< ಸಮುವೇಲನು - ದ್ವಿತೀಯ ಭಾಗ 22 >

1 ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಜಯ ಗೀತೆಯನ್ನು ರಚಿಸಿ ಹೀಗೆ ಹಾಡಿದನು:
Давид а ындрептат кэтре Домнул кувинтеле ачестей кынтэрь дупэ че Домнул л-а избэвит дин мына тутурор врэжмашилор луй ши дин мына луй Саул.
2 ಯೆಹೋವನು ನನ್ನ ಬಂಡೆಯೂ, ನನ್ನ ಕೋಟೆಯೂ ನನ್ನ ವಿಮೋಚಕನೂ ಆಗಿದ್ದಾನೆ.
Ел а зис: „Домнул есте стынка мя, четэцуя мя, Избэвиторул меу.
3 ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ, ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ, ನನ್ನ ದುರ್ಗವೂ, ನನ್ನ ಶರಣನೂ, ಹಿಂಸೆಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ.
Думнезеу есте стынка мя ла каре гэсеск ун адэпост, скутул меу ши путеря каре мэ мынтуеште, турнул меу чел ыналт ши скэпаря мя. Мынтуиторуле, Ту мэ скапь де силничие!
4 ಯೆಹೋವನು ಸ್ತೋತ್ರಕ್ಕೆ ಅರ್ಹನು. ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.
Еу кем пе Домнул чел вредник де лаудэ ши сунт избэвит де врэжмаший мей.
5 ಮರಣ ಪ್ರವಾಹದ ಅಲ್ಲಕಲ್ಲೋಲಗಳು ನನ್ನನ್ನು ಸುತ್ತಿಕೊಂಡವು. ನಾಶಪ್ರವಾಹವು ನನ್ನನ್ನು ನಡುಗಿಸಿತು.
Кэч валуриле морций мэ ынконжурасерэ, шувоаеле нимичирий мэ ынспэймынтасерэ,
6 ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು, ಮರಣಕರವಾದ ಉರುಲುಗಳು ನನ್ನನ್ನು ಸುತ್ತಿಕೊಂಡವು. (Sheol h7585)
легэтуриле мормынтулуй мэ ынконжурасерэ, лацуриле морций мэ принсесерэ. (Sheol h7585)
7 ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಸ್ವರವನ್ನು ಕೇಳಿದನು. ನನ್ನ ಪ್ರಾರ್ಥನೆ ಆತನ ಸನ್ನಿಧಿಗೆ ಕೇಳಿಸಿತು.
Ын стрымтораря мя, ам кемат пе Домнул, ам кемат пе Думнезеул меу; дин локашул Луй, Ел мь-а аузит гласул ши стригэтул меу а ажунс ла урекиле Луй.
8 ಆಗ ಆತನ ಕೋಪದಿಂದ ಭೂಮಿಯು ಕಂಪಿಸಿತು. ಆಕಾಶದ ಆಧಾರಗಳು ನಡುಗಿ ಕದಲಿದವು.
Атунч, пэмынтул с-а кутремурат ши с-а клэтинат, темелииле черулуй с-ау мишкат ши с-ау згудуит, пентру кэ Ел Се мыниясе.
9 ಆತನ ಮೂಗಿನಿಂದ ಹೊಗೆಯು ಬಂದಿತು. ಆತನ ಬಾಯಿಂದ ಅಗ್ನಿಜ್ವಾಲೆಯು ಹೊರಟು ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.
Фум се ридика дин нэриле Луй ши ун фок мистуитор ешя дин гура Луй: кэрбунь априншь цышняу дин еа.
10 ೧೦ ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು. ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು.
А плекат черуриле ши С-а коборыт: ун нор грос ера суб пичоареле Луй.
11 ೧೧ ಕೆರೂಬಿವಾಹನನಾಗಿ ಹಾರಿದನು. ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಪ್ರತ್ಯಕ್ಷನಾದನು.
Кэлэря пе ун херувим ши збура, веня пе арипиле вынтулуй;
12 ೧೨ ಕತ್ತಲನ್ನೂ, ಜಲಮಯವಾಗಿರುವ ನೀಲಮೇಘಗಳನ್ನೂ, ತನ್ನ ಸುತ್ತಲೂ ಗುಡಾರದಂತೆ ಕವಿಸಿಕೊಂಡನು.
ера ынконжурат ку ынтунерикул ка ши ку ун корт, ера ынконжурат ку грэмезь де апе ши ку норь ынтунекошь.
13 ೧೩ ಆತನ ಸಾನ್ನಿಧ್ಯ ಪ್ರಕಾಶದಿಂದ ಉರಿಗೆಂಡಗಳು ಹೊರಟವು.
Дин стрэлучиря каре ера ынаинтя Луй скынтеяу кэрбунь де фок.
14 ೧೪ ಯೆಹೋವನು ಆಕಾಶದಿಂದ ಗುಡುಗಿದನು. ಪರಾತ್ಪರನಾದ ದೇವರು ಧ್ವನಿಗೊಟ್ಟನು.
Домнул а тунат дин черурь, Чел Пряыналт а фэкут сэ-Й рэсуне гласул;
15 ೧೫ ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದುರಿಸಿಬಿಟ್ಟನು. ಸಿಡಿಲಿನಿಂದ ಅವುಗಳನ್ನು ಕಳವಳಗೊಳಿಸಿದನು.
а арункат сэӂець ши а рисипит пе врэжмаший мей, а арункат фулӂерул ши й-а пус пе фугэ.
16 ೧೬ ಆಗ ಯೆಹೋವನ ಗದರಿಕೆಯಿಂದಲೂ ಆತನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ಥಿವಾರವು ತೋರಿಬಂದವು.
Фундул мэрий с-а вэзут, темелииле лумий ау фост дескоперите де мустраря Домнулуй, де вуетул суфлэрий нэрилор Луй.
17 ೧೭ ಆತನು ಮೇಲಣಲೋಕದಿಂದ ಕೈಚಾಚಿ ನನ್ನನ್ನು ಹಿಡಿದು! ಮಹಾಜಲರಾಶಿಯೊಳಗಿಂದ ನನ್ನನ್ನು ಎಳೆದನು.
Ел Шь-а ынтинс мына де сус, дин ынэлциме, м-а апукат, м-а скос дин апеле челе марь;
18 ೧೮ ನನಗಿಂತ ಬಲಿಷ್ಠರೂ, ಪುಷ್ಠರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.
м-а избэвит де потривникул меу чел путерник, де врэжмаший мей каре ерау май тарь декыт мине.
19 ೧೯ ಅವರು ನನ್ನ ಆಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು. ಆಗ ಯೆಹೋವನು ನನಗೆ ಉದ್ಧಾರಕನಾದನು.
Ей мэ принсесерэ ын зиуа стрымторэрий меле, дар Домнул а фост сприжиниторул меу,
20 ೨೦ ಆತನು ನನ್ನನ್ನು ಅಪಾಯದಿಂದ ಬಿಡಿಸಿದನು. ನನ್ನನ್ನು ಮೆಚ್ಚಿ ರಕ್ಷಿಸಿದನು.
Ел м-а скос ла лок ларг. Ел м-а мынтуит, пентру кэ мэ юбеште.
21 ೨೧ ಯೆಹೋವನು ನನ್ನ ಸನ್ನಡತೆಗೆ ತಕ್ಕ ಪ್ರತಿಫಲ ನೀಡಿದನು. ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲಕೊಟ್ಟನು.
Домнул мь-а рэсплэтит дупэ невиновэция мя, мь-а фэкут дупэ курэция мынилор меле;
22 ೨೨ ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ ನನ್ನ ದೇವರನ್ನು ಬಿಟ್ಟು ದ್ರೋಹ ಮಾಡಲಿಲ್ಲ.
кэч ам пэзит кэиле Домнулуй, ну м-ам фэкут виноват фацэ де Думнезеул меу.
23 ೨೩ ನಾನು ಆತನ ಆಜ್ಞೆಗಳನ್ನು ಯಾವಾಗಲೂ ನನ್ನೆದುರಿನಲ್ಲಿ ಇಟ್ಟುಕೊಂಡೆನು. ಆತನ ವಿಧಿಗಳಿಂದ ತಪ್ಪಿ ಹೋಗಲಿಲ್ಲ.
Тоате порунчиле Луй ау фост ынаинтя мя ши ну м-ам депэртат де ла леӂиле Луй.
24 ೨೪ ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು. ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.
Ам фост фэрэ винэ ынаинтя Луй, м-ам пэзит де фэрэделеӂя мя.
25 ೨೫ ಆದ್ದರಿಂದ ನನ್ನ ನೀತಿಗೆ ತಕ್ಕಂತೆಯೂ, ಆತನ ದೃಷ್ಟಿಯಲ್ಲಿ ನನ್ನ ನಿರಪರಾಧಕ್ಕೆ ತಕ್ಕಂತೆಯೂ ಯೆಹೋವನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು.
Де ачея, Домнул мь-а рэсплэтит невиновэция мя дупэ курэция мя ынаинтя Луй.
26 ೨೬ ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವರಿಗೆ ನಿರ್ದೋಷಿಯೂ.
Ку чел бун Ту ешть бун, ку омул дрепт Те порць дупэ дрептате,
27 ೨೭ ಶುದ್ಧನಿಗೆ ಪರಿಶುದ್ಧನೂ, ವಕ್ರಬುದ್ಧಿಯವನಿಗೆ ವಕ್ರನೂ ಆಗಿರುವಿ.
ку чел курат ешть курат, ку чел ындэрэтник Те порць дупэ ындэрэтничия луй.
28 ೨೮ ದೀನರನ್ನು ಉದ್ಧರಿಸುತ್ತಿ. ಹಮ್ಮಿನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತಿ.
Ту мынтуешть пе попорул каре се смереште, ши ку привиря Та коборь пе чей мындри.
29 ೨೯ ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕನ್ನು ಕೊಟ್ಟು ನನ್ನ ಕತ್ತಲನ್ನು ಪರಿಹರಿಸುವನು.
Да, Ту ешть лумина мя, Доамне! Домнул луминязэ ынтунерикул меу.
30 ೩೦ ನಿನ್ನ ಬಲದಿಂದ ನಾನು ದಂಡಿನ ಮೇಲೆ ಬೀಳುವೆನು. ನನ್ನ ದೇವರ ಸಹಾಯದಿಂದ ಪ್ರಾಕಾರಗಳನ್ನು ಹಾರುವೆನು.
Ку Тине мэ нэпустеск асупра уней ошть ынармате, ку Думнезеул меу сар песте зид.
31 ೩೧ ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.
Кэиле луй Думнезеу сунт десэвыршите, Кувынтул Домнулуй есте курэцит; Ел есте ун скут пентру тоць чей че каутэ адэпост ын Ел.
32 ೩೨ ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?
Кэч чине есте Думнезеу, афарэ де Домнул? Ши чине есте о стынкэ, афарэ де Думнезеул ностру?
33 ೩೩ ದೇವರು ನನ್ನ ಬಲವಾದ ಕೋಟೆಯಾಗಿದ್ದಾನೆ. ಆತನು ನನ್ನ ಮಾರ್ಗವನ್ನು ಸರಾಗಮಾಡುತ್ತಾನೆ.
Думнезеу есте четэцуя мя чя таре ши Ел мэ кэлэузеште пе каля чя дряптэ.
34 ೩೪ ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ. ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ
Ел ымь фаче пичоареле ка але чербоайчелор ши Ел мэ ашазэ пе локуриле меле челе ыналте.
35 ೩೫ ಆತನು ನನಗೆ ಯುದ್ಧ ವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.
Ымь депринде мыниле ла луптэ ши брацеле меле ынтинд аркул де арамэ.
36 ೩೬ ನೀನು ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಕೃಪಾಕಟಾಕ್ಷವು ನನ್ನನ್ನು ಉನ್ನತಕ್ಕೆ ಏರಿಸಿದೆ.
Ту ымь дай скутул мынтуирий Тале ши ажунг маре прин бунэтатя Та.
37 ೩೭ ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಕಾಲುಗಳು ಕದಲುವುದಿಲ್ಲ.
Лэрӂешть друмул суб паший мей ши пичоареле меле ну се клатинэ.
38 ೩೮ ನನ್ನ ಶತ್ರುಗಳನ್ನು ಹಿಂದಟ್ಟಿ ಸಂಹರಿಸುವೆನು. ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.
Урмэреск пе врэжмаший мей ши-й нимическ, ну мэ ынторк пынэ ну-й нимическ.
39 ೩೯ ಅವರನ್ನು ನಿರ್ನಾಮಗೊಳಿಸುವೆನು, ಹೊಡೆದು ಏಳಲಾರದಂತೆ ಮಾಡುವೆನು. ಅವರು ನನ್ನ ಪಾದದ ಕೆಳಗೆ ಬೀಳುವರು.
Ый нимическ, ый здробеск, де ну се май скоалэ; кад суб пичоареле меле.
40 ೪೦ ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದಿ. ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದಿ.
Ту мэ ынчинӂь ку путере пентру луптэ, рэпуй суб мине пе потривничий мей.
41 ೪೧ ನನ್ನ ಶತ್ರುಗಳನ್ನು ಬೆಂಗೊಟ್ಟು ಓಡಮಾಡಿದ್ದೀ. ನನ್ನ ಶತ್ರುಗಳನ್ನು ನಿರ್ಮೂಲ ಮಾಡುವೆನು.
Фачь пе врэжмаший мей сэ дя досул ынаинтя мя ши нимическ пе чей че мэ урэск.
42 ೪೨ ಅವರು ಸಹಾಯಕ್ಕಾಗಿ ಕೂಗಿಕೊಂಡರೂ ರಕ್ಷಿಸುವವನಿಲ್ಲ. ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.
Се уйтэ ын журул лор ши ну-й чине сэ-й скапе. Стригэ кэтре Домнул, дар ну ле рэспунде!
43 ೪೩ ಭೂಮಿಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿ ಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು.
Ый писез ка пулберя пэмынтулуй, ый здробеск, ый калк ын пичоаре, ка нороюл де пе улице.
44 ೪೪ ನನ್ನ ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿದ್ದಿ. ಜನಾಂಗಗಳಿಗೆ ದೊರೆಯಾಗುವಂತೆ ನನ್ನನ್ನು ಉಳಿಸಿದ್ದಿ. ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.
Мэ скапь дин неынцелеӂериле попорулуй меу; мэ пэстрезь дрепт кэпетение а нямурилор; ун попор пе каре ну-л куноштям ымь есте супус.
45 ೪೫ ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು. ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು.
Фиий стрэинулуй мэ лингушеск; мэ аскултэ ла чя динтый порункэ.
46 ೪೬ ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.
Фиий стрэинулуй лешинэ де ла инимэ, тремурэ кынд ес дин четэцуе.
47 ೪೭ ಯೆಹೋವನು ಚೈತನ್ಯಸ್ವರೂಪನು. ನನ್ನ ಶರಣನಿಗೆ ಸ್ತೋತ್ರ. ನನ್ನ ಆಶ್ರಯಗಿರಿಯಾಗಿರುವ ದೇವರಿಗೆ ಕೊಂಡಾಟ.
Трэяскэ Домнул ши бинекувынтатэ сэ фие Стынка мя! Ынэлцат сэ фие Думнезеу, Стынка мынтуирий меле,
48 ೪೮ ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು. ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.
Думнезеу, каре есте рэзбунэторул меу, каре-мь супуне попоареле
49 ೪೯ ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಂದ ತಪ್ಪಿಸಿ ಉನ್ನತಪಡಿಸುತ್ತಿ. ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತಿ.
ши каре мэ фаче сэ скап де врэжмаший мей! Ту мэ ыналць май пресус де потривничий мей, мэ избэвешть де омул асупритор.
50 ೫೦ ಈ ಕಾರಣದಿಂದ ಯೆಹೋವನೇ, ಅನ್ಯಜನಾಂಗಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ನಿನ್ನ ನಾಮವನ್ನು ಸಂಕೀರ್ತಿಸುವೆನು.
Де ачея Те вой лэуда принтре нямурь, Доамне, ши вой кынта спре слава Нумелуй Тэу!
51 ೫೧ ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ. ತಾನು ಅಭಿಷೇಕಿಸಿದ ದಾವೀದನಿಗೂ, ಅವನ ಸಂತತಿಯವರೆಗೆ ಸದಾಕಾಲವೂ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.
Ел дэ марь избэвирь ымпэратулуй Сэу ши аратэ милэ унсулуй Сэу: луй Давид ши семинцей луй пентру тотдяуна.”

< ಸಮುವೇಲನು - ದ್ವಿತೀಯ ಭಾಗ 22 >