< ತಿಮೊಥೆಯನಿಗೆ ಬರೆದ ಎರಡನೆಯ ಪತ್ರಿಕೆ 4 >
1 ೧ ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,
Заклињем те, дакле, пред Богом и Господом нашим Исусом Христом, који ће судити живима и мртвима, доласком Његовим и царством Његовим:
2 ೨ ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.
Проповедај реч, настој у добро време и у невреме, покарај, запрети, умоли са сваким сношењем и учењем;
3 ೩ ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.
Јер ће доћи време кад здраве науке неће слушати, него ће по својим жељама накупити себи учитеље, као што их уши сврбе,
4 ೪ ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.
И одвратиће уши од истине, и окренуће се ка гаталицама.
5 ೫ ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.
А ти буди трезан у свачему, трпи зло, учини дело јеванђелиста, службу своју сврши.
6 ೬ ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.
Јер ја се већ жртвујем, и време мог одласка наста.
7 ೭ ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.
Добар рат ратовах, трку сврших, веру одржах.
8 ೮ ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.
Даље, дакле, мени је приправљен венац правде, који ће ми дати Господ у дан онај, праведни судија; али не само мени, него свима који се радују Његовом доласку.
9 ೯ ನೀನು ನನ್ನ ಬಳಿಗೆ ಬೇಗನೇ ಬರುವುದಕ್ಕೆ ಪ್ರಯತ್ನಪಡು,
Постарај се да дођеш брзо к мени;
10 ೧೦ ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು. (aiōn )
Јер ме Димас остави, омилевши му садашњи свет, и отиде у Солун; Крискент у Галатију, Тит у Далмацију; Лука је сам код мене. (aiōn )
11 ೧೧ ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ.
Марка узми и доведи га са собом; јер ми је добар за службу.
12 ೧೨ ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು. ತ್ರೋವದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟು ಬಂದ ಮೇಲಂಗಿಯನ್ನೂ, ಪುಸ್ತಕಗಳನ್ನೂ, ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.
А Тихика послао сам у Ефес.
Кад дођеш донеси ми кабаницу што сам оставио у Троади код Карпа, и књиге, а особито кожне.
14 ೧೪ ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು.
Александар ковач много ми зла учини. Да му Господ плати по делу његовом.
15 ೧೫ ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು, ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು.
Чувај се и ти од њега; јер се врло противи нашим речима.
16 ೧೬ ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.
У први мој одговор нико не оста са мном, него ме сви оставише. Да им се не прими!
17 ೧೭ ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
Али Господ би са мном и даде ми помоћ да се кроза ме сврши проповедање, и да чују сви незнабошци; и избавих се од уста лавових.
18 ೧೮ ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್. (aiōn )
И Господ ће ме избавити од сваког злог дела, и сачуваће ме за царство своје небеско; коме слава ва век века. Амин. (aiōn )
19 ೧೯ ಪ್ರಿಸ್ಕಿಲ್ಲಳಿಗೂ, ಅಕ್ವಿಲ್ಲನಿಗೂ, ಒನೇಸಿಪೊರನ ಮನೆಯವರಿಗೂ ವಂದನೆಹೇಳು.
Поздрави Прискилу и Акилу, и Онисифоров дом.
20 ೨೦ ಎರಸ್ತನು ಕೊರಿಂಥದಲ್ಲಿ ನಿಂತನು. ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ಮಿಲೇತದಲ್ಲಿ ಬಿಟ್ಟೆನು.
Ераст оста у Коринту. А Трофима оставих у Милету болесног.
21 ೨೧ ಚಳಿಗಾಲಕ್ಕೆ ಮುಂಚೆಯೇ ಬರುವುದಕ್ಕೆ ಪ್ರಯತ್ನಿಸು. ಯುಬೂಲನು, ಪೊದೆಯನೂ, ಲೀನನೂ, ಕ್ಲೌದ್ಯಳೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ.
Постарај се да дођеш пре зиме. Поздравља те Еувул, и Пуд, и Лин, и Клаудија, и браћа сва.
22 ೨೨ ಕರ್ತನು ನಿನ್ನ ಆತ್ಮದೊಂದಿಗೆ ಇರಲಿ. ಆತನ ಕೃಪೆಯು ನಿಮ್ಮೊಂದಿಗಿರಲಿ.
Господ Исус Христос са духом твојим. Благодат с вама. Амин.