< ಸಮುವೇಲನು - ದ್ವಿತೀಯ ಭಾಗ 4 >

1 ಅಬ್ನೇರನು ಹೆಬ್ರೋನಿನಲ್ಲಿ ಸತ್ತನೆಂಬ ವರ್ತಮಾನವು ಸೌಲನ ಮಗನಾದ ಈಷ್ಬೋಶೆತನಿಗೆ ಮುಟ್ಟಿದಾಗ ಅವನ ಕೈಗಳು ಜೋಲುಬಿದ್ದವು. ಇಸ್ರಾಯೇಲರೆಲ್ಲರು ಕಳವಳಗೊಂಡರು.
撒烏耳的兒子依市巴耳,一聽見阿貝乃爾死在赫貝龍,就慌了手腳,全以色列大驚。
2 ಸೌಲನ ಮಗನಿಗೆ ಬಾಣ, ರೇಕಾಬ ಎಂಬ ಇಬ್ಬರು ಸೇನಾಧಿಪತಿಗಳಿದ್ದರು. ಅವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. ಬೇರೋತ ಎಂಬುದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ.
撒烏耳的兒子依市巴耳有兩個土匪頭目:一個名叫巴阿納,一個名叫勒加布,是本雅明子孫貝洛特人黎孟的兒子,──貝洛特被認為是本雅明族,
3 ಆದರೆ ಬೇರೋತ್ಯರು ಗಿತ್ತಯಿಮಿಗೆ ಓಡಿಹೋಗಿ, ಇಂದಿನ ವರೆಗೂ ಅಲ್ಲೇ ಪ್ರವಾಸಿಗಳಾಗಿದ್ದಾರೆ.
因為貝洛特人逃到了基塔殷,僑居在那裏,直到今日。
4 ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾಗಿದ್ದು ಹೇಗೆಂದರೆ, ಸೌಲಯೋನಾತಾನರು ಸತ್ತರೆಂಬ ವರ್ತಮಾನವು ಇಜ್ರೇಲಿನಿಂದ ಬಂದಾಗ, ಐದು ವರ್ಷದವನಾಗಿದ್ದ ಅವನನ್ನು ಅವನ ದಾದಿಯು ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕುಂಟನಾದನು.
撒烏耳的兒子約納堂有個兒子雙足跛了,當撒烏耳與約納堂的凶信由依次勒耳傳來時,他只有五歲,他的乳母帶他逃跑,在慌張逃跑中,他跌瘸了腿;他名叫默黎巴耳。
5 ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬುವರು ಅವನ ಮನೆಯ ಬಳಿಗೆ ಬಂದರು.
貝洛特人黎孟的兒子勒加布和巴阿納出去,正當中午炎熱的時候,到了依市巴耳家裏,他正在床上睡午覺。
6 ಆಗ ಬಾಗಿಲು ಕಾಯುವವಳು ಗೋದಿ ಕೇರುತ್ತಿದ್ದು ಹಾಗೆಯೇ ತೂಕಡಿಸಿ ನಿದ್ದೆಮಾಡುತ್ತಿರುವುದನ್ನು ಬಾಣ ಮತ್ತು ರೇಕಾಬರು ಕಂಡು ರಹಸ್ಯವಾಗಿ ಒಳಗೆ ಜಾರಿಕೊಂಡರು.
看門的女僕在篩麥子,也打盹睡著了。此時勒加布和他兄弟巴阿納溜進去,
7 ಅವರು ಒಳಕೋಣೆಯಲ್ಲಿ ಮಂಚದ ಮೇಲೆ ಮಲಗಿದ್ದ ಅರಸನನ್ನು ಹೊಡೆದು, ಕೊಂದುಹಾಕಿ, ತಲೆಯನ್ನು ಕತ್ತರಿಸಿ, ಅದನ್ನು ತೆಗೆದುಕೊಂಡು, ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ಪ್ರಯಾಣಮಾಡಿ,
到了屋內,見依市巴耳正睡在臥室的床上,便將他打死,砍下他的頭,帶著頭,在阿辣巴的大路上走了一夜。
8 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು, ಆ ತಲೆಯನ್ನು ಅವನಿಗೆ ತೋರಿಸಿ, “ಇಗೋ ನಿನ್ನ ಜೀವತೆಗೆಯಬೇಕೆಂದಿದ್ದ ನಿನ್ನ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ. ಅರಸನಾದ ನಮ್ಮ ಒಡೆಯನಿಗಾಗಿ ಸೌಲನಿಗೂ ಅವನ ಸಂತಾನಕ್ಕೂ ಯೆಹೋವನು ಈ ಹೊತ್ತು ಮುಯ್ಯಿ ತೀರಿಸಿದ್ದಾನೆ” ಅಂದನು.
他們帶著依市巴耳的頭,到了赫貝龍見達味王說:「大王的仇人撒烏耳常謀害你的性命;看,他兒子依市巴耳的頭;上主今天為我主向撒烏耳和他的後代報了仇。」
9 ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣರಿಗೆ,
但是,達味答覆貝洛特人黎孟的兒子勒加布和他兄弟巴阿納說:「我指著那救我脫離了一切患難的永生上主起誓:
10 ೧೦ “ಸೌಲನ ಮರಣವಾರ್ತೆಯನ್ನು ತಿಳಿಸುವುದು ಶುಭಕರವೆಂದು ಭಾವಿಸಿ ಬಂದು, ನನಗೆ ಹೇಳಿದವನನ್ನು ಹಿಡಿದು ಅವನಿಗೆ ಚಿಕ್ಲಗಿನಲ್ಲಿ ಮರಣದಂಡನೆಯೆಂಬ ಬಹುಮಾನವನ್ನು ಸಲ್ಲಿಸಿದೆನಲ್ಲವೋ?
那告訴我說:撒烏耳死了的,自以為是報喜信,我卻拿住他,在漆刻拉格殺了,作為他報信的賞報;
11 ೧೧ ಮಹಾ ದುಷ್ಟರಾದ ನೀವು ನೀತಿವಂತನ ಮನೆಯೊಳಗೆ ನುಗ್ಗಿ, ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ, ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದು ಬಿಡುವೆನು” ಎಂದು ಹೇಳಿ,
那麼,現在這些匪徒,偷進人屋,殺了睡在床上的義人,我豈不更該從你們手中追討他的血債,將你們由地上剷除﹖」
12 ೧೨ ತನ್ನ ಆಳುಗಳಿಗೆ ಆಜ್ಞಾಪಿಸಲು ಅವರು ಇವರನ್ನು ಕೊಂದು, ಕೈಕಾಲುಗಳನ್ನು ಕತ್ತರಿಸಿ, ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು.
達味遂命自己的僮僕,殺了他們,砍去他們的手足,掛在赫貝龍的池旁;至於依市巴耳的頭,叫人拿去葬在赫貝龍,阿貝乃爾的墳墓內。

< ಸಮುವೇಲನು - ದ್ವಿತೀಯ ಭಾಗ 4 >