< ಥೆಸಲೋನಿಕದವರಿಗೆ ಎರಡನೆಯ ಪತ್ರಿಕೆ 2 >
1 ೧ ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,
Prosimy was, bracia, przez [wzgląd na] przyjście naszego Pana Jezusa Chrystusa i nasze zgromadzenie się przy nim;
2 ೨ ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.
Abyście nie tak łatwo dali się zachwiać w [waszym] umyśle i zatrwożyć się ani przez ducha, ani przez mowę, ani przez list rzekomo przez nas [pisany], jakoby [już] nadchodził dzień Chrystusa.
3 ೩ ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.
Niech was nikt w żaden sposób nie zwodzi. [Ten dzień] bowiem nie [nadejdzie], dopóki najpierw nie przyjdzie odstępstwo i nie objawi się człowiek grzechu, syn zatracenia;
4 ೪ ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.
Który się sprzeciwia i wynosi ponad wszystko, co się nazywa Bogiem lub co jest przedmiotem czci, tak że zasiądzie w świątyni Boga jako Bóg, podając się za Boga.
5 ೫ ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ?
Czy nie pamiętacie, że jeszcze będąc u was, mówiłem o tym?
6 ೬ ಇದಲ್ಲದೆ ಅವನು ನೇಮಕವಾದ ಸಮಯದಲ್ಲೇ ಹೊರತು ಬಯಲಿಗೆ ಬರುವುದಕ್ಕೆ ಏನು ಅಡ್ಡಿ ಮಾಡುತ್ತದೋ ಅದು ನಿಮಗೆ ತಿಳಿದೇ ಇದೆ.
A teraz wiecie, co przeszkadza, tak że się objawi w swoim czasie.
7 ೭ ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.
Tajemnica nieprawości bowiem już działa. Tylko że ten, który teraz przeszkadza, [będzie przeszkadzał], aż zostanie usunięty z drogi.
8 ೮ ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.
Wówczas pojawi się ów niegodziwiec, którego Pan zabije duchem swoich ust i zniszczy blaskiem swego przyjścia.
9 ೯ ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,
[Niegodziwiec] przyjdzie za sprawą szatana, z całą mocą, wśród znaków i fałszywych cudów;
10 ೧೦ ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.
Wśród wszelkiego zwodzenia nieprawości wobec tych, którzy giną, ponieważ nie przyjęli miłości prawdy, by zostali zbawieni.
11 ೧೧ ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ.
Dlatego Bóg zsyła im silne omamienie, tak że uwierzą kłamstwu;
12 ೧೨ ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಗುರಿಯಾಗುವರು.
Aby zostali osądzeni wszyscy, którzy nie uwierzyli prawdzie, ale upodobali sobie niesprawiedliwość.
13 ೧೩ ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.
Lecz my nieustannie powinniśmy dziękować Bogu za was, bracia umiłowani przez Pana, że Bóg od początku wybrał was do zbawienia przez uświęcenie Ducha i wiarę w prawdę.
14 ೧೪ ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.
Do tego powołał was przez naszą ewangelię, abyście dostąpili chwały naszego Pana Jezusa Chrystusa.
15 ೧೫ ಹೀಗಿರುವುದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ.
Dlatego, bracia, stójcie [niewzruszenie] i trzymajcie się przekazanych nauk, o których zostaliście pouczeni czy to przez mowę, czy przez nasz list.
16 ೧೬ ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ, (aiōnios )
A sam nasz Pan Jezus Chrystus i Bóg, nasz Ojciec, który nas umiłował i dał wieczną pociechę i dobrą nadzieję przez łaskę; (aiōnios )
17 ೧೭ ಸಕಲ ಸತ್ಕಾರ್ಯದಲ್ಲಿಯೂ, ಸದ್ವಾಕ್ಯದಲ್ಲಿಯೂ ದೃಢಪಡಿಸಲಿ.
Niech pocieszy wasze serca i utwierdzi was w każdym dobrym słowie i uczynku.