< ಸಮುವೇಲನು - ದ್ವಿತೀಯ ಭಾಗ 5 >
1 ೧ ಅನಂತರ ಇಸ್ರಾಯೇಲರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ,
이스라엘 모든 지파가 헤브론에 이르러 다윗에게 나아와 말하여 가로되 보소서 우리는 왕의 골육이니이다
2 ೨ ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.
전일 곧 사울이 우리의 왕이 되었을 때에도 이스라엘을 거느려 출입하게 한 자는 왕이시었고 여호와께서도 왕에게 말씀하시기를 네가 내 백성 이스라엘의 목자가 되며 이스라엘의 주권자가 되리라 하셨나이다 하니라
3 ೩ ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲಿಯೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.
이에 이스라엘 모든 장로가 헤브론에 이르러 왕에게 나아오매 다윗 왕이 헤브론에서 여호와 앞에서 저희와 언약을 세우매 저희가 다윗에게 기름을 부어 이스라엘 왕을 삼으니라
4 ೪ ದಾವೀದನು ಮೂವತ್ತು ವರ್ಷದವನಾದಾಗ ಅರಸನಾಗಿ, ನಲ್ವತ್ತು ವರ್ಷ ಆಳಿದನು.
다윗이 삼십 세에 위에 나아가서 사십 년을 다스렸으되
5 ೫ ಅವನು ಹೆಬ್ರೋನಿನಲ್ಲಿದ್ದು ಯೆಹೂದ ಕುಲವೊಂದನ್ನೇ ಆಳಿದ್ದು ಏಳು ವರ್ಷ ಆರು ತಿಂಗಳು. ಯೆರೂಸಲೇಮಿನಲ್ಲಿದ್ದು ಯೆಹೂದ್ಯರನ್ನು ಮತ್ತು ಎಲ್ಲಾ ಇಸ್ರಾಯೇಲರನ್ನು ಆಳಿದ್ದು ಮೂವತ್ತು ಮೂರು ವರ್ಷಗಳು.
헤브론에서 칠 년 육 개월 동안 유다를 다스렸고 예루살렘에서 삼십삼 년 동안 온 이스라엘과 유다를 다스렸더라
6 ೬ ದಾವೀದನು ತನ್ನ ಜನರನ್ನು ಕರೆದುಕೊಂಡು ಯೆರೂಸಲೇಮಿನಲ್ಲಿದ್ದ ದೇಶದ ಮೂಲನಿವಾಸಿಗಳಾದ ಯೆಬೂಸಿಯರಿಗೆ ವಿರೋಧವಾಗಿ ಹೊರಟನು. ಅವರು ಇವನು ಒಳಗೆ ಬರುವುದಿಲ್ಲವೆಂದು ತಿಳಿದು ದಾವೀದನಿಗೆ, “ನೀನು ಒಳಗೆ ಬರಲಾರೆ, ಕುರುಡರು ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು” ಎಂದು ಹೇಳಿದರು.
왕과 그 종자들이 예루살렘으로 가서 그 땅 거민 여부스 사람을 치려 하매 그 사람들이 다윗에게 말하여 가로되 네가 이리로 들어오지 못하리라 소경과 절뚝발이라도 너를 물리치리라 하니 저희 생각에는 다윗이 이리로 들어오지 못하리라 함이나
7 ೭ ಅದರೂ ದಾವೀದನು ದಾವೀದನಗರ ಎನ್ನಿಸಿಕೊಳ್ಳುವ ಚೀಯೋನಿನ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.
다윗이 시온 산성을 빼앗았으니 이는 다윗 성이더라
8 ೮ ಆ ದಿನ ದಾವೀದನು, “ಯೆಬೂಸಿಯರನ್ನು ಜಯಿಸಬೇಕೆಂದಿರುವವನು, ಜಲದ್ವಾರದ ಮೂಲಕ ಹತ್ತಿ ಹೋಗಿ, ನನ್ನನ್ನು ದ್ವೇಷಿಸುವ ಕುರುಡರನ್ನು ಮತ್ತು ಕುಂಟರನ್ನು ಕಂದಕದಲ್ಲಿ ನಾಶಪಡಿಸಬೇಕು” ಎಂದು ಹೇಳಿದನು. ಆದುದರಿಂದ “ಕುರುಡರೂ ಕುಂಟರೂ ಅರಮನೆಯ ಒಳಗೆ ಬರಲಾಗದು” ಎಂಬ ಗಾದೆಯುಂಟು.
그 날에 다윗이 이르기를 누구든지 여부스 사람을 치거든 수구로 올라가서 다윗의 마음에 미워하는 절뚝발이와 소경을 치라 하였으므로 속담이 되어 이르기를 소경과 절뚝발이는 집에 들어오지 못하리라 하더라
9 ೯ ದಾವೀದನು ಆ ಕೋಟೆಗೆ ದಾವೀದ ನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ, ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.
다윗이 그 산성에 거하여 다윗 성이라 이름하고 밀로에서부터 안으로 성을 둘러 쌓으니라
10 ೧೦ ಸೇನಾಧೀಶ್ವರನಾದ ಯೆಹೋವ ದೇವರು ಅವನ ಸಂಗಡ ಇದ್ದುದರಿಂದ ಅವನು ಆಧಿಕ ಪ್ರಬಲಗೊಳ್ಳುತ್ತಾ ಬಂದನು.
만군의 하나님 여호와께서 함께 계시니 다윗이 점점 강성하여 가니라
11 ೧೧ ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.
두로 왕 히람이 다윗에게 사자들과 백향목과 목수와 석수를 보내매 저희가 다윗을 위하여 집을 지으니
12 ೧೨ ಇದರಿಂದ ದಾವೀದನು, “ಯೆಹೋವನು ನನ್ನನ್ನು ಇಸ್ರಾಯೇಲರ ರಾಜನನ್ನಾಗಿ ಸ್ಥಿರಪಡಿಸಿ, ತನ್ನ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ನನ್ನ ರಾಜ್ಯವನ್ನು ವೃದ್ಧಿಪಡಿಸಿದ್ದಾನೆ” ಎಂದು ತಿಳಿದುಕೊಂಡನು.
다윗이 여호와께서 자기를 세우사 이스라엘 왕을 삼으신 것과 그 백성 이스라엘을 위하여 그 나라를 높이신 것을 아니라
13 ೧೩ ದಾವೀದನು ಹೆಬ್ರೋನಿನಿಂದ ಯೆರೂಸಲೇಮಿಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಮತ್ತು ಉಪಪತ್ನಿಯರನ್ನಾಗಿಯೂ ಮಾಡಿಕೊಂಡಿದ್ದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳು ಹುಟ್ಟಿದರು.
다윗이 헤브론에서 올라온 후에 예루살렘에서 처첩들을 더 취하였으므로 아들과 딸들이 또 다윗에게서 나니
14 ೧೪ ಅಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,
예루살렘에서 그에게서 난 자의 이름은 삼무아와 소밥과 나단과 솔로몬과
15 ೧೫ ಇಬ್ಹಾರ್, ಎಲೀಷೂವ, ನೆಫೆಗ್, ಯಾಫೀಯ,
입할과 엘리수아와 네벡과 야비아와
16 ೧೬ ಎಲೀಷಾಮ, ಎಲ್ಯಾದ ಮತ್ತು ಎಲೀಫೆಲೆಟ್.
엘리사마와 엘랴다와 엘리벨렛이었더라
17 ೧೭ ಇಸ್ರಾಯೇಲರು ದಾವೀದನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ತಲುಪಿದಾಗ ಅವರು ಅವನನ್ನು ಸೆರೆಹಿಡಿಯುವುದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.
이스라엘이 다윗에게 기름을 부어 이스라엘 왕을 삼았다 함을 블레셋 사람이 듣고 다윗을 찾으러 다 올라오매 다윗이 듣고 요해처로 나가니라
18 ೧೮ ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯೀಮ್ ತಗ್ಗಿಗೆ ಬಂದು ಅಲ್ಲಿ ಪಾಳೆಯಮಾಡಿಕೊಂಡಿದ್ದರು.
블레셋 사람이 이미 이르러 르바임 골짜기에 편만한지라
19 ೧೯ ಅದನ್ನು ತಿಳಿದು ದಾವೀದನು ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.
다윗이 여호와께 물어 가로되 내가 블레셋 사람에게로 올라가리이까 여호와께서 저희를 내 손에 붙이시겠나이까 여호와께서 다윗에게 말씀하시되 올라가라 내가 단정코 블레셋 사람을 네 손에 붙이리라 하신지라
20 ೨೦ ಆಗ ಅವನು ಹೋಗಿ ಅವರನ್ನು ಸೋಲಿಸಿ, “ಯೆಹೋವನು ಕಟ್ಟೆ ಒಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು, ಅವರನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾನೆ” ಎಂದು ಹೇಳಿ ಆ ಯುದ್ಧ ಸ್ಥಳಕ್ಕೆ “ಬಾಳ್ ಪೆರಾಚೀಮ್” ಎಂದು ಹೆಸರಿಟ್ಟನು.
다윗이 바알브라심에 이르러 거기서 저희를 치고 가로되 여호와께서 물을 흩음 같이 내 앞에서 내 대적을 흩으셨다 하므로 그곳 이름을 바알브라심이라 칭하니라
21 ೨೧ ಫಿಲಿಷ್ಟಿಯರು ಅಲ್ಲಿ ಬಿಟ್ಟು ಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.
거기서 블레셋 사람들이 그 우상을 버렸으므로 다윗과 그 종자들이 치우니라
22 ೨೨ ಫಿಲಿಷ್ಟಿಯರು ಇನ್ನೊಮ್ಮೆ ಹೊರಟು ಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು.
블레셋 사람이 다시 올라와서 르바임 골짜기에 편만한지라
23 ೨೩ ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ, “ನೀನು ನೇರವಾಗಿ ಹೋಗಿ ಅವರನ್ನು ಮುತ್ತಿಗೆ ಹಾಕಬೇಡ. ಅವರಿಗೆ ತಿಳಿಯದಂತೆ ಸುತ್ತಿಕೊಂಡು ಹೋಗಿ ಹಿಂಬಾಲಿಸಿ, ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.
다윗이 여호와께 묻자온대 가라사대 올라가지 말고 저희 뒤로 돌아서 뽕나무 수풀 맞은편에서 저희를 엄습하되
24 ೨೪ ಆ ಬಾಕಾ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದು ಅವರ ಮೇಲೆ ದಾಳಿಮಾಡು” ಎಂದನು.
뽕나무 꼭대기에서 걸음 걷는 소리가 들리거든 곧 동작하라 그 때에 여호와가 네 앞서 나아가서 블레셋 군대를 치리라 하신지라
25 ೨೫ ದಾವೀದನು ಯೆಹೋವನ ಆಜ್ಞಾನುಸಾರವಾಗಿ ಮಾಡಿ, ಫಿಲಿಷ್ಟಿಯರನ್ನು ಗೆಬದಿಂದ ಗೆಜೆರಿನವರೆಗೂ ಸಂಹರಿಸಿದನು.
이에 다윗이 여호와의 명대로 행하여 블레셋 사람을 쳐서 게바에서 게셀까지 이르니라