< ತಿಮೊಥೆಯನಿಗೆ ಬರೆದ ಎರಡನೆಯ ಪತ್ರಿಕೆ 2 >
1 ೧ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.
Ngakho-ke, wena ndodana yami, qina emuseni okuKhristu uJesu.
2 ೨ ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.
Izinto owangizwa ngizitsho phambi kwabafakazi abanengi ziphathise abantu abathembekileyo abazafanela ukuba labo bafundise abanye.
3 ೩ ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು.
Hlanganyelana lathi ebunzimeni njengebutho likaKhristu uJesu elifaneleyo.
4 ೪ ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ.
Kakho osebenza njengebutho ongenela ezindabeni zabangasibo bebutho kodwa ufuna ukuthokozisa umlawuli wakhe.
5 ೫ ಇದಲ್ಲದೆ ಯಾವನಾದರೂ ಸ್ಪರ್ಧೆಯಲ್ಲಿ ಎದುರಾಳಿಯೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವುದಿಲ್ಲ.
Ngokufanayo, nxa umuntu encintisa njengomdlali kawutholi umqhele wokunqoba ngaphandle kokuba encintisa ngokusemthethweni.
6 ೬ ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ.
Umlimi osebenza kakhulu kumele kube nguye oqala ukuthola isabelo sezilimo.
7 ೭ ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು.
Nakana ngalokho engikutshoyo ngoba iNkosi izakupha umbono kukho konke lokhu.
8 ೮ ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ, ಇದೇ ನಾನು ಸಾರುವ ಸುವಾರ್ತೆ.
Khumbula uJesu Khristu owavuka kwabafileyo, wadabuka kuDavida. Leli yilo ivangeli lami
9 ೯ ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
engilihluphekelayo ngize ngibotshwe ngamaketane njengesigangi. Kodwa ilizwi likaNkulunkulu kalibotshwanga.
10 ೧೦ ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ. (aiōnios )
Ngakho-ke, ngibekezelela konke ngenxa yabakhethiweyo ukuze labo bazuze ukusindiswa okukuKhristu uJesu lenkazimulo engapheliyo. (aiōnios )
11 ೧೧ ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ “ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು,
Nansi isitsho esiqotho: Nxa safa laye sizaphila laye futhi;
12 ೧೨ ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.
nxa sibekezela sizabusa laye futhi. Nxa simphika, laye futhi uzasiphika;
13 ೧೩ ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು. ಆತನು ತನ್ನ ಸ್ವಭಾವವನ್ನು ನಿರಾಕರಿಸಲು ಆಗುವುದಿಲ್ಲ.”
nxa singelalo ithemba yena uzaqhubeka ethembekile, ngoba angeke azidele.
14 ೧೪ ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವುದಲ್ಲದೇ, ಯಾವ ಪ್ರಯೋಜನಕ್ಕೂ ಬಾರದ ತರ್ಕ ವಾಗ್ವಾದಗಳನ್ನು ಮಾಡಬಾರದೆಂದು, ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.
Qhubeka ubakhumbuza abantu bakaNkulunkulu ngalezizinto. Baxwayise phambi kukaNkulunkulu ngokuxabana ngamazwi; akulasizo, kuchitha labo abalaleleyo.
15 ೧೫ ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.
Yenza ubungcono bakho ukuba uzethule kuNkulunkulu njengohloliweyo, isisebenzi esingadingi ukuba sibe lenhloni njalo esiliphatha kuhle ilizwi leqiniso.
16 ೧೬ ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.
Xwaya inkulumo zokweyisa uNkulunkulu ngoba abazikholisayo baqhubeka kokuphela besiba ngabangamesabiyo uNkulunkulu.
17 ೧೭ ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ.
Imfundiso yabo izaqhela njengesilonda esibhibhidlayo. Phakathi kwabo kuloHimeniyasi loFilethosi,
18 ೧೮ ಅವರು ಸತ್ಯಭ್ರಷ್ಟರಾಗಿ ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.
abaphambukayo eqinisweni. Bathi ukuvuka kwabafileyo sekwenzakala njalo bachitha ukukholwa kwabanye.
19 ೧೯ ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.
Noma kunjalo isisekelo sikaNkulunkulu esiqinileyo sigxilile, sibekwe uphawu lombhalo othi: “UThixo uyabazi labo abangabakhe,” lokuthi, “Bonke abalivumayo ibizo likaThixo kumele badele ububi.”
20 ೨೦ ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ.
Endlini enkulukazi akulazitsha zegolide lezesiliva nje kuphela kodwa lezezigodo kanye lezebumba; ezinye ngezemisebenzi encomekayo njalo ezinye ngezokusebenzisa nje.
21 ೨೧ ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು.
Nxa umuntu ezihlambulula kokulihlazo, uzasetshenziswa emisebenzini encomekayo, angcweliswe, abe luncedo eNkosini yakhe njalo elungele ukwenza loba yiwuphi umsebenzi omuhle.
22 ೨೨ ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
Xwaya izinkanuko ezimbi zobutsha ufune ukulunga, lokukholwa, lothando kanye lokuthula, ukanye lalabo abakhuleka eNkosini ngezinhliziyo ezimhlophe.
23 ೨೩ ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
Xwaya ukuphikisana kobuthutha lobuwula ngoba uyakwazi ukuthi kudala ingxabano.
24 ೨೪ ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ
Inceku yeNkosi kumele ixwaye ingxabano; kodwa kumele ibe lomusa ebantwini bonke, yenelise ukufundisa, ingabi lenzondo.
25 ೨೫ ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.
Abaphikisayo kumele belulekwe kuhle, ngethemba lokuthi uNkulunkulu uzabaguqula inhliziyo baholelwe ekwazini iqiniso
26 ೨೬ ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.
lokuthi baphaphame, baphunyuke emjibileni kaSathane obathumbele ukuba benze intando yakhe.