< ಸಮುವೇಲನು - ದ್ವಿತೀಯ ಭಾಗ 7 >

1 ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದನು.
Chúa Hằng Hữu cho Ít-ra-ên hưởng thái bình. Đa-vít không còn phải chinh chiến với các nước lân bang.
2 ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ” ಎಂದು ಹೇಳಿದನು.
Sau khi dọn vào sống trong cung điện, một hôm Đa-vít nói với Tiên tri Na-than: “Nay ta sống trong cung cất bằng gỗ bá hương, còn Hòm của Đức Chúa Trời lại ở trong một cái lều.”
3 ನಾತಾನನು ಅರಸನಿಗೆ, “ಆಗಲಿ, ನಿನ್ನ ಹೃದಯದ ಆಲೋಚನೆಯಂತೆ ಮಾಡು. ಯೆಹೋವನು ನಿನ್ನ ಸಂಗಡ ಇರುತ್ತಾನೆ” ಅಂದನು.
Na-than đáp: “Xin vua cứ làm điều mình muốn, vì Chúa Hằng Hữu ở cùng vua.”
4 ಅದೇ ರಾತ್ರಿಯಲ್ಲಿ ನಾತಾನನಿಗೆ ಯೆಹೋವನ ಮಾತು ಕೇಳಿ ಬಂತು.
Nhưng đêm hôm ấy, Chúa Hằng Hữu phán với Na-than:
5 ಯೆಹೋವನು, “ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ ‘ನೀನು ನನಗೋಸ್ಕರ ಮನೆಯನ್ನು ಕಟ್ಟಬೇಕೋ?
“Hãy đi và nói với Đa-vít, đầy tớ Ta: ‘Đây là lời Chúa Hằng Hữu phán: Con sẽ cất một cái đền cho Ta ngự sao?
6 ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆನು.
Vì từ khi Ta đem Ít-ra-ên ra khỏi Ai Cập đến ngày nay, Ta không ngự trong đền thờ. Ta ở trong trại và đi đó đây.
7 ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೊಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ಕುಲನಾಯಕನನ್ನಾದರೂ ನೀವು ನನಗೋಸ್ಕರ ದೇವದಾರು ಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ?’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳು.
Trong suốt cuộc hành trình với người Ít-ra-ên, có bao giờ Ta hỏi người lãnh đạo, người nhận lệnh Ta chăn dắt dân rằng: “Tại sao không cất cho Ta một cái đền bằng gỗ bá hương,” hay không?’
8 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ‘ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.
Bây giờ hãy đi và nói cho Đa-vít, đầy tớ Ta: ‘Đây là lời của Chúa Hằng Hữu Vạn Quân rằng: Ta đã chọn con làm vua Ít-ra-ên trong lúc con còn đi chăn chiên nơi đồng cỏ.
9 ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾ ಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಉನ್ನತಿಗೆ ತರುವೆನು.
Ta đã ở với con trong mọi nơi con đi, Ta đã tiêu diệt tất cả thù nghịch của con trước mặt con. Bây giờ, Ta sẽ làm cho con nổi danh trên đất!
10 ೧೦ ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು.
Ta sẽ chuẩn bị một chỗ ở cho người Ít-ra-ên Ta, họ an cư lạc nghiệp, không còn bị quấy rối nữa. Các dân tộc gian ác sẽ không còn chinh phục họ như ngày xưa,
11 ೧೧ ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದ ಇಲ್ಲಿಯವರೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನೀನು ಶತ್ರುಭಯವಿಲ್ಲದೆ ನೆಮ್ಮದಿಯಿಂದಿರುವಂತೆ ಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ.
ta sẽ cho họ hưởng thái bình. Hơn nữa, Chúa Hằng Hữu sẽ xây dựng cho con một triều đại trường tồn.
12 ೧೨ ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.
Khi con qua đời, con của con sẽ nối ngôi, và Ta sẽ cho vương quốc nó cường thịnh.
13 ೧೩ ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.
Nó sẽ cất cho Ta một Đền Thờ. Ta sẽ củng cố ngôi nước nó mãi mãi.
14 ೧೪ ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪು ಮಾಡಿದರೆ ತಂದೆ ಮಗನಿಗೆ ಬೆತ್ತದಿಂದ ಶಿಕ್ಷೆಯನ್ನು ಕೊಡುವೆನು ಮತ್ತು ನರಪುತ್ರರಂತೆ ಅವನನ್ನು ದಂಡಿಸುವೆನು.
Ta làm Cha nó, nó làm con Ta. Nếu nó có lỗi, thì Ta sẽ trừng phạt như loài người dùng roi dạy con.
15 ೧೫ ಆದರೂ ನನ್ನ ನಿಷ್ಠೆಯ ಒಡಂಬಡಿಕೆಯು ಸೌಲನನ್ನು ಬಿಟ್ಟು ಹೋದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ
Nhưng Ta vẫn thương xót nó, không bỏ nó như trường hợp Sau-lơ đâu.
16 ೧೬ ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು’” ಎಂದು
Vậy triều đại và vương quốc con sẽ tồn tại, ngôi con sẽ vững bền mãi mãi.’”
17 ೧೭ ನಾತಾನನು ತನಗುಂಟಾದ ದರ್ಶನದ ಈ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು.
Na-than thuật cho Đa-vít đúng từng lời Chúa Hằng Hữu đã phán trong khải tượng này.
18 ೧೮ ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು, “ಕರ್ತನಾದ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದಿಯಲ್ಲಾ.
Vua Đa-vít đến hầu trước mặt Chúa Hằng Hữu và cầu nguyện: “Lạy Chúa Hằng Hữu Chí Cao, con là ai, gia đình con là gì mà Chúa đưa con lên địa vị này?
19 ೧೯ ಕರ್ತನೇ, ಯೆಹೋವನೇ! ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನನ್ನ ಮುಂದಿನ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿರುವೆ. ಕರ್ತನೇ, ಯೆಹೋವನೇ! ನೀನು ಮಾನವರಾದ ನಮ್ಮೊಂದಿಗೆ ಹೀಗೆ ವರ್ತಿಸುವುದು ಎಂಥಾ ಭಾಗ್ಯ.
Lạy Chúa Hằng Hữu Chí Cao! Như thế Chúa còn cho là chưa đủ sao? Ngài còn nói về tương lai lâu dài về triều đại con. Lạy Chúa Hằng Hữu Chí Cao, đây đâu phải là cách đối xử của loài người?
20 ೨೦ ಕರ್ತನೇ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ. ನಾನು ಇನ್ನೇನು ಹೇಳಲಿ?
Con còn nói gì hơn nữa? Ôi lạy Chúa Hằng Hữu Chí Cao, Chúa biết con.
21 ೨೧ ನೀನು ನಿನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೋಸ್ಕರ, ನಿನ್ನ ಇಷ್ಟಾನುಸಾರವಾಗಿ ಈ ಎಲ್ಲಾ ಮಹತ್ಕಾರ್ಯಗಳನ್ನು ನಡಿಸಿ, ಅವುಗಳ ಅನುಭವಗಳನ್ನು ನಿನ್ನ ಸೇವಕನಿಗೆ ಉಂಟುಮಾಡದ್ದೀ.
Chúa làm những việc trọng đại này và đồng thời tiết lộ cho con hay, chỉ vì Chúa đã hứa và vì đó là những điều Ngài muốn.
22 ೨೨ ದೇವರೇ, ಯೆಹೋವನೇ! ನೀನೇ ಮಹೋನ್ನತನು. ನಿನ್ನ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ನೀನು ನಮಗೆ ನೀಡಿದ್ದೆಲ್ಲವನ್ನು ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬುದು ನಿಶ್ಚಯ.
Lạy Chúa Hằng Hữu Chí Cao, Ngài thật cao cả. Theo điều chúng con đã nghe, ngoài Ngài không có thần nào như Đức Chúa Trời.
23 ೨೩ ನಿನ್ನ ಇಸ್ರಾಯೇಲಿನ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವುದಿದೆ? ನೀನೇ ಹೋಗಿ ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿ ಮಾಡಿಕೊಂಡು, ನಿನ್ನ ಹೆಸರನ್ನು ಪ್ರಸಿದ್ಧಪಡಿಸಿಕೊಂಡಿದ್ದಿ, ಐಗುಪ್ತರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.
Có dân tộc nào trên đất giống người Ít-ra-ên? Lạy Đức Chúa Trời, một dân tộc mà Ngài đã cứu chuộc làm con dân của Ngài: Chúa đã làm vang Danh Ngài khi Chúa cứu dân Ngài khỏi Ai Cập. Ngài làm những phép lạ vĩ đại và đáng sợ để đuổi các dân tộc và các thần khác trước mặt dân Ngài.
24 ೨೪ ಇಸ್ರಾಯೇಲರು ಸದಾಕಾಲವೂ ನಿನ್ನ ಪ್ರಜೆಯಾಗಿರಬೇಕೆಂದು ನಿರ್ಣಯಿಸಿದ ಯೆಹೋವನೇ, ನೀನು ಅವರಿಗೆ ದೇವರಾದಿ.
Chúa chọn Ít-ra-ên làm dân Ngài mãi mãi, và Ngài, Chúa Hằng Hữu là Đức Chúa Trời của họ.
25 ೨೫ ದೇವರೇ, ಯೆಹೋವನೇ! ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನು ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.
Và bây giờ, lạy Chúa Hằng Hữu, Đức Chúa Trời, con xin nhận lời Chúa hứa cho con và dòng dõi con. Chứng thực lời Chúa hứa được dài lâu mãi mãi.
26 ೨೬ ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲರ ದೇವರು ಎಂಬ ನಿನ್ನ ನಾಮಧೇಯಗಳಿಗೆ ಸದಾಕಾಲವೂ ಮಹಿಮೆಯುಂಟಾಗಲಿ. ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರಲಿ.
Xin Danh Chúa được ca tụng muôn đời: ‘Chúa Hằng Hữu Vạn Quân là Đức Chúa Trời của Ít-ra-ên!’ Xin cho nhà Đa-vít, là đầy tớ Chúa được vững bền mãi mãi.
27 ೨೭ ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ನಿನ್ನ ಸೇವಕನಾದ ನನಗೆ ‘ನಾನು ನಿನಗೋಸ್ಕರ ಮನೆ ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದರಿಂದ ಅವನು ಈ ಪ್ರಕಾರ ನಿನ್ನನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡನು.
Vì Chúa đã tiết lộ cho đầy tớ Ngài hay rằng, Ngài sẽ xây dựng cho con một triều đại, nên lạy Chúa Toàn Năng, Đức Chúa Trời của Ít-ra-ên, con mới dám dâng lên những lời cầu nguyện này.
28 ೨೮ ಕರ್ತನೇ, ಯೆಹೋವನೇ! ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ದೇವರಾಗಿರುತ್ತೀ. ನಿನ್ನ ವಾಕ್ಯವು ಸತ್ಯವಾದದ್ದು.
Lạy Chúa, Ngài là Đức Chúa Trời, Chúa Hằng Hữu Chí Cao. Lời Ngài là chân lý, và Chúa đã hứa cho đầy tớ Ngài những điều tốt lành.
29 ೨೯ ಆದುದರಿಂದ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸು. ಸದಾಕಾಲವೂ ಅದರ ಮೇಲೆ ನಿನ್ನ ಕಟಾಕ್ಷವಿರಲಿ. ಕರ್ತನೇ, ಯೆಹೋವನೇ! ವಾಗ್ದಾನ ಮಾಡಿದವನು ನೀನೇ. ನಿನ್ನ ಆಶೀರ್ವಾದದಿಂದ ನಿನ್ನ ಸೇವಕನ ಮನೆಯಲ್ಲಿ ನಿತ್ಯ ಸೌಭಾಗ್ಯವಿರಲಿ” ಎಂದು ವಿಜ್ಞಾಪಿಸಿದನು.
Xin Chúa ban phước lành trên triều đại của đầy tớ Ngài, cho được tồn tại trước mặt Ngài mãi mãi. Lạy Chúa Hằng Hữu Chí Cao, Ngài đã hứa như thế, được Chúa ban phước, triều đại đầy tớ Ngài chắc chắn sẽ hưởng phước lành mãi mãi!”

< ಸಮುವೇಲನು - ದ್ವಿತೀಯ ಭಾಗ 7 >