< ಅಪೊಸ್ತಲರ ಕೃತ್ಯಗಳ 14 >
1 ೧ ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.
Ary nony tany Ikonioma Paoly sy Barnabasy, dia niara-niditra tao amin’ ny synagogan’ ny Jiosy izy ka nitori-teny, ka dia olona betsaka no nino, na Jiosy na jentilisa.
2 ೨ ಆದರೆ ನಂಬದೆ ಹೋದ ಯೆಹೂದ್ಯರು, ಅನ್ಯಜನರ ಮನಸ್ಸನ್ನು ಈ ಸಹೋದರರ ವಿರುದ್ಧವಾಗಿ ಪ್ರಚೋದಿಸಿ ಕೆಡಿಸಿದರು.
Fa ny Jiosy izay tsy nino dia nampitaitra ny jentilisa ka nanome fo azy hanohitra hanohitra ny rahalahy.
3 ೩ ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.
Ary nitoetra ela teo izy, dia nitory tamin’ ny fahasahiana noho ny fahatokiany ny Tompo, Izay nanome vavolombelona hahamarina ny tenin’ ny fahasoavany
4 ೪ ಆಗ ಆ ಊರಿನ ಜನರು ಎರಡು ಭಾಗವಾದರೂ; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.
Fa ny vahoaka tao an-tanàna nisara-tsaina, ny sasany nomba ny Jiosy, fa ny sasany kosa nomba ny Apostoly.
5 ೫ ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,
Ary raha niray tetika hanisy ratsy sy hitora-bato azy ny jentilisa sy ny Jiosy mbamin’ ny loholony,
6 ೬ ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ,
ka fantany izany, dia nandositra nankany Lystra sy Derbe, tanàna any Lykaonia, mbamin’ ny tany manodidina, izy,
7 ೭ ಅವುಗಳಿಗೆ ಸೇರಿರುವ ಸೀಮೆಗೂ ಹೋಗಿ ಅಲ್ಲಿ ಸುವಾರ್ತೆಯನ್ನು ಸಾರಿದರು.
dia nitory ny filazantsara tany.
8 ೮ ಲುಸ್ತ್ರ ಪಟ್ಟಣದಲ್ಲಿ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕುಳಿತಿದ್ದನು. ಅವನು ಹುಟ್ಟುಕುಂಟನಾಗಿದ್ದು, ಅದುವರೆಗೂ ನಡೆಯಲಾರದೆ ಇದ್ದವನು.
Ary nisy lehilahy anankiray nipetraka tany Lystra nalemy tongotra hatrany an-kibon-dreniny ka tsy afaka namindra;
9 ೯ ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;
izy nahare an’ i Paoly nitori-teny; ary Paoly, nony nibanjina azy mafy ka nahita fa nanam-pinoana hositranina io,
10 ೧೦ “ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ” ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು.
dia niteny tamin’ ny feo mahery hoe: Mijoroa amin’ ny tongotrao. Dia niantsambotsambotra ralehilahy ka nitsangantsangana.
11 ೧೧ ಪೌಲನು ಮಾಡಿದ್ದನ್ನು ಗುಂಪು ಕೂಡಿದ್ದ ಜನರು ನೋಡಿ; “ದೇವರುಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದುಬಂದರು” ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.
Ary nony hitan’ ny vahoaka betsaka izay zavatra nataon’ i Paoly, dia nanandratra ny feony ka nanao tamin’ ny fitenin’ i Lykaonia hoe: Efa nidina nankaty amintsika ny andriamanitra maka ny endrik’ olona!
12 ೧೨ ಬಾರ್ನಬನನ್ನು ‘ದ್ಯೌಸ್’ ದೇವರೆಂತಲೂ ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು ‘ಹೆರ್ಮೆ’ ದೇವರೆಂತಲೂ ಅಂದುಕೊಂಡರು.
Ary ny anaran’ i Barnabasy nataony hoe Jopitera, ary Paoly kosa Merkory, satria izy no mpitarika ny teny nalahatra.
13 ೧೩ ಊರ ಮುಂದಿದ್ದ ದ್ಯೌಸ್ ದೇವರ ಗುಡಿಯ ಪೂಜಾರಿಯು ಎತ್ತುಗಳನ್ನೂ, ಹೂವಿನ ಹಾರಗಳನ್ನೂ ಊರಬಾಗಿಲಿನ ಹತ್ತಿರಕ್ಕೆ ತಂದು ಜನರೊಂದಿಗೆ ಅವರಿಗೆ ಬಲಿಕೊಡಬೇಕೆಂದಿದ್ದನು.
Ary ny mpisoron’ ilay Jopitera teo anoloan’ ny tanàna, mbamin’ ny vahoaka, dia nitondra ombilahy sy voninkazo natao fihaingoana ho ao am-bavahady ka nikasa hanao fanatitra.
14 ೧೪ ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ಜನರ ಗುಂಪಿನೊಳಗೆ ನುಗ್ಗಿ ಹೀಗೆಂದು ಕೂಗಿ ಹೇಳಿದರು;
Fa nony nahare izany ny Apostoly, dia Barnabasy sy Paoly, dia nandriatra ny fitafiany izy ka nitsarapaka nankeo afovoan’ ny olona sady niantso nanao hoe:
15 ೧೫ “ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.
Raondriana, ahoana no anaovanareo izao? Olona tahaka anareo ihany izahay ary mitory ny filazantsara aminareo, mba hialanareo amin’ izao zava-poana izao hanatona an’ Andriamanitra velona, Izay nanao ny lanitra sy ny tany ary ny ranomasina mbamin’ izay rehetra ao anatiny,
16 ೧೬ ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವುದಕ್ಕೆ ಬಿಟ್ಟು ಬಿಟ್ಟನು.
Izay namela ny firenena rehetra handeha tamin’ ny lalana tiany haleha tamin’ ny andro lasa.
17 ೧೭ ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.
Kanefa tsy namela ny tenany tsy hanana vavolombelona Izy; fa manao soa Izy, mampilatsaka ny ranonorana avy eny amin’ ny lanitra ho anareo sady manome taon-jina ka mahavoky ny fonareo amin’ ny hanina sy ny fifaliana.
18 ೧೮ ಬಾರ್ನಬ ಮತ್ತು ಪೌಲರು ಈ ಮಾತುಗಳನ್ನು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯಲು ಆಸಾಧ್ಯವಾಯಿತು.
Nefa na dia nilaza izany aza izy, dia saiky tsy nahasakana ny olona tsy hamono zavatra hatao fanatitra aminy.
19 ೧೯ ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.
Ary nisy Jiosy tonga avy tany Antiokia sy Ikonioma, izay nitaona ny vahoaka ka nitora-bato an’ i Paoly, dia nitarika azy ho eny ivelan’ ny tanàna, satria nataony fa efa maty izy.
20 ೨೦ ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು.
Fa nony nanodidina azy ny mpianatra, dia nitsangana izy ka lasa niakatra tao an-tanàna. Ary nony ampitso dia niala tao izy sy Barnabasy ka nankany Derbe.
21 ೨೧ ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು.
Ary rehefa nitory ny filazantsara tamin’ izany tanàna izany izy ka nahazo mpianatra maro, dia niverina nankany Lystra sy Ikonioma ary Antiokia indray izy,
22 ೨೨ ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.
nampahery ny fanahin’ ny mpianatra ka nananatra azy haharitra amin’ ny finoana, sady nilaza fa tsy maintsy ho amin’ ny fahoriana be no idirantsika amin’ ny fanjakan’ Andriamanitra.
23 ೨೩ ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.
Ary rehefa nanendry loholona teo amin’ ny isam-piangonana izy, dia nivavaka sady nifady hanina ka dia nanolotra azy ho an’ ny Tompo Izay efa ninoany.
24 ೨೪ ತರುವಾಯ ಪಿಸಿದ್ಯ ಸೀಮೆಯನ್ನು ಹಾದು ಪಂಫುಲ್ಯ ಸೀಮೆಗೆ ಬಂದು,
Ary rehefa nandeha namaky an’ i Pisidia izy, dia tonga tany Pamfylia.
25 ೨೫ ಅದಕ್ಕೆ ಸೇರಿರುವ ಪೆರ್ಗೆ ಊರಿನಲ್ಲಿ ಕರ್ತನ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯ ಪಟ್ಟಣಕ್ಕೆ ಇಳಿದು ಅಲ್ಲಿಂದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಅಂತಿಯೋಕ್ಯವನ್ನು ತಲುಪಿದರು.
Ary nony efa nitory ny teny tany Peryga izy, dia nidina nankany Atalia.
26 ೨೬ ಅವರು ಈವರೆಗೆ ನೆರವೇರಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟದ್ದು ಈ ಊರಿನಲ್ಲಿಯೇ.
Dia niondrana an-tsambo niala teo izy hankany Antiokia, izay efa nanolorana azy ho amin’ ny fahasoavan’ Andriamanitra ho amin’ ny asa izay novitainy.
27 ೨೭ ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.
Ary rehefa tonga tao izy ka namory ny fiangonana, dia nilaza izay rehetra nataon’ Andriamanitra tamin’ ny nombany azy, sy ny namohany varavaram-pinoana ho an’ ny jentilisa.
28 ೨೮ ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಹೆಚ್ಚುಕಾಲ ತಂಗಿದ್ದರು.
Dia nitoetra elaela ihany tamin’ ny mpianatra izy.