< ಸಮುವೇಲನು - ದ್ವಿತೀಯ ಭಾಗ 3 >

1 ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು.
Y hubo luenga guerra entre la casa de Saul, y la casa de David: mas David se iba fortificando, y la casa de Saul iba en diminución.
2 ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು; ಚೊಚ್ಚಲ ಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು.
Y nacieron hijos a David en Hebrón. Su primogénito fue Amnón de Aquinoam Jezraelita.
3 ಎರಡನೆಯವನು ಕಿಲಾಬನು. ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು. ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಪುತ್ರನು.
Su segundo fue Queleab de Abigail, la mujer de Nabal, el del Carmelo; el tercero, Absalom, hijo de Maaca, hija de Tolmai rey de Gessur;
4 ನಾಲ್ಕನೆಯವನು ಅದೋನೀಯನು. ಇವನು ಹಗ್ಗೀತಳ ಮಗನು. ಐದನೆಯವನು ಶೆಫಟ್ಯನು, ಇವನು ಅಬೀಟಲಳ ಮಗನು.
El cuarto, Adonías, hijo de Haggit; el quinto, Safatias, hijo de Abital;
5 ಆರನೆಯವನು ಇತ್ರಾಮನು. ಇವನು ದಾವೀದನಿಗೆ ಅವನ ಹೆಂಡತಿಯಾದ ಎಗ್ಲಳಲ್ಲಿ ಹುಟ್ಟಿದವನು. ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು ಇವರೇ.
El sexto, Jetraam de Egla mujer de David: estos nacieron a David en Hebrón.
6 ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧ ನಡೆಯುತ್ತಿರುವಾಗ ಸೌಲನ ವಂಶದವರಲ್ಲಿ ಅಬ್ನೇರನೇ ಬಲಿಷ್ಠನಾಗಿದ್ದನು.
Y como había guerra entre la casa de Saul, y la de David, aconteció que Abner se esforzaba por la casa de Saul.
7 ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿನ ಈಷ್ಬೋಶೆತನು ಅಬ್ನೇರನನ್ನು, “ನೀನು ನನ್ನ ತಂದೆಯ ಉಪಪತ್ನಿಯರನ್ನು ಕೂಡಿದ್ದೇಕೆ?” ಎಂದು ಕೇಳಿದನು.
Y Saul había tenido una concubina que se llamaba Resfa, hija de Aja: e Is-boset dijo a Abner: ¿Por qué has entrado a la concubina de mi padre?
8 ಅಬ್ನೇರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, “ಈ ವರೆಗೆ ನಾನು ನಿನ್ನ ತಂದೆಯಾದ ಸೌಲನ ಕುಟುಂಬಕ್ಕೂ ಅವನ ಬಂಧು ಮಿತ್ರರಿಗೂ ದಯೆತೋರಿಸುತ್ತಿದ್ದೇನಲ್ಲಾ. ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲವಷ್ಟೆ. ಈಗ ಈ ಹೆಂಗಸಿನ ದೆಸೆಯಿಂದ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?
Y Abner se enojó en gran manera por las palabras de Is-boset, y dijo: ¿Soy yo cabeza de los perros de Judá? Yo he hecho hoy misericordia con la casa de Saul tu padre, con sus hermanos, y con sus amigos, y no te he entregado en las manos de David, y tú me has hecho hoy cargo del pecado de una mujer.
9 ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದ ವರೆಗಿರುವ ಎಲ್ಲಾ ಇಸ್ರಾಯೇಲರಲ್ಲಿಯೂ, ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ,
Así haga Dios a Abner, y así le añada, que como ha jurado Jehová a David, así haga yo con él:
10 ೧೦ ಯೆಹೋವನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸದೆ ಹೋದರೆ, ಆತನು ನನಗೆ ಬೇಕಾದದ್ದನ್ನು ಮಾಡಲಿ” ಅಂದನು.
Y que yo traspase el reino de la casa de Saul, y confirme la silla de David sobre Israel, y sobre Judá, desde Dan hasta Beer-seba.
11 ೧೧ ಈಷ್ಬೋಶೆತನು ಅವನಿಗೆ ಹೆದರಿ ಏನೂ ಉತ್ತರಕೊಡಲಾರದೆ ಹೋದನು.
Y él no pudo responder palabra a Abner porque tenía temor de él.
12 ೧೨ ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಪ್ರಯತ್ನದಲ್ಲಿ ನಾನು ನಿನ್ನ ಸಂಗಡ ಕೈಜೋಡಿಸುತ್ತೇನೆ” ಎಂದು ಹೇಳಿಸಿದನು.
Y envió Abner mensajeros a David de su parte, diciendo: ¿Cúya es la tierra? Y que le dijesen: Haz alianza conmigo, y, he aquí que mi mano será contigo para volver a ti a todo Israel.
13 ೧೩ ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ. ಆದರೆ ನಿನ್ನಿಂದ ನನಗೆ ಒಂದು ಸಹಾಯ ಬೇಕು. ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ, ನೀನು ನನ್ನ ಮುಖವನ್ನು ನೋಡಕೂಡದು” ಎಂದು ಉತ್ತರಕೊಟ್ಟನು.
Y él dijo: Bien. Yo haré contigo alianza: mas una cosa te pido; y es, que no me vengas a ver sin que primero traigas a Micol la hija de Saul, cuando vinieres a verme.
14 ೧೪ ಆಗ ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು” ಎಂಬುದಾಗಿ ಆಜ್ಞಾಪಿಸಿದನು.
Después de esto David envió mensajeros a Is-boset, hijo de Saul, diciendo: Restitúyeme a mi mujer Micol, la cual yo desposé conmigo por cien prepucios de Filisteos.
15 ೧೫ ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ಕರೆಯಿಸಿದನು.
Entonces Is-boset envió, y quitóla a su marido Faltiel, hijo de Lais.
16 ೧೬ ಆಗ ಪಲ್ಟೀಯೇಲನು ಬಹುರೀಮಿನವರೆಗೆ ಅಳುತ್ತಾ ಆಕೆಯ ಹಿಂದೆ ಹೋದನು. ಅನಂತರ ಅಬ್ನೇರನು ಅವನಿಗೆ, “ಹಿಂದಿರುಗಿ ಮನೆಗೆ ಹೋಗು” ಎಂದು ಹೇಳಲು ಅವನು ಹಿಂದಿರುಗಿ ಹೋದನು.
Y su marido fue con ella llorando por el camino en pos de ella hasta Bajurim: y Abner le dijo: Anda, vuélvete. Entonces él se volvió.
17 ೧೭ ಅಬ್ನೇರನು ಇಸ್ರಾಯೇಲರ ಹಿರಿಯರಿಗೆ, “ದಾವೀದನು ನಮ್ಮ ಅರಸನಾಗಬೇಕೆಂದು ನೀವು ಮೊದಲು ಅಪೇಕ್ಷಿಸಿದಂತೆಯೇ ಈಗ ಮಾಡಿರಿ.
Y habló Abner con los ancianos de Israel, diciendo: Ayer y anteayer procurabais que David fuese rey sobre vosotros;
18 ೧೮ ಯೆಹೋವನು ದಾವೀದನ ವಿಷಯವಾಗಿ ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವನೆಂದು ನುಡಿದಿದ್ದಾನಲ್ಲಾ” ಎಂದು ಹೇಳಿದನು.
Ahora pues, hacédlo; porque Jehová ha hablado a David, diciendo: Por la mano de mi siervo David libraré a mi pueblo Israel de mano de los Filisteos, y de mano de todos sus enemigos.
19 ೧೯ ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು ಇಸ್ರಾಯೇಲರೂ ಬೆನ್ಯಾಮೀನ್ಯರೆಲ್ಲರೂ ಒಪ್ಪಿಕೊಂಡು ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವುದಕ್ಕೋಸ್ಕರ ಹೆಬ್ರೋನಿಗೆ ಹೊರಟನು.
Y habló también Abner en oídos de Ben-jamín: y también fue Abner a decir a David a Hebrón todo el parecer de los de Israel, y de toda la casa de Ben-jamín.
20 ೨೦ ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣ ಮಾಡಿಸಿದನು.
Vino pues Abner a David en Hebrón, y con él veinte hombres: y David hizo banquete a Abner, y a los que con él habían venido.
21 ೨೧ ಅಬ್ನೇರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಾಯೇಲರನ್ನೆಲ್ಲಾ ಕೂಡಿಸಿ, ನನ್ನ ಒಡೆಯನಾದ ಅರಸನ ಬಳಿಗೆ ಕರೆದುಕೊಂಡು ಬರುವೆನು. ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು. ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು” ಎಂದು ಹೇಳಲು ದಾವೀದನು ಅವನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು.
Y dijo Abner a David: Yo me levantaré, e iré, y juntaré a mi señor el rey todo Israel, para que hagan contigo alianza, y tú reines sobre todo lo que desea tu alma. Y David envió a Abner, y él se fue en paz.
22 ೨೨ ಸುಲಿಗೆ ಮಾಡುವುದಕ್ಕಾಗಿ ಹೋಗಿದ್ದ ದಾವೀದನ ಭಟರು ಯೋವಾಬನೂ ದೊಡ್ಡ ಕೊಳ್ಳೆಯೊಡನೆ ಅಷ್ಟರಲ್ಲಿ ಹಿಂತಿರುಗಿ ಬಂದರು. ಅವನು ಹೆಬ್ರೋನಿಗೆ ಬಂದಾಗ ಅಬ್ನೇರನು ದಾವೀದನ ಹತ್ತಿರ ಇರಲಿಲ್ಲ. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದನು.
Y he aquí los siervos de David y Joab, que venían del campo, y traían consigo gran presa. Y Abner ya no estaba con David en Hebrón, que ya él le había despedido, y él se había ido en paz.
23 ೨೩ ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ, ಅರಸನು ಅವನನ್ನು ಸುರಕ್ಷಿತವಾಗಿ ಕಳುಹಿಸಿದನೆಂದೂ ತಿಳಿದು, ಅರಸನ ಬಳಿಗೆ ಹೋಗಿ,
Y como Joab y todo el ejército que con él estaba vinieron, fue dado aviso a Joab, diciendo: Abner, hijo de Ner, ha venido al rey: y él le ha enviado, y se fue en paz.
24 ೨೪ “ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದಿದ್ದನಂತೆ. ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದೇಕೆ?
Entonces Joab vino al rey, y le dijo: ¿Qué has hecho? He aquí, habíase venido Abner a ti: ¿por qué pues le dejaste que se fuese?
25 ೨೫ ನೇರನ ಮಗನಾದ ಅಬ್ನೇರನ ಸಂಗತಿ ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವುದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೇ” ಎಂದು ಹೇಳಿ,
¿Sabes tú que Abner, hijo de Ner, es venido para engañarte, y saber tu salida y tu entrada, y por entender todo lo que tú haces?
26 ೨೬ ಯೋವಾಬನು ದಾವೀದನನ್ನು ಬಿಟ್ಟು, ಹೊರಗೆ ಹೋಗಿ, ಅಬ್ನೇರನನ್ನು ಕರೆತರುವಂತೆ ದೂತರನ್ನು ಕಳುಹಿಸಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ.
Y saliéndose Joab de con David, envió mensajeros tras Abner, los cuales le volvieron desde el pozo de Sira, sin saberlo David.
27 ೨೭ ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.
Y como Abner volvió a Hebrón, Joab le apartó al medio de la puerta hablando con él blandamente como de secreto, y allí le hirió junto a la quinta costilla por la muerte de Asael su hermano, y murió.
28 ೨೮ ಸ್ವಲ್ಪ ಹೊತ್ತಾದ ಮೇಲೆ ಈ ವರ್ತಮಾನವು ದಾವೀದನಿಗೆ ಮುಟ್ಟಿತು. ಆಗ ಅವನು, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ, ನನ್ನ ರಾಜ್ಯವೂ ಯೆಹೋವನ ಮುಂದೆ ಸದಾ ನಿರ್ದೋಷಿಗಳು.
Cuando David supo esto después, dijo: Yo soy limpio, y mi reino, delante de Jehová, para siempre, de la sangre de Abner, hijo de Ner:
29 ೨೯ ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.
Caiga sobre la cabeza de Joab, y sobre toda la casa de su padre; que nunca falte de la casa de Joab hombre que padezca flujo, ni leproso, ni quien ande con bordón, ni quien muera a cuchillo, ni quien tenga falta de pan.
30 ೩೦ ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ಸಾಯಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು.
Así que Joab y Abisaí su hermano mataron a Abner, porque él había muerto a Asael hermano de ellos en la batalla en Gabaón.
31 ೩೧ ಅರಸನಾದ ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಕಟ್ಟಿಕೊಂಡು, ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ” ಎಂದು ಆಜ್ಞಾಪಿಸಿ ತಾನು ಶವಯಾತ್ರೆ ಹಿಂದೆ ಹೋದನು.
Entonces David dijo a Joab, y a todo el pueblo que con él estaba: Rompéd vuestros vestidos, y ceñíos de sacos, y hacéd llanto delante de Abner: y el rey iba detrás de las andas.
32 ೩೨ ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು. ಜನರೆಲ್ಲರೂ ಅತ್ತರು.
Y sepultaron a Abner en Hebrón: y alzando el rey su voz, lloró al sepulcro de Abner: y todo el pueblo también lloró.
33 ೩೩ ದಾವೀದನು ಅಬ್ನೇರನನ್ನು ಕುರಿತು, “ಅಬ್ನೇರನೇ ನಿನಗೆ ಮೂರ್ಖರಿಗಾಗುವಂತೆ ದುರ್ಮರಣವಾಯಿತೋ?
Y endechando el rey al mismo Abner, decía: ¿Murió Abner como muere el insensato?
34 ೩೪ ನಿನ್ನ ಕೈಗಳು ಕಟ್ಟಲ್ಪಡಲಿಲ್ಲ. ನಿನ್ನ ಕಾಲುಗಳಿಗೆ ಬೇಡಿಗಳು ಹಾಕಿರಲಿಲ್ಲ. ನೀನು ದುಷ್ಟರಿಂದ ಹತನಾದಂತೆ ಹತನಾದಿ” ಎಂದು ಶೋಕಗೀತೆಯನ್ನು ಹಾಡಲು ಜನರು ತಿರುಗಿ ಅತ್ತರು.
Tus manos no eran atadas, ni tus pies ligados con grillos. Como los que caen delante de los hijos de iniquidad, así caíste. Y añadieron todo el pueblo a llorar sobre él.
35 ೩೫ ಸೂರ್ಯಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ, ಬೇರೆ ಯಾವುದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟು ಹೇಳಿದನು.
Y como todo el pueblo viniese a dar de comer pan a David, siendo aun de día, David juró, diciendo: Así me haga Dios, y así me añada, si antes que se ponga el sol yo gustare pan, o otra cualquiera cosa.
36 ೩೬ ಜನರು ಇದನ್ನು ಕಂಡು ಮೆಚ್ಚಿದರು. ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು.
Así entendió todo el pueblo, y les plugo en sus ojos; porque todo lo que el rey hacía parecía bien en ojos de todo el pueblo.
37 ೩೭ ನೇರನ ಮಗನಾದ ಅಬ್ನೇರನ ಕೊಲೆಯಲ್ಲಿ ಅರಸನು ಕೈಹಾಕಲಿಲ್ಲವೆಂಬುದು ಅವನ ಎಲ್ಲಾ ಜನರಿಗೂ ಇಸ್ರಾಯೇಲರಿಗೂ ಅದೇ ದಿನ ಗೊತ್ತಾಯಿತು.
Y todo el pueblo, y aun todo Israel entendieron aquel día, que no había venido del rey, que Abner, hijo de Ner, muriese.
38 ೩೮ ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಾಯೇಲರಲ್ಲಿ ಹತವಾದವನು, ಪ್ರಭುವೂ, ಮಹಾಪುರುಷನೂ ಆಗಿದ್ದಾನೆಂಬುದು ನಿಮಗೆ ಗೊತ್ತಿದೆಯಲ್ಲಾ.
Entonces el rey dijo a sus siervos: ¿No sabéis que ha caído hoy en Israel un príncipe, y grande?
39 ೩೯ ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.
Que yo ahora aun soy tierno rey ungido: y estos hombres, los hijos de Sarvia, muy duros me son: Jehová dé el pago al que mal hace, conforme a su malicia.

< ಸಮುವೇಲನು - ದ್ವಿತೀಯ ಭಾಗ 3 >