< ಅಪೊಸ್ತಲರ ಕೃತ್ಯಗಳ 12 >
1 ೧ ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವುದಕ್ಕೆ ಕೈಹಾಕಿದನು.
κατ εκεινον δε τον καιρον επεβαλεν ηρωδης ο βασιλευς τας χειρας κακωσαι τινας των απο της εκκλησιας
2 ೨ ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
ανειλεν δε ιακωβον τον αδελφον ιωαννου μαχαιρα
3 ೩ ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.
και ιδων οτι αρεστον εστιν τοις ιουδαιοις προσεθετο συλλαβειν και πετρον ησαν δε αι ημεραι των αζυμων
4 ೪ ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.
ον και πιασας εθετο εις φυλακην παραδους τεσσαρσιν τετραδιοις στρατιωτων φυλασσειν αυτον βουλομενος μετα το πασχα αναγαγειν αυτον τω λαω
5 ೫ ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.
ο μεν ουν πετρος ετηρειτο εν τη φυλακη προσευχη δε ην εκτενης γινομενη υπο της εκκλησιας προς τον θεον υπερ αυτου
6 ೬ ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.
οτε δε εμελλεν αυτον προαγειν ο ηρωδης τη νυκτι εκεινη ην ο πετρος κοιμωμενος μεταξυ δυο στρατιωτων δεδεμενος αλυσεσιν δυσιν φυλακες τε προ της θυρας ετηρουν την φυλακην
7 ೭ ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.
και ιδου αγγελος κυριου επεστη και φως ελαμψεν εν τω οικηματι παταξας δε την πλευραν του πετρου ηγειρεν αυτον λεγων αναστα εν ταχει και εξεπεσον αυτου αι αλυσεις εκ των χειρων
8 ೮ ಆ ದೂತನು ಅವನಿಗೆ; “ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಟ್ಟಿಕೋ” ಎಂದು ಹೇಳಲು, ಅವನು ಹಾಗೆಯೇ ಮಾಡಿದನು. “ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ” ಅಂದನು.
ειπεν τε ο αγγελος προς αυτον περιζωσαι και υποδησαι τα σανδαλια σου εποιησεν δε ουτως και λεγει αυτω περιβαλου το ιματιον σου και ακολουθει μοι
9 ೯ ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ, ದೂತನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ಕನಸು ಎಂದು ತಿಳಿದನು.
και εξελθων ηκολουθει αυτω και ουκ ηδει οτι αληθες εστιν το γινομενον δια του αγγελου εδοκει δε οραμα βλεπειν
10 ೧೦ ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.
διελθοντες δε πρωτην φυλακην και δευτεραν ηλθον επι την πυλην την σιδηραν την φερουσαν εις την πολιν ητις αυτοματη ηνοιχθη αυτοις και εξελθοντες προηλθον ρυμην μιαν και ευθεως απεστη ο αγγελος απ αυτου
11 ೧೧ ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು.
και ο πετρος γενομενος εν εαυτω ειπεν νυν οιδα αληθως οτι εξαπεστειλεν κυριος τον αγγελον αυτου και εξειλετο με εκ χειρος ηρωδου και πασης της προσδοκιας του λαου των ιουδαιων
12 ೧೨ ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು.
συνιδων τε ηλθεν επι την οικιαν μαριας της μητρος ιωαννου του επικαλουμενου μαρκου ου ησαν ικανοι συνηθροισμενοι και προσευχομενοι
13 ೧೩ ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಕೆಲಸದವಳು ನೋಡುವುದಕ್ಕೆ ಬಂದಳು.
κρουσαντος δε αυτου την θυραν του πυλωνος προσηλθεν παιδισκη υπακουσαι ονοματι ροδη
14 ೧೪ ಅವಳು ಪೇತ್ರನ ಧ್ವನಿಯನ್ನು ಗುರುತುಹಿಡಿದು ಅತಿಯಾದ ಆನಂದದಿಂದ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ; “ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ” ಎಂದು ತಿಳಿಸಿದಳು. ಅವರು ಅವಳಿಗೆ; “ನಿನಗೆ ಹುಚ್ಚು ಹಿಡಿದದೆ” ಎಂದು ಹೇಳಿದರು.
και επιγνουσα την φωνην του πετρου απο της χαρας ουκ ηνοιξεν τον πυλωνα εισδραμουσα δε απηγγειλεν εσταναι τον πετρον προ του πυλωνος
15 ೧೫ ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು, ಅದಕ್ಕೆ ಅವರು; “ಅವನ ದೂತನಾಗಿರಬೇಕು” ಅಂದರು.
οι δε προς αυτην ειπον μαινη η δε διισχυριζετο ουτως εχειν οι δε ελεγον ο αγγελος αυτου εστιν
16 ೧೬ ಆದರೆ ಪೇತ್ರನು ಬಾಗಿಲು ತಟ್ಟುತ್ತಲೇ ಇರಲು, ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.
ο δε πετρος επεμενεν κρουων ανοιξαντες δε ειδον αυτον και εξεστησαν
17 ೧೭ ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.
κατασεισας δε αυτοις τη χειρι σιγαν διηγησατο αυτοις πως ο κυριος εξηγαγεν αυτον εκ της φυλακης ειπεν δε απαγγειλατε ιακωβω και τοις αδελφοις ταυτα και εξελθων επορευθη εις ετερον τοπον
18 ೧೮ ಬೆಳಗಾದ ಮೇಲೆ ಪೇತ್ರನು ಏನಾದನೆಂದು ಸಿಪಾಯಿಗಳಲ್ಲಿ ಬಹಳ ಕಳವಳ ಉಂಟಾಯಿತು.
γενομενης δε ημερας ην ταραχος ουκ ολιγος εν τοις στρατιωταις τι αρα ο πετρος εγενετο
19 ೧೯ ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.
ηρωδης δε επιζητησας αυτον και μη ευρων ανακρινας τους φυλακας εκελευσεν απαχθηναι και κατελθων απο της ιουδαιας εις την καισαρειαν διετριβεν
20 ೨೦ ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.
ην δε ηρωδης θυμομαχων τυριοις και σιδωνιοις ομοθυμαδον τε παρησαν προς αυτον και πεισαντες βλαστον τον επι του κοιτωνος του βασιλεως ητουντο ειρηνην δια το τρεφεσθαι αυτων την χωραν απο της βασιλικης
21 ೨೧ ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು.
τακτη δε ημερα ο ηρωδης ενδυσαμενος εσθητα βασιλικην και καθισας επι του βηματος εδημηγορει προς αυτους
22 ೨೨ ಕೂಡಿದ್ದ ಜನರು; “ಇದು ಮನುಷ್ಯನ ಧ್ವನಿಯಲ್ಲ, ದೇವರ ಧ್ವನಿಯೇ” ಎಂದು ಆರ್ಭಟಿಸಿದರು.
ο δε δημος επεφωνει θεου φωνη και ουκ ανθρωπου
23 ೨೩ ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.
παραχρημα δε επαταξεν αυτον αγγελος κυριου ανθ ων ουκ εδωκεν την δοξαν τω θεω και γενομενος σκωληκοβρωτος εξεψυξεν
24 ೨೪ ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂದಿತು.
ο δε λογος του θεου ηυξανεν και επληθυνετο
25 ೨೫ ಬಾರ್ನಬನು ಮತ್ತು ಸೌಲನು ಮಾಡಬೇಕಾದ ಧರ್ಮ ಕಾರ್ಯವನ್ನು ಮುಗಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರೆದುಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
βαρναβας δε και σαυλος υπεστρεψαν εξ ιερουσαλημ πληρωσαντες την διακονιαν συμπαραλαβοντες και ιωαννην τον επικληθεντα μαρκον