< ಸಮುವೇಲನು - ದ್ವಿತೀಯ ಭಾಗ 6 >
1 ೧ ಅನಂತರ ದಾವೀದನು ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಆರಿಸಿಕೊಂಡು ಅವರ ಸಂಗಡ
Once again David called up all specially chosen men of Israel, thirty thousand in total.
2 ೨ ದೇವರ ಮಂಜೂಷವನ್ನು ತರುವುದಕ್ಕಾಗಿ ಯೆಹೂದ ದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾಗಿತ್ತು.
He went with all his men to Baalah in Judah to bring back the Ark of God, which belongs to the Lord Almighty who sits between the cherubim that are on the Ark.
3 ೩ ಅವರು ದೇವರ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು, ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಮಾರ್ಗ ತೋರಿಸುತ್ತಾ ಮುನ್ನಡೆಸಿದರು.
They placed the Ark of God on a new cart and brought it from Abinadab's house, which was on a hill. Uzzah and Ahio, Abinadab's sons, were directing the cart
4 ೪ ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಿಂದ ತೆಗೆಯಲ್ಪಟ್ಟ ದೇವರ ಮಂಜೂಷದ ಮುಂದೆ ಅಹಿಯೋವನೂ ಹೋಗುತ್ತಿದ್ದನು.
with the Ark of God on it, with Ahio walking in front of it.
5 ೫ ದಾವೀದನೂ ಎಲ್ಲಾ ಇಸ್ರಾಯೇಲರೂ ಶಂಕುಮರದಿಂದ (ಸೈಪ್ರಸ್ ಮರ) ಮಾಡಿದ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ಯೆಹೋವನ ಮುಂದೆ ನರ್ತನ ಮಾಡುತ್ತಾ ಹೋದರು.
David and all the Israelites were celebrating in the Lord's presence, singing songs accompanied by zithers, harps, tambourines, rattles, and cymbals.
6 ೬ ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.
But when they came to the threshing floor of Nachon, the oxen stumbled, so Uzzah reached out to stop the Ark of God from falling.
7 ೭ ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು, ಈ ತಪ್ಪಿಗೆ ಅವನನ್ನು ಸಂಹರಿಸಿದನು. ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.
The Lord was angry with Uzzah, and God struck him down right there for his disobedience, and he died beside the Ark of God.
8 ೮ ಯೆಹೋವನು ಉಜ್ಜನನ್ನು ಹತ್ಯಮಾಡಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ “ಪೆರೆಚ್ ಉಜ್ಜಾ” ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಅದೇ ಹೆಸರಿರುತ್ತದೆ.
David was angry because of the Lord's violent outburst against Uzzah. He called the place Perez-uzzah, which is still its name today.
9 ೯ ಆ ದಿನ ದಾವೀದನು ಯೆಹೋವನಿಗೆ ಭಯಪಟ್ಟು, “ಯೆಹೋವನ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ?” ಎಂದುಕೊಂಡು,
David became afraid of the Lord that day. “How can I ever bring back the Ark of God home to me?” he asked.
10 ೧೦ ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.
Not wanting to bring the Ark of the Lord to be with him in the City of David, he had it taken to the home of Obed-edom the Gittite.
11 ೧೧ ಯೆಹೋವನ ಮಂಜೂಷವು ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ದಿನಗಳಲ್ಲಿ ಯೆಹೋವನು ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದನು.
The Ark of the Lord remained in Obed-edom's home for three months, and the Lord blessed Obed-edom's whole household.
12 ೧೨ ಯೆಹೋವನು ಹೀಗೆ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ, ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸಾಹದಿಂದ ದಾವೀದನಗರಕ್ಕೆ ತಂದನು.
King David was told, “The Lord has blessed Obed-edom's household and all that he has because of the Ark of God.” So David went and had the Ark of God brought from Obed-edom's house to the City of David. There was a lot of celebration!
13 ೧೩ ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ, ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು.
After those carrying the Ark of the Lord had taken six steps, he sacrificed a bull and a fattened calf.
14 ೧೪ ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.
Wearing a priest's ephod, David danced as hard as he could before the Lord
15 ೧೫ ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲರೂ ಅರ್ಭಟಿಸುತ್ತಾ, ತುತ್ತೂರಿ ಊದುತ್ತಾ, ಯೆಹೋವನ ಮಂಜೂಷವನ್ನು ತಂದರು.
as he and all the Israelites brought along the Ark of the Lord, with plenty of shouting and the sound of horns being blown.
16 ೧೬ ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಿಕಿಯಿಂದ ಇಣಿಕಿ ನೋಡಿ, ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ, ಕುಣಿಯುತ್ತಾ ಇರುವುದನ್ನು ಕಂಡು, ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು
As the Ark of the Lord was carried into the City of David, Saul's daughter Michal looked down from a window. She watched King David leaping and dancing before the Lord, and she really loathed him.
17 ೧೭ ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿಟ್ಟರು. ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.
They brought the Ark of the Lord and put it on its place inside the tent that David had set up for it. Then David offered burnt offerings and friendship offerings before the Lord.
18 ೧೮ ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.
Once he had finished offering the sacrifices, David blessed the people in the name of the Lord Almighty.
19 ೧೯ ಸಭೆಯಾಗಿ ಸೇರಿ ಬಂದಿರುವ ಇಸ್ರಾಯೇಲರ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನೂ ಮತ್ತು ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಕೊಡಿಸಿದರು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.
He gave all the Israelites, both men and women, a loaf of bread, a date cake, and a raisin cake. Then he sent everyone home.
20 ೨೦ ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, “ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ” ಅಂದಳು.
When David got home to bless his family, Michal, Saul's daughter came out to meet him and said, “How distinguished the king of Israel made himself look today, taking off his robes so everyone's servant girls could see, just as somebody crude would expose himself!”
21 ೨೧ ಆಗ ದಾವೀದನು ಮೀಕಲಳಿಗೆ, “ಇದನ್ನು ಯೆಹೋವನ ಸನ್ನಿಧಿಯಲ್ಲಿ ಮಾಡಿದ್ದೇನಷ್ಟೇ, ನಿನ್ನ ತಂದೆಯನ್ನೂ ಅವರ ಮನೆಯವರೆಲ್ಲರನ್ನೂ ಬಿಟ್ಟು, ನನ್ನನ್ನೇ ಆರಿಸಿಕೊಂಡು, ತನ್ನ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಸಂತೋಷದಿಂದ ಕುಣಿದಾಡುವೆನು.
David told Michal, “I was dancing before the Lord, who chose me instead of your father and all his family when he named me ruler over the Lord's people Israel. I will continue to celebrate before the Lord,
22 ೨೨ ಇದಕ್ಕಿಂತ ಇನ್ನೂ ಹೆಚ್ಚಾಗಿ ತಿರಸ್ಕಾರ ಹೊಂದುವುದಕ್ಕೂ ನನ್ನನ್ನು ಅಲ್ಪನೆಂದು ಭಾವಿಸಿಕೊಳ್ಳುವುದಕ್ಕೂ ಸಿದ್ಧನಾಗಿದ್ದೇನೆ. ನೀನು ಹೇಳಿದ ದಾಸಿಯರಾದರೋ ಹೇಗೂ ನನ್ನನ್ನು ಸನ್ಮಾನಿಸುವರು” ಎಂದನು.
in fact I'm going to make myself even less distinguished, become even more humble. However, I will be respected by those servant girls you spoke about.”
23 ೨೩ ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವ ವರೆಗೂ ಮಕ್ಕಳೇ ಆಗಲಿಲ್ಲ.
And Michal, Saul's daughter, never had any children.