< ಅಪೊಸ್ತಲರ ಕೃತ್ಯಗಳ 11 >
1 ೧ ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
Atume na bhamwabho bhabha uhwo hu Yudea bhahumvwizye huje apagani(amataifa) bhope bhalye jeleye izu lya Ngulubhi.
2 ೨ ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿಮಾಡಿಸಿಕೊಂಡಿದ್ದ ಯೆಹೂದ್ಯರು;
U Petro pawawela hu Yerusalemu abhamwabho bhahanda husale,
3 ೩ “ನೀನು ಸುನ್ನತಿಯಿಲ್ಲದವರಲ್ಲಿ ಸೇರಿ ಅವರ ಸಂಗಡ ಊಟಮಾಡಿದೆಯಲ್ಲಾ” ಎಂದು ಅವನ ಕೂಡ ವಾದಿಸಿದರು.
“Bhaga usangine na pagani nantele uliye nabho!”
4 ೪ ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿಂದ ಕ್ರಮವಾಗಿ ವಿವರಿಸಿ,
Lelo uPetro wayanga zyazyamwajile,
5 ೫ ಹೇಳಿದ್ದೇನಂದರೆ; “ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು” ಅದೇನೆಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು.
“Nahali hula hu Yafa, nahali apuute nahalola embonesyo naahalola ahantu hamwiha afume humwanya hali neshi umwenda hahwiha huline.
6 ೬ ಅದೇನೆಂದು ತಿಳಿದುಕೊಳ್ಳುವುದಕ್ಕೆ ನಾನು ಅದನ್ನು ಚೆನ್ನಾಗಿ ನೋಡಿದಾಗ, ಭೂಮಿಯ ಮೇಲಿರುವ ಎಲ್ಲಾ ಪ್ರಾಣಿಗಳು, ಕಾಡುಮೃಗಳು, ಹರಿದಾಡುವ ಕ್ರಿಮಿಕೀಟಗಳನ್ನೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳನ್ನೂ ಕಂಡೆನು.
Nahenyizye haala ahantu, nahalola evintu muhati vyavisugwa evyamwigona evyamumenze, ne hwavula pansi.
7 ೭ ಆಗ; “ಪೇತ್ರನೇ, ಎದ್ದು, ಕೊಯ್ದು ತಿನ್ನು” ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು.
Numvwa izu liyinga evyo vyalye sinza ulye!”
8 ೮ ಅದಕ್ಕೆ ನಾನು; “ಬೇಡವೇ ಬೇಡ, ಕರ್ತನೇ, ಹೊಲೆಯಾದ ಪದಾರ್ಥವಾಗಲಿ, ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ” ಅಂದೆನು.
Ane naga sembwahile alye evintu evibhibhi nantele vichafu”
9 ೯ ಅದಕ್ಕೆ; “ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆ ಎನ್ನಬಾರದು” ಎಂಬುದಾಗಿ ಎರಡನೆಯ ಸಾರಿಯೂ ಆಕಾಶದಿಂದ ವಾಣಿಯಾಯಿತು.
Lila izu evintu vyavyozizye Ungulubhi uganje avyeete aje vibhibhi awe vichafu,
10 ೧೦ ಹೀಗೆ ಮೂರು ಸಾರಿ ಆಯಿತು. ಅನಂತರ ಎಲ್ಲವೂ ತಿರುಗಿ ಆಕಾಶಕ್ಕೆ ಎತ್ತಲ್ಪಟ್ಟಿತು.
Zyabhombeha esho hatatu hala ahantu hazubha nantele humwanya.
11 ೧೧ ಆ ಕ್ಷಣದಲ್ಲೇ ಮೂವರು ಪುರುಷರು ನಾವಿದ್ದ ಮನೆಯ ಮುಂದೆ ನಿಂತಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.
Abhantu bhatatu bhahimiliye mundyango bhabhafumile hu Kaisaria ahwinze huline.
12 ೧೨ ದೇವರಾತ್ಮನು, ನನಗೆ ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.
Umpepo wambuula waga longozanya nabho leha ahwogope ebha alume tanda tabhalile tenti takhiye mwa muntu umo.
13 ೧೩ ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ, ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವುದನ್ನು ಕಂಡೆನು. ಆ ದೂತನು; “ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು.
Atibhuulile huje umalaika ajile tume umuntu abhale hukwizye uPetro hu Yafa.
14 ೧೪ ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು” ಎಂದು ಹೇಳಿದನೆಂಬುದಾಗಿ ತಿಳಿಸಿದನು.
Abhayanje enongwa zya Ngulubhi nawe ubhahwokoshe nabhantu bhonti bha munyumba yaho.”
15 ೧೫ ನಾನು ಮಾತನಾಡುವುದಕ್ಕೆ ಪ್ರಾರಂಭಿಸಿದಾಗ, ಪವಿತ್ರಾತ್ಮವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು.
Panahandile ayanje nabho, Umpepo Ufinjile wabhinjila nesha atinjiye ate.
16 ೧೬ ಆಗ; “ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು” ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು.
Nahizushe zyayanjile uYesu huje uYohana ahozyaga abhantu na minzi lelo amwe mubhahwoziwe nu Mpepo Ufinjile.”
17 ೧೭ ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು.
Eshi Ungulubhi nkashele abhapiye Umpepo Ufinjile abhantu abhanje neshi atipiye ate, ane nenanu embakhane?
18 ೧೮ ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
Nabhumvwa sebhayanga nkazimo, bhaluumba Ungulubhi bhaga Ungulubhi unu abhapiye abhantu umwoyo ugwalambe bhabhali bhapagani”
19 ೧೯ ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.
Amalabha gagahandile pafwiye u Stefano abhaKilisti bhanyampana afume hu Yerusalemu bhafishile mpaka hu Foinike, Kipro na hu Antiokia. Ohwo hwonti bayangaga bhayahudi bhene abhanje sigabhabhabhuulaga.
20 ೨೦ ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.
Lelo abhanji bhafumile hu Kipro na hu Kirene, bhabhalumbiliye ayunani izu lya Yesu.
21 ೨೧ ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.
Ukhono gwa Ngulubhi gwali na bhene, abhantu bhabhinji bhapendushe bhagalushila uYesu.
22 ೨೨ ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
Enongwa zyabho zyafiha mumakutu ga Kilisti bhabhali hu Yerusalemu: bhatuma uBarnaba abhale hu Antiokia.
23 ೨೩ ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.
U Barnaba nawafiha asungwilwe tee abhagwizizye umwoyo aje bhadulaje mwa Yesu mumoyo gabho.
24 ೨೪ ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು, ನೀವು ಪೂರ್ಣಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರಿ ಎಂದು ಅವರಿಗೆ ಬುದ್ಧಿಹೇಳಿದನು. ಆಗ ಬಹುಮಂದಿ ಕರ್ತನೊಂದಿಗೆ ಸೇರಿಕೊಂಡರು.
Ali muntu mwinza tee nantele ali muntu wimpyana nu Mpepo Ufinjile ali muhati yakwe nulwitishilo, abhantu bhabhinji bhonjelela hwa Yesu.
25 ೨೫ ತರುವಾಯ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು.
Pamande u Barnaba ahasogola ahabhala hu Tarso humwenye u Sauli.
26 ೨೬ ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.
Nawa mwaga bhabhala bhonti hu Antiokia, bhakhala umwaha gumo bhahamanyizya abhantu bhabhinji na abhanafunzi bhahitwa bha Kilisti ulwahwande hula hu Antiokia.
27 ೨೭ ಅ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
Ensiku ezyo bhahishile akuwe afume hu Yerusalemu paka hu Antiokia.
28 ೨೮ ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.
Umo ali yu Agabo uyo abhuulilwe(asenshiye) huje enzala engosi ebhalagwe ensi yonti. Enzala iyo ihagwiye na tabhalile u Klaudio.
29 ೨೯ ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.
Abhanafunzi bhahasanguzanya shila muntu hapiite bhabhatwalila abhamwabho bhabhali hu Uyahudi.
30 ೩೦ ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.
Ihela izyo; bhabhapelile a Barnaba nu Paulo huje bhatwale.