< ಸಮುವೇಲನು - ದ್ವಿತೀಯ ಭಾಗ 24 >
1 ೧ ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.
Yehowa gado dziku ɖe Israel ŋu eye wòna be David tso ɖe wo ŋu gblɔ na wo be, “Miyi miaxlẽ ame siwo le Israel kple Yuda.”
2 ೨ ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಧಿಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದ ವರೆಗೆ ಸಂಚರಿಸಿ ಇಸ್ರಾಯೇಲ್ ಕುಲಗಳ ಜನಗಣತಿ ಮಾಡಿಕೊಂಡು ಬಾ” ಎಂದು ಅವನಿಗೆ ಆಜ್ಞಾಪಿಸಿದನು.
Ale fia la dɔ Aʋafia Yoab kple aʋafia bubuwo eye wògblɔ na wo be, “Miyi ne miatsa le Israel ƒe toawo katã me tso Dan va se ɖe Beerseba eye miaŋlɔ ŋutsu siwo ate ŋu awɔ aʋa la ƒe ŋkɔ ne manya woƒe xexlẽme.”
3 ೩ ಆಗ ಯೋವಾಬನು ಅರಸನಿಗೆ, “ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ?” ಅಂದನು.
Ke Yoab ɖo eŋu na fia la be, “Yehowa, wò Mawu la nadzi wò aʋakɔwo ɖe edzi zi alafa eye wòana be nye aƒetɔ, fia la ƒe ŋkuwo nakpɔ esia gake nu ka ŋuti nye aƒetɔ, fia la di be yeawɔ nu sia ɖo?”
4 ೪ ಆದರೆ ಅರಸನು ಯೋವಾಬನಿಗೂ ಇತರ ಸೇನಾಧಿಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ ಅವರು ಇಸ್ರಾಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು.
Ke fia la ƒe nya ɖu Yoab kple aʋafia bubuawo tɔ dzi ale wodzo le fia la ŋkume be woaɖaŋlɔ ŋutsu siwo katã ate ŋu ayi aʋa le Israel la ƒe ŋkɔ.
5 ೫ ಅವರು ಯೊರ್ದನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ಯಗ್ಜೇರಿಗೂ,
Esi wotso Yɔdan tɔsisi la vɔ la, woƒu asaɖa anyi ɖe Aroer gbɔ le du si le balime la ƒe dziehe gome eye wozɔ to Gad va ɖo Yazer.
6 ೬ ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೂಜೀ ಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.
Tso afi ma woyi Gilead le Tatimhodsinyigba dzi heyi Dan Yaan eye woƒo xlã yi Sidon.
7 ೭ ಅಲ್ಲಿಂದ ಚೀದೋನ್ ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು, ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.
Tso afi ma woyi Tiro mɔ la me kple Hivitɔwo kple Kanaantɔwo ƒe duwo katã me. Mlɔeba la, woyi Beerseba le Yuda ƒe gbegbe.
8 ೮ ಹೀಗೆ ಒಂಭತ್ತು ತಿಂಗಳು ಇಪ್ಪತ್ತು ದಿನಗಳಲ್ಲಿ ದೇಶವನ್ನೆಲ್ಲಾ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿ ಬಂದರು.
Esi wotsa le anyigba blibo la dzi vɔ la, wotrɔ gbɔ va Yerusalem, esi wotsa le ɣleti asiekɛ kple ŋkeke blaeve kple vɔwo megbe.
9 ೯ ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿ ಸಂಖ್ಯೆಯು - ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಮತ್ತು ಯೆಹೂದ್ಯರಲ್ಲಿ ಐದು ಲಕ್ಷ.
Yoab gblɔ na fia la be ŋutsu siwo tsi na aʋayiyi la le ame akpe alafa enyi le Israel eye wole akpe alafa atɔ̃ le Yuda.
10 ೧೦ ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.
David ƒe dzitsinya ɖe fu nɛ esi wòna woxlẽ ame siwo ate ŋu ayi aʋa la vɔ. Tete wògblɔ na Yehowa be, “Mewɔ nu vɔ̃ gã aɖe le nu si mewɔ la ta. Oo Yehowa, azɔ la meɖe kuku na wò, ɖe wò dɔla ƒe vodada ɖa elabena mewɔ bometsinu gã aɖe.”
11 ೧೧ ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ,
Hafi David nafɔ le ŋdi la, Yehowa ƒe gbe va na Nyagblɔɖila Gad, David ƒe nukpɔla be,
12 ೧೨ “ನೀನು ದಾವೀದನ ಬಳಿ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಟ್ಟಿದ್ದೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ’ ಎಂಬುದಾಗಿ ಹೇಳು” ಎಂದು ಆಜ್ಞಾಪಿಸಿದನು.
“Yi nàgblɔ na David be, ‘Ale Yehowa gblɔe nye esi: mele nu etɔ̃ ɖom ŋkuwò me. Tia wo dometɔ ɖeka esi mawɔ ɖe ŋutiwò.’”
13 ೧೩ ಆಗ ಗಾದನು ದಾವೀದನ ಬಳಿಗೆ ಹೋಗಿ, “ನಿನ್ನ ದೇಶದಲ್ಲಿ ಏಳು ವರ್ಷಗಳು ಬರವು ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ನಿನ್ನಿಂದ ಪಡೆದು ತಿಳಿಸಲಿ? ಆಲೋಚಿಸಿ ಹೇಳು” ಎಂದನು.
Gad yi David gbɔ eye wòbiae be, “Ɖe nàtia be dɔwuame nava anyigba dzi ƒe adre loo, alo nàsi le wò futɔwo nu ɣleti etɔ̃ loo, alo dɔvɔ̃ nava anyigba la dzi ŋkeke etɔ̃a? Bu nu siawo ŋu nyuie eye nàna manya ŋuɖoɖo si mana ame si dɔm la.”
14 ೧೪ ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.
David gblɔ na Gad be, “Meɖo xaxa gã aɖe me. Na míadze Yehowa ƒe asi me le eƒe nublanuikpɔkpɔ sɔ gbɔ la ta, ke mègana madze amegbetɔ ƒe asi me o.”
15 ೧೫ ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನ ವರೆಗೂ ಇತ್ತು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.
Ale Yehowa na dɔvɔ̃ va Israelnyigba dzi ŋdi ma; enɔ anyi va se ɖe ɣeyiɣi si wòɖo nɛ eye ame akpe blaadre ku le dukɔ la me, tso Dan va se ɖe Beerseba.
16 ೧೬ ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.
Esi mawudɔla la do eƒe asi ɖa be yeatsrɔ̃ Yerusalem la, dzɔgbevɔ̃e la ve Yehowa eye wògblɔ na mawudɔla si le nu gblẽm le ameawo dome la be, “Enyo gbɔ! Ɖe wò asi ɖa.” Yehowa ƒe dɔla la ɖo Arauna, Yebusitɔ la ƒe lugbɔƒe le ɣe ma ɣi me.
17 ೧೭ ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಯೆಹೋವನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು, ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ” ಎಂದು ಬೇಡಿಕೊಂಡನು.
David kpɔ mawudɔla la eye wògblɔ na Yehowa be, “Kpɔ ɖa, nyee nye ame si wɔ nu vɔ̃! Nu ka alẽ siawo ya wɔ? Na wò dɔmedzoe nabi ɖe nye kple nye ƒometɔwo ɖeɖe ko ŋuti.”
18 ೧೮ ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.
Nyagblɔɖila Gad va David gbɔ gbe ma gbe eye wògblɔ nɛ be, “Yi nàtu vɔsamlekpui aɖe na Yehowa le Arauna, Yebusitɔ la ƒe lugbɔƒe.”
19 ೧೯ ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು.
David yi be yeawɔ nu si Yehowa to Gad dzi gblɔ nɛ.
20 ೨೦ ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು.
Esi Arauna kpɔ fia la kple eŋumewo gbɔna egbɔ la, eyi hede ta agu tsyɔ mo anyi ɖe fia la ŋkume.
21 ೨೧ ಅವನು, “ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವುದಕ್ಕೆ ಕಾರಣವೇನು?” ಎಂದು ಕೇಳಿದನು. ದಾವೀದನು ಅವನಿಗೆ, “ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟುವುದಕ್ಕೆ ಬಂದಿದ್ದೇನೆ” ಎಂದು ಉತ್ತರಕೊಟ್ಟನು.
Ebia wo be, “Nu ka wɔ ge mieva?” David ɖo eŋu be, “Míeva be míaƒle wò lugbɔƒea eye matu vɔsamlekpui aɖe na Yehowa ɖe afi sia ale be wòana dɔvɔ̃ la nu natso.”
22 ೨೨ ಆಗ ಅರೌನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ, ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ನೊಗ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.
Arauna gblɔ na David be, “Nye aƒetɔ fia, wɔ nu sia nu si hiã wò la ŋu dɔ faa. Nyitsuwoe nye esiawo na numevɔsa; àte ŋu awɔ lugbɔnuwo kple nyitsuwo ƒe kɔkutiwo ŋu dɔ hena dzododo ɖe vɔsamlekpui la dzi.
23 ೨೩ ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ” ಎಂದು ಹೇಳಿದನು.
Matsɔ wo katã na wò faa. Yehowa, wò Mawu la naxɔ wò vɔsa.”
24 ೨೪ ಅರಸನು ಅರೌನನಿಗೆ, “ಹಾಗಲ್ಲ, ನಾನು ಅವುಗಳನ್ನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಉಚಿತವಾಗಿ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲಾರೆ” ಎಂದು ಹೇಳಿ ಆ ಕಣವನ್ನೂ ಮತ್ತು ಹೋರಿಗಳನ್ನೂ ಐವತ್ತು ಶೆಕಲ್ ಬೆಳ್ಳಿಗೆ ಕೊಂಡುಕೊಂಡನು.
Ke Fia David gblɔ na Arauna be, “Ao, nyemaxɔ nu siawo abe nunanawo ene o, elabena nyemedi be masa numevɔ la na Yehowa, nye Mawu la kple nu siwo ta nyemexe fe aɖeke ɖo o.” Ale David xe klosaloga blaatɔ̃ nɛ ɖe lugbɔƒe la kple nyitsuawo ta.
25 ೨೫ ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು.
David ɖi vɔsamlekpui ɖe afi ma na Yehowa eye wòsa numevɔ kple akpedavɔ. Yehowa se eƒe gbedodoɖa eye wòna dɔvɔ̃ la nu tso.