< ಅಪೊಸ್ತಲರ ಕೃತ್ಯಗಳ 11 >

1 ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
עד מהרה נודע לשליחים ולשאר האחים ביהודה שגם הגויים נושעים על־ידי האמונה במשיח.
2 ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿಮಾಡಿಸಿಕೊಂಡಿದ್ದ ಯೆಹೂದ್ಯರು;
כשחזר פטרוס לירושלים החלו היהודים המשיחיים למתוח עליו ביקורת.
3 “ನೀನು ಸುನ್ನತಿಯಿಲ್ಲದವರಲ್ಲಿ ಸೇರಿ ಅವರ ಸಂಗಡ ಊಟಮಾಡಿದೆಯಲ್ಲಾ” ಎಂದು ಅವನ ಕೂಡ ವಾದಿಸಿದರು.
”אתה ביקרת בביתם של גויים, ואפילו אכלת איתם!“טענו.
4 ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿಂದ ಕ್ರಮವಾಗಿ ವಿವರಿಸಿ,
ואז סיפר להם פטרוס את הסיפור כולו – מראשיתו ועד סופו:
5 ಹೇಳಿದ್ದೇನಂದರೆ; “ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು” ಅದೇನೆಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು.
”יום אחד בשעה שהתפללתי ביפו ראיתי חזיון: סדין גדול, קשור בארבע קצותיו, הורד מן השמים.
6 ಅದೇನೆಂದು ತಿಳಿದುಕೊಳ್ಳುವುದಕ್ಕೆ ನಾನು ಅದನ್ನು ಚೆನ್ನಾಗಿ ನೋಡಿದಾಗ, ಭೂಮಿಯ ಮೇಲಿರುವ ಎಲ್ಲಾ ಪ್ರಾಣಿಗಳು, ಕಾಡುಮೃಗಳು, ಹರಿದಾಡುವ ಕ್ರಿಮಿಕೀಟಗಳನ್ನೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳನ್ನೂ ಕಂಡೆನು.
בתוך הסדין היו כל מיני חיות, זוחלים ועופות טרפים.
7 ಆಗ; “ಪೇತ್ರನೇ, ಎದ್ದು, ಕೊಯ್ದು ತಿನ್ನು” ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು.
לאחר מכן שמעתי קול מן השמים שקרא:’קום, פטרוס, שחט ואכול!‘“
8 ಅದಕ್ಕೆ ನಾನು; “ಬೇಡವೇ ಬೇಡ, ಕರ್ತನೇ, ಹೊಲೆಯಾದ ಪದಾರ್ಥವಾಗಲಿ, ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ” ಅಂದೆನು.
”’חס וחלילה, אדוני!‘עניתי.’מעולם לא אכלתי אוכל בלתי כשר או טמא!‘
9 ಅದಕ್ಕೆ; “ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆ ಎನ್ನಬಾರದು” ಎಂಬುದಾಗಿ ಎರಡನೆಯ ಸಾರಿಯೂ ಆಕಾಶದಿಂದ ವಾಣಿಯಾಯಿತು.
”אולם אותו קול מן השמים חזר ואמר:’אם אלוהים אומר שמשהו מסוים טהור, סימן שהוא טהור. אתה אל תקרא לו טמא!‘
10 ೧೦ ಹೀಗೆ ಮೂರು ಸಾರಿ ಆಯಿತು. ಅನಂತರ ಎಲ್ಲವೂ ತಿರುಗಿ ಆಕಾಶಕ್ಕೆ ಎತ್ತಲ್ಪಟ್ಟಿತು.
”חזיון זה חזר ונשנה שלוש פעמים, ולאחר מכן הועלה הסדין לשמים.
11 ೧೧ ಆ ಕ್ಷಣದಲ್ಲೇ ಮೂವರು ಪುರುಷರು ನಾವಿದ್ದ ಮನೆಯ ಮುಂದೆ ನಿಂತಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.
באותה שעה הגיעו אל הבית שבו התארחתי שלושה אנשים שנשלחו מקיסריה,
12 ೧೨ ದೇವರಾತ್ಮನು, ನನಗೆ ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.
ורוח הקודש אמר לי ללכת איתם ללא היסוס, למרות היותם גויים! ששת האחים האלה הצטרפו אלי, וכעבור יום הגענו לקיסריה – לביתו של האדם ששלח את השלושה.
13 ೧೩ ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ, ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವುದನ್ನು ಕಂಡೆನು. ಆ ದೂತನು; “ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು.
הוא סיפר לנו שמלאך ה׳ נגלה אליו וציווה עליו לשלוח אנשים ליפו, כדי למצוא את שמעון פטרוס.
14 ೧೪ ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು” ಎಂದು ಹೇಳಿದನೆಂಬುದಾಗಿ ತಿಳಿಸಿದನು.
’הוא יאמר לך ולבני ביתך כיצד תוכל להיוושע!‘אמר לו המלאך.
15 ೧೫ ನಾನು ಮಾತನಾಡುವುದಕ್ಕೆ ಪ್ರಾರಂಭಿಸಿದಾಗ, ಪವಿತ್ರಾತ್ಮವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು.
”כשהתחלתי לבשר להם צלח רוח הקודש על הנאספים, בדיוק כפי שצלח עלינו בתחילה.
16 ೧೬ ಆಗ; “ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು” ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು.
ואז נזכרתי בדברי האדון:’יוחנן הטביל אתכם במים, אולם עוד זמן־מה תיטבלו ברוח הקודש‘.
17 ೧೭ ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು.
ואם אלוהים נתן לגויים האלה אותה המתנה שנתן לנו, כשהאמנו באדון ישוע המשיח, מי אני שאתווכח אתו?“
18 ೧೮ ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
דבריו של פטרוס השביעו את רצונם של היהודים המשיחיים, והם החלו להלל ולשבח את האלוהים.”כן, “אמרו,”גם לגויים העניק אלוהים את הזכות לחזור בתשובה ולקבל חיי נצח!“
19 ೧೯ ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.
המאמינים אשר נמלטו מירושלים, בעת הרדיפה שהחלה לאחר מותו של סטפנוס, הגיעו בינתיים עד צור וצידון, קפריסין ואנטיוכיה. בכל מקום הם הכריזו על הבשורה, אבל רק ליהודים.
20 ೨೦ ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.
אך מאמינים אחדים, שנסעו מקפריסין וקוריניה לאנטיוכיה, סיפרו גם לכמה יוונים על האדון ישוע.
21 ೨೧ ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.
האדון ברך את מאמציהם, וגויים רבים האמינו באדון ישוע.
22 ೨೨ ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
כששמעו על כך חברי הקהילה בירושלים, שלחו את בר־נבא לאנטיוכיה כדי לעזור למאמינים החדשים.
23 ೨೩ ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.
כשהגיע בר־נבא לאנטיוכיה וראה את מעשיו הנפלאים של ה׳, הוא נמלא שמחה רבה ועודד את המאמינים לדבוק באדון בכל מחיר.
24 ೨೪ ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು, ನೀವು ಪೂರ್ಣಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರಿ ಎಂದು ಅವರಿಗೆ ಬುದ್ಧಿಹೇಳಿದನು. ಆಗ ಬಹುಮಂದಿ ಕರ್ತನೊಂದಿಗೆ ಸೇರಿಕೊಂಡರು.
בר־נבא היה אדם טוב לב, מלא רוח הקודש ובעל אמונה חזקה. באותה עת נוספו אנשים רבים לקהל המאמינים.
25 ೨೫ ತರುವಾಯ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು.
לאחר מכן נסע בר־נבא לטרסוס כדי לחפש את שאול,
26 ೨೬ ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.
וכשמצא אותו, חזר עמו לאנטיוכיה. השניים נשארו באנטיוכיה שנה שלמה ולימדו את המאמינים החדשים והרבים (שם, באנטיוכיה, החלו לכנות את תלמידי ישוע המשיח בשם”משיחיים“).
27 ೨೭ ಅ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
באותה תקופה באו לאנטיוכיה נביאים אחדים מירושלים.
28 ೨೮ ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.
אחד מהם, אגבוס שמו, קם באחת האספות וניבא, בהשראת רוח הקודש, שרעב כבד יבוא על כל האימפריה הרומאית (נבואתו התגשמה בתקופת שלטונו של קלודיוס).
29 ೨೯ ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.
משום כך החליטו המאמינים באנטיוכיה לשלוח עזרה כספית לאחיהם ביהודה, כל אחד כפי יכולתו.
30 ೩೦ ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.
לאחר שאספו את התרומות מסרו אותן לבר־נבא ולשאול, כדי שיביאו אותן לזקני הקהילה בירושלים.

< ಅಪೊಸ್ತಲರ ಕೃತ್ಯಗಳ 11 >