< ಅಪೊಸ್ತಲರ ಕೃತ್ಯಗಳ 13 >
1 ೧ ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.
YA estaba güije gui ilesia guiya Antioquia, profeta sija yan maestro, sija: Barnabé, yan si Simeon ni y mafanaan Niger, yan si Lucio, taotao Sirene, yan si Manaen, ni y chamapogsae yan Herodes tetrarca, yan si Saulo.
2 ೨ ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.
Ya mientras sija sumesetbe y Señot, yan manayuyunat, y Espiritu Santo ilegña: Abatta guiya guajo Barnabé yan Saulo para y checho anae guinin juagange sija.
3 ೩ ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.
Ayonae anae esta manayunat yan manmanayuyut yan japolo y canaeñija gui jilo ayo sija, jatago sija na ufanjanao.
4 ೪ ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.
Ya manmatago sija pot y Espiritu Santo, ya manunog para Seleusia; ya desde ayo mumamaya para Chipre.
5 ೫ ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.
Ya anae mangaegue gui Salamina, japredica y sinangan Yuus gui sinagogan y Judiosija: ya mañisijaja locue yan si Juan ni y sumesetbe sija.
6 ೬ ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.
Ya anae jajanagüe todo inanaco y isla asta Pafo, jasoda un taotao na cacana, fatso na profeta, Judio, na y naanña si Bar-Jesus:
7 ೭ ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು.
Ni y estaba yan y magalajen y tano, si Sergio Paulo, gaetiningo na taotao; ya jaaagang si Barnabé yan Saulo, sa malago na ujungog y sinangan Yuus.
8 ೮ ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.
Lao manquinentra as Elymas, taotao na cacana (taegüine nae comequilegña y naanña), jaaliligao na unamabira guinin jinenggue y magalaje.
9 ೯ ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ,
Ayonae si Saulo ni y naanña locue Pablo, bula ni y Espiritu Santo, inaatanja güe,
10 ೧೦ ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?
Ya ilegña: O bula jao todo dinague, yan tinaelaye, jago lajin anite, jago enemigun todo y tininas, ada ti pumapara jao unnataelaye y tinas na chalan y Señot?
11 ೧೧ ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.
Ya pago estagüiya y canae y Señot gui jilomo, ya unbachet ya ti unlie y atdao pot un tiempo. Ya enseguidas podong gui jiloña y nublado ya jomjom, ya jumanao manaligao jaye uminantiene y canaeña para uinesgaejongüe.
12 ೧೨ ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.
Ya anae jalie y magalaje jafa y mafatinas, jajonggue ya ninasenmanman ni y finanagüen y Señot.
13 ೧೩ ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು.
Ya anae si Pablo yan y mangachongña jadingo Pafo, ya mumamaya ya manmato Petga guiya Pamfilia, ya si Juan jumanao guiya sija ya tumalo guato Jerusalem.
14 ೧೪ ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
Lao sija manmalofan inanaco guinin Petga, manmato Antioquia guiya Pisidia; ya manjalom gui sinagoga gui sabado na jaane ya manmatachong.
15 ೧೫ ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.
Ya anae munjayan jataetae y lay yan y profeta sija, y magas y sinagoga ninafamnaagange sija ilegñija: Jamyo mañelo, yaguin guaja jafa na finijo para insangane y taotao sija, sangan.
16 ೧೬ ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ;
Ayonae si Pablo tumojgue julo ya mañeñas ni y canaeña, ilegña: Taotao Israel, yan jamyo ni y manmaañao as Yuus, ecungog.
17 ೧೭ “ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.
Y Yuus este na taotao iya Israel, jaayeg y mañaenata, yan jajatsa y taotao sija anae mañasaga taegüije y taotao juyong guiya Egipto, ya ni y taquilo na canaeña jacone sija juyong güije.
18 ೧೮ ಆತನು ಸುಮಾರು ನಲವತ್ತು ವರ್ಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು,
Ya y cuarenta años ni tiempo, jasungon ni y costumbreñija gui jalomtano.
19 ೧೯ ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.
Ya guinin mujayan jayulang siete na nasion gui tano Cananea, ya japatte y tanoñija guiya sija para y erensiañija nae mañasaga, como cuatro siento y sincuenta años;
20 ೨೦ ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.
Ya despues di ayo sija, manninae sija jues sija asta qui mato y profeta Samuel.
21 ೨೧ ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರ್ಷ ಆಳಿದನು.
Ya despues manmalago ray: ya manninae as Yuus as Saulo lajin Sis, un taotao gui tribon Benjamin para cuarenta años.
22 ೨೨ ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.
Yaanae jarechasa si Saulo, janacajulo guiya sija si David para rayñija. Sa si Yuus numae güe locue testimonio, ilegña: Guajo jusoda si David lajin Isai, un taotao na parejoja yan y corasonjo, ya güiya ucumple todo y malagojo.
23 ೨೩ “ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.
Ya y semiyan este na taotao nae, unacajulo si Yuus guiya Israel y Satbadot Jesus jaftaemanoja y promesa:
24 ೨೪ ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು.
Ya si Juan finena prumedica, antes di y finatoña, y tinagpangen sinetsot para todo y taotao guiya Israel.
25 ೨೫ ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; ‘ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.
Ya anae jacumple si Juan y chechoña, ilegña: Jayeyo jinasonmimiyo? Ti guajo güe. Lao estagüe na mamamaela uno gui tateco, na ni y sapatos gui adengña ti dignoyo na jupula.
26 ೨೬ “ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.
Mañelo lalaje, fumaguon y rasan Abraham, yan jayeja guiya jamyo y maañao as Yuus, sa para jamyo na matago y sinangan este na satbasion.
27 ೨೭ ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.
Pot ayo sija y mañasaga Jerusalem, yan y magasñija sa ti matungo si Yuus, ni y sinangan y profeta ni y jatataetaeja cada sabado, anae masentensia güe jacumple sija.
28 ೨೮ ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
Ya achogja ti jasoda sija jafa na causa guiya güiya na umapuno, lao magagao si Pilatos na umapuno.
29 ೨೯ ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
Ya anae macumple todo ayo y esta matugue pot güiya, machule papa guinin y jayo, ya mapolo gui jalom y naftan.
30 ೩೦ “ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
Lao si Yuus munacajulo guinen y manmatae:
31 ೩೧ ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
Ya malie megae na jaane ni ayo sija y mangachochongña mangajulo guinin Galilea para Jerusalem, ni y pago testiguña sija gui taotao.
32 ೩೨ “ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;
Ya jame chumule guiya jamyo y mauleg na notisia, ni ayo na promesa y mafatinas gui mañaena,
33 ೩೩ ‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.
Jaftaemano si Yuus cumunple guiya jita, ni y famaguonñija, sa ayonae janacajulo si Jesus talo; taegüije locue y esta matugue gui mina dos gui Salmos: Jago y Lajijo ya pago na jaane nae julilis jao.
34 ೩೪ “ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; ‘ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ’ ಎಂಬುದೆ.
Ya ninacajulo guinin y manmatae, ya pago ti utalo guato gui minitong guinin jasangan taegüine: Guajo junae jao ni y santos yan magajet na bendisjon David.
35 ೩೫ ಅದಕ್ಕೆ ಅನುಸಾರವಾಗಿ ಆತನು; ‘ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವುದಿಲ್ಲವೆಂದು’ ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ.
Enaomina ilegña locue y otro Salmo: Na chamo pumopolo y Santosmo na ulie y minitong.
36 ೩೬ “ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.
Sa si David anae munjayan jasetbe y generasionña pot y pinagat Yuus, maego ya mapolo manafandaña yan y mañaenaña, ya jalie y minitong.
37 ೩೭ ಆದರೆ ದೇವರು ಮರಣದಿಂದ ಎಬ್ಬಿಸಿದ ಯೇಸುವು ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ.
Lao ayo y ninacajulo as Yuus talo ti jalie minitong.
38 ೩೮ “ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.
Ya umatungo guiya jamyo mañelo lalaje, na pot este na taotao na mapredidica guiya jamyo y inasiin y isao:
39 ೩೯ ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.
Ya pot güiya na todo ayo y jumonggue manunas ni todo y güinaja, sa ti siña jamyo manunas, pot y lay Moises.
40 ೪೦ ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನಂದರೆ;
Adaje na nosea ufato guiya jamyo, y masangan gui profeta sija;
41 ೪೧ “‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.
Estagüe, jamyo ni y manmañatlilie, yan infanmanman, yan infanmalingo. Sa machochochoyo ni y checho y jaanemniyo, ayo na chocho y ti injengue, ni jaye na taotao unaclaro guiya jamyo.
42 ೪೨ ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.
Ya anae manjuyong gui sinagoga, jagagao na umapredica este na sinangan guiya sija gui siguiente sabado.
43 ೪೩ ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
Ya anae manadingo y inetnon gui sinagoga, megae na Judios yan y deboto na proselito sija dumalalag si Pablo yan Barnabé; ni y sumangangane siga yan jaeepogna ufañaga gui grasian Yuus.
44 ೪೪ ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚುಕಡಿಮೆ ಇಡೀ ಊರಿನವರು ದೇವರ ವಾಕ್ಯವನ್ನು ಕೇಳುವುದಕ್ಕೆ ಸೇರಿಬಂದರು.
Ya y siguiente sabado canaja todo y taotao y siuda mandaña para ujajungog y sinangan Yuus.
45 ೪೫ ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.
Lao anae jalie y Judios y linajyan taotao, manbula linatga, ya manguentos contra ayo y sinangan Pablo ya jachatfino contra si Yuus.
46 ೪೬ ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ. (aiōnios )
Ayonae si Pablo yan Barnabé jausa y minatatngañija, ilegñija: Nesesita ayo y sinangan Yuus ni y esta manmasangane jamyo finena, lao pot innasuja guiya jamyo, injisganmaesa jamyo na ti dignojamyo y taejinecog na linâlâ, ya estagüe na tabirajit para y Gentiles. (aiōnios )
47 ೪೭ ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.
Sa taegüenao tinagoña si Yuus nu jita, ilegña: Jupolo jamyo para candet y Gentiles, na jamyo siña para satbasion asta y uttimon patte y tano.
48 ೪೮ ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು. (aiōnios )
Ya anae jajungog este y Gentiles, ninafansenmagof, ya maalaba y sinangan Yuus: ya megae manmanjonggue ni ayo sija y manmatancho para y taejinecog na linâlâ. (aiōnios )
49 ೪೯ ಕರ್ತನ ವಾಕ್ಯವು ಆ ಸೀಮೆಯ ಎಲ್ಲಾ ಕಡೆಗಳಲ್ಲಿ ಹಬ್ಬುತ್ತಾ ಬಂದಿತು.
Ya machalapon y sinangan Yuus todo güije na tano.
50 ೫೦ ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.
Lao y Judio sija, janafangalamten y mandebota yan y manonra na famalaoan, yan y manmagas na taotao sija gui siuda, ya janafangajulo pinetsigue contra si Pablo yan Barnabé, ya janafanmayute juyong gui tanoñija.
51 ೫೧ ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.
Lao sija, jasacude y petbos gui adengñija contra sija, ya manjanao para Iconio.
52 ೫೨ ಶಿಷ್ಯರಾದವರು ಸಂತೋಷಭರಿತರೂ, ಪವಿತ್ರಾತ್ಮಭರಿತರೂ ಆಗಿದ್ದರು.
Ya y disipulo sija, manbula minagof yan y Espiritu Santo.