< ತಿಮೊಥೆಯನಿಗೆ ಬರೆದ ಎರಡನೆಯ ಪತ್ರಿಕೆ 3 >

1 ಆದರೆ ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ.
Or, sachez que, dans les derniers temps, surgiront des circonstances difficiles,
2 ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,
car les hommes seront égoïstes, épris de l'argent, fanfarons, superbes, blasphémateurs, rebelles à leurs parents, ingrats, impies,
3 ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ,
insensibles, déloyaux, calomniateurs, intempérants, impitoyables, ennemis des gens de bien,
4 ದ್ರೋಹಿಗಳೂ, ದುಡುಕುವವರೂ, ದುರಹಂಕಾರವುಳ್ಳವರೂ, ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ,
traîtres, emportés, enflés d'orgueil, plus amis du plaisir que de Dieu,
5 ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.
ayant l'apparence de la piété, mais en ayant renié la puissance. Ceux-là aussi, repousse-les;
6 ಅವರಲ್ಲಿ ಕೆಲವರು ಮನೆಗಳಲ್ಲಿ ನುಸುಳಿ, ಪಾಪಗಳಿಂದ ತುಂಬಿದವರೂ, ನಾನಾ ವಿಧವಾದ ಆಸೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಆಗಿರುತ್ತಾರೆ.
car c'est de leurs rangs que sortent ceux qui se glissent dans les familles et captivent des femmelettes chargées de péchés, entraînées par des convoitises et des voluptés de tout genre,
7 ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ ಸತ್ಯದ ಪರಿಜ್ಞಾನವನ್ನು ಹೊಂದಲಾರದವರು.
toujours occupées à apprendre, et ne pouvant jamais arriver à la connaissance de la vérité.
8 ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.
Mais, comme Jannès et Jambrès résistèrent à Moïse, de même aussi ces hommes résistent à la vérité, corrompus qu'ils sont dans leur intelligence et réprouvés quant à la foi;
9 ಆದರೆ ಅವರು ಹೆಚ್ಚು ಮುಂದುವರಿಯಲು ಸಾಧ್ಯವಿಲ್ಲ. ಆ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪ್ರಕಟವಾಗಿ ಬಂದ ಹಾಗೆಯೇ ಇವರದೂ ಪ್ರಕಟವಾಗುವುದು.
mais ils ne feront pas de plus grands progrès, car leur pensée deviendra évidente pour tout le monde, comme le fut aussi celle des premiers.
10 ೧೦ ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು, ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ ಇವುಗಳನ್ನೂ,
Quant à toi, tu t'es attaché à suivre mon enseignement, ma conduite, ma résolution, ma foi, ma constance, ma patience,
11 ೧೧ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, ಅವೆಲ್ಲವುಗಳೊಳಗಿನಿಂದ ಕರ್ತನು ನನ್ನನ್ನು ಬಿಡಿಸಿದನು.
mes persécutions, mes souffrances, telles que je les ai endurées à Antioche, à Icône, à Lystres. A quelles persécutions n'ai-je pas été en butte? Et le Seigneur m'a délivré de toutes!
12 ೧೨ ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.
Mais tous ceux qui veulent vivre pieusement en Christ Jésus, seront aussi persécutés.
13 ೧೩ ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
Quant aux hommes méchants et aux imposteurs, ils iront de mal en pis, eux qui sont tout à la fois séducteurs et séduits.
14 ೧೪ ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬುದನ್ನು ಆಲೋಚಿಸು.
Pour toi, persévère dans ce que tu as appris et admis avec certitude, sachant de qui tu l'as appris,
15 ೧೫ ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.
et que, dès l'enfance, tu connais les lettres sacrées qui peuvent te perfectionner pour le salut par la foi en Christ Jésus;
16 ೧೬ ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ.
toute écriture inspirée de Dieu étant utile pour instruire, pour reprendre, pour redresser, pour corriger selon la justice,
17 ೧೭ ಆದ್ದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
afin que l'homme de Dieu soit accompli et propre à toute bonne œuvre.

< ತಿಮೊಥೆಯನಿಗೆ ಬರೆದ ಎರಡನೆಯ ಪತ್ರಿಕೆ 3 >