą, choć byli ode mnie mocniejsi.
19 ೧೯ ಅವರು ನನ್ನ ಆಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು. ಆಗ ಯೆಹೋವನು ನನಗೆ ಉದ್ಧಾರಕನಾದನು.
Zaskoczyli mnie w dniu mego utrapienia, lecz PAN był moją podporą.
20 ೨೦ ಆತನು ನನ್ನನ್ನು ಅಪಾಯದಿಂದ ಬಿಡಿಸಿದನು. ನನ್ನನ್ನು ಮೆಚ್ಚಿ ರಕ್ಷಿಸಿದನು.
Wyprowadził mnie na miejsce przestronne, wybawił mnie, bo mnie sobie upodobał.
21 ೨೧ ಯೆಹೋವನು ನನ್ನ ಸನ್ನಡತೆಗೆ ತಕ್ಕ ಪ್ರತಿಫಲ ನೀಡಿದನು. ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲಕೊಟ್ಟನು.
Nagrodził mnie PAN według mojej sprawiedliwości, oddał mi według czystości moich rąk.
22 ೨೨ ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ ನನ್ನ ದೇವರನ್ನು ಬಿಟ್ಟು ದ್ರೋಹ ಮಾಡಲಿಲ್ಲ.
Strzegłem bowiem dróg PANA i nie odstąpiłem niegodziwie od mojego Boga.
23 ೨೩ ನಾನು ಆತನ ಆಜ್ಞೆಗಳನ್ನು ಯಾವಾಗಲೂ ನನ್ನೆದುರಿನಲ್ಲಿ ಇಟ್ಟುಕೊಂಡೆನು. ಆತನ ವಿಧಿಗಳಿಂದ ತಪ್ಪಿ ಹೋಗಲಿಲ್ಲ.
Bo miałem przed oczyma wszystkie jego nakazy i od jego praw się nie odwróciłem.
24 ೨೪ ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು. ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.
Byłem wobec niego nienaganny i wystrzegałem się swojej nieprawości.
25 ೨೫ ಆದ್ದರಿಂದ ನನ್ನ ನೀತಿಗೆ ತಕ್ಕಂತೆಯೂ, ಆತನ ದೃಷ್ಟಿಯಲ್ಲಿ ನನ್ನ ನಿರಪರಾಧಕ್ಕೆ ತಕ್ಕಂತೆಯೂ ಯೆಹೋವನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು.
Dlatego oddał mi PAN według mojej sprawiedliwości, według mojej czystości przed jego oczyma.
26 ೨೬ ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವರಿಗೆ ನಿರ್ದೋಷಿಯೂ.
[Ty] z miłosiernym miłosiernie się obejdziesz, a z człowiekiem nienagannym postąpisz nienagannie.
27 ೨೭ ಶುದ್ಧನಿಗೆ ಪರಿಶುದ್ಧನೂ, ವಕ್ರಬುದ್ಧಿಯವನಿಗೆ ವಕ್ರನೂ ಆಗಿರುವಿ.
Wobec czystego okażesz się czysty, a wobec przewrotnego postąpisz przewrotnie.
28 ೨೮ ದೀನರನ್ನು ಉದ್ಧರಿಸುತ್ತಿ. ಹಮ್ಮಿನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತಿ.
Lecz wybawiasz lud strapiony, a twoje oczy [są] na wyniosłych, by ich poniżać.
29 ೨೯ ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕನ್ನು ಕೊಟ್ಟು ನನ್ನ ಕತ್ತಲನ್ನು ಪರಿಹರಿಸುವನು.
Ty bowiem jesteś moją pochodnią, o PANIE; PAN rozjaśni moje ciemności.
30 ೩೦ ನಿನ್ನ ಬಲದಿಂದ ನಾನು ದಂಡಿನ ಮೇಲೆ ಬೀಳುವೆನು. ನನ್ನ ದೇವರ ಸಹಾಯದಿಂದ ಪ್ರಾಕಾರಗಳನ್ನು ಹಾರುವೆನು.
Bo z tobą przebiłem się przez wojsko, z moim Bogiem przeskoczyłem mur.
31 ೩೧ ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.
Droga Boga jest doskonała, słowo PANA w ogniu wypróbowane. Tarczą jest dla wszystkich, którzy mu ufają.
32 ೩೨ ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?
Bo któż [jest] Bogiem oprócz PANA? Któż skałą oprócz naszego Boga?
33 ೩೩ ದೇವರು ನನ್ನ ಬಲವಾದ ಕೋಟೆಯಾಗಿದ್ದಾನೆ. ಆತನು ನನ್ನ ಮಾರ್ಗವನ್ನು ಸರಾಗಮಾಡುತ್ತಾನೆ.
Bóg [jest] moją siłą i mocą, on czyni doskonałą moją drogę.
34 ೩೪ ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ. ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ
Moje nogi czyni jak u łani i stawia mnie na wyżynach.
35 ೩೫ ಆತನು ನನಗೆ ಯುದ್ಧ ವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.
Ćwiczy moje ręce do walki, tak że mogę kruszyć spiżowy łuk swymi ramionami.
36 ೩೬ ನೀನು ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಕೃಪಾಕಟಾಕ್ಷವು ನನ್ನನ್ನು ಉನ್ನತಕ್ಕೆ ಏರಿಸಿದೆ.
Dałeś mi też tarczę swego zbawienia, a twoja dobrotliwość uczyniła mnie wielkim.
37 ೩೭ ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಕಾಲುಗಳು ಕದಲುವುದಿಲ್ಲ.
Rozszerzyłeś ścieżkę dla mych kroków, tak że moje stopy się nie zachwiały.
38 ೩೮ ನನ್ನ ಶತ್ರುಗಳನ್ನು ಹಿಂದಟ್ಟಿ ಸಂಹರಿಸುವೆನು. ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.
Ścigałem moich wrogów i wytraciłem ich, nie zawróciłem, aż ich nie wyniszczyłem.
39 ೩೯ ಅವರನ್ನು ನಿರ್ನಾಮಗೊಳಿಸುವೆನು, ಹೊಡೆದು ಏಳಲಾರದಂತೆ ಮಾಡುವೆನು. ಅವರು ನನ್ನ ಪಾದದ ಕೆಳಗೆ ಬೀಳುವರು.
I wyniszczyłem ich, i powaliłem, tak że nie mogli powstać, upadli pod moje stopy.
40 ೪೦ ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದಿ. ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದಿ.
Przepasałeś mnie mocą do walki, powaliłeś pod moje stopy moich przeciwników.
41 ೪೧ ನನ್ನ ಶತ್ರುಗಳನ್ನು ಬೆಂಗೊಟ್ಟು ಓಡಮಾಡಿದ್ದೀ. ನನ್ನ ಶತ್ರುಗಳನ್ನು ನಿರ್ಮೂಲ ಮಾಡುವೆನು.
Zmuszałeś moich wrogów do ucieczki, abym wykorzenił tych, którzy mnie nienawidzą.
42 ೪೨ ಅವರು ಸಹಾಯಕ್ಕಾಗಿ ಕೂಗಿಕೊಂಡರೂ ರಕ್ಷಿಸುವವನಿಲ್ಲ. ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.
Patrzyli, lecz nie było nikogo, kto by ich wybawił; [spoglądali] na PANA, lecz ich nie wysłuchał.
43 ೪೩ ಭೂಮಿಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿ ಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು.
Starłem ich jak proch ziemi, zdeptałem ich jak błoto na ulicach, rozrzuciłem ich.
44 ೪೪ ನನ್ನ ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿದ್ದಿ. ಜನಾಂಗಗಳಿಗೆ ದೊರೆಯಾಗುವಂತೆ ನನ್ನನ್ನು ಉಳಿಸಿದ್ದಿ. ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.
Ty wyzwoliłeś mnie od kłótni ludzkich, zachowałeś mnie, abym był głową narodów. Będzie mi służył lud, [którego] nie znałem.
45 ೪೫ ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು. ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು.
Cudzoziemcy będą udawać uległość. Jak tylko usłyszą, będą mi posłuszni.
46 ೪೬ ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.
Cudzoziemcy zmarnieją i będą drżeć w swoich warowniach.
47 ೪೭ ಯೆಹೋವನು ಚೈತನ್ಯಸ್ವರೂಪನು. ನನ್ನ ಶರಣನಿಗೆ ಸ್ತೋತ್ರ. ನನ್ನ ಆಶ್ರಯಗಿರಿಯಾಗಿರುವ ದೇವರಿಗೆ ಕೊಂಡಾಟ.
PAN żyje, niech będzie błogosławiona moja skała, niech będzie wywyższony Bóg, skała mojego zbawienia.
48 ೪೮ ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು. ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.
Bóg dokonuje za mnie zemsty i poddaje mi narody;
49 ೪೯ ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಂದ ತಪ್ಪಿಸಿ ಉನ್ನತಪಡಿಸುತ್ತಿ. ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತಿ.
Wyprowadza mnie spośród moich wrogów. Ty wywyższyłeś mnie ponad moich przeciwników, ocaliłeś mnie od gwałtownika.
50 ೫೦ ಈ ಕಾರಣದಿಂದ ಯೆಹೋವನೇ, ಅನ್ಯಜನಾಂಗಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ನಿನ್ನ ನಾಮವನ್ನು ಸಂಕೀರ್ತಿಸುವೆನು.
Dlatego będę cię, PANIE, sławił wśród narodów i będę śpiewał twojemu imieniu.
51 ೫೧ ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ. ತಾನು ಅಭಿಷೇಕಿಸಿದ ದಾವೀದನಿಗೂ, ಅವನ ಸಂತತಿಯವರೆಗೆ ಸದಾಕಾಲವೂ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.
[On jest] wieżą zbawienia dla swego króla i na wieki okazuje miłosierdzie swemu pomazańcowi Dawidowi i jego potomstwu.